Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಆಲೂರು ವೆಂಕಟರಾವ್ ಭಾಷಾ ಕೌಶಲ್ಯ ಕೇಂದ್ರ ಮೈಸೂರು, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇದರ ವತಿಯಿಂದ ನಡೆದ ಕುಂದಾಪುರ ತಾಲೂಕು ಮಟ್ಟದ ಕನ್ನಡ ಭಾಷಾ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿಗಳಾದ ಆರಾಧ್ಯ ಆರ್. ದ್ವಿತೀಯ ಸ್ಥಾನವನ್ನು ಮತ್ತು ಪ್ರಖ್ಯಾತ್‌ ತೃತೀಯ ಸ್ಥಾನ ಪಡೆದಿದ್ದಾರೆ. ಅವರಿಗೆ ಶಾಲಾ ಶಿಕ್ಷಕರು ಮತ್ತು ಶಾಲಾ ಅಭಿವೃದ್ಧಿ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಂ.ಮಹೇಶ್ ಹೆಗ್ಡೆ ಮೊಳಹಳ್ಳಿ, ಉಪಾಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ ಚಿಟ್ಟೆಬೈಲು ಆಯ್ಕೆಯಾಗಿದ್ದಾರೆ. ಜ.೬ರಂದು ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭ ಸಂಘದ ನಿರ್ದೇಶಕರಾದ ಎಚ್.ಹರಿಪ್ರಸಾದ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಲವಕರ ಶೆಟ್ಟಿ, ಅನಿಲ್ ಕುಮಾರ್ ಶೆಟ್ಟಿ, ಶ್ರೀಮತಿ ಇಂದಿರಾ ಯು ಶೆಟ್ಟಿ, ಶ್ರೀಮತಿ ವಾಣಿ ಆ‌ರ್ ಶೆಟ್ಟಿ, ಶ್ರೀಮತಿ ಚೈತ್ರ ಅಡಪ, ದಿನೇಶ ಮೊಗವೀರ, ಉಮೇಶ ಶೆಟ್ಟಿ, ಗಣೇಶ, ಗಿರೀಶ್, ಉದ್ಯಮಿ ಎಂ. ದಿನೇಶ ಹೆಗ್ಡೆ ಮೊಳಹಳ್ಳಿ, ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ದೀಪಾ, ಜಿಲ್ಲಾ ಬ್ಯಾಂಕ್ ಪ್ರತಿನಿಧಿಗಳಾದ ಚಂದ್ರಶೇಖರ ಶೆಟ್ಟಿ, ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು. ಇದನ್ನೂ ಓದಿ ► ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ: ಕಾಂಗ್ರೆಸ್‌ ಬೆಂಬಲಿತ ಗುಂಪಿಗೆ ಜಯ – https://kundapraa.com/?p=80665 . ಆಯ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಡಿ.06: ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಇದರ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಎಲ್ಲಾ 13ಕ್ಕೆ 13 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯ ಸಾಧಿಸಿದ್ದಾರೆ. ಪಂಚಗಂಗಾ ಸಹಕಾರಿ ಬಳಗದ ಹಿಂದುಳಿದ ಬಿ ವರ್ಗದಿಂದ ಹಾಲಿ ಅಧ್ಯಕ್ಷ ಹಕ್ಲಾಡಿ ಸಂತೋಷಕುಮಾರ ಶೆಟ್ಟಿ, ಹಿಂದುಳಿದ ಎ ವರ್ಗದಿಂದ ರಾಘವೇಂದ್ರ ಪೂಜಾರಿ, ಸಾಮಾನ್ಯ ಕ್ಷೇತ್ರದಲ್ಲಿ ಶರತ್ ಕುಮಾರ್ ಶೆಟ್ಟಿ, ಆನಂದ ಬಿಲ್ಲವ ಉಪ್ಪಿನಕುದ್ರು, ಚಂದ್ರ ಪೂಜಾರಿ, ಚಂದ್ರ ಎಸ್. ನಾಯ್ಕ, ತಮ್ಮಯ್ಯ ದೇವಾಡಿಗ, ಸಂತೋಷ ಕುಮಾರ ಶೆಟ್ಟಿ ತೋಟಬೈಲು, ಸುಧಾಕರ ಎನ್. ದೇವಾಡಿಗ ಹಾಗೂ ಮಹಿಳಾ ಮೀಸಲು ಕ್ಷೇತ್ರದಿಂದ ಚಂದ್ರಮತಿ ಹೆಗಡೆ, ಸುನಿತ ಪೂಜಾರಿ, ಪ. ಜಾತಿ ಮೀಸಲು ಕ್ಷೇತ್ರದಿಂದ ಸಂಜೀವ ಹಕ್ಲಾಡಿ, ಪ ಪಂಗಡ ಕ್ಷೇತ್ರದಿಂದ ಶಾರದ ಚುನಾವಣೆಯಲ್ಲಿ ಜಯ ಸಾಧಿಸಿದರು. ಚುನಾವಣಾಧಿಕಾರಿಯಾಗಿ ಸುಮಿತ್ರಾ ಕುಮಾರಿ ಚುನಾವಣೆ ನಡೆಸಿಕೊಟ್ಟರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಪೂಜಾರಿ, ಲೇಖಪಾಲ ಭಾಸ್ಕರ ಪೂಜಾರಿ ಸಹಕರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ ವತಿಯಿಂದ ರಾಯಚೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರು ಭಾಗವಹಿಸಿದ ತಂಡ ಎರಡು ವಿಭಾಗದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.   ಬಾಲಕರ ವಿಭಾಗದ ಫೈನಲ್ಸ್ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ, ಮೈಸೂರು ಜಿಲ್ಲಾ ತಂಡವನ್ನು 35-11 ಹಾಗೂ 35-14 ನೇರ ಸೆಟ್‌ಗಳಿಂದ ಸೋಲಿಸಿ  ಗೆಲುವು ಸಾಧಿಸಿತು. ಬಾಲಕಿಯರ ವಿಭಾಗದ ಫೈನಲ್ಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವು ಮಂಡ್ಯ ಜಿಲ್ಲಾ ತಂಡವನ್ನು 35-14 ಹಾಗ 35-11 ನೇರ ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿದ ತಂಡದಲ್ಲಿ ಪ್ರಮುಖ ಆಟಗಾರರಾಗಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ 5 ಬಾಲಕರು ಹಾಗೂ 5 ಬಾಲಕಿಯರು ಪ್ರತಿನಿಧಿಸಿದ್ದು ಗೆಲುವಿಗೆ ಸಹಕಾರಿಯಾಯಿತು.   ಈ ಮೂಲಕ ದಕ್ಷಿಣ ಕನ್ನಡ ಜಿಲ್ಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ಅಧ್ಯಯನ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ ದೂ.ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜನವರಿ 25 ರಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ಇದೆ ಜನವರಿ 25 ರಂದು ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು. ಖ್ಯಾತ ಉಪನ್ಯಾಸಕರಿಂದ ಮತದಾರರ ದಿನಾಚರಣೆ ಕುರಿತು ಉಪನ್ಯಾಸ ಸಹ ನಡೆಯಲಿದ್ದು, ಯುವ ಮತದಾರರಿಗೆ ಹೊಸ ಎಪಿಕ್ ಕಾರ್ಡ್ಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುವುದು ಎಂದ ಅವರು, ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ ಲಯನ್ಸ್ ಕ್ಲಬ್‌ ವತಿಯಿಂದ ಕನ್ಯಾಕುಮಾರಿಯ ಖಾಸಗಿ ಹೋಟೆಲ್‌ನಲ್ಲಿ ಅಂತರಾಜ್ಯ ಟ್ವಿನ್ನಿಂಗ್ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಗ್ಯಾಬ್ರಿಯಲ್ ಮಾತನಾಡಿ, ತೆಕ್ಕಟ್ಟೆ ಲಯನ್ಸ್ ಕ್ಲಬ್ ಸದಸ್ಯರು ಕನ್ಯಾಕುಮಾರಿಗೆ ಬಂದು ಲಯನ್ಸ್ ಕ್ಲಬ್‌ ಮೂಲಕ ನಾವೆಲ್ಲರೂ ಒಂದೇ ಕುಟುಂಬದವರಾಗಿದ್ದೇವೆ ಎನ್ನುವುದನ್ನು ತೋರಿಸಿಕೊಟ್ಟಿರುತ್ತಾರೆ ಎಂದು ಸಂತೋಷವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರ್ಷವರ್ಧನ್ ಶೆಟ್ಟಿ ವಹಿಸಿ, ಎಲ್ಲರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಮನಾಥನ್, ವೇಲ್ ಮುತ್ತುರಾಮನ್, ಗ್ಯಾಬ್ರಿಯಲ್ ಕಮಲೇಶ್, ಪೊನ್ನಸಕ್ಕೆ, ಕಿಶೋರ್ ಶೆಟ್ಟಿ, ರಮೇಶ್ ಕೆ. ಶೆಟ್ಟಿ, ಉಪಸ್ಥಿತರಿದ್ದರು. ಜ್ಯೋತಿ ಕೆ. ಶೆಟ್ಟಿ ಪ್ರಾರ್ಥಿಸಿ, ಶಂಕರ ಶೆಟ್ಟಿ ಬವಳಾಡಿ ಧ್ವಜವಂದನೆ ನೆರವೇರಿಸಿದರು. ಶೋಭಾ ಎಸ್. ಶೆಟ್ಟಿ ನೀತಿ ಸಂಹಿತೆಯನ್ನು ವಾಚಿಸಿದರು. ಸ್ಥಾಪಕಾಧ್ಯಕ್ಷ ಸೀತಾರಾಮ್ ಶೆಟ್ಟಿ ಅವರು ಪ್ರಾಸ್ಥಾವಿಸಿ, ಲಯನ್ಸ್ ಧರ್ಮರಾಜ್ ಮುದಲಿಯಾರ್‌ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ತಿರುನಲ್ವೇಲಿಯ ಮೂರು ಕ್ಲಬ್‌ಗಳಾದ ಲಯನ್ಸ್ ಕ್ಲಬ್ ಪಾಲಾಯಂ ಕೋಟೆ ಕಿಂಗ್ಸ್, ಲಯನ್ಸ್ ಕ್ಲಬ್ ತಿರುನೆಲ್ವೇಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವ-ವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇ-ಮೇಲ್ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಮಹೋತ್ಸವವು  ಸಂಭ್ರಮದಿಂದ ಜರಗಿತು. ಆನುವಂಶಿಕ ಮೊಕೇಸರ ಬಿ. ಅರುಣ್ ಕುಮಾರ್ ಶೆಟ್ಟಿ, ಅಭಿನಂದನ್ ಶೆಟ್ಟಿ ಅರ್ಚಕರು ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಜ. 5ರಂದು ಬೆಳಗ್ಗೆ ಗಣಪತಿ ಪ್ರಾರ್ಥನೆ, ಪುಣ್ಯಾಹ, ಪ್ರಧಾನಹೋಮ, ನವಕಲಶಾಭಿಷೇಕ, ಸಂಹಿತ ಪಾರಾಯಣ, ಕಲಶಾಭಿಷೇಕ ನಡೆಯಿತು. ತದನಂತರ ಹಣ್ಣುಕಾಯಿ, ಮಂಗಳಾರತಿ, ಹರಿವಾಣ ನೈವೇದ್ಯ ಸೇವೆಯಲ್ಲಿ ಭಕ್ತರು ಪಾಲ್ಗೊಂಡರು. ಮಡೆ ಪ್ರದಕ್ಷಿಣೆ, ಶ್ರೀ ನಾಗದರ್ಶನ ದರ್ಶನ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡರು. ಇಂದಿನ ಕಾರ್ಯಕ್ರಮಬೆಳಗ್ಗೆ 6.30ಕ್ಕೆ ಹಾಲಿಟ್ಟು ಸೇವೆ, ಬೆಳಗ್ಗೆ 9.30ಕ್ಕೆ ನಾಗಮಂಡಲ, 11 ಗಂಟೆಗೆ ತುಲಾಭಾರ ಸೇವೆ ನಡೆಯಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಎಲ್ಲಾ ಜನ್ಮಗಳಲ್ಲಿ ಪುಣ್ಯವನ್ನು ಮಾಡಿದಾಗ ಪಾಪದಿಂದ ಮುಕ್ತನಾಗಿ ಪರಿಶುದ್ಧನಾದಾಗ ಮನುಷ್ಯ ಜನ್ಮ ಪಡೆಯುತ್ತಾನೆ. ಮನುಷ್ಯ ಜನ್ಮ ಪಡೆದಾಗ ಮತ್ತುಳಿದ ಎಲ್ಲಾ ಜೀವಿಗಳಂತೆ ಸುಮ್ಮನೆ ಜೀವನವನ್ನು ವ್ಯರ್ಥ ಮಾಡದೆ ಆ ಮನುಷ್ಯ ಜನ್ಮ ಸಾರ್ಥಕ ಆಗಬೇಕಾದರೆ ಭಗವಂತನ ಭಜನೆ ಮಾಡಬೇಕು, ಜನಹಿತ ಕಾರ್ಯಗಳನ್ನು ಉತ್ತಮ ಕಾರ್ಯ ಮಾಡುತ್ತಿರಬೇಕು ಎಂದು ತಾಳಗುಪ್ಪ ಪ್ರಣವ ಪೀಠ ಕೂಡ್ಲಿ ಬಾರಂಗಿ ಮಹಾಸಂಸ್ಥಾನ ಮಠದ ವಿದ್ವಾನ್ ಸಿದ್ಧವೀರ ಸ್ವಾಮೀಜಿ ಹೇಳಿದರು. ಕುಂದಾಪುರ ತಾಲೂಕಿನ ನಾಯಕವಾಡಿ-ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಾರಂಭ ’ಸುವರ್ಣ ಸಂಗಮ’ವನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಸಂಘ ಸಂಸ್ಥೆಗಳು ತನ್ನ ನಿರಂತರತೆಯನ್ನು ಕಾಪಾಡಿಕೊಂಡು ಒಂದು ಹಂತಕ್ಕೆ ಬರಬೇಕಾದರೆ ತುಂಬಾ ಪ್ರಯತ್ನ, ತಾಳ್ಮೆ ಅವಶ್ಯಕ. ಇಂತಹ ತಾಳ್ಮೆ ಪ್ರಯತ್ನದ ಪ್ರತಿಫಲವಾಗಿ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ 50ರ ಸಂಭ್ರಮವನ್ನು ಸಂತೋಷದಿಂದ ಆಚರಿಸುತ್ತಿದೆ. ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಾಂಸ್ಕೃತಿಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಇತರ ಸಂಘ…

Read More