Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನೆ ಹಾಗೂ ಸಂತಾಪ ಸಭೆ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು. ಮಾಜಿ ಶಾಸಕರಾದ ಕೆ. ಗೋಪಾಲ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ. ಪೂಜಾರಿ, ಬೈಂದೂರು ಪಪಂ ನಾಮನಿರ್ದೇಶಿತ ಸದಸ್ಯ ನಾಗರಾಜ ಗಾಣಿಗ, ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ವಿಕಾಸ್ ಹೆಗ್ಡೆ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಬೈಂದೂರು ಬ್ಲಾಕ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಬ್ಬೀರ್‌ ಬೈಂದೂರು, ಕಿಸಾನ್‌ ಘಟಕದ ಅಧ್ಯಕ್ಷ ವೀರಭದ್ರ ಗಾಣಿಗ, ಸುಬ್ರಹ್ಮಣ್ಯ ಪೂಜಾರಿ ಯಡ್ತರೆ, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಉಪಾಧ್ಯಕ್ಷರಾದ ಕೆ. ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಮೋದ್ ಪೂಜಾರಿ ನಾವುಂದ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಚಂಡೀಗಢದಲ್ಲಿ ನಡೆಯುತ್ತಿರುವ ಇಂಡಿಯನ್ ಓಪನ್ ಅಥ್ಲೆಟಿಕ್ಸ್ ಕೂಟದ 2ನೇ ಆವೃತ್ತಿಯಲ್ಲಿ ಬೈಂದೂರಿನ ಮಣಿಕಂಠ ಒಳಗೊಂಡ ರಿಲಯನ್ಸ್ ಪುರುಷರ ತಂಡ 4X100  ರಿಲೇ ತಂಡ ನೂತನ ರಾಷ್ಟ್ರೀಯ ದಾಖಲೆ ನಿರ್ಮಿಸಿದೆ. ಪುರುಷರ ರಿಲೇ ಫೈನಲ್‌ನಲ್ಲಿ ಕರ್ನಾಟಕದ ಮಣಿಕಂಠ ಹೋಬಳಿದಾರ್ ಹಾಗೂ ವಿವಿಧ ರಾಜ್ಯಗಳ ಗುರುವೀಂದರ್‌ ಸಿಂಗ್, ಅನಿಮೇಶ್ ಕುಜುರ್ ಹಾಗೂ ಅರ್ಮನ್ ಬೋರ್ಗೋಹೈನ್ ಒಳಗೊಂಡ ತಂಡ 38.69 ಸೆಕೆಂಡ್ ಗಳಲ್ಲಿ ಗುರಿ ತಲುಪಿ ನೂತನ ದಾಖಲೆ ರಚಿಸಿತು. 2010ರಲ್ಲಿ 38.89 ಸೆಕೆಂಡ್‌ಗಳಲ್ಲಿ ಸ್ಪರ್ಧೆ ಮುಗಿಸಿದ್ದು, ಹಿಂದಿನ ದಾಖಲೆ ಆಗಿದೆ. 2023ರಲ್ಲಿ ನಡೆದ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿದ್ದ ಮಣಿಕಂಠ ಹೋಬಳಿದಾರ್ ಅವರು, 100ಮೀ ಓಟದಲ್ಲಿ ಭಾರತದ ಅತ್ಯಂತ ವೇಗದ ಓಟಗಾರರಾಗಿ ದಾಖಲೆ ಮಾಡಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. ಬೈಂದೂರು ಪಡುವರಿಯ ಮಂಜುನಾಥ ಹೋಬಳಿದಾರ್ ಹಾಗೂ ದಿ. ಸುಂದರಿ ಅವರ ಪುತ್ರರಾದ ಮಣಿಕಂಠ ಅವರು 2020ರಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅಥ್ಲೆಟಿಕ್ಸ್ನಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್‌ನವರು ನಡೆಸಿದ ನ್ಯಾಷನಲ್ ಅಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (ನಾಟಾ) ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 19 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.   ಉತ್ತೀರ್ಣರಾದ ವಿದ್ಯಾರ್ಥಿಗಳು ಸಂಚಿತಾ ಆರ್ ರಾವ್, ರಾಜ್ ಬಂಗೇರ, ಪಾರ್ಥ ಎಲ್ಲಪ್ಪಾ ಚಿಕಲ್ಕರ್, ದೇವಾನಂದ, ರೇಣುಕಾ, ಕಲೇಬ್ ಜೇಶ್ರುನ್, ಅಭಿಷೇಕ್ ಶೆಟ್ಟಿ, ಪವನ್ ಬಿಡಿ, ಭಾನುಪ್ರಕಾಶ್, ನಿಖಿಲ್ ಗೌಡ, ಲೈಶುನ್ ಬೆನ್ಡಿಕ್ಟ್ ಫೆರ್ನಾಂಡೀಸ್, ಪ್ರತೀಕ್, ರಿಶಭ್, ಪೂಜಿತಾ ಗೌಡ, ನಾಗರಾಜ್, ನಿಖಿತಾ, ಸುರೇಶ್ ಪಾಟೀಲ್, ವಿಭಾ ವಿ., ಆಕಾಶ್ ಜಿ.. ಆಳ್ವಾಸ್ ಪದವಿ ಪೂರ್ವ ಕಾಲೇಜಿನ 19 ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದು, ಪರೀಕ್ಷೆ ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷಗಾನ ನಮ್ಮ ನಾಡಿನ ಹೆಮ್ಮೆಯ ಕಲೆ ದಿವ್ಯ ಕಲೆ ರಂಗದಲ್ಲಿ ಪಾತ್ರ ನಿರ್ವಹಣೆ ಮಾಡಲು ಅವಿರತ ಶ್ರಮ ಅಗತ್ಯ. ಕಲಾವಿದರಿಗೆ ಅಭಿಮಾನಿಗಳ ಪ್ರೋತ್ಸಾಹವೇ ಶ್ರೀ ರಕ್ಷೆ. ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶದ ಜೊತೆಗೆ ಇಂತಹ ಪುರಸ್ಕಾರಗಳು ಈ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಮಾಡುವ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಎಂದು ಹಿರಿಯ ಯಕ್ಷಗಾನ ಕಲಾವಿದ ಬಳ್ಕೂರು ಕೃಷ್ಣ ಯಾಜಿ ಹೇಳಿದರು. ಅವರು ಕೋಟ ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಳದ ಶ್ರೀ ಮನ್ಮಮಹಾರಥೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಬೆಂಗಳೂರಿನ ಯಕ್ಷದೇಗುಲ ತಂಡದ ರಾವಣ ವಧೆ ಪ್ರಸಂಗ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. ಉದ್ಘಾಟನೆ ನೆರವೇರಿಸಿದ ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ. ಎಸ್. ಕಾರಂತ ಮಾತನಾಡಿ, ದೇವಾಲಯಗಳು ಸಮಾಜದ ಆತ್ಮ ಇದ್ದಂತೆ. ಆಧ್ಯಾತ್ಮಿಕ ಶ್ರದ್ಧೆಯನ್ನು ಹೆಚ್ಚಿಸುವುದರೊಂದಿಗೆ ಸಾಮರಸ್ಯವನ್ನು ಬೆಸೆಯುವ ಕೆಲಸ ಮಾಡಬೇಕು. ದೇವಳದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಶಿಕ್ಷಣದ ಗುಣಮಟ್ಟ, ಶಿಸ್ತಿನ ವಾತಾವರಣ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಹೆಸರು ವಾಸಿಯಾದ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿ 2024- 25ನೇ ಶೈಕ್ಷಣಿಕ ವರ್ಷದಲ್ಲಿ ಐಸಿಎಸ್ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿಗಳಾದ ದೀಕ್ಷಾ ಕೋರಿ  98.80% ಅಂಕದೊಂದಿಗೆ  ಪ್ರಥಮ ಸ್ಥಾನ, ನಿಧಿ ಶೆಟ್ಟಿ 98.60%  ದ್ವಿತೀಯ ಸ್ಥಾನ ಹಾಗೂ ಹರ್ಷಿತಾ ಎಸ್. ಪೂಜಾರಿ 98.20% ಅಂಕದೊಂದಿಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಈ ಶಾಲೆ, ಕಳೆದ 22 ವರ್ಷದಿಂದ ನೂರಕ್ಕೆ ನೂರು ಫಲಿತಾಂಶ ದಾಖಲಿಸಿರುವ ಸಾಧನೆ ಮಾಡಿರುವುದು ತಾಲೂಕಿನ ಏಕೈಕ ಐಸಿಎಸ್ಇ ಪಠ್ಯಕ್ರಮದ ಶಾಲೆ ಇದಾಗಿದೆ. ಈ ವಿದ್ಯಾ ಸಂಸ್ಥೆಯಲ್ಲಿ ರಾಜ್ಯ ಮತ್ತು ಹೊರರಾಜ್ಯಗಳ ಸುಮಾರು 1800ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ 660 ಮಕ್ಕಳಿಗೆ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: 2024-25ನೇ ಸಾಲಿನ ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶಿರೂರಿನ ಗ್ರೀನ್‌ ವ್ಯಾಲಿ ಇಂಟರ್‌ನ್ಯಾಷನಲ್‌ ಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿ ಪ್ರತೀಕ್‌ ಪ್ರಭು ಶೇ.98.4 ಅಂಕ ಪಡೆದು, ಶಾಲೆಗೆ ಟಾಪರ್‌ ಆಗಿರುವುದಲ್ಲದೇ, ರಾಷ್ಟ್ರಮಟ್ಟದಲ್ಲಿ 8ನೇ ರ್ಯಾಂಕ್‌ ಪಡೆದಿದ್ದಾರೆ. ಪ್ರತೀಕ್‌ ಪ್ರಭು ಅವರು ಶಿರೂರಿನ ಉದ್ಯಮಿ ಪ್ರಸಾದ್ ಪ್ರಭು ಹಾಗೂ ಜಾನ್ವಿ ಪ್ರಭು ದಂಪತಿಗಳ ಪುತ್ರರಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರಾಜ್ಯದ ವಿವಿಧ ಕಡೆಗಳಲ್ಲಿ ಸಿ.ಇ.ಟಿ. ಪರೀಕ್ಷೆಗಾಗಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಘಟನೆಯ ಕುರಿತು ಮಂಗಳವಾರ ಸಾಲಿಗ್ರಾಮದಲ್ಲಿ ಜನಿವಾರಧಾರಿ ಸಮಾಜಗಳ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ನೇತೃತ್ವದಲ್ಲಿ ಗೌಡ ಸಾರತ್ವತ ಬ್ರಾಹ್ಮಣ ಸಮಾಜ ಸಾಲಿಗ್ರಾಮ ವಲಯ, ಕೋಟ ವಿರಾಡ್ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ಗಾಣಿಗ ಯುವ ಸಂಘಟನೆ ಕೋಟ ವಲಯದ ಸಹಯೋಗದಲ್ಲಿ ಪ್ರತಿಭಟನೆ, ಸಭೆ ನಡೆಯಿತು. ಈ ಸಂದರ್ಭದಲ್ಲಿ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯಾಧ್ಯಕ್ಷ ಶಿವರಾಮ ಉಡುಪ ಮಾತನಾಡಿ, ಜನಿವಾರ ಎನ್ನುವಂತದ್ದು ಷೋಡಶ ಕರ್ಮಗಳನ್ನು ಆಚರಿಸುವ ಪ್ರತಿಯೊಂದು ಸಮಾಜಗಳಿಗೆ ಅತ್ಯಂತ ಪವಿತ್ರವಾದದ್ದು. ಈ ಹಿಂದೆ ಯಾವುದೇ ಪರೀಕ್ಷೆಯಲ್ಲಿ ಇದನ್ನು ಕತ್ತರಿಸಿದ ಉದಾಹರಣೆ ಇಲ್ಲ. ಆದ್ದರಿಂದ ರಾಜ್ಯದಲ್ಲಿ ಇದೀಗ ನಡೆಯುತ್ತಿರುವ ಪ್ರಕರಣ ಜನಿವಾರ ಧರಿಸುವ ಪ್ರತಿಯೊಂದು ಸಮಾಜದ ಮನಸ್ಸಿ ಭಾವನೆಗೆ ನೋವುಂಟು ಮಾಡಿದೆ. ಜನಿವಾರ ಧಾರಿ ಸಮುದಾಯಕ್ಕೆ ನ್ಯಾಯಬೇಕು ಇಂಥಹ ಪ್ರಸಂಗಗಳು ಉದ್ಭವಿಸದಂತೆ ಸರಕಾರ ಜಾಗೃತಿ ವಹಿಸಬೇಕು ಎಂದರು. ಕೋಟ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಮಣೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜು ಶೈಕ್ಷಣಿಕವಾಗಿ ಪ್ರಗತಿಯ ಶಿಖರವನ್ನೇರಿ ಸಾಧನೆಗಳ ಮೇಲೆ ಸಾಧನೆಗಳನ್ನು ಸಾಧಿಸುತ್ತಾ ಬಂದಿರುವುದು ಗಮನಾರ್ಹ ವಿಷಯವಾಗಿದೆ. ಈ ಶೈಕ್ಷಣಿಕ ವಿಷಯದಲ್ಲಿ ಸಾಧನೆಗಳ ಮಹಾಪೂರವನ್ನೇ ಮಾಡಿ ’ಸಾಧನೆಗಳ ಸರದಾರ’ಎನ್ನುವ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ. ಬೋರ್ಡ್, ಜೆಇಇ, ಸಿಇಟಿ, ನೀಟ್, ಸಿಎ, ಸಿಎಸ್ ಎನ್ನುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ದೇಶ ಹಾಗೂ ರಾಜ್ಯದಲ್ಲಿಯೇ ಅತ್ಯುತ್ತಮ ರ್ಯಾಂಕ್‌ ಹಾಗೂ ಉತ್ತೀರ್ಣತೆಯ ಪ್ರಮಾಣವನ್ನು ಪಡೆದುದಲ್ಲದೇ ಮೇ.13ರಂದು ನಡೆದ ಭಾರತೀಯ ಸೇನೆಯ ನೌಕಾಪಡೆ ಮತ್ತು ವಾಯುಪಡೆಯನ್ನು ಸೇರಲು ಆರು ವಿದ್ಯಾರ್ಥಿಗಳನ್ನು ಪ್ರತ್ಯೇಕ ಗುಂಪಾಗಿ ವಿಗಂಡಿಸಿ, ಅವರಿಗೆ ವಿಶೇಷ ತರಬೇತಿ ನೀಡಿ ಅದರಲ್ಲಿ ನಮ್ಮ ಸಂಸ್ಥೆಯ ಶ್ರೀಹರ್ಷ ಪಿ. ಎನ್ ಎನ್ನುವ ವಿದ್ಯಾರ್ಥಿಯು ಉತ್ತೀರ್ಣತೆಯನ್ನು ಹೊಂದುವ ಮೂಲಕ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಸಾಧನೆಯ ಗರಿಗೆ ಅದ್ಭುತ ಕೀರ್ತಿಯನ್ನು ತಂದಿರುವುದು ಎಕ್ಸಲೆಂಟ್ ಶೈಕ್ಷಣಿಕ ಇತಿಹಾಸದಲ್ಲಿ ಇನ್ನೊಂದು ಮಹತ್ತರ ಸಾಧನೆಯಾಗಿದೆ. ಈ ಎಕ್ಸಲೆಂಟ್ ಶೈಕ್ಷಣಿಕ ಸಾಧನೆಗೆ ಹೊಸ ಅಧ್ಯಾಯ ಬರೆದ ಶ್ರೀಹರ್ಷ ಪಿ. ಎನ್ ವಿದ್ಯಾರ್ಥಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ನಾನು ಮತ್ತು ನನ್ನ ಗೀಚು ಸಾಹಿತ್ಯ ಬಳಗವು ಹಮ್ಮಿ ಕೊಂಡಿದ್ದ ಯುಗಾದಿ – ವಿಷು ಹಬ್ಬ ವಿಶೇಷ ಗೀಚು ಕಥಾ ಸ್ಪರ್ಧೆ 2025ರಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮತ್ತು ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅವರ ಕಥೆ “ಯಾರು ಒಳ್ಳೆಯವರು?’ ಅತ್ಯುತ್ತಮ ಕಥಾ ಬಹುಮಾನಕ್ಕೆ ಪಾತ್ರವಾಗಿದೆ. ಒಂದು ಸಂಪಾದಿತ ಕೃತಿ ಸೇರಿದಂತೆ ಒಟ್ಟು ಐದು ಪುಸ್ತಕಗಳನ್ನು ಬರೆದಿರುವ ನರೇಂದ್ರ ಎಸ್. ಗಂಗೊಳ್ಳಿ ಅವರ ಮುಂದಿನ ಕೃತಿ ‘ರೂಮಿನೊಳಗಿಂದ’  ಸದ್ಯದಲ್ಲೇ ಬಿಡುಗಡೆಯಾಗಲಿದೆ.

Read More

ಕುಂದಾಪೃ ಡಾಟ್‌ ಕಾಂ ಸುದ್ದಿ.ಅಮಾಸೆಬೈಲು: ವಿಪರೀತ ಕುಡಿತದ ಚಟ ಹೊಂದಿದ್ದ ಇಲ್ಲಿನ ಬಳ್ಳನೆ ಬೂತ್ನಾಡಿ ನಾರಾಯಣ (62) ಅವರು ಜೀವನದಲ್ಲಿ ಜುಗುಪ್ಪೆಗೊಂಡು ಮನೆಯ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು ಮನೆಯವರು ಹಾಲಾಡಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ಅಮಾಸೆಬೈಲು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More