Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ʼನಹಿ ಜ್ಞಾನೇನ ಸದೃಶಂ ಪವಿತ್ರಮಿಹ ವಿದ್ಯತೇ’ ಎಂಬ ಧ್ಯೇಯವಾಕ್ಯದಂತೆ ಜ್ಞಾನದಾನವೇ ವಿದ್ಯಾಸಂಸ್ಥೆಗಳ ಪ್ರಧಾನಕಾರ್ಯ. ಅದು ಕೇವಲ ಪಠ್ಯಪುಸ್ತಕದ ಶಿಕ್ಷಣಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು ಮೂಡಿಸುವ ಅವರಲ್ಲಿ ಚಿಂತನಾಶೀಲತೆಯನ್ನು ಉದ್ದೀಪನಗೊಳಿಸುವ ಕಾರ್ಯಕ್ರಮಗಳನ್ನೂ ಆಯೋಜಿಸುತ್ತಿರಬೇಕು. ಈ ನಾಡಿನ ಕಲೆ, ಸಾಹಿತ್ಯ, ಸಂಗೀತ ಮತ್ತು ಸಂಸ್ಕೃತಿಗಳ ಸಾರವನ್ನು ವಿದ್ಯಾರ್ಥಿ ಸಮೂಹಕ್ಕೆ ತಲುಪಿಸುವ ಕಾರ್ಯವಾಗಬೇಕು. ಆ ನಿಟ್ಟಿನಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿಯಲ್ಲಿ ‘ಭಾವಾಂತರಂಗ-ಪರಿಪೂರ್ಣ ಬದುಕಿನೆಡೆ ನಮ್ಮ ಪಯಣ’ ಎನ್ನುವ ಸಂಪೂರ್ಣ ಚಟುವಟಿಕೆ ಆಧಾರಿತ ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು ಹತ್ತು ವರ್ಷಗಳಿಂದ ನಡೆಸುತ್ತಿದ್ದು, ಈ ವರ್ಷ ಜ. 3ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಸ೦ಪನ್ಮೂಲ ವ್ಯಕ್ತಿಗಳು ಜೇನುಗೂಡಿಗೆ ಕಲಾತ್ಮಕ ಜೇನುಹುಳುಗಳನ್ನು ಪೋಣಿಸುವ ಮೂಲಕ ವಿನೂತನ ರೀತಿಯಲ್ಲಿ ಉದ್ಘಾಟಿಸಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಮಾತನಾಡಿ, “ಭಾವಾಂತರಂಗವು ನಮ್ಮ ಶಾಲೆಯಲ್ಲಿ ನಡೆಯುವ ವಿಶಿಷ್ಟ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಇದು ವಿದ್ಯಾರ್ಥಿಗಳು ಯಶಸ್ಸಿನತ್ತ ದಾಪುಗಾಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಜ.2ರಂದು ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆ ಬ್ರಹ್ಮಾವರದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮದರ್ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆಯನ್ನು ಪ್ರದರ್ಶಿಸುವುದರ ಮೂಲಕ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಾದ ಪ್ರೀತಮ್ (9ನೇ ತರಗತಿ) ಮತ್ತು ಆದಿತ್ಯ ಬಿ. (ದ್ವಿತೀಯ ಪಿಯುಸಿ)ರಸಪ್ರಶ್ನೆ ಸ್ಪರ್ಧೆಯಲ್ಲಿ   ಪ್ರಥಮ, ಶ್ರೀಶಾಂತ್ ಎಸ್. (ಪ್ರಥಮ ಪಿಯುಸಿ) ಕನ್ನಡ ಕವನವಾಚನ ಸ್ಪರ್ಧೆಯಲ್ಲಿ ತೃತೀಯ ಹಾಗೂ ಪ್ರತೀಕ್ಷಾ (ಪ್ರಥಮ ಪಿಯುಸಿ) ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನದಲ್ಲಿ ಆಯ್ಕೆಯಾಗಿರುತ್ತಾರೆ. ಈ ಎಲ್ಲಾ ಪ್ರತಿಭೆಗಳಿಗೆ ಆಡಳಿತಮಂಡಳಿ, ಪ್ರಾಂಶುಪಾಲರು, ಮುಖ್ಯಶಿಕ್ಷಕರು ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಿಲ್ಲಾಡಿ ಗ್ರಾಮದ ನಿವಾಸಿ ಶೇಖರ (54)ಅವರು ವಿಪರೀತ ಮಧ್ಯ ಸೇವನೆ ಚಟ ಹೊಂದಿ ಕಿಡ್ನಿ ಸಮಸ್ಯೆಯಿಂದ  ಬಳಲುತ್ತಿದ್ದ ವ್ಯಕ್ತಿ ಶಾಸ್ತ್ರೀ ಸರ್ಕಲ್‍ನ ಬಸ್‍ ನಿಲ್ದಾಣ ಬಳಿ ಮಲಗಿದ್ದಲೇ ಸಾವನ್ನಪ್ಪಿಸ ಘಟನೆ ಜ.2 ರಂದು ನಡೆದಿದೆ. ಹೋಟೇಲ್‍ನಲ್ಲಿ ಕೆಲಸ ಮಾಡಿಕೊಂಡಿದ್ದ ಶೇಖರ ಅವರು ಕಿಡ್ನಿ ಸಮಸ್ಯಗೆ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಮಧ್ಯ ಸೇವನೆಯ ಚಟ ಹೊಂದಿದ್ದ ಅವರು ಸರಿಯಾಗಿ ಆಹಾರ ಸೇವನೆ ಮಾಡದೆಯೂ ಇರುತ್ತಿದ್ದರು. ಅದೇ ಕಾರಣಕ್ಕೆ ಸಾವನ್ನಪ್ಪಿರಬಹುದು ಎಂದು ಪುತ್ರ ರಿತೇಶ್‍ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ  (2024 ರ ಜನವರಿ 10 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‌ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ ದೂ.ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣನ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಗಳು ಅಧಿಕ ಸಂಖ್ಯೆಯಲ್ಲಿ ಪ್ರತಿನಿಧಿಸಿದ ಮಂಗಳೂರು ವಿಶ್ವವಿದ್ಯಾಲಯದ ತಂಡಗಳು ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯಗಳ ಖೋಖೋ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಪ್ರಥಮ ಹಾಗೂ ಮಹಿಳಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡಿವೆ. ತಮಿಳುನಾಡಿನ ತಿರುವನೂರಿನ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಡಿ. 27 ರಿಂದ 31 ರವರೆಗೆ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯಗಳ ಪುರು?ರ ಕೊಕ್ಕೊ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಪ್ರಥಮ ಸ್ಥಾನ ಪಡೆದಿದೆ. ಈ ನಾಲ್ಕು ತಂಡಗಳು ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪಂದ್ಯಾಟಕ್ಕೆ ಅರ್ಹತೆಯನ್ನು ಪಡೆದಿವೆ. ಫೈನಲ್ ಪಂದ್ಯದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯವನ್ನು 9-17ರಿಂದ ಮಣಿಸಿದ ಮಂಗಳೂರು ವಿಶ್ವವಿದ್ಯಾಲಯ ಚಾಂಪಿಯನ್ ಆಯಿತು. ಮಹಿಳೆಯರ ವಿಭಾಗ: ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ವಿಶ್ವವಿದ್ಯಾನಿಲಯಗಳ ಮಹಿಳೆಯರ ಖೋಖೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಕ್ಯಾಲಿಕಟ್ ವಿಶ್ವವಿದ್ಯಾನಿಲಯ, ದ್ವಿತೀಯ ಸ್ಥಾನವನ್ನು ಮಂಡ್ಯ ವಿಶ್ವವಿದ್ಯಾನಿಲಯ ಹಾಗೂ ತೃತೀಯ ಸ್ಥಾನವನ್ನು ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಚತುರ್ಥ ಸ್ಥಾನವನ್ನು ಮೈಸೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲೆಯ ಅಭಿವೃದ್ಧಿಗೆ ಕೊಡುಗೆಯನ್ನು ನೀಡಿ, ಶಾಲೆಯ ಏಳಿಗೆ ಬಗ್ಗೆ ಸದಾ ಚಿಂತನೆ ನಡೆಸುತ್ತಿದ್ದ ದಾನಿಯೋರ್ವರ ಪುಣ್ಯಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಧನ್ಯತೆ ಮೆರೆದಿದ್ದಾರೆ. ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿಯ ಹರಿಕಾರರಾದ ದಿ. ಕೊಂಚಾಡಿ ಗಣಪತಿ ಶೆಣೈ ಅವರ 6ನೇ ವರ್ಷದ ಪುಣ್ಯ ಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಯಶೋಧ ಅವರು ದಿ. ಗಣಪತಿ ಶೆಣೈ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ದಿ. ಕೊಂಚಾಡಿ ಗಣಪತಿ ಶೆಣೈ ಹಾಗೂ ಅವರ ಕುಟುಂಬದವರ ಸಹಾಯ ಹಸ್ತದ ಬಗ್ಗೆ ಹಾಗೂ ಅವರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಶಾಲೆಯ ಮೇಲಿದ್ದ ಪ್ರೀತಿ, ವಿಶ್ವಾಸ, ಅಭಿಮಾನ ಹಾಗೂ ಕಾಳಜಿ ಬಗ್ಗೆ ಮಾತನಾಡಿದರು. ಕೆಲವು ವಿದ್ಯಾರ್ಥಿಗಳು ದಿ. ಗಣಪತಿ ಶೆಣೈ ಅವರ ಭಾವಚಿತ್ರವನ್ನು ಬಿಡಿಸುವುದರ ಮೂಲಕ, ಅವರ ಕುರಿತು ಕವನ ರಚಿಸುವುದರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜ. 02 ರಂದು ಶ್ರೀ ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ  ಉಡುಪಿ  ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಸಂಸ್ಕೃತ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಯ ಪಥ ನಿರಂತರವಾಗಿರಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಸಾಮರ್ಥ್ಯ ಹಾಗೂ ಪ್ರತಿಭೆ ಅಡಗಿರುತ್ತದೆ. ಅದನ್ನು ನಿರೇರೆದು ಪೋಷಿಸಿದಾಗ ಮಾತ್ರ ಆ ಮಗುವು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಇದಕ್ಕೆ ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ಬ್ರಹ್ಮಾವರ ವಲಯದ ಕೊಕ್ಕರ್ಣೆ ದುರ್ಗಾ ಆಂಗ್ಲಮಾಧ್ಯಮ ಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೈದೆಬೆಟ್ಟು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ವಿಶೇಷ ಪ್ರತಿಭೆಗಳನ್ನು ಗುರುತಿಸಿ, ಅದನ್ನು ಬೆಳೆಯುವಂತೆ ಮಾಡುವುದು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಜವಾಬ್ದಾರಿಯಾಗಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣ ಮಾಡುವ ಉದ್ದೇಶದಿಂದ ಸರಕಾರ ಪ್ರತೀ ವರ್ಷ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದ್ದು, ಪ್ರತಿಭೆ ಹೊಂದಿರುವ ಎಲ್ಲಾ ಮಕ್ಕಳಿಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಭವಿಷ್ಯದ ಹೊಸ ಮತದಾರರಿಗಾಗಿ ರೂಪುಗೊಂಡಿರುವ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ಚುನಾವಣಾ ಸಾಕ್ಷರತಾ ಕ್ಲಬ್ ತರಗತಿ ಆಧಾರಿತ ಚಟುವಟಿಕೆಯಡಿ ಶಂಕರನಾರಾಯಣ ಗ್ರಾಮ ಪಂಚಾಯತ್‍ಗೆ ಭೇಟಿ ನೀಡಿ ಚುನಾವಣಾ ಹಕ್ಕುಗಳ ಬಗ್ಗೆ ಅರಿವು, ಮತದಾನದ ಪ್ರಕ್ರಿಯೆ, ಸಮಾಜದಲ್ಲಿ ಮತಹಕ್ಕು ಜಾಗೃತಿಯನ್ನು ಉತ್ತೇಜಿಸುವಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‍ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಕಲ್ಗದ್ದೆ, ಪಂಚಾಯತ್‍ ಅಭಿವೃದ್ಧಿ ಅಧಿಕಾರಿ ಶ್ವೇತಾ ಲತಾ ಎಚ್. ಜಿ., ಕಾರ್ಯದರ್ಶಿ ನಾಗೇಶ್ ಬಿ. ಮತ್ತು ಸಿಬ್ಬಂದಿಗಳು, ಶಾಲೆಯ ಚುನಾವಣಾ ಸಾಕ್ಷರತಾ ಕ್ಲಬ್‍ನ ನೋಡೆಲ್ ಶಿಕ್ಷಕರಾದ ಉಮೇಶ್ ಶೆಟ್ಟಿ ಮತ್ತು ರೇಷ್ಮಾ ಡಿ. ರೆಬೆಲ್ಲೋ, ಶಿಕ್ಷಕಿ ಬೇಬಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲಾ ಸಂಸ್ಥೆಗಳು ಊರನ್ನು ಸಾಂಸ್ಕೃತಿಕವಾಗಿ ಸಮೃದ್ಧವನ್ನಾಗಿಸುತ್ತದೆ. ದಿನವೂ ದಣಿಯುವ ದೇಹ ಹಾಗೂ ಮನಸ್ಸಿಗೆ ಮತ್ತೆ ಚೈತನ್ಯ ತುಂಬುವ ಕಾರ್ಯವನ್ನು ಕ್ರೀಡೆ, ಕಲೆ, ಸಾಹಿತ್ಯದಂತಹ ಸದಭಿರುಚಿಯ ಚಟುವಟಿಕೆಗಳು ಮಾಡುತ್ತದೆ ಎಂದು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ ಪಿ. ನಾಯ್ಕ್‌ ಹೇಳಿದರು. ಅವರು ಸುರಭಿ ರಿ. ಬೈಂದೂರು ಇದರ ರಜತಯಾನದ ತಿಂಗಳ ತಿರುಳು ಕಾರ್ಯಕ್ರಮದ ಅಂಗವಾಗಿ ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ಸ್ನೇಹ ತರಂಗ ಬೈಂದೂರು ಸಹಯೋಗದೊಂದಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಜನವರಿ 05ರಿಂದ 07ರ ತನಕ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಯಕ್ಷ – ಗೊಂಬೆ ವೈಭವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಬುಧವಾರ ಬಿಡುಗಡೆಗೊಳಿಸಿ ಮಾತನಾಡಿದರು. ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮೊದಲ ದಿನದಂದು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಉಪ್ಪಿನಕುದ್ರು ಇವರಿಂದ ಚೂಡಾಮಣಿ – ಲಂಕಾದಹನ ಗೊಂಬೆಯಾಟ…

Read More