ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದು, ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದಾರೆ. ಮಾರ್ಚ್ 12 ಮಂಗಳವಾರ ಸಂಜೆ 4 ಗಂಟೆಗೆ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ನಡೆಯುತ್ತಿರುವ ಈ ವಿದ್ಯಮಾನವು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಜೆಪಿ ಹೆಗ್ಡೆ ಆಗಲಿದ್ದಾರೆ ಎಂಬುದನ್ನು ಪುಷ್ಟಿಕರಿಸಿದೆ. ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಜೆ.ಪಿ ಹೆಗ್ಡೆ ಅವರು, ಜನತಾದಳ ಸರಕಾರದಲ್ಲಿ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ಭಾರತೀಯ ಜನತಾಪಕ್ಷಕ್ಕೆ ಸೇರ್ಪಡೆಗೊಂಡು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಸರಕಾರದ ಬಂದ ಬಳಿಕವೂ ಜಾತಿ ಗಣತಿ ವರದಿ ಸಲ್ಲಿಕೆಯ ಕಾರಣಕ್ಕೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವರ ನೂತನ ದೇವಾಲಯ ಲೋಕಾರ್ಪಣೆ ಬ್ರಹ್ಮಕಲಶೋತ್ಸವ, ಲಕ್ಷಮೋದಕ ಹೋಮ, ಶತ ಚಂಡಿಯಾಗ ಹಾಗೂ 2016 ಕಾಯಿ ಗಣಹೋಮ ಕಾರ್ಯಕ್ರಮವು ಮಾರ್ಚ್ 13ರಿಂದ 17ರವರೆಗೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸುವಂತೆ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷೆ ರಮಾದೇವಿ ರಾಮಚಂದ್ರ ಭಟ್ಟ ಕೋರಿಕೊಂಡಿದ್ದಾರೆ. ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಧರ್ಮದರ್ಶಿ ಬಾಲಚಂದ್ರ ಭಟ್ಟ ಅವರು ಮಾತನಾಡಿ ಮಾ.13ರಿಂದ ಕಾರ್ಯಕ್ರಮಗಳು ಆರಂಭವಾಗಿ ಮಾ.17ರ ತನಕ ನಡೆಯಲಿದೆ. ಪ್ರತಿ ನಿತ್ಯ ಧಾರ್ಮಿಕ ಕಾರ್ಯಕ್ರಮಗಳು, ಸ್ವಾಮೀಜಿಯವರಿಂದ ಆಶೀರ್ವಚನ, ಧಾರ್ಮಿಕ ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು ಪ್ರತಿ ನಿತ್ಯ ಮಹಾ ಅನ್ನಸಂತರ್ಪಣೆಯಿದೆ ಎಂದು ತಿಳಿಸಿದರು. ಮಾ.13ರಂದು ಬೆಳಿಗ್ಗೆ ಲಕ್ಷ ಮೋದಕ ಹವನ ಪ್ರಾರಂಭ, ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿಯವರ ಶಿಷ್ಯ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ನೂತನ ದೇವಾಲಯ ಲೋಕಾರ್ಪಣೆ,…
ಬೇಸಿಗೆ ಕಾಲದಲ್ಲಿ ಧೂಳಿನಿಂದ ಅಲರ್ಜಿಯಾದಾಗ ಸಮಸ್ಯೆ ಕಾಡಲಾರಂಬಿಸುತ್ತದೆ. ಹೊರಗಡೆ ಓಡಾಡಿದ ತಕ್ಷಣ, ಭಾರವಾದ ಮೂಗು, ಉಸಿರಾಟದ ತೊಂದರೆ, ಕುಳಿತು ಕೊಳ್ಳಲು ಸಾಧ್ಯವಾಗದಿರುವುದು ಅಥವಾ ಮಲಗಿ ವಿಶ್ರಾಂತಿ ಪಡೆಯಲು ಸಾಧ್ಯವಾಗುವುದಿಲ್ಲ. ಅತಿಯಾದ ಸೀನು, ಯಾವಾಗಲೂ ಮೂಗು ಹರಿಯುವಂತಹ ತೊಂದರೆಗಳಿಂದ ನರಳುವುದು ಡಸ್ಟ್ ಅಲರ್ಜಿಯ ಲಕ್ಷಣ. ಈ ಅಲರ್ಜಿಯನ್ನು ಸಡಿಲಗೊಳಿಸಲು ತೆಗೆದುಕೊಳ್ಳಬಹುದಾದ ಮನೆಮದ್ದುಗಳ ಕುರಿತು ಸಲಹೆ ಇಲ್ಲಿವೆಅಲೋವೆರಾ ರಸ:ಅಲೋವೆರಾದಲ್ಲಿ ಉರಿಯೂತ ನಿವಾರಕ ಗುಣಗಳಿವೆ, ಇದು ಧೂಳಿನ ಅಲರ್ಜಿಯಲ್ಲಿ ತುಂಬಾ ಪ್ರಯೋಜನಕಾರಿ. ಅಲೋವೆರಾ ರಸ ಅಥವಾ ಜೆಲ್ಲಿಯನ್ನು ನಿಯಮಿತವಾಗಿ ಸೇವಿಸುವುದು ಅಲರ್ಜಿಯನ್ನು ಬಹಳವಾಗಿ ನಿವಾರಿಸುತ್ತದೆ. ಅಲ್ಲದೆ ಇಲ್ಲಿ ಧೂಳಿನ ಅಲರ್ಜಿಗಳನ್ನು ನಿವಾರಿಸಲು ತುಂಬಾ ಪರಿಣಾಮಕಾರಿ. ತಯಾರಿಸುವುದು ಹೇಗೆ?ಅಲೋವೆರಾ ಸಸ್ಯದಿಂದ ಎಲೆಯನ್ನು ಕತ್ತರಿಸಿ ಮತ್ತು ಚಾಕುವಿನಿಂದ ತಾಜಾ ಜೆಲ್ಲಿಯನ್ನು ತೆಗೆಯಿರಿ. ಈಗ ಅದನ್ನು ಒಂದು ಬೌಲನಲ್ಲಿ ಹಾಕಿ ಮತ್ತು ಮೂರು ಟೀ ಚಮಚ ಜೇನುತುಪ್ಪ ಮತ್ತು ಒಂದು ಟೀ ಚಮಚ ನಿಂಬೆ ರಸವನ್ನು ಸೇರಿಸಿ. ಈಗ ಮಿಶ್ರಣವನ್ನು ಸೇರಿಸಿ ಮತ್ತು ಚೆನ್ನಾಗಿ ಬೀಟ್ ಮಾಡಿ ಮತ್ತು ರಸ…
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಕುಂದಾಪ್ರ ಕನ್ನಡ ಅಧ್ಯಯನ ಪೀಠ ಆರಂಭಕ್ಕೆ ಆಸ್ಥೆ ವಹಿಸಿ ಮಂಗಳೂರು ವಿಶ್ವವಿದ್ಯಾನಿಲಯವು ಸರಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ನಾಲ್ಕು ವರ್ಷಗಳ ಜೀವಕಳೆ ದೊರೆತಿದೆ. ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಟಿಪ್ಪಣಿಯಾಗಿದ್ದು, ಶೀಘ್ರವೇ ಅನುದಾನ ಬಿಡುಗಡೆಗೊಂಡು ಅಧ್ಯಯನ ಪೀಠ ಸ್ಥಾಪನೆಯ ಹಾದಿ ಸುಗಮವಾಗಲಿದೆ. ನಾಲ್ಕು ವರ್ಷಗಳ ಹಿಂದೆ ಅಧ್ಯಯನ ಪೀಠ ಆರಂಭಿಸಲು ಮಂಗಳೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಆರಂಭದಲ್ಲಿ ವಿಶ್ವ ವಿದ್ಯಾನಿಲಯದ ಆಂತರಿಕ ಸಂಪನ್ಮೂಲದಿಂದ ರೂ.25 ಲಕ್ಷ ಹಣವನ್ನು ಮೀಸಲಿರಿಸಿ, ಪೀಠದ ಸಮರ್ಪಕ ಹಾಗೂ ರಚನಾತ್ಮಕ ಕೆಲಸಗಳಿಗೆ ಸರಕಾರದಿಂದ 1.50 ಕೋಟಿ ಅನುದಾನವನ್ನು ನಿರೀಕ್ಷಿಸಿತ್ತು. ಅಂತಿಮವಾಗಿ ಸರಕಾರದ ಅನುದಾನ ಬಂದ ಬಳಿಕವಷ್ಟೇ ಅಧ್ಯಯನ ಪೀಠ ಸ್ಥಾಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಫೆ.20ರಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮತ್ತೆ ಪತ್ರ ಬರೆದು ವಿಶ್ವವಿದ್ಯಾನಿಲಯಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದು, ಅದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದರು. ದಶಕಗಳಿಂದ ಕುಂದಾಪ್ರ ಕನ್ನಡ ಅಕಾಡೆಮಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ B.Arch ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 99.744 ಫಲಿತಾಂಶದೊಂದಿಗೆ ಅಗ್ರಗಣ್ಯ ಸಾಧನೆ ಮೆರೆದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ. ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿ, ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ದೈವಜ್ಞ ಬ್ರಾಹ್ಮಣ ಸಮಾಜದ ಆರಾಧಿಸಿ ಪೂಜಿಸಿಕೊಂಡು ಬಂದಿರುವ ದೈವಜ್ಞ ಕೇರಿಯಲ್ಲಿರುವ ಶ್ರೀ ನಾಗಜಟ್ಟಿಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕುಂಭಾಭಿಷೇಕ ಮತ್ತು ಸ್ವಪರಿವಾರ ನಾಗಶಿಲಾ ಪ್ರತಿಷ್ಠೆ, ಆಶ್ಲೇಷ ಬಲಿ, ಹಾಗೂ ಸಪರಿವಾರ ಜಟ್ಟಿಗೇಶ್ವರ ದೈವದ ಪುನಃ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕವು ಬುಧವಾರ ಜರುಗಿತು. ಜ್ಯೋತಿಷಿ ವಿದ್ವಾನ್ ಶ್ರೀ ವಾಸುದೇವ ಜೋಷಿ ಹಾಲಾಡಿ ಇವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆಗೆ ಸಹಸ್ರಾರು ಭಕ್ತರು ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದರು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ರವೀಂದ್ರ ಶೇಟ್ ಮಂಗಳೂರು ಅಧ್ಯಕ್ಷತೆ ವಹಿಸಿದ್ದರು ,ಗೌರವಾಧ್ಯಕ್ಷರಾದ ಮುಖ್ಯ ಅತಿಥಿಗಳಾಗಿ ಶ್ರೀ ಮಂಜುನಾಥ್ ಶೇಟ್ ಶಂಕರನಾರಾಯ, ಣ ಯು. ನಾಗರಾಜ ಶೇಟ್ ಉಡುಪಿ, ಬಿ. ಎನ್ .ಸುಬ್ರಮಣ್ಯ ಶೇಟ್ ಬೆಂಗಳೂರು, ಪ್ರಶಾಂತ್ ಶೇಟ್ .ಮಂಗಳೂರು ಉಪಸ್ಥಿತರಿದ್ದರು, ಶ್ರೀ ನಾಗ ಜಟ್ಟಿಗೇಶ್ವರ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀನಿವಾಸ್ ಶೇಟ್ ಸ್ವಾಗತ ಕೋರಿ,ಜೀರ್ಣೋದ್ಧಾರಕ್ಕೆ ಸಹಕರಿಸಿದ ದಾನಿಗಳನ್ನು ವೇದಿಕೆಯಲ್ಲಿ ಸ್ಮರಣಿಕೆ ನೀಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತೃತ್ವದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಐಸಿಐಸಿಐ ಬ್ಯಾಂಕ್ ವತಿಯಿಂದ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಡ್ರೆöÊವ್ ನೆರವೇರಿತು. ಎನ್.ಐ.ಟಿ.ಐ ಕನ್ಸ್ಲ್ಟೆಂಟ್ ಶ್ರೀನಿಧಿ ಮಾತನಾಡಿ ವಿದ್ಯಾರ್ಥಿಗಳಿಗೆ ಐಸಿಐಸಿಐ ಬ್ಯಾಂಕ್ ಒದಗಿಸಿಕೊಟ್ಟ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿ, ಮಾತನಾಡಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹಾಗೂ ತರಬೇತಿಯಲ್ಲಿನ ಸಕ್ರಿಯ ಭಾಗವಹಿಸುವಿಕೆ ಸಂದರ್ಶನದಲ್ಲಿ ಯಶಸ್ಸನ್ನು ತಂದುಕೊಡುತ್ತದೆ ಎಂದರು. ಈ ಸಂದರ್ಭ ಎನ್.ಐ.ಟಿ.ಐ ಕನ್ಸ್ಲ್ಟೆಂಟ್ ಅನನ್ಯ ಉಪಸ್ಥಿತರಿದ್ದರು. ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ಹರೀಶ್ ಕಾಂಚನ್ ವಂದಿಸಿದರು. ವಿದ್ಯಾರ್ಥಿಗಳಾದ ರಶ್ಮಿ ಪ್ರಾರ್ಥಿಸಿ, ಚೇತನ್ ಶೆಟ್ಟಿ ಸ್ವಾಗತಿಸಿ, ಸೌಭಾಗ್ಯ ಕಿಣಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಲಾಡ್ಜ್ನಲ್ಲಿ ತಂಗಿದ್ದ ಚಿನ್ನದ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ನಿಂದ ಕೆಲವು ತಿಂಗಳ ಹಿಂದೆ ಚಿನ್ನಾಭರಣ ಕಳವುಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಮುಂಬೈಯಲ್ಲಿ ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜಸ್ಥಾನದ ಪಾಲಿ ಜಿಲ್ಲೆಯ ಖೋರ್ ಗ್ರಾಮದ ರಾಮ್ ರಾಯಲ್ ಯಾನೆ ಬಾಳು ರಾಮ್(21) ಹಾಗೂ ಸೇವಾರಿ ಗ್ರಾಮ ಬರ್ಲಾಬೆರಾ ಗ್ರಾಮದ ಪ್ರವೀಣ್ ಕುಮಾರ್(25) ಬಂಧಿತ ಆರೋಪಿಗಳು. ಇವರಿಂದ 10ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊಹಮ್ಮದ್ ಶಾಹಬುದ್ದಿನ್ ಮಾಲಕತ್ವದ ಹಾಜಿ ಗೋಲ್ಡ್ ಆ್ಯಂಡ್ ಡೈಮಂಡ್ ಜುವೆಲರಿಯ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ರಮೇಶ್ ಕುಮಾರ್ ಅವರು ಚಿನ್ನಾ ಭರಣ ಮಾರಾಟಕ್ಕೆಂದು 2023ರ ಜೂ.10ರಂದು ಕುಂದಾಪುರ ಕಡೆಗೆ ಬಂದಿದ್ದರು. ಉಪ್ಪುಂದಕ್ಕೆ ತೆರಳಿ, ಅಲ್ಲಿಂದ ಸಂಜೆ ವಾಪಸಾಗಿ, ರಾತ್ರಿ ಕುಂದಾಪುರದ ಖಾಸಗಿ ಹೊಟೇಲೊಂದರಲ್ಲಿ ಸ್ನೇಹಿತ ರಾಜಸ್ಥಾನ ಮೂಲದ ರಾಮ್ ಎಂಬಾತನ ಜತೆ 421 ಗ್ರಾಂ. ತೂಕದ ಚಿನ್ನಾಭರಣವನ್ನು ಮಂಚದ ಕೆಳಗಿಟ್ಟು ಮಲಗಿದ್ದರು. ಬೆಳಗ್ಗಿನ ಜಾವ 3 ಗಂಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಂಜೀವಿನಿ ಸಂಘದ ಮೂಲಕ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಸರಕಾರ ವಿವಿಧ ಯೋಜನೆಗಳ ಮೂಲಕ ಅನುದಾನ ಒದಗಿಸುತ್ತಿದೆ. ಊರಿನಲ್ಲಿದ್ದು ದುಡಿಮೆ ಮಾಡಲು ಸಂಜೀವಿನಿ ಸಂಘಗಳ ಸಹಕಾರಿಯಾಗುತ್ತದೆ. ಸಂಜೀವಿನಿ ಸಂಘದ ಸದಸ್ಯರು ವ್ಯವಹಾರ ಬಗ್ಗೆ ತರಬೇತಿ ಪಡೆದುಕೊಂಡು ವ್ಯವಹಾರದಲ್ಲಿ ಯಶಸ್ಸು ಗಳಿಸಲು ಪ್ರಯತ್ನಿಸಬೇಕು. ಸಂಜೀವಿನಿ ಘಟಕ ಯಶಸ್ಸು ಗಳಿಸುವುದರ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೃಷಿ ಇಲಾಖೆ ಉಡುಪಿ, ತಾಲೂಕು ಪಂಚಾಯತ್ ಕುಂದಾಪುರ ಹಾಗೂ ಗ್ರಾಮ ಪಂಚಾಯತ್ ಗುಜ್ಜಾಡಿ, ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವತಿಯಿಂದ ಕೊಡಪಾಡಿಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಶ್ರೀ ದುರ್ಗಾ ಸಂಜೀವಿನಿ ಚಿಕ್ಕಿ ಘಟಕವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್, ಕುಂದಾಪುರ ತಾಪಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ವತಿಯಿಂದ ಸಮುದಾಯ ಆರೋಗ್ಯ ಕೇಂದ್ರ, ಬೈಂದೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಶಿರೂರು ಇಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜರುಗಿತು. ರೋಟರಿ ವತಿಯಿಂದ ಎರಡೂ ಕಡೆಗಳಲ್ಲಿ ಲಸಿಕೆಯ ಮನೆ ಮನೆ ವಿತರಣೆಗಾಗಿ ವಾಹನದ ವ್ಯವಸ್ಥೆ ಹಾಗೂ ಸಿಬಂದಿಗಳಿಗೆ ಉಪಹಾರದ ವ್ಯವಸ್ಥೆಯನ್ನು ವತಿಯಿಂದ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಪ್ರಸಾದ ಪ್ರಭು, ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ., ಪೂರ್ವಾಧ್ಯಕ್ಷ ಐ ನಾರಾಯಣ ಹಾಗೂ ಹಿರಿಯ ಸದಸ್ಯರಾದ ಡಾ. ಎಮ್.ಎಸ್. ಶೆಟ್ಟಿ ಪಾಲ್ಗೊಂಡಿದ್ದರು.
