Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ಎನ್‌ಎಸ್‌ಎಸ್ ಘಟಕ ಹಾಗೂ ಅಂಗದಾನ ಮತ್ತು ನಶಾಮುಕ್ತ ಅಭಿಯಾನ ಸಮಿತಿಗಳ ವತಿಯಿಂದ ಅಂಗದಾನ ಮತ್ತು ನಶಾಮುಕ್ತ ಅಭಿಯಾನ ಕುರಿತು ಜಾಗೃತಿ ರ‍್ಯಾಲಿ ಆಯೋಜಿಸಲಾಯಿತು. ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕಂಡ್ಲೂರುವರೆಗೆ ನಡೆದ ಈ ರ‍್ಯಾಲಿಗೆ ಡಾ. ಉಮೇಶ್ ನಾಯಕ್ (ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೇಶ್ವರ), ಸಂತೋಷ್ ಕುಮಾರ್ (ಹೆಡ್ ಕಾನ್ಸ್ಟೇಬಲ್, ಕಂಡ್ಲೂರು ಪೊಲೀಸ್ ಠಾಣೆ), ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ (ಪ್ರಾಂಶುಪಾಲರು), ರೂಪಶ್ರೀ ಕೆ.ಎಸ್. (ಉಪ ಪ್ರಾಂಶುಪಾಲರು) ಹಾಗೂ ಎನ್‌ಎಸ್‌ಎಸ್ ಸಂಯೋಜಕರಾದ ಚಂದ್ರಶೇಖರ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ರ‍್ಯಾಲಿಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ಅಂಗದಾನದ ಮಹತ್ವ ಹಾಗೂ ಮಾದಕ ಪದಾರ್ಥಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಸಮಾಜದಲ್ಲಿ ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಡಾ. ಉಮೇಶ್ ನಾಯಕ್ ಅವರು ಕರೆ ನೀಡಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಆಶ್ರಯದಲ್ಲಿ ನಡೆಯುತ್ತಿರುವ ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಕಿಂಡರ್‌ ಗಾರ್ಟನ್ ಮಕ್ಕಳ ಪದವಿ ಪ್ರದಾನ ಸಮಾರಂಭವು ವೈಭವಯುತವಾಗಿ ಭಾವನಾತ್ಮಕ ಕ್ಷಣಗಳು ಹಾಗೂ ಸಂಸ್ಕೃತಿಯ ಸೊಗಡಿನಿಂದ ಕಂಗೊಳಿಸಿತು. ಕಾರ್ಯಕ್ರಮವನ್ನು ವಿಶೇಷ ಆಹ್ವಾನಿತರಾಗಿ ಆಗಮಿಸಿದ ವಿನಯ ದಿನೇಶ್ ಶೆಣೈ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಮಕ್ಕಳ ಮನಮೋಹಕ ಪ್ರತಿಭೆಯನ್ನು ಹೃದಯಪೂರ್ವಕವಾಗಿ ಶ್ಲಾಘಿಸಿ, “ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ತರ. ಪ್ರೀತಿಯ ಜೊತೆಗೆ ಸಕಾಲಿಕ ಮಾರ್ಗದರ್ಶನ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಅತ್ಯಗತ್ಯ ಎಂದು ನುಡಿದರು. ಸಭಾದ್ಯಕ್ಷತೆ ವಹಿಸಿದ್ದ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಶಾಲೆಯ ಹಾಗೂ ಟ್ರಸ್ಟ್ ನ ದ್ಯೇಯೋದ್ಧೇಶವನ್ನು ಸಭೆಯಲ್ಲಿ ಹಂಚಿಕೊಂಡರು . ಗೌರವ ಅತಿಥಿಯಾಗಿ ಭಾಗವಹಿಸಿದ್ದ ಶಾಲೆಯ ಶೈಕ್ಷಣಿಕ ಸಂಚಾಲಕರು ಹಾಗೂ ಟ್ರಸ್ಟ್‌ನ ಖಜಾಂಚಿಯೂ ಆದ ಕೊಡ್ಲಾಡಿ ಸುಭಾಷ್ಚಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ “ಹಟ್ಟಿಯಂಗಡಿ ಶಾಂತಾನಂದ ಭಟ್ ಸ್ಮಾರಕ” ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಉದ್ಘಾಟಿಸಿದರು. ದಾನಿಗಳಾದ ವಿಜಯಾ ಕಾರ್ಕಳ ಅವರು ತಮ್ಮ ಸಹೋದರ ಹಟ್ಟಿಯಂಗಡಿ ಶಾಂತಾನಂದ ಭಟ್ ಅವರ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ವಿದ್ಯಾರ್ಥಿಗಳಿಗಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ, ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ದಾನಿಗಳಾದ ಪ್ರಾಕ್ತನ ವಿದ್ಯಾರ್ಥಿಗಳಾದ ಕಿರಣ್ ಹಟ್ಟಿಯಂಗಡಿ, ಚಂದ್ರಶೇಖರ್ ಕೊತ್ವಾಲ್, ಭಾಸ್ಕರ ಗಾಣಿಗ, ನಾಮದೇವ ಖಾರ್ವಿ, ರಾಮಚಂದ್ರ, ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀಹರಿ ಚಾತ್ರ ಹಾಜರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಸರ್ಕಲ್ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಗೊಂಡ ಸವಾರನನ್ನು ಸ್ಥಳೀಯ ನಿವಾಸಿ ಪರಮೇಶ್ವರ್ ಭಟ್ ಎಂದು ಗುರುತಿಸಲಾಗಿದೆ. ಪರಮೇಶ್ವರ್ ಭಟ್ ಅವರು ಸರ್ವಿಸ್ ರಸ್ತೆಯ ಮುಖಾಂತರ ಬಂದು ಸಾಲಿಗ್ರಾಮ ಪೇಟೆಗೆ ತೆರಳಲು ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಉಡುಪಿಯಿಂದ ಕುಂದಾಪುರದ ಕಡೆಗೆ ಅತೀ ವೇಗವಾಗಿ ಚಲಿಸುತ್ತಿದ್ದ ಕಾರು ಬೈಕ್‌ಗೆ ನೇರವಾಗಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಕೋಟ: ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ನಿರ್ದೇಶಕರುಗಳಿಗೆ ತರಬೇತಿ ಅತ್ಯಗತ್ಯ ಎಂದು ದ.ಕ. ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಹೇಳಿದರು. ಅವರು ಮಾ.23ರಿಂದ 25ವರೆಗೆ ಕೋಟ ಸಹಕಾರಿ ವ್ಯವಸಾಯಕ ಸಂಘದ ಸಭಾಂಗಣದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯ ಮೈಸೂರು ತರಬೇತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಆಯ್ದ ಸಂಘಗಳ ಆಡಳಿತ ಮಂಡಳಿ ಸದಸ್ಯರ ಮೂರು ದಿನದ ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದ.ಕ ಹಾಲು ಉತ್ಪಾದಕರ ಒಕ್ಕೂಟ ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ಜೊತೆಗೆ ಸ್ವಾಲವಲಂಬಿ ಬದುಕಿಗೆ ಮುನ್ನುಡಿ ಬರೆಯುವ ಕಾರ್ಯ ಮಾಡುತ್ತಿದೆ. ಈ ದಿಸೆಯಲ್ಲಿ ಹೈನುಗಾರರ ಸಮಸ್ಯೆಯನ್ನು ಪರಿಗಣಿಸಿ ಸ್ಥಳೀಯವಾಗಿ ತರಬೇತಿ ನಡೆಸಲಾಗುತ್ತಿದ್ದು, ಈ ತರಬೇತಿಯ ಸದುಪಯೋಗವನ್ನು ಪಡೆದು ಸಂಘದ ಆಡಳಿತವನ್ನು ಬಲಪಡಿಸುವಂತೆ ಸಲಹೆ ನೀಡಿದರಲ್ಲದೆ ಪ್ರಸ್ತುತ ಒಕ್ಕೂಟದ ಮುಖಾಂತರ ಪ್ರಸ್ತುತ ಲೀಟರ್ ಮೇ ತಿಂಗಳ ಅಂತ್ಯದವರೆಗೆ…

Read More

ಕುಂದಾಪರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು BAERU ಕಲೇಕ್ಟಿವ್ಸ್, ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಪ್ಲಾಸ್ಟಿಕ್ ಬಳಕೆಯ ಅರಿವಿನ ಕುರಿತಾದ ‘ಪ್ಲಾಸ್ಟಿಕಾಸುರ’ ಯಕ್ಷಗಾನ ಪ್ರಸ್ತುತಿ ನಡೆಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಪ್ರವೀಣಾ ಎಮ್. ಪೂಜಾರಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಭೂಮಿಯನ್ನು ಮಲಿನಗೊಳಿಸುವ ವಿಕೃತ ಮನಸ್ಥಿತಿಯ ವಿರುದ್ಧ ಶಿಕ್ಷಣ ತಜ್ಞ ಡಾ. ಬಾಲಕೃಷ್ಣ ಶೆಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್, ಸಮುದ್ಯತಾ ಗ್ರೂಪ್ಸ್ ಕೋಟ, ಚಿತ್ತಾರಿ ಟ್ರಸ್ಟ್ ಮಣೂರು ಇವರುಗಳ ಸಯೋಗದೊಂದಿಗೆ ಕೋಟ ಗ್ರಾಮಪಂಚಾಯತ್ ಎಸ್ ಎಲ್ ಆರ್ ಎಂ ಘಟಕ ಇವರ ಸಂಯೋಜನೆಯೊಂದಿಗೆ 296ನೇ ಭಾನುವಾರದ ಪರಿಸರಸ್ನೇಹಿ ಕಾರ್ಯಕ್ರಮದ ಅಂಗವಾಗಿ ಕೋಟ ಗಿಳಿಯಾರು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಊರು ಸ್ವಚ್ಛವಾಗಿದ್ದರೆ ಮಾತ್ರ ಮನಸ್ಸು ಶುಚಿಯಾಗಿರಲು ಸಾಧ್ಯ. ಕಂಡಕಂಡಲ್ಲಿ ತ್ಯಾಜ್ಯ ಎಸೆಯುವ ಹೀನ ಮನಸ್ಥಿತಿಯನ್ನು ವಿರುದ್ಧ ಆಕ್ರೋಶ ಹೊರಹಾಕಿ ನಮ್ಮಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ಮಾಡುತ್ತಾರೆ. ಆದರೆ ಪಂಚವರ್ಣದವರು ಮಾಡುವ ಪ್ರತಿ ಭಾನುವಾರ ಪ್ರಕೃತಿ ಮಾತೆಯನ್ನು ಆರಾಧಿಸುವ ಕಾರ್ಯ ಬಹು ಶ್ರೇಷ್ಠವಾದ ಕಾರ್ಯವಾಗಿದೆ. ಇಂತಹ ಮನಸ್ಸಗಳು ಗ್ರಾಮಗ್ರಾಮದಲ್ಲಿ ಪಸರಿಸಿಕೊಳ್ಳಲಿ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನೈತಿಕತೆ, ನಿರಂತರ ಕಲಿಯುವಿಕೆ ಮತ್ತು  ಜೀವನ ಮೌಲ್ಯಗಳು  ಸುಸಂಬದ್ಧ ಮತ್ತು ಸಂತೋಷದ ಬದುಕಿಗೆ ಆಧಾರಸ್ತಂಭ ಎಂದು ಮೈಸೂರು ಮರ್ಕಂಟೈಲ್ ಕಂಪೆನಿ ಲಿಮಿಟೆಡ್ ಇದರ ಅಧ್ಯಕ್ಷರು ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ರಿ., ಬೆಂಗಳೂರು ಇದರ ಅಧ್ಯಕ್ಷರಾದ ಡಾ. ಹೆಚ್.ಎಸ್. ಶೆಟ್ಟಿ ಹೇಳಿದರು.  ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೀವನದ ಯಶಸ್ಸಿನಲ್ಲಿ ನೈತಿಕ ಮೌಲ್ಯಗಳ ಪಾತ್ರ ಬಹುದೊಡ್ಡದು. ಪ್ರತಿ ಸಂದೇಶಗಳು, ಅನುಭಗಳು, ಜ್ಞಾನ ಇವೆಲ್ಲವೂ ಮನುಷ್ಯನ ವ್ಯಕ್ತಿತ್ವವನ್ನು ಬದಲಾಯಿಸುವ ಅತ್ಯುತ್ತಮ ಸಾಧನಗಳು. ಇದರಿಂದ ಕೌಟುಂಬಿಕ, ಸಾಮಾಜಿಕ ಜೀವನ ಚೆನ್ನಾಗಿರುತ್ತದೆ. ಅಲ್ಲದೇ  ರಾಷ್ಟ್ರದ ಬೆಳವಣಿಗೆಯಲ್ಲಿ ನಮ್ಮ ಕೊಡುಗೆಯನ್ನು ಅತ್ಯುತ್ತಮ ರೀತಿಯಲ್ಲಿ ನೀಡಬಹುದಾಗಿದೆ ಎಂದು ಅಭಿಪ್ರಾಯಪಟ್ಟರು. ಪ್ರಸ್ತುತದ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳು ಯುವಜನತೆಯ ಓದುವಿಕೆ, ಜ್ಞಾನ ಮತ್ತು ಅನುಭವಗಳ ಆಳವನ್ನು ಕಸಿದುಕೊಳ್ಳುವ ಭೀತಿ ಎದುರಾಗಿದೆ ಎಂದು ವಿಷಾದಿಸಿದರು. ಆದರೂ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ದೇಶ ಇನ್ನೂ ಅಭಿವೃದ್ಧಿಯಾಗಬೇಕಿದೆ. ಅಂದರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಡಾ. ಕೋಟ ಶಿವರಾಮ ಕಾರಂತರ ಶಿಷ್ಯೆ, ದಿ. ಮಾಲಿನಿ ಮಲ್ಯರ ಸಂಸ್ಮರಣಾ ಕಾರ್ಯಕ್ರಮವು ಡಾ. ಶಿವರಾಮ ಕಾರಂತ ಸ್ಟಡಿ ಮತ್ತು ಸಂಶೋಧನಾ ಸೆಂಟರ್ “ಮಾನಸ” ಸಾಲಿಗ್ರಾಮದಲ್ಲಿ ಗಣ್ಯರ ಸಮ್ಮುಖದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಗೆಳೆಯರ ಬಳಗದ ಕೆ. ತಾರಾನಾಥ ಹೊಳ್ಳ, ಪುಷ್ಪನಮನಗೈದು, ಡಾ. ಕಾರಂತರ ನೆನಪು ಕಾಡಿನ ಹಸಿರು ಇರುವವರೆಗೂ ಸಮುದ್ರದ ಶಬ್ದ ನಿಲ್ಲುವವರೆಗೂ, ಪಣ ತೊಟ್ಟು ಕಾರ್ಯಕ್ರಮ ಯಶಸ್ವೀಯಾಗಿನಿರ್ವಹಿಸಿ, ಸರ್ವರ ಪ್ರಶಂಸೆಗೆ ಪಾತ್ರರಾದ ಧೀಮಂತ ಮಹಿಳೆ ಮಾಲಿನಿ ಮಲ್ಯರಾಗಿದ್ದಾರೆ ಎಂದರು. ಸಭೆಯಲ್ಲಿ ಗಣ್ಯರು ಮಲ್ಯರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಬಿ.ಎಂ ಗುರುರಾಜ ರಾವ್, ಕಾರ್ಯದರ್ಶಿ ನಾರಾಯಣ ಆಚಾರ್ಯ ಟ್ರಸ್ಟಿನ ವಿಶ್ವಸ್ಥರಾದ ನಾರಾಯಣ ಶೆಣೈ, ಸಂದೀಪ್ ಶೆಟ್ಟಿ, ಕೆ. ಪಂಜು ಪೂಜಾರಿ, ಉದ್ಯಮಿ ಮಾದವ ಪೈ, ಪ್ರಸನ್ನ ಉರಾಳ ಹಾಗೂ ಸಂಗೀತಾ, ರಂಜನಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಾಬುಕಳದಲ್ಲಿ ಟ್ರಕ್ ಡಿಕ್ಕಿಯಾಗಿ ಸ್ಕೂಟಿ ಸವಾರೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಉಪ್ಪಿನಕೋಟೆ ಸಾಲಿಕೇರಿ ನಿವಾಸಿ ನಿರ್ಮಲಾ (54) ಮೃತ ಮಹಿಳೆ. ಅವರು ತನ್ನ ಪುತ್ರಿ ನಿರೀಕ್ಷಾ ಅವರೊಂದಿಗೆ ಸಾಲಿಗ್ರಾಮದ ಆಂಜನೇಯ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾಬುಕಳ ಸೇತುವೆ ಬಳಿ ಬ್ರಹ್ಮಾವರದಿಂದ ಕೋಟ ಕಡೆ ಸಂಚರಿಸುತ್ತಿದ್ದ ತೆಲಂಗಾಣ ನೋಂದಣಿಯ ಟ್ರಕ್ ಡಿಕ್ಕಿ ಹೊಡೆಯಿತು. ಢಿಕ್ಕಿಯ ರಭಸಕ್ಕೆ ನಿರ್ಮಲಾ ಅವರು ಸ್ಥಳದಲ್ಲೇ ಮೃತಪಟ್ಟರು, ನಿರೀಕ್ಷಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More