ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾಗಿರುವ ರಂಗಸುರಭಿ -2024 ಮೂರು ದಿನಗಳ ರಾಜ್ಯ ಮಟ್ಟದ ನಾಟಕೋತ್ಸವಕ್ಕೆ ಬೈಂದೂರು ಶಾರದಾ ವೇದಿಕೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಸ್ಥಾನದ ವ್ಯವಸ್ಥಾಪನ ಸಮಿತಿಯ ನಿಕಟಪೂರ್ವಾಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ನಾಟಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ ಕಲೆ ಸಂಸ್ಕೃತಿಯನ್ನು ಜೀವಂತವಾಗಿರಿಸಿಕೊಳ್ಳುವುದು ಬಹುಮುಖ್ಯ. ಮನುಷ್ಯನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸುವ ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಬದುಕಿನಲ್ಲಿಯೂ ಯಶಸ್ಸು ಕಾಣಲು ಸಾಧ್ಯವಿದೆ ಎಂದರು. ಶಿರೂರು ಉದ್ಯಮಿ ರಾಮು ಮೇಸ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ಮರವಂತೆ ಚೇತನಾ ಚಿಕಿತ್ಸಾಲಯದ ಡಾ. ರೂಪಾಶ್ರೀ ಮರವಂತೆ, ಉಪಸ್ಥಿತರಿದ್ದರು. ಈ ಸಂದರ್ಭ ಹಿರಿಯ ರಂಗಕಲಾವಿದ, ನಾಗೂರು ಸಂದೀಪನ್ ಶಾಲೆಯ ಮುಖ್ಯ ಶಿಕ್ಷಕರಾದ ವಿಶ್ವೇಶ್ವರ ಅಡಿಗ ಬಿಜೂರು ಅವರನ್ನು ಸನ್ಮಾನಿಸಲಾಯಿತು. ಸುರಭಿ ಉಪಾಧ್ಯಕ್ಷ ಆನಂದ ಮದ್ದೋಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಕ್ಷ ನಾಗರಾಜ ಪಿ ಯಡ್ತರೆ ಸ್ವಾಗತಿಸಿ, ನಿರ್ದೇಶಕ ಸುಧಾಕರ ಪಿ ಬೈಂದೂರು ವಂದಿಸಿದರು. ಪೂರ್ಣಿಮಾ ಆಚಾರ್ ಪ್ರಾರ್ಥಿಸಿ, ರಾಮಕೃಷ್ಣ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಎಲ್ಲಾ ವರ್ಗದ ಜನರ ಅನುಕೂಲವಾಗುವಂತಹ ಯೋಜನೆಗಳ ಮೂಲಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳು ಇಂದು ಪ್ರತಿಯೊಬ್ಬರ ಮನೆಗೆ ತಲುಪಿದ್ದು ಪ್ರತಿ ತಿಂಗಳು ಮನೆಯ ಗೃಹಿಣಿಯರು, ಯುವಕರು, ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಬಿಜೆಪಿಗರು ಧರಣಿ ನಡೆಸಿದರು ಜಾರಿಗೆ ತಂದ ಬಳಿಕ ರಾಜ್ಯ ದಿವಾಳಿಯಾಗುತ್ತಿದೆ ಎಂಬ ವಾದವನ್ನು ಮುಂದಿಡುತ್ತಿದ್ದಾರೆ. ದೇಶದ ವಿವಿಧ ಉದ್ಯಮಿಗಳ ಕೋಟ್ಯಾಂತರ ಮೊತ್ತದ ಸಾಲವನ್ನು ಮನ್ನಾ ಮಾಡಿದಾಗ ದೇಶ ದಿವಾಳಿಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು. ತಾನು ಕೂಡ ಮೀನುಗಾರಿಕಾ ಸಚಿವನಾಗಿ ಕೆಲಸ ಮಾಡಿದ್ದು ನನ್ನ ಪ್ರತಿಸ್ಪರ್ಧಿ ಅಭ್ಯರ್ಥಿ ಕೂಡ ಅದೇ ಖಾತೆಯನ್ನು ನಿರ್ವಹಿಸಿದ್ದರು. ಜನರು ಮತ್ತು ಕಾರ್ಯಕರ್ತರು ಇಬ್ಬರ ಕೆಲಸವನ್ನು ತುಲನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿವಮೊಗ್ಗ ಲೋಕಸಭಾ ಚುನಾವಣಾ ಕಣ ರಂಗೇರುತಿದ್ದು ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ‘ಬೂತ್ ಕಡೆಗೆ ಸಮೃದ್ಧ ನಡಿಗೆ’ ವಿಶೇಷ ಕಾರ್ಯಕ್ರಮದ ಮೂಲಕ ಮತ ಶಿಖಾರಿ ಆರಂಭಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ನಿರೀಕ್ಷೆಗೂ ಮೀರಿದ ಅಂತರದಲ್ಲಿ ಜಯ ಸಾಧಿಸಬೇಕು. ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ ಕನಿಷ್ಠ 1 ಲಕ್ಷಕ್ಕೂ ಅಧಿಕ ಲೀಡ್ ನೀಡಬೇಕು ಎನ್ನುವ ನಿರ್ಣಯದಂತೆ ಸಂಘಟನಾತ್ಮಕ ಪ್ರಚಾರ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ಬೂತ್ ನಲ್ಲೂ ಕಾರ್ಯಕರ್ತರನ್ನು ಭೇಟಿಯಾಗಿ ಬೂತ್ ನ ಪ್ರತಿ ಮನೆಯ ಎಲ್ಲ ಮತಗಳನ್ನು ಬಿಜೆಪಿ ಅಭ್ಯರ್ಥಿಗೆ ಬರುವಂತೆ ಮಾಡುವುದು, ಮನೆ ಮನೆ ಭೇಟಿ ನೀಡಬೇಕು. ಆ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿಸಬೇಕು ಎಂಬ ಸಂದೇಶವನ್ನು ಬೂತ್ ನಡಿಗೆಯಲ್ಲಿ ಕಾರ್ಯಕರ್ತರಿಗೆ ಮನದಟ್ಟು ಮಾಡುತ್ತಿದ್ದಾರೆ. ರಾಷ್ಟ್ರೀಯತೆ, ಹಿಂದುತ್ವ ಹಾಗೂ ಕೇಂದ್ರ ಸರಕಾರದ ಅಭಿವೃದ್ಧಿ ಕಾರ್ಯ, ಸಂಸದರಾಗಿ ಬಿ.ವೈ.ರಾಘವೇಂದ್ರ ಅವರು ಮಾಡಿರುವ ಅಭಿವೃದ್ಧಿ ಕಾರ್ಯ,…
ಕುಂದಾಪ್ರ ಡಾ.ಕಾಂ ಸುದ್ದಿಬೈಂದೂರು: ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಪ್ರತಿವರ್ಷದಂತೆ ಆಯೋಜಿಸಲಾಗುವ ರಂಗಸುರಭಿ -2024 ರಾಜ್ಯ ಮಟ್ಟದ ನಾಟಕೋತ್ಸವ ಏ. 06 ರಿಂದ 08ರ ತನಕ ಬೈಂದೂರು ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ 6-30ಕ್ಕೆ ಜರುಗಲಿದೆ. ಎ.06ರ ಶನಿವಾರ ನಾಟಕೋತ್ಸವವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಸ್ಥಾನದ ವ್ಯವಸ್ಥಾಪನ ಸಮಿತಿ ನಿಕಟಪೂರ್ವಾಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಶ್ರೀರಾಮ ವಿವಿದ್ದೊದ್ಧೇಶ ಟ್ರಸ್ಟ್ ಆಡಳಿತ ಟ್ರಸ್ಟಿ ಬಿ. ರಾಮಕೃಷ್ಣ ಶೇರೆಗಾರ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿರೂರು ಉದ್ಯಮಿಯಾದ ರಾಮು ಮೇಸ್ತ , ಮರವಂತೆಯ ಚೇತನಾ ಚಿಕಿತ್ಸಾಲಯ ಡಾ| ರೂಪಾಶ್ರಿ ಮರವಂತೆ , ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾದ ಪ್ರಸಾದ್ ಪ್ರಭು ಇನ್ನಿತರು ಉಪಸ್ಥಿತರಿದ್ದಾರೆ. ಅಂದು ಹಿರಿಯ ರಂಗ ಕಲಾವಿದ, ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ವಿಶ್ವೇಶ್ವರ ಅಡಿಗ ಬಿಜೂರು ಅವರನ್ನು ಸನ್ಮಾನಿಸಲಾಗುವುದು. ಅಸ್ತಿತ್ವ ಮಂಗಳೂರು ಅಭಿನಯದ, ವೈಕಂ ಮಹಮ್ಮದ್ ಬಶೀರ್ ಅವರ ಕಥೆ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯ ಜಾಮೀಯಾ ಕಾಂಪ್ಲೆಕ್ಸ್ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನುಕಳ್ಳತನ ನಡೆದ 48 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗಂಗೊಳ್ಳಿಯ ಸುಲ್ತಾನ್ ಮೊಹಲ್ಲಾ ನಿವಾಸಿ ನದೀಮ್ (27), ಗಂಗೊಳ್ಳಿಯ ಜಾಮೀಯಾ ಮೊಹಲ್ಲಾ ನಿವಾಸಿ ಆರೀಫ್(18), ಭಟ್ಕಳದ ಚೌಥನಿ ರಸ್ತೆ ಸಮೀಪದ ನಿವಾಸಿ ರಯ್ಯಾನ್(18) ಬಂಧಿತ ಆರೋಪಿಗಳು. ಅಲ್ಲದೇ ಇಬ್ಬರು ಅಪ್ರಾಪ್ತ ಬಾಲಕರು ಕಳ್ಳತನದಲ್ಲಿ ಭಾಗಿಯಾಗಿದ್ದಾರೆ. ಬಂಧಿತರಿಂದ ಮೊಬೈಲ್ ಫೋನ್, 52,000ರೂ. ನಗದು ಹಾಗೂ ಒಂದು ಬೈಕ್, ಒಂದು ಆಟೋರಿಕ್ಷಾವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಗಂಗೊಳ್ಳಿಯ ಜೆ.ಎಮ್ ರೋಡ್ ನಿವಾಸಿ ರಿಝ್ವಾನ್ ಎಂಬವರ ಎಂ.ಎಂ. ಕಲೆಕ್ಷನ್ ಬಟ್ಟೆ ಹಾಗೂ ಫ್ಯಾನ್ಸಿ ಅಂಗಡಿಗೆ ಮಾ.31ರ ಸಂಜೆ ನುಗ್ಗಿದ ಆರೋಪಿಗಳು ಅಂಗಡಿಯ ಕ್ಯಾಶ್ ಕೌಂಟರ್ನಲ್ಲಿದ್ದ 90,000ರೂ. ನಗದು ಹಾಗೂ ಮೊಬೈಲ್ ಫೋನ್ ಕಳವು ಮಾಡಿ ಪರಾರಿಯಾಗಿದ್ದರು. ರಿಝ್ವಾನ್ ಹಾಗೂ ಸಿಬ್ಬಂದಿ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಅಂಗಡಿಗೆ ವಾಪಾಸ್ಸು ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದೆ ಕೇವಲ 20 ತಿಂಗಳ ಕಾಲ ಸಂಸದನಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸುವುದರೊಂದಿಗೆ ಈ ಬಾರಿಯ ಚುನಾವಣೆಯಲ್ಲಿ ಒಂದು ಅವಕಾಶವನ್ನು ನೀಡಿ. ಮನೆ ಮನೆಗೆ ಭೇಟಿ ನೀಡಿ ಮತ ಕೇಳುವ ವೇಳೆ ಅಭಿವೃದ್ಧಿ ಮತ್ತು ಸಿದ್ದರಾಮಯ್ಯ ನೇತೃತ್ವದ ಉತ್ತಮ ಕಾರ್ಯಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವಂತೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ ಹೆಗ್ಡೆ ಪಕ್ಷ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಅವರು ಬುಧವಾರ ನಾಮಪತ್ರ ಸಲ್ಲಿಕೆಗೂ ಮುನ್ನ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಕಳೆದ ಬಾರಿ ಸಂಸದನಾಗಿ 20 ತಿಂಗಳುಗಳ ಕಾಲ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ ತೃಪ್ತಿ ನನಗಿದೆ. ಆಸ್ಕರ್ ಫೆರ್ನಾಂಡಿಸ್ ಭೂ ಸಾರಿಗೆ ಸಚಿವರಾಗಿದ್ದ ವೇಳೆ ಮಲ್ಪೆ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ, ಕಡೂರು, ಚಿಕ್ಕಮಗಳೂರು, ಮೂಡಿಗೆರೆ ಬಿಸಿರೋಡ್ ರಾಷ್ಟ್ರೀಯ ಹೆದ್ದಾರಿ, ತುಮಕೂರಿನಿಂದ ಶಿವಮೊಗ್ಗಕ್ಕೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಅನುಮೋದನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಎ.03: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರ ಚರಾಸ್ತಿ ಹಾಗೂ ಸ್ತಿರಾಸ್ತಿಗಳ ವಿವರ ಹೀಗಿದೆ ನೋಡಿ ಚರಾಸ್ಥಿ:ಕೋಟ ಶ್ರೀನಿವಾಸ ಪೂಜಾರಿ ಅವರ ಬಳಿ ನಗದು,ಚಿನ್ನ ವಾಹನ ಸೇರಿದಂತೆ ಒಟ್ಟು ರೂ. 31,95,082 ಮೌಲ್ಯದ ಚರಾಸ್ತಿ ಇದ್ದರೇ, ಪತ್ನಿ ಶಾಂತಾ ಅವರ ಬಳಿ 10,29,027 ಮೌಲ್ಯದ ಚರಾಸ್ತಿ ಹಾಗೂ ಮೂವರು ಮಕ್ಕಳು 21,96,401 ಬಳಿ ಮೌಲ್ಯದ ಚರಾಸ್ತಿ ಸೇರಿದಂತೆ ಒಟ್ಟು- 64,20,510 ಲಕ್ಷ ಮೌಲ್ಯದ ಚರಾಸ್ತಿ ಇದೆ. ಕೋಟ ಶ್ರೀನಿವಾಸ್ ಬಳಿ 10 ಗ್ರಾಂ ನ 1 ಚಿನ್ನದ ಉಂಗುರ, ಪತ್ನಿ ಬಳಿ 150 ಗ್ರಾಂ ಚಿನ್ನ-9,57,000 ಮಕ್ಕಳ ಬಳಿ ರೂ. 4,46,700 ಮೌಲ್ಯದ ಚಿನ್ನ ಇದೆ. ಮಾರುತಿ ಆಲ್ಟೋ ಕಾರು 2006 ಮಾಡೆಲ್- ರೂ1,50,000, ಇನ್ನೋವಾ ಕಾರು 2016 ಮಾಡೆಲ್ -…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಕೆ. ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಸಚಿವ, ಸಂಸದ, ಹಿಂದೂಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ ಕೆ. ಜಯಪ್ರಕಾಶ್ ಹೆಗ್ಡೆ ಅವರ ಚರಾಸ್ತಿ ಹಾಗೂ ಸ್ತಿರಾಸ್ತಿಗಳ ವಿವರ ಹೀಗಿದೆ ನೋಡಿ ಚರಾಸ್ತಿ:ಜಯಪ್ರಕಾಶ್ ಹೆಗ್ಡೆ ಅವರ ಬಳಿ ನಗದು- 85,000, ಪತ್ನಿ ಶೋಭಾ ಜೆ. ಹೆಗ್ಡೆ ಅವರ ಬಳಿ ನಗದು 92,000 ಇದೆ. ವಿವಿಧ ಬ್ಯಾಂಕ್ ಗಳಲ್ಲಿ ಹೆಗ್ಡೆ ಹೆಸರಲ್ಲಿ 31,02, 324 ಪತ್ನಿ ಶೋಭಾ 6,34,219 ನಗದು ಇದ್ದರೇ, ಶೇರು ಬಾಂಡ್ ಗಳ ಮೂಲಕ ಹೆಗ್ಡೆ ಅವಋು ರೂ. 34,000 ಪತ್ನಿ ಶೋಭಾ ಅವರು ರೂ. 7,79,136 ಹೂಡಿಕೆ ಮಾಡಿದ್ದಾರೆ. ಪತ್ನಿ ರೂ. 2,27,188 ವಿಮೆ ಮಾಡಿದ್ದಾರೆ. ಇಬ್ಬರಿಗೂ ಸಾಲ ಇಲ್ಲ ಚಿನ್ನ- ಬೆಳ್ಳಿ: ಜಯಪ್ರಕಾಶ ಹೆಗ್ಡೆಅವರ ಬಳಿಕ ರೂ. 3,13,000 ಮೌಲ್ಯದ ಚಿನ್ನವಿದ್ದರೇ, ಪತ್ನಿ ಶೋಭಾ ಅವರ ಬಳಿರೂ. 64,41,000 ಮೌಲ್ಯದ ಚಿನ್ನವಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್ ಹೈಕಮಾಂಡ್ ತಡೆ ಹಿಡಿದಿದೆ. ಎರಡು ದಿನಗಳ ಹಿಂದಷ್ಟೇ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ಉಡುಪಿ ಜಿಲ್ಲಾಧ್ಯಕ್ಷನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಅವರ ಆಯ್ಕೆ ಕಾಂಗ್ರೆಸ್ ವಲಯದಲ್ಲಿ ಭಾರಿ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಾಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಪತ್ರ ಬರೆದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ಸದ್ಯ ಅಶೋಕ್ ಕುಮಾರ್ ಕೊಡವೂರು ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ನಡೆದಿರುವ ಈ ಪ್ರಕ್ರಿಯೆಯಿಂದ ಜಿಲ್ಲಾ ಕಾಂಗ್ರೆಸ್‌ನಲ್ಲಿ ಆಂತರಿಕವಾಗಿದ್ದ ಬೇಗುದಿ ಹೊರಬಂದಂತಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಜನತಾ ಪಕ್ಷದಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಈ ಸಂದರ್ಭ ಶಾಸಕರಾದ ಯಶಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಶಾಸಕ ಸಿ.ಟಿ. ರವಿ ಉಪಸ್ಥಿತರಿದ್ದರು.
