Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಮನೋವೈದ್ಯಕೀಯ ಸಂಘ ಕರ್ನಾಟಕ ಶಾಖೆಯ 32ನೆಯ ವಾರ್ಷಿಕ ವೈಜ್ಞಾನಿಕ ಸಮ್ಮೇಳನವು ಇದೇ ಸೆ.10ರ ಶನಿವಾರ ಮತ್ತು 11 ರ ಭಾನುವಾರ ಕೋಟೇಶ್ವರದ ಯುವ ಮೆರಿಡಿಯನ್ ಬೇ ರೆಸಾರ್ಟ್’ನಲ್ಲಿ ನಡೆಯಲಿದೆ. ಯುವ ಮೆರಿಡಿಯನ್ ಹೋಟೆಲ್ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನಾಧ್ಯಕ್ಷ, ಮನೋವೈದ್ಯ ಡಾ. ಪ್ರಕಾಶ್ ತೋಳಾರ್ ಈ ಬಗ್ಗೆ ವಿವರಗಳನ್ನು ನೀಡಿದರು. ಉಡುಪಿ ಮತ್ತು ಮಂಗಳೂರಿನ ಮನೋವೈದ್ಯಕೀಯ ಸಂಘಗಳು ಜಂಟಿಯಾಗಿ ಆಯೋಜಿಸಿರುವ ಈ ಸಮ್ಮೇಳನವು ಸೆ.10 ರ ಶನಿವಾರ ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಸಚಿವ ಡಾ. ಅಶ್ವಥ್ ನಾರಾಯಣ್ ಸಿ. ಎನ್., ಹಿಂದುಳಿದ ವರ್ಗಗಳ ಅಭಿವೃದ್ಧಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ನಾಡೋಜ ಡಾ. ಜಿ. ಶಂಕರ್ ಮೊದಲಾದ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಭಾರತೀಯ ಮನೋವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ. ಕಿರಣ್ ಕುಮಾರ್ ಪಿ. ಕೆ. ವಹಿಸುವರು. ಸಮ್ಮೇಳನದ ಪೂರ್ವಭಾವಿಯಾಗಿ ಸೆ.9ರ ಶುಕ್ರವಾರ ಎರಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ವೈದ್ಯಕೀಯ ಸಂಘ ( ಐಎಂಎ) ಕುಂದಾಪುರ ಆಶ್ರಯದಲ್ಲಿ ಕೆಎಂಸಿ ಮಣಿಪಾಲ ಸಹಯೋಗದಲ್ಲಿ ಮುಂದುವರಿದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಇಲ್ಲಿನ ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ರೋಟರಿ ಭವನದಲ್ಲಿ ನೆರವೇರಿತು. ಕೆಎಂಸಿ ನ್ಯೂರೋಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಗಿರೀಶ್ ಮೆನನ್ ಅವರು ಪಕ್ಷವಾತದಲ್ಲಿ ಶಸ್ತ್ರ ಚಿಕಿತ್ಸೆಯ ಪಾತ್ರ” ಎಂಬ ವಿಷಯ ಬಗ್ಗೆ ಹಾಗೂ ಎಲುಬು ಕೀಲು ವಿಭಾಗದ ಡಾ. ಕೃಷ್ಣಪ್ರಸಾದ ಅವರು “ಹಿಮ್ಮಡಿ ನೋವಿನ ಉಪಶಮನ” ವಿಷಯದ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು. ಭಾರತೀಯ ವೈದ್ಯಕೀಯ ಸಂಘ ಕುಂದಾಪುರದ ಅಧ್ಯಕ್ಷ, ಎಲುಬು ಕೀಲು ಶಸ್ತ್ರ ಚಿಕಿತ್ಸಾ ತಜ್ನ ಡಾ. ಸಂದೀಪ ನಾವಡ ಪಡುಕೋಣೆ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕಾರ್ಯದರ್ಶಿ, ಮಾನಸಿಕ ತಜ್ಞ ಡಾ. ರವೀಂದ್ರ ಮುನೊಳಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗುಜ್ಜಾಡಿ ಮಂಕಿಯಲ್ಲಿ ಸ್ಪಂದನ ಯುವ ಸಂಘದಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ “ಗುರುಗಳಿಗೆ ಶಿಷ್ಯರ ಗೌರವ ವಂದನೆ” ನಡೆಯಿತು. ಈ ಸಂದರ್ಭಮಂಕಿ ಸ.ಹಿ.ಪ್ರಾ. ಶಾಲೆ ಇದರ ಮುಖ್ಯೋಪಾಧ್ಯಾಯನಿಯಾದ ಗೀತಾ ಭಾಸ್ಕರ ಮಯ್ಯ ಹಾಗೂ ಶಾಲಾ ಶಿಕ್ಷಕ ವೃಂದದವರನ್ನು ಸಹ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಶಂಕರ ಬಿಲ್ಲವ, ಪರಮೇಶ್ವರ ಶ್ರೀಯಾನ್ ಮತ್ತು ಸ್ಪಂದನ ಸಂಘದ ಅಧ್ಯಕ್ಷರಾದ ರಘು ಎಂ. ಉಪಸ್ಥಿತರಿದರು. ಸುಧೀರ್ ಪಿ. ನಾಯ್ಕ್ ಸ್ವಾಗತಿಸಿ, ಸದಾನಂದ ಎಂ. ವಂದಿಸಿದರು. ತದನಂತರ ಸ್ಪಂದನ ಕಲಾತಂಡ ಮಂಕಿ-ಗುಜ್ಜಾಡಿ, ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಂಟ ಸಮಾಜದ ಇವತ್ತು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದೆ. ಶೈಕ್ಷಣಿಕವಾಗಿ ಸಮಾಜ ಜಾಗೃತವಾದಗ ಮಾತ್ರ ಬೆಳವಣಿಗೆ ಮತ್ತು ಬದಲಾವಣೆ ಸಾಧ್ಯವಿದೆ. ಸಮುದಾಯವನ್ನು ಒಂದುಗೂಡಿಸುವ ದೃಷ್ಠಿಯಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅತ್ಯಂತ ಜೌಚಿತ್ಯ ಪೂರ್ಣವಾಗಿದೆ ಎಂದು ಜಿಲ್ಲಾ ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು. ಯಡ್ತರೆ ಬಂಟರ ಭವನದಲ್ಲಿ ಬೈಂದೂರು ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ಬೆಂಗಳೂರು ಬಂಟರ ಸಂಘದ ದಾನಿಗಳ ಸಹಯೋಗದಲ್ಲಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಂಗಳೂರು ರಾಮಕೃಷ್ಣ ಡಿಗ್ರಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ಉತ್ತಮ ಅಂಕಗಳಿಸಿದ ಎಲ್ಲಾ ವಿದ್ಯಾರ್ಥಿಗಳು ಓದಿನಲ್ಲಿಯೂ ಒಂದು ಶಿಸ್ತು ಅಳವಡಿಸಿಕೊಂಡಿರುತ್ತಾರೆ. ಅದರಂತೆಯೇ ಬದುಕಿನ ರೀತಿಯನ್ನು ಓದಿಗೆ ಅನುಕೂಲವಾಗುವಂತೆ ಬದಲಿಸಿಕೊಂಡಿರುತ್ತಾರೆ. ಅಂತವರಿಗೆ ಯಶಸ್ಸು ಕೂಡಲೇ ಒಲಿಯುತ್ತದೆ. ಈ ಯಶಸ್ಸಿನತ್ತ ಎಲ್ಲಾ ಮಕ್ಕಳು ಹೆಜ್ಜೆಯಿಡುವಂತಾಗಬೇಕು. ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನ, ದಾರಿ, ಕನಸುಗಳನ್ನು ನನಸು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ಕುಲಶೇಖರದಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಒಕ್ಕೂಟದ ನಿರ್ದೇಶಕರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಶ್ರೇಷ್ಠ ಹೈನುಗಾರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರಿ ಕೃಷಿ ಹಾಗೂ ಹೈನುಗಾರಿಕೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ತೊಡಗಿಸಿಕೊಂಡಿದ್ದಾರೆ. ದ.ಕ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ನಿರ್ದೇಶಕರುಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಗೀತ ಭಾರತಿ ಟ್ರಸ್ಟ್ ಕುಂದಾಪುರ, ಚಿರಂತನ ಚಾರಿಟೆಬಲ್ ಟ್ರಸ್ಟ್ ಸುರತ್ಕಲ್ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮ್ಯಾಕ್ಸ್ ಮೀಡಿಯಾ ಉಡುಪಿ, ಭಂಡಾರ್‌ಕಾರ‍್ಸ್ ಕಾಲೇಜು ಇವುಗಳ ಸಹಯೋಗದಲ್ಲಿ ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ರವಿವಾರ “ಅಮೃತಭಾರತಿಗೆ ಸಂಗೀತದಾರತಿ” ಹಿಂದುಸ್ಥಾನಿ ಯುವ ಶಾಸ್ತ್ರಿಯ ಸಂಗೀತೋತ್ಸವ ಕಾರ್ಯಕ್ರಮ ನಡೆಯಿತು. ಭಂಡಾರ್‌ಕಾರ‍್ಸ್ ಕಾಲೇಜಿನ ಆಡಳಿತ ಮಂಡಳಿಯ ವಿಶ್ವಸ್ಥ ಕೆ. ಶಾಂತಾರಾಮ ಪ್ರಭು ಕಾರ್ಯಕ್ರಮ ಉದ್ಘಾಟಿಸಿ ಸಂಗೀತಕ್ಕೆ ತನ್ನದೇ ಆದ ಮಾಂತ್ರಿಕ ಶಕ್ತಿ ಇದ್ದು, ಇಂತಹ ಸಂಗೀತೋತ್ಸವ ಯುವ ಕಲಾವಿದರಿಗೆ ಉತ್ತಮ ವೇದಿಕೆ. ಇಂತಹ ಕಾರ್ಯಕ್ರಮಗಳು ನಿರಂತರ ನಡೆಯುತ್ತಿರಲಿ ಎಂದರು. ಸಂಗೀತ ಭಾರತಿ ಟ್ರಸ್ಟ್‌ನ ಅಧ್ಯಕ್ಷ ಕೆ. ಶ್ರೀಧರ್ ಕಾಮತ್, ಕಾರ್ಯದರ್ಶಿ ನಾರಾಯಣ್, ಟ್ರಸ್ಟಿಗಳಾದ ಎ. ಎಸ್. ಎನ್. ಹೆಬ್ಬಾರ್, ಸೀತಾರಾಮ ನಕ್ಕತ್ತಾಯ, ಡಾ| ಎಚ್. ಆರ್. ಹೆಬ್ಬಾರ್, ರೇಖಾ ಕಾರಂತ್, ಸುಪ್ರಸನ್ನ ನಕ್ಕತ್ತಾಯ, ಚಿರಂತನ ಚಾರಿಟೆಬಲ್ ಟ್ರಸ್ಟ್‌ನ ಭಾರವಿ ದೇರಾಜೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಬೆಳಗ್ಗಿನಿಂದ ಸಂಜೆಯವರೆಗೆ ಯುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವುಂದ ಲಯನ್ಸ್ ಕ್ಲಬ್ ಶಿಕ್ಷಕ ದಿನಚರಣೆ ನಿಮಿತ್ತ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ನಿವೃತ್ತರಾದ ಶಿಕ್ಷಕ ಸುಬ್ಬಣ್ಣ ಮಾಸ್ಟ್ರು ಕುದ್ರುಕೋಡು, ಮಹಾದೇವ ಮಂಜ ಅರೆಹೊಳೆ ಇವರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಲಯನ್ಸ್ ಅಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರುಕೊಡು, ವಲಯ ಅಧ್ಯಕ್ಷ ನರಸಿಂಹ ದೇವಾಡಿಗ, ಸ್ಥಾಪಕ ಅಧ್ಯಕ್ಷ ಭಾಸ್ಕರ್ ಶೆಟ್ಟಿ, ಕಾರ್ಯದರ್ಶಿ ದಿನೇಶ್ ಆಚಾರ್, ಪ್ರದೀಪ್ ಕುಮಾರ್ ಶೆಟ್ಟಿ, ರಾಜು ಬಿ ದೇವಾಡಿಗ,ಜೆ.ಪಿ ಬಡಾಕೆರೆ, ಪ್ರಮೋದ್ ಪೂಜಾರಿ, ವೀರಶೇಖರ, ಕಿಶೋರ್ ಕುಮಾರ್ ಶೆಟ್ಟಿ, ರವಿಶೆಟ್ಟಿ ಕುದ್ರುಕೊಡು ಉಪಸ್ಥಿತರಿದ್ದರು. ನಾವುಂದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಿವೃತ್ತ ಶಿಕ್ಷಕರ ಸನ್ಮಾನಿಸಲಾಯಿತು. ಲಯನ್ಸ್ ಅಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರುಕೊಡು, ವಲಯ ಅಧ್ಯಕ್ಷ ನರಸಿಂಹ ದೇವಾಡಿಗ, ಸ್ಥಾಪಕ ಅಧ್ಯಕ್ಷ ಭಾಸ್ಕರ್ ಶೆಟ್ಟಿ ಮುಂತಾದವರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜದ ಸಂಘಟನೆ ಮಾಡಲು ಸಹಕಾರಿ ಸಂಘದಂತಹ ಉತ್ತಮ ವೇದಿಕೆಯಿಂದ ಮಾತ್ರ ಸಾಧ್ಯ ಎಂದು ಶ್ರೀ ಸೀತಾರಾಮ ವಿವಿಧೋದ್ದೇಶ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ನಾಗಪ್ಪ ಕೊಠಾರಿ ಹೇಳಿದರು. ಕುಂದಾಪುರ ರಾಜ್ಯ ಸರಕಾರಿ ನೌಕರರ ಕಟ್ಟಡದಲ್ಲಿನ ನೇತಾಜಿ ಸಭಾಭವನದಲ್ಲಿ ಭಾನುವಾರ ನಡೆದ ಕುಂದಾಪುರ ಭಂಡಾರ್ಕಾರ್ಸ್ ರಸ್ತೆಯಲ್ಲಿನ ಶ್ರೀ ಸೀತಾರಾಮ ವಿವಿಧೋದ್ದೇಶ ಸೇವಾ ಸಹಕಾರಿ ಸಂಘದ 2021-22ನೇ ಸಾಲಿನ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನಂಜೆ ಸಹಕಾರಿ ಸಂಘದ ನಿವೃತ್ತ ಜನರಲ್ ಮ್ಯಾನೇಜರ್ ಶ್ರೀನಿವಾಸ, ಮಾನಂಜೆ ಸಹಕಾರಿ ಸಂಘದಲ್ಲಿ ಉನ್ನತ ಹುದ್ದೆಗೇರಿದ ಶಂಕರ್ ಕೊಠಾರಿ, ಫವರ್ ಲಿಪ್ಟರ್ ಸತೀಶ್ ಖಾರ್ವಿ, ಸಂಸ್ಥೆಯ ಉತ್ತಮ ಗ್ರಾಹಕರ ನೆಲೆಯಲ್ಲಿ ಲಕ್ಷಣ ಕೊಠಾರಿ, ಪತ್ರಕರ್ತ ಎಂ.ಎನ್ ಕೊಠಾರಿ, ಕೃಷಿಕರಾದ ಬಾಬು ಕೊಠಾರಿ ಅವರ ಸನ್ಮಾನಿಸಲಾಯಿತು. ಶೈಕ್ಷಣಿಕವಾಗಿ ಮುಂಚೂಣಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಅನಾರೋಗ್ಯ ಸಮಸ್ಯೆಯಿರುವ ಬಡ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡಲಾಯಿತು. ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಶಂಕರ ಕೊಠಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೋಲಾರ್ ಮಾಡೆಲ್ ವಿಲೇಜ್ ಗೋಳಿಹೊಳೆಯಲ್ಲಿ ಸೆಲ್ಕೋ ಸೋಲಾರ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸಹಯೋಗದಲ್ಲಿ ವಿಶೇಷ ಸೋಲಾರ್ ಸೇವಾ ಶಿಬಿರ ಮತ್ತು ಸೋಲಾರ್ ಲೈಟ್ ಉಪಯೋಗಿಸಿಕೊಂಡು ಎಸ್‌ಎಸ್‌ಎಲ್‌ಸಿಯಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಗುರುತಿಸುವಿಕೆ ಕಾರ್ಯಕ್ರಮ ಸೋಮವಾರ ನಡೆಯಿತು. ಗೋಳಿಹೊಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ಅಧ್ಯಕ್ಷತೆ ವಹಿಸಿದ್ದರು. ಎಸ್ ಕೆಡಿಆರ್‌ಡಿಪಿ ವಲಯ ಅಧ್ಯಕ್ಷ ಮಂಜು ಪೂಜಾರಿ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗೋಳಿಹಳೆ ಶಾಖೆ ಪ್ರಬಂಧಕರಾದ ಸಂತೋಷ್, ಸಿದ್ದೇಶ್ವರ ಮರಾಠಿ ಕೋ ಆಪರೇಟಿವ್ ಸೊಸೈಟಿ ಸಿಇಓ ಉದಯ ನಾಯಕ್, ಮೂಕಾಂಬಿಕಾ ಪ್ರೌಢಶಾಲೆ ಶಿಕ್ಷಕ ಉದಯ್ ಮತ್ತು ಸೆಲ್ಕೋ ಸೋಲಾರ್ ಲೈಟ್ ಏರಿಯಾ ಮೆನೇಜರ್ ಶೇಖರ್ ಶೆಟ್ಟಿ, ಶಾಖೆ ಪ್ರಬಂಧಕ ಮಂಜುನಾಥ್ ಉಪಸ್ಥಿತರಿದ್ದರು. ಸೆಲ್ಕೋ ಸೋಲಾರ್ ಲೈಟಿಂಗ್ ಸಿಸ್ಟಮ್ ಉಪಯೋಗಿಸಿಕೊಂಡು ಎಸ್ ಎಸ್ ಎಲ್ ಸಿ ಯಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು ಹಾಗೂ ಸೆಲ್ಕೋ ಸೋಲಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ಶ್ರೀ ವ್ಯಾಸರಾಜ ಕಲ್ಯಾಣ ಮಂಟಪದಲ್ಲಿ ಸೋಮವಾರ ಶಿಕ್ಷಕರ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿಜಯ ಎಸ್. ಪೂಜಾರಿ ಮಾತನಾಡಿ ಶಿಕ್ಷಕರು ಅಕ್ಷರ ಕಲಿಸುವುದಕ್ಕಷ್ಟೇ ಸೀಮಿತವಲ್ಲ. ಮಾರ್ಗದರ್ಶಕರಾಗಿ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಮಕ್ಕಳ ತಿದ್ದಿತೀಡಿ ಬಲಿಷ್ಠ ಸಾಮಾಜ ನಿರ್ಮಾಣದ ಬುನಾದಿ ಶಿಕ್ಷಕರಾಗಿದ್ದಾರೆ. ದೇಶ ಬೆಳಗುವ ಮಕ್ಕಳ ಭವಿಷ್ಯ ಬೆಳಗಿಸುವ ಮಹತ್ತರ ಕೆಲಸ ಶಿಕ್ಷರಿಂದ ಆಗುತ್ತದೆ ಎಂದರು. ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಬಸ್ರೂರು ನಿವೇದಿತಾ ಪ್ರೌಢಸಾಲೆ ನಿವೃತ್ತ ಮುಖ್ಯಶಿಕ್ಷಕ ದಿನಕರ ಆರ್.ಶೆಟ್ಟಿ ಉಪನ್ಯಾಸ ಮಾಡಿದರು. ಕುಂದಾಪುರ ತಾಪಂ ಇಒ ಮಹೇಶ್ ಕುಮಾರ ಹೊಳ್ಳ, ಯುವ ಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಜಯಶೀಲ ಶೆಟ್ಟಿ, ಕುಂದಾಪುರ…

Read More