Author: ನ್ಯೂಸ್ ಬ್ಯೂರೋ

ಬೈಂದೂರು: ಬೈಂದೂರಿನ ಹೆಸರಾದ ಮೊಬೈಲ್ ಮಾರಾಟ ಸಂಸ್ಥೆಯಾದ ‘ಪ್ರೀತಿ ಮೊಬೈಲ್ಸ್’ನಲ್ಲಿ ಸ್ಮಾರ್ಟ್ ಪೋನ್ ಫೆಸ್ಟ್ ಭಾಗವಾಗಿ ಗ್ರಾಹರಿಗೆ ವಿವಿಧ ಖಚಿತ ಬಹುಮಾನಗಳನ್ನು ನೀಡಲಾಗುತ್ತಿದೆ. ಸೆಪ್ಟಂಬರ್ 10ರಿಂದ ಆರಂಭಗೊಂಡಿರುವ ಸ್ಮಾರ್ಟ್ ಪೋನ್ ಫೆಸ್ಟ್ ಜನವರಿ 10ರ ತನಕ ಮುಂದವರಿಯಲಿದ್ದು ಪ್ರತಿ ಮೊಬೈಲ್ ಖರೀದಿಯ ಮೇಲೆಯೂ ವಿಶೇಷ ಬಹುಮಾನಗಳನ್ನು ಗೆಲ್ಲಬಹುದಾಗಿದೆ. ಟಿವಿಎಸ್ ಜ್ಯೂಪಿಟರ್, ಎಲ್.ಇ.ಡಿ ಟಿವಿ, ಸ್ಮಾರ್ಟ್ ವಾಚ್, ಏರ್ ಪೋಡ್, ಸೇರಿದಂತೆ ಹತ್ತಾರು ಬಹುಮಾನಗಳು ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಪ್ರೀತಿ ಮೊಬೈಲ್ಸ್ ಬೈಂದೂರುಪಂಚಾಯತ್ ಕಟ್ಟಡ, ಪೊಲೀಸ್ ಸ್ಟೇಷನ್ ಎದುರುಗಡೆ ಬೈಂದೂರುಮೊಬೈಲ್ – 8861087889

Read More

ಬೈಂದೂರು ಜ್ಯೂನಿಯರ್ ಕಾಲೇಜು ಆತಿಥ್ಯದಲ್ಲಿ ಅಚ್ಚುಕಟ್ಟು ಕಾರ್ಯಕ್ರಮ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಸೆ.12: ಕ್ರೀಡೆಯಲ್ಲಿ ಸೋಲು ಗೆಲುವಿನ ಲೆಕ್ಕಾಚಾರಕ್ಕಿಂತ ಕ್ರೀಡಾ ಸ್ಪೂರ್ತಿ ಮುಖ್ಯವಾದುದು. ಗೆದ್ದರೆ ಸಂತೋಷ ಪಡುವ ಸೋತರೆ ಮುಂದಿನ ಗೆಲುವಿಗೆ ತಯಾರಿ ನಡೆಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕಿದೆ ಎಂದು ಉಡುಪಿ ಅರಣ್ಯ ಸಂಚಾರಿದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ. ಹೇಳಿದರು. ಅವರು ಕ್ಷೇತ್ರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಸಹಭಾಗಿತ್ವದಲ್ಲಿ ಬೈಂದೂರು ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟದಲ್ಲಿ ಕಲ್ಪಪುಪ್ಪವನ್ನರಳಿಸಿ ಶುಭಹಾರೈಸಿದರು. ಬೈಂದೂರು ಬಂಟರ ಸಂಘದ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಎಸ್ಡಿಎಂಸಿ ಅಧ್ಯಕ್ಷ ಗಣಪ ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಜಿಪಂ ಮಾಜಿ ಸದಸ್ಯರುಗಳಾದ ಬಾಬು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ಯಲಹಂಕ ಬಳಿ ಭಾನುವಾರ ಸಂಭವಿಸಿದ ಸ್ಕೂಟಿ ಹಾಗೂ ಟ್ಯಾಂಕರ್ ನಡುವಿನ ಅಪಘಾತದಲ್ಲಿ ಬೈಂದೂರು ತಾಲೂಕು ಹೊಸ್ಕೋಟೆ ನಿವಾಸಿ ಮಹಿಳೆ ಮೃತಪಟ್ಟಿದ್ದಾರೆ. ಹೊಸ್ಕೋಟೆ ಬೊಳ್ಳುಗುಡ್ಡೆ ನಿವಾಸಿ ಪ್ರೇಮ ಪೂಜಾರಿ (35) ಮೃತಪಟ್ಟ ದುರ್ದೈವಿ. ಕಳೆದ ಎರಡು ವರ್ಷದಿಂದ ಬೆಂಗಳೂರು ಅಂಚೆ ಕಚೇರಿಯಲ್ಲಿ ಪ್ರೇಮಾ ಪೂಜಾರಿ ಸೇವೆ ಸಲ್ಲಿಸುತ್ತಿದ್ದು, ಪತಿ ಜೊತೆ ತೆರಳುತ್ತಿದ್ದಾಗ ಅಪಘಾತದಲ್ಲಿ ಪ್ರೇಮಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸೋಮವಾರ ಬೊಳ್ಳುಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆದಿದೆ. ಮೃತರು ಪತಿ, ಇಬ್ಬರು ಮಕ್ಕಳ ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶರ್ಮದಾ ನೀಟ್‌ನಲ್ಲಿ ಶೇ.99.12 (613) ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾಳೆ. ಬೈಂದೂರು ಯಡ್ತರೆ ನಿವಾಸಿಯಾದ ಶರ್ಮದಾ, ದ್ವಿತೀಯ ಪಿಯುಸಿಯಲ್ಲಿಯೂ ರ‍್ಯಾಂಕ್‌ನೊಂದಿಗೆ ತೇರ್ಗಡೆಯಾಗಿದ್ದಳು. ಈಕೆ ಎಸ್‌ಸಿಡಿಸಿಸಿ ಬ್ಯಾಂಕ್ ಬೈಂದೂರು ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ ಹಾಗೂ ಶಾಂತಲಾ ದಂಪತಿಗಳ ಪುತ್ರಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಡ್ತರೆ ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯನ್ನು ಶನಿವಾರ ಬಿಲ್ಲವ ಸಂಘದ ಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭ ಸಂಘದ ಬಿಲ್ಲವ ಸಂಘದ ಅಧ್ಯಕ್ಷರಾದ ದೊಟ್ಟಯ್ಯ ಪೂಜಾರಿ, ಗೌರವ ಸಲಹೆಗಾರರಾದ ಮುತ್ತಯ್ಯ ಪೂಜಾರಿ ಕಳವಾಡಿ, ಸಂಘದ ಹಿರಿಯರಾದ ರಾಮ ಪೂಜಾರಿ ಹಾಗೂ ಸಂಘದ ಕಾರ್ಯದರ್ಶಿ ಕಿಶೋರ್ ಸಸಿಹಿತ್ಲು, ಸಂಘದ ಪದಾಧಿಕಾರಿಗಳು ಗಣೇಶ್ ಪೂಜಾರಿ, ಚಂದ್ರ ಪೂಜಾರಿ, ಮಂಜುನಾಥ ತಗ್ಗರ್ಸೆ, ಕೃಷ್ಣ ಬಾಳಿತ್ಲು ಹಾಗೂ ಘಟಕ ಪ್ರತಿನಿಧಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾದರು. ಇದನ್ನೂ ಓದಿ:► ಕುಂದಾಪುರ: ತಾಲೂಕು ಆಡಳಿತದಿಂದ ಗುರು ಅವರ 168ನೇ ಜಯಂತಿ ಆಚರಣೆ – https://kundapraa.com/?p=62019 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉಪ್ಪುಂದ ಕಂಚಿಕಾನು ನಿವಾಸಿ ಮಂಜುನಾಥ ದೇವಾಡಿಗ ಭಾಗವಹಿಸಿ, ಮೈಸೂರಿನಲ್ಲಿ ನಡೆಯಲಿರುವ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 100ಮೀ ಓಟದಲ್ಲಿ ದ್ವಿತೀಯ ಹಾಗೂ 200ಮೀ ಓಟದಲ್ಲಿ ತೃತೀಯ ಬಹುಮಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುವ ಮಂಜುನಾಥ್, ಬೈಂದೂರು ನೇಷನ್ ಲವರ್ಸ್ ಸಂಸ್ಥೆಯ ಸದಸ್ಯನಾಗಿದ್ದಾನೆ. ಈತ ಕಂಚಿಕಾನು ಪರಮೇಶ್ವರ ದೇವಾಡಿಗ ಹಾಗೂ ಚಿಕ್ಕು ದಂಪತಿಗಳ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.10: ಇಲ್ಲಿನ ಮಿನಿ ವಿಧಾನಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲೂಕು ಆಡಳಿತ, ತಾ.ಪಂ. ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಅವರ 168ನೇ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಮಾತನಾಡಿ, ಕೆಲವೊಂದು ಅನಿಷ್ಟ ಪದ್ಧತಿಗಳು ತಾಂಡವವಾಡುತ್ತಿದ್ದಾಗ ಶ್ರೀ ನಾರಾಯಣ ಗುರುಗಳು ಜನಿಸಿ ಬಂದು ಜಾತಿ ವೈಷಮ್ಯ ಎಂಬ ಅಜ್ಞಾನವನ್ನು ತೊಡೆದು ಹಾಕಿ ಶಿಕ್ಷಣದ ಮೂಲಕ ಸಾಮಾಜಿಕ ಕ್ರಾಂತಿಯನ್ನು, ಶೋಷಿತ ಮತ್ತು ಹಿಂದುಳಿದ ವರ್ಗಗಳಿಗೆ ಸಾಮಾಜಿಕ ಸಮಾನತೆಯನ್ನು ದೊರಕಿಸಿಕೊಟ್ಟ ಮಹಾನ್ ಸಂತರು. ಮಾತ್ರವಲ್ಲದೆ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದರು. ಕುಂದಾಪುರ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಕೋರಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೆಕರ್, ಬಿಲ್ಲವ ಮುಖಂಡರಾದ ಮಂಜು ಬಿಲ್ಲವ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಹಶೀಲ್ದಾರರ ಕಛೇರಿ ಬೈಂದೂರಿನಲ್ಲಿ 168ನೇ ನಾರಾಯಣ ಗುರು ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪತಹಶೀಲ್ದಾರ ಭೀಮಪ್ಪ ಬಿಲ್ಲಾರ್ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗಣೇಶ ಪೂಜಾರಿ, ಬಿಲ್ಲವ ಸಂಘದ ಮುಖಂಡರಾದ ಎಸ್. ರಾಜು ಪೂಜಾರಿ, ಕಾರ್ಯದರ್ಶಿ ವಾಸುದೇವ ಪೂಜಾರಿ, ಶೇಖರ ಪೂಜಾರಿ ಉಪ್ಪುಂದ, ದೊಟ್ಟಯ್ಯ ಪೂಜಾರಿ, ಕುಂದಾಪುರ ಸಹಾಯಕ ಕಮಿಷನರ್ ಇಲಾಖೆಯ ಸಿಬ್ಬಂದಿ ಮಂಜುನಾಥ ಬಿಲ್ಲವ, ಬೈಂದೂರು ಬಿಲ್ಲವ ಸಂಘದ ಮುಖಂಡರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು. ಇದನ್ನೂ ಓದಿ:► ಕುಂದಾಪುರ: ತಾಲೂಕು ಆಡಳಿತದಿಂದ ಗುರು ಅವರ 168ನೇ ಜಯಂತಿ ಆಚರಣೆ – https://kundapraa.com/?p=62019 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಂದೂರು ತಾಲೂಕಿನ ನೂತನ ತಹಶೀಲ್ದಾರರಾಗಿ ಶ್ರೀಕಾಂತ್ ಎಸ್. ಹೆಗ್ಡೆ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಮೂಲತಃ ತೀರ್ಥಹಳ್ಳಿಯವರಾದ ಶ್ರೀಕಾಂತ್ ಅವರು, ಈ ಹಿಂದೆ ಹೊಸನಗರ ತಾಲೂಕು ಪಂಚಾಯತಿಯಲ್ಲಿ ಉಪ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಬಳಿಕ ಗ್ರೇಡ್-2 ತಹಶೀಲ್ದಾರರಾಗಿ ಭಡ್ತಿ ಹೊಂದಿದ್ದರು. ಈ ಮೊದಲು ತಹಶಿಲ್ದಾರರಾಗಿದ್ದ ಶೋಭಾಲಕ್ಷ್ಮೀ ಹೆಚ್. ಎಸ್. ಅವರ ವರ್ಗಾವಣೆಯ ಬಳಿಕ ತೆರವಾದ ಸ್ಥಾನಕ್ಕೆ ಶ್ರೀಕಾಂತ್ ಎಸ್ ಅವರು ನೇಮಕಗೊಂಡಿದ್ದಾರೆ. ಈ ನಡುವೆ ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ ಬೈಂದೂರು ತಾಲೂಕಿನ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿನ ಸ್ವಾತಂತ್ರ್ಯ ಅಮೃತಮಹೋತ್ಸವ ವನದಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧೀಯ ಸಸ್ಯಗಳನ್ನು ನೆಟ್ಟು ವನಮಹೋತ್ಸವ ಆಚರಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ, ಬೈಂದೂರು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಭಾನುಮತಿ ಬಿ. ಕೆ., ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಅಧ್ಯಕ್ಷರಾದ ಪ್ರಸಾದ್, ಇನ್ನರ್ ವೀಲ್ ಕ್ಲಬ್ ಬೈಂದೂರಿನ ಪದಾಧಿಕಾರಿಗಳಾದ ಸುಜಾತಾ ರವಿರಾಜ್, ಶಾರದಾ ನಾರಾಯಣ, ರಾಜೀವಿ ಗೋವಿಂದ ಮತ್ತು ಗುಲಾಬಿ ಉಪಸ್ಥಿತರಿದ್ದರು.

Read More