Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯೆ ಕಲಿಸಿದ ಗುರು ಮತ್ತು ಕಲಿತ ಶಾಲೆಯನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು. ಪ್ರತಿಯೊಂದು ಶಾಲೆಗೆ ಹಳೆ ವಿದ್ಯಾರ್ಥಿಗಳು ಶಾಲೆಯ ಆಧಾರ ಸ್ತಂಭಗಳಾಗಿದ್ದು, ಶಾಲೆಯ ಮೇಲೆ ಪ್ರೀತಿ, ವಿಶ್ವಾಸವನ್ನಿಟ್ಟುಕೊಂಡು ತಮ್ಮಿಂದಾಗುವ ಸಹಕಾರ ನೀಡುವ ಮೂಲಕ ಶಾಲೆಯ ಅಭಿವೃದ್ಧಿಗೆ ಮುಂದಾಗಬೇಕಿದೆ. ಗಂಗೊಳ್ಳಿಯ ಸರಸ್ವತಿ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರು ಮಂದಿ ದೇಶ ವಿದೇಶಗಳಲ್ಲಿ ಉತ್ತಮ ಸ್ಥಾನಮಾನ ಪಡೆದುಕೊಂಡು ಊರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿರುವುದು ಹೆಮ್ಮೆಯ ವಿಷಯ. ಈ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಪಾಠೇತರ ಚಟುವಟಿಕೆಗಳಲ್ಲೂ ಸಾಧನೆಗೈಯುತ್ತಿರುವುದು ಶ್ಲಾಘನೀಯ ಎಂದು ಕುಂದಾಪುರ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಾಬಣ್ಣ ಪೂಜಾರಿ ಹೇಳಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಶಾಂತೇರಿ ಬಾ ರಂಗ ಮಂಟಪದಲ್ಲಿ ಭಾನುವಾರ ಜರಗಿದ ಗಂಗೊಳ್ಳಿಯ ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ 55ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಗಂಗೊಳ್ಳಿ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಸದಸ್ಯ ಕೆ.ರಾಮನಾಥ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ತ್ರಾಸಿಯ ಸೌಪರ್ಣಿಕ ವಿವಿಧೋದ್ದೇಶ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಅಸೋಸಿಯನ್ ಹಾಗೂ ತುಮಕೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಇವುಗಳ ಜಂಟಿ ಆಶ್ರಯದಲ್ಲಿ ಮಧುಗಿರಿ ಸ್ಪೋಟ್ಸ್ ಕ್ಲಬ್ ಮಧುಗಿರಿಯಲ್ಲಿ ನಡೆದ  ಕರ್ನಾಟಕ ರಾಜ್ಯಮಟ್ಟದ ಜ್ಯೂನಿಯರ ಬಾಲಕ ಹಾಗೂ ಬಾಲಕಿಯರ ಎರಡು  ವಿಭಾಗದ ಪ್ರಥಮ ಪ್ರಶಸ್ತಿ ಹಾಗೂ ಬಾಲಕಿಯರ ದ್ವಿತೀಯ ಪ್ರಶಸ್ತಿಯನ್ನು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಂಡರು. ಬಾಲಕರ ವಿಭಾಗದ ಪೈನಲ್‌ನಲ್ಲಿ ಆಳ್ವಾಸ್ ಬಾಲಕರ ತಂಡ ಬೆಂಗಳೂರಿನ ರಾಜೇಶ್ವರಿ ಯುತ್ ಕ್ಲಬ್ (ಆರ್‌ವೈಸಿ) ತಂಡವನ್ನು 35-31 ಹಾಗೂ 35-27 ನೇರ ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗಳಿಸಿತು. ಆಳ್ವಾಸ್ ಬಾಲಕಿಯರ ತಂಡ ಫೈನಲ್ಸ್  ಹಣಾಹಣಿಯಲ್ಲಿ ಆಳ್ವಾಸ್‌ನ ಎ ತಂಡವನ್ನು, ಆಳ್ವಾಸ್‌ನ ಬಿ ತಂಡವು 35-29 ಹಾಗೂ 35-33 ನೇರ ಸೆಟ್‌ಗಳಿಂದ ಸೋಲಿಸಿ  ಪ್ರಥಮ ಹಾಗೂ ದ್ವಿತೀಯ  ಸ್ಥಾನವನ್ನು ಪಡೆದುಕೊಂಡವು. ಬಾಲಕರ ವಿಭಾಗದಲ್ಲಿ ರಾಜ್ಯದ ಸುಮಾರು 24 ತಂಡಗಳು ಹಾಗೂ ಬಾಲಕಿಯರ ವಿಭಾದಲ್ಲಿ 16 ತಂಡಗಳು ಭಾಗವಹಿಸಿದ್ದವು. ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷ ಡಾ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕಚೇರಿ ಹಾಗೂ ಕೊಠಡಿಗಳ ಬೀಗ ಒಡೆದು 3 ಎನ್‌ವಿಆರ್ ಕೆಮರಾಗಳನ್ನು ಯಾರೋ ಕಳ್ಳರು ಕದ್ದೊಯ್ದ ಘಟನೆ ಡಿ. 15ರ ಸಂಜೆ ಹಾಗೂ ಡಿ. 16ರ ಬೆಳಿಗ್ಗೆ ನಡೆದಿದೆ. ಕಳವಾದ ಸೊತ್ತಿನ ಮೌಲ್ಯ 1.45 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿದ್ಯಾರ್ಥಿಗಳಲ್ಲಿ ಶಿಸ್ತು, ಶೈಕ್ಷಣಿಕ ಕಠಿಣತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಕೆವಿಎಸ್ ಪಾತ್ರ ಮಹತ್ವವಾಗಿದೆ ಎಂದು  ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಹೇಳಿದರು. ಅವರು ಇತ್ತೀಚಿಗೆ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ 62 ನೇ ಕೆವಿಎಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕೆವಿಎಸ್ ವಿದ್ಯಾರ್ಥಿಯಾದ ತಾನು  ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಕೇಂದ್ರೀಯ ವಿದ್ಯಾಲಯದಿಂದ ಪಡೆದ ಬಗ್ಗೆ ತಿಳಿಸಿ, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡುವ ದೊಡ್ಡ ಕನಸು ಕಾಣುವಂತೆ ಮತ್ತು  ಅದನ್ನು ನನಸು ಮಾಡಿಕೊಳ್ಳಲು ಪರಿಶ್ರಮ ಪಡುವಂತೆ ಪ್ರೇರೇಪಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಕರೀಂ ಖಾನ್  ಸ್ವಾಗತಿಸಿ, ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವಲ್ಲಿ ಕೆವಿಎಸ್‌ನ ಪಾತ್ರ, ಪರಂಪರೆ ಮತ್ತು ಸಾಧನೆಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಕಾರ್ಯಕ್ರಮಗಳು ಮತ್ತು ಭಾಷಣ ನಡೆಯಿತು. ಪ್ರಾಥಮಿಕ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ ನಡೆಯಿತು.  2023-24ರ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಚಂದನಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರಸಾಲ – ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574884 ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ ಸಂಖ್ಯೆ: 9482300400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆಯ ( ಪದವಿ ಪೂರ್ವ ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ 2024 – 2025 ಕೊಪ್ಪಳದಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್‌ನಲ್ಲಿ ಉಡುಪಿ ಜಿಲ್ಲೆಯಿಂದ ಸ್ಪರ್ಧಿಸಿದ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಸಮೀಕ್ಷಾ ಮತ್ತು ಅದಿತಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ಕಾಲೇಜಿನ ಗರಿಮೆಯನ್ನು ರಾಜ್ಯ ಮಟ್ಟದಲ್ಲಿ ಪಸರಿಸಿದ್ದಾರೆ.  ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಮಹತ್ವದ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಸೋಮವಾರ ಮಾಡಿಕೊಂಡಿತು.ಶಿಕ್ಷಣ, ಸಂಶೋಧನೆ, ಬೋಧಕ, ಆಡಳಿತ ವರ್ಗ, ಸಂಶೋಧನಾ ಪ್ರಕಟಣೆಗಳು ಸೇರಿದಂತೆ ವಿವಿಧ ವಲಯದಲ್ಲಿ ಪರಸ್ಪರ ಸ್ವಾತಂತ್ರವನ್ನು ಕಾಯ್ದುಕೊಂಡು ವಿನಿಮಯ, ಬೌದ್ಧಿಕ ಆಸ್ತಿಗಳ ರಕ್ಷಣೆ ಸೇರಿದಂತೆ ಶೈಕ್ಷಣಿಕ ಅಭ್ಯುದಯದ ದೃಷ್ಟಿಯ ಐದು ವರ್ಷಗಳ ಒಪ್ಪಂದಕ್ಕೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಹಾಗೂ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಅಧ್ಯಕ್ಷ ಡಾ.ನಗಾಟೊ ಒನೊ ಸಹಿ ಮಾಡಿದರು. ಶೈಕ್ಷಣಿಕ ವಿನಿಮಯಕ್ಕೆ ಸಂಬಂಧಿಸಿದ ಬೋಧನೆ, ವಸತಿ ಸೌಕರ್ಯ, ಆರ್ಥಿಕ ಜವಾಬ್ದಾರಿ, ಬೌದ್ಧಿಕ ಆಸ್ತಿ ರಕ್ಷಣೆ, ಅವಧಿ, ತಿದ್ದುಪಡಿ ಸೇರಿದಂತೆ ಪ್ರಮುಖ ವಿಚಾರಗಳನ್ನು ಒಡಂಬಡಿಕೆ ಒಳಗೊಂಡಿದೆ.ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್‌ನ ಪರಿಣಾಮಕಾರಿ ಎಂಜಿನಿಯರಿಂಗ್‌ನ ಪ್ರಗತಿ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಸಿಎಂಆರ್-2024ರಲ್ಲಿ ಪರಿಸರ ನಾಯಕತ್ವಕ್ಕಾಗಿ ಎಂಐಟಿ ಮಾಹೆ ಮಣಿಪಾಲದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ಎಕ್ಸಲೆನ್ಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪರಿಸರ ಶಿಕ್ಷಣ ಮತ್ತು ಸಾಮಾಜಿಕ ಸ್ವಯಂ ಸೇವಾ ಕ್ಷೇತ್ರದ ಅವರ ದಣಿವರಿಯದ ಸಮರ್ಪಣೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಮಾಡಲಾಗಿತ್ತು. ಭಾರತ ಸರ್ಕಾರದ ಎಸ್.ಇ.ಎ.ಸಿ/ಎಸ್.ಇ.ಐ.ಎ.ಎ ಸಮಿತಿಯ ಸದಸ್ಯರಾಗಿರುವ ಡಾ. ಬಾಲಕೃಷ್ಣ ಮದ್ದೋಡಿ ಅವರು ಸುಸ್ಥಿರತೆ ಮತ್ತು ಪರಿಸರ ಸಂರಕ್ಷಣೆಯ ಪ್ರಬಲ ಪ್ರತಿಪಾದಕರಾಗಿದ್ದರು. ಕಳೆದ ಕೆಲವು ವರ್ಷಗಳಲ್ಲಿ ಬಾಲಕೃಷ್ಣ ಮದ್ದೋಡಿ ಅವರು ಕೈಗೊಂಡ ಪರಿಸರ ಸಂರಕ್ಷಣೆ ಬಗೆಗಿನ ಕಾರ್ಯಗಳು, 100 ವರ್ಷಗಳಿಗಿಂತ ಹೆಚ್ಚು ಹಳೆಯದಾದ 5 ಮರಗಳನ್ನು ಮರು ನೆಡುವಿಕೆ, 2000ಕ್ಕಿಂತ ಹೆಚ್ಚಿನ ಸಸಿಗಳನ್ನು ನೆಡುವುದು, 60 ಮರಗಳನ್ನು ಕಡಿಯುವುದನ್ನು ತಡೆಗಟ್ಟುವಲ್ಲಿ ಅವರ ಕೊಡುಗೆಯನ್ನು ಸಮೀಕ್ಷೆ ತೀರ್ಪುಗಾರರು ಪರಿಗಣಿಸಿ ಆಯ್ಕೆಮಾಡಲಾಗಿದೆ. ಹಸಿರು ಅಭಿವೃದ್ಧಿ, ಗ್ರೀನಥಾನ್ ಕಾರ್ಯಕ್ರಮದ ಮೂಲಕ ಕರ್ನಾಟಕದ ಸುಮಾರು 20,000 ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಕಾರ್ಯಕ್ರಮ ಅವರು ಸಂಘಟಿಸಿದ್ದಾರೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ವಿಧಾನಸಭಾ ವ್ಯಾಪ್ತಿಯ 22 ಪ್ರೌಢಶಾಲೆಗಳಲ್ಲಿ ನಡೆಯುವ ಉಡುಪಿ ಯಕ್ಷ ಶಿಷ್ಯ ಟ್ರಸ್ಟ್ ಆಯೋಜಿಸುತ್ತಿರುವ ಕಿಶೋರ್ ಯಕ್ಷಗಾನ ಸಂಭ್ರಮ 2024ರ ಪ್ರದರ್ಶನಗಳ ಉದ್ಘಾಟನೆ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ವೇದಿಕೆಯಲ್ಲಿ ನಡೆಯಿತು. ಶ್ರೀ ಗುರು ನರಸಿಂಹ ದೇವಸ್ಥಾನದ ಅಧ್ಯಕ್ಷರಾದ ಡಾ. ಕೆ.ಎಸ್. ಕಾರಂತರು ಜ್ಯೋತಿ ಬೆಳಗಿ ಉದ್ಘಾಟಿಸಿ ಮಾತನಾಡಿ, ಈ ಭಾಗದ ಪ್ರತಿಯೊಬ್ಬರ ಮಾತಿನಲ್ಲಿ, ಬರವಣಿಗೆಯಲ್ಲಿ ಯಕ್ಷಗಾನದ ದಟ್ಟ ಪ್ರಭಾವ ಗೋಚರವಾಗುತ್ತದೆ. ಇಂತಹ ನಮ್ಮ ಮಣ್ಣಿನ ಅಪೂರ್ವ ಕಲೆಯನ್ನು ಮಕ್ಕಳಿಗೆ ಪರಿಚಯಿಸುವ ಯಕ್ಷ ಶಿಕ್ಷಣ ಅಭಿಯಾನ ಯಶಸ್ವಿಯಾಗಲೆಂದು ನುಡಿದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಆನಂದ ಸಿ.ಕುಂದರ್, ರಾಜಶೇಖರ್ ಹೆಬ್ಬಾರ್, ವಾಸುದೇವ ಕಾರಂತ, ಜಗದೀಶ ನಾವುಡ, ಶ್ರೀನಿವಾಸ ಉಪಾಧ್ಯಾಯ ಅಭ್ಯಾತರಾಗಿ ಪಾಲ್ಗೊಂಡು ಶುಭ ಕೋರಿದರು. ಯಕ್ಷಗಾನ ಕಲಾರಂಗದ ಎಸ್.ವಿ.ಭಟ್, ಎಚ್.ಎನ್. ಶೃಂಗೇಶ್ವರ, ಗಣೇಶ್ ಬ್ರಹ್ಮಾವರ್, ಗಣಪತಿ ಭಟ್, ನಾಗರಾಜ ಹೆಗಡೆ ಭಾಗವಿಸಿದರು. ನಾರಾಯಣ ಎಂ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರು ಢಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟ ಗೊಬ್ಬರಬೆಟ್ಟು ಬೆಲ್ಲದ ಗಣಪತಿ ದೇಗುಲದ ಸಮೀಪ ನಡೆದಿದೆ. ಸಾಲಿಗ್ರಾಮ ಬಡಾಹೋಳಿ ನಿವಾಸಿ, ಮಣೂರು ಜನತಾ ಫಿಶ್‌ಮಿಲ್‌ನ ಉದ್ಯೋಗಿ ಸುರೇಶ್ ಮರಕಾಲ (48) ಸಾವನ್ನಪ್ಪಿದ್ದಾರೆ. ಸುರೇಶ್ ಅವರು ಅಪರಾಹ್ನ ಕೆಲಸ ಮುಗಿಸಿ ಕೋಟದಿಂದ- ಸಾಲಿಗ್ರಾಮದ ಮನೆ ಕಡೆ ಸೈಕಲ್‌ನಲ್ಲಿ ತೆರಳು ತ್ತಿರುವಾಗ ಮುಡೇಶ್ವರದಿಂದ ಆಗಮಿಸುತ್ತಿದ್ದ ಕಾರು ವೇಗವಾಗಿ ಬಂದು ಸೈಕಲ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಅವರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Read More