Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಟೇಶ್ವರ ನಿವಾಸಿ ಮಹಮ್ಮದ್ ಫರ್ಹಾನ್ (19) ಅವರು ಬುಧವಾರದಂದು ವಾಸ್ತವ್ಯದ ಬಾಡಿಗೆ ಮನೆಯ ರೂಮ್‌ನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ. ಅವರು ತನಗಿರುವ ಆರೋಗ್ಯ ಸಮಸ್ಯೆ ಅಥವಾ ಇನ್ಯಾವುದೋ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಯಾಕೂಬ್ ಖಾದರ್ ಗುಲ್ವಾಡಿ ಅವರ ಚೊಚ್ಚಲ ನಿರ್ದೇಶನದ ಬ್ಯಾರಿ ಭಾಷೆಯ ‘ಟ್ರಿಪಲ್ ತಲಾಖ್’ ಸಿನಿಮಾಗೆ ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಚಿತ್ರ ಪ್ರಶಸ್ತಿ ಲಭಿಸಿದೆ. ಮುಂಬೈನ ಪ್ರಭನಾರಾಯಣ ಸುವರ್ಣ ಮತ್ತು ಯಾಕೂಬ್ ಖಾದರ್ ಗುಲ್ವಾಡಿ ಜೊತೆಯಾಗಿ ಈ ಸಿನಿಮಾ ನಿರ್ಮಿಸಿದ್ದರು. ಪಿ.ವಿ.ಆರ್ ಸ್ವಾಮಿ ಮತ್ತು ಸತೀಶ್ ಕುಮಾರ್ ಛಾಯಾಗ್ರಹಕರಾಗಿದ್ದರು. ಎಡಿಟರ್-ಕಲರೀಸ್ಟ್-ಮೋಹನ್ ಎಲ್ ರಂಗ ಕಹಳೆ, ಸೌಂಡ್ ಮಿಕ್ಸಿಂಗ್-ಮುನೀಬ್ ಅಹಮದ್, ಹಿನ್ನೆಲೆ ಸಂಗೀತ ಮತ್ತು ಸೌಂಡ್ ಎಫೆಕ್ಟ್-ಗಿರೀಶ್ ಬಿ.ಎಮ್, ವಸ್ತ್ರವಿನ್ಯಾಸ-ಇಸ್ಮಾಯಿಲ್ ಸರ್ಫುದ್ದೀನ್, ಕಲೆ- ಎ.ಕೆ.ಗುಲ್ವಾಡಿ, ಪಣಕನಹಳ್ಳಿ ಪ್ರಸನ್ನ ಮತ್ತು ರಿಝ್ವಾನ್ ಗುಲ್ವಾಡಿ ಸಹ ನಿರ್ದೇಶನ ಮಾಡಿದ್ದರು. ಕಲಾವಿದರಾಗಿ ರೂಪ ವರ್ಕಾಡಿ, ನವ್ಯ ಪೂಜಾರಿ, ಅಝರ್ ಶಾ, ಮಹಮ್ಮದ್ ಬಡ್ಡೂರ್, ಎಮ್. ಕೆ.ಮಠ, ವಿಶೇಷ ಪಾತ್ರದಲ್ಲಿ ಕುಂದಾಪುರದ ಹಿರಿಯ ವಕೀಲರಾದ ರವಿಕಿರಣ್ ಮುರ್ಡೇಶ್ವರ ಮತ್ತು ಎ.ಎಸ್.ಎನ್ ಹೆಬ್ಬಾರ್ ಸಹಿತ ಉಮರ್ ಯು.ಹೆಚ್, ಸುಬ್ರಹ್ಮಣ್ಯ ಶೆಟ್ಟಿ, ನಾರಾಯಣ ಸುವರ್ಣ, ಪ್ರಭಾ ಸುವರ್ಣ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪಠ್ಯದ ಜೊತೆಗಿನ ಪಠ್ಯೇತರ ಚಟುವಟಿಕೆಗಳು ಸಮಗ್ರ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಬಲ್ಲದು ಎಂದು ದಕ್ಷಿಣ ಕನ್ನಡ ಸ್ಕೌಟ್ಸ್ ಗೈಡ್ಸ್ ಜಿಲ್ಲಾ ಆಯುಕ್ತ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ  ಡಾ. ಮೋಹನ್ ಆಳ್ವ ನುಡಿದರು.  ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಕೃಷಿ ಸಿರಿ ವೇದಿಕೆಯಲ್ಲಿ ಗುರುವಾರ  ’ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪೋರಿʼ ಕಾರ್ಯಕ್ರಮದ ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ, ರೋವರ್ಸ್ ಮತ್ತು ರೇಂಜರ್ಸ್ ಸಮಾಗಮವನ್ನು ಉದ್ಘಾಟಿಸಿ ಮಾತನಾಡಿದರು.  ಬಾಲ್ಯದ ಕಲಿಕೆ ಉಜ್ವಲ ಭವಿಷ್ಯವನ್ನು ರೂಪಿಸುತ್ತದೆ. ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದಲ್ಲಿ ವಿದ್ಯೆ ಮತ್ತು ಬುದ್ಧಿಯ ಜೊತೆಗೆ ಪಠ್ಯೇತರ ವಿಚಾರಗಳಲ್ಲಿ ತೊಡಗಿಸಿಕೊಂಡಾಗ ಸುಂದರ ಮನಸನ್ನು ಕಟ್ಟಿಕೊಳ್ಳಲು ಸಾಧ್ಯ. ಅವಕಾಶಗಳ ಸದುಪಯೋಗ ಹಾಗೂ ಸಂಸ್ಕಾರದ ಗುಣವನ್ನು ಬೆಳೆಸಿಕೊಳ್ಳಿ. ದೇಶಪ್ರೇಮ, ರಾಷ್ಟ್ರ ಪ್ರೇಮದೊಂದಿಗೆ ಬದುಕೋಣ, ಆದರೆ ಅನ್ಯ ದೇಶದ ನಡುವೆ ಸಂಘರ್ಷ ಬೇಡ ಎಂದರು. ದೇಶ ಪ್ರೇಮದ ಜೊತೆಗೆ ಪರಿಸರ ಪ್ರೇಮವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಈ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿದ್ದಾರೆ. ಅವರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ. ಏಪ್ರಿಲ್ 11ರಂದು ಗೋವಾದಲ್ಲಿ ನಡೆಯಲಿರುವ ವೈಭವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಆಯ್ಕೆ ಸಮಿತಿಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಕೋ ಕ್ಲಬ್ ಕಾರ್ಯಕ್ರಮದಡಿಯಲ್ಲಿ ‘ಅಂಬರ ವಿಹಾರ’ ಆಕಾಶ ಕಾಯಗಳ ವೀಕ್ಷಣೆ ಕಾರ್ಯಕ್ರಮವು ಕಂಚಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷರಾದ ಪ್ರಭಾಕರ್‌ ದೇವಾಡಿಗ ಅವರು ವಹಿಸಿದ್ದರು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಆಕಾಶ ಕಾಯಗಳ ಬಗ್ಗೆ ಮಕ್ಕಳ ಕುತೂಹಲದ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಪ್ರತ್ಯಕ್ಷವಾಗಿ ತಂತ್ರಜ್ಞಾನಧ ಮೂಲಕ ಪರಿಚಯಿಸಿ , ಮಕ್ಕಳಿಗೆ ಆಕಾಶ ಕಾಯಗಳ ಬಗ್ಗೆ ಒಂದಷ್ಟು ಮಾಹಿತಿ ನೀಡಿದರು. ನಂತರ ಟೆಲಿಸ್ಕೋಪ್ ಮೂಲಕ ಗ್ರಹಗಳ ವೀಕ್ಷಣೆ ಮಾಡಲಾಯಿತು. ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಇಲಾಖೆಯ ಅಧಿಕಾರಿಗಳು ಬೇರೆ ಬೇರೆ ಶಾಲೆಯ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷರಾದ ಲಲಿತಾ ದೇವೇಂದ್ರ ಶೇಟ್, ಸಂಪನ್ಮೂಲ ವ್ಯಕ್ತಿ ಉಪನ್ಯಾಸಕಿ ಶ್ರೀನಯನ ಮತ್ತು ನಿವೃತ್ತ ಮುಖ್ಯ ಶಿಕ್ಷಕರಾದ ಮಹಾಬಲೇಶ್ವರ ಐತಾಳ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕಿ ಗೀತಾ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ಶಿಕ್ಷಕಿ ಜ್ಯೋತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡುತ್ತಿರುವ ಸ್ವಯಂಸ್ಪೂರ್ತಿ ಫೌಂಡೇಶನ್‌ 3 ಶಾಲೆಗಳಿಗೆ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಕೊಡುಗೆಯಾಗಿ ನೀಡಲಿದೆ. ಈ ಭಾರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ, ಯಳಜಿತ ಹಾಗೂ ಮುಲ್ಲಿಬಾರು ಶಾಲೆಗಳಲ್ಲಿ ಕೌಶಲ್ಯ ಕೇಂದ್ರ ತೆರೆಯಲಾಗುತ್ತಿದೆ. ಜನವರಿ 24 ಹಾಗೂ 25ರಂದು ನಡೆಯುವ ಸಮಾರಂಭವನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಉದ್ಘಾಟಿಸಲಿದ್ದು, ಆಯಾ ಶಾಲಾ ವ್ಯಾಪ್ತಿಯ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ವಯಂಸ್ಪೂರ್ತಿ ಫೌಂಡೇಶನ್‌ ಮುಖ್ಯಸ್ಥರಾಗಿರುವ ಸಿ.ಎಸ್.‌ ನಾಗರಾಜ ಶೆಟ್ಟಿ ಅವರ ನೇತೃತ್ವದ ಸ್ವಯಂಸ್ಪೂರ್ತಿ ಫೌಂಡೇಶನ್‌ ಮೂಲಕ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರದಲ್ಲಿ ಕನಿಷ್ಠ ನಾಲ್ಕು ಕಂಪ್ಯೂಟರ್‌ಗಳು, ಕಂಪ್ಯೂಟರ್‌ ಟೇಬಲ್‌ – ಖುರ್ಚಿ, ಬುಕ್‌ ರ್ಯಾಕ್‌, ಕ್ರೀಡಾ ಸಾಮಾಗ್ರಿಗಳನ್ನು ಗ್ರಾಮೀಣ ಭಾಗದ ಶಾಲೆಗೆ ನೀಡಲಾಗುತ್ತಿದೆ. ಈತನಕ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಶಾಲೆಗಳಿಗೆ ಕೌಶಲ್ಯ ಕೇಂದ್ರ ಒದಗಿಸಿಕೊಡಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡಬಿದಿರೆ: ಅರೆವಾಹಕ ಚಿಪ್‌ಗಳು (ಸೆಮಿಕಂಡಕ್ಟಡ್ ಚಿಪ್) ಅತ್ಯಂತ ಅಗತ್ಯವಾಗಿದ್ದು ಅದನ್ನು ವಿದೇಶದಿಂದ ಆಮದು ಮಾಡಿಕೊಳ್ಳುವುದು ಇಲ್ಲಿ ತಯಾರಿಸುವುದಕ್ಕಿಂತ ಅಧಿಕವಾಗುತ್ತದೆ. ಪ್ರಸ್ತುತ ಭಾರತ ಸರಕಾರ ಅರೆವಾಹಕ ಚಿಪ್‌ಗಳನ್ನು ತಯಾರಿಸಲು ಎಪ್ಪತ್ತಾರು ಸಾವಿರ ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದು ಇದು ಮುಂಬರುವ ದಿನಗಳಲ್ಲಿ ಭಾರತ ತಂತ್ರಜ್ಞಾನದ ಮಹತ್ವದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಬೆಂಗಳೂರಿನ ಡಿಆರ್‌ಡಿಒ ಹಾಗೂ ಸಿತಾರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರವಿ ಎಂ. ಆರ್. ಹೇಳಿದರು. ಕರ್ನಾಟಕ ಸರಕಾರದ ವಿಜನ್ ಗ್ರೂಪ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿಯ ಅನುದಾನದೊಂದಿಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಞ್ರಾನಿಕ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು ಆಯೋಜಿಸಿದ ಮೆಮ್ಸ್ ಕ್ಯಾರಕ್ಟರೈಸೇಶನ್ ಟೆಕ್ನಿಕ್ ಎಂಬ  ನಾಲ್ಕು ದಿನಗಳ ಉಪನ್ಯಾಸಕರ ಕೌಶಲ್ಯಾಭಿವೃದ್ಧಿ (ಎಫ್‌ಡಿಪಿ) ಕಾರ್ಯಾಗಾರವನ್ನು ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.  ಭಾರತದಲ್ಲಿ ಜ್ಞಾನದ ಸಂಪತ್ತು ಹೇರಳವಾಗಿದ್ದು, ಮೇಮ್ಸ್ ಹಾಗೂ ಸೆಮಿಕಂಡಕ್ಟರ್‌ಗೆ ಸಂಬಂದಿಸಿದ ನೂರೈವತ್ತುಕ್ಕೂ ಅಧಿಕ ಸಂಸ್ಥೆಗಳು ಬೆಂಗಳೂರಿನಲ್ಲಿವೆ. ನಾವು ಅನೇಕ ತಂತ್ರಜ್ಞಾನವನ್ನು ಕಂಡುಕೊಂಡಿದ್ದೇವೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ನಾಟಕ ಮಾಧ್ಯಮದಿಂದ ಮಕ್ಕಳಿಗೆ ಇತಿಹಾಸ ಅರಿಯಲು ಸುಲಭ. ನಾಟಕಗಳು ರಂಜನೆಯ ಜೊತೆಗೆ ಚಿಂತನೆಯನ್ನು ಹಚ್ಚುತ್ತದೆ ಎಂದು ಲಯನ್ಸ್ ಕ್ಲಬ್ ಬೈಂದೂರು ಉಪ್ಪುಂದ ಇದರ ಅಧ್ಯಕ್ಷರಾದ ಸತೀಶ್ ಶೆಟ್ಟಿ ಅವರು ಹೇಳಿದರು. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರಿನಲ್ಲಿ ರೋಟರಿ ಕ್ಲಬ್ ಬೈಂದೂರು, ಲಯನ್ಸ್ ಕ್ಲಬ್ ಬೈಂದೂರು – ಉಪ್ಪುಂದ, ಸೀನಿಯರ್ ಚೇಂಬರ್ ಬೈಂದೂರು ಇವರ ಸಹಯೋಗದಲ್ಲಿ ನಿರ್ದಿಗಂತ ಮೈಸೂರು ತಂಡದ ನಾಟಕ ತಿಂಡಿಗೆ ಬಂದ ತುಂಡೇರಾಯ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ದೇವಾಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ವೆಂಕಟರಮಣ ದೇವಾಡಿಗ ಮತ್ತು ದಯಾನಂದ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಾಟಕ ತಂಡದ ನಿರ್ವಾಹಕರಾದ ಗಣೇಶ್ ಅವರನ್ನು ಗೌರವಿಸಲಾಯಿತು. ನೀನಾಸಂ ಪದವೀಧರ ಸತ್ಯನ್‌ ಕೊಡೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ರೋಟರಿ ಕ್ಲಬ್‌ನ ಕಾರ್ಯದರ್ಶಿ ಸುನಿಲ್ ಹೆಚ್.‌ ಜಿ ಸ್ವಾಗತಿಸಿ, ಶಾಲಾ ಪದವೀಧರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತುಳು – ಕನ್ನಡ ಎನ್ನುವ ಭಾಷಿಕವಾದ ಒಳ ಬಿನ್ನತೆ ಸಂಘಟನೆಯಲ್ಲಿ ಬರಬಾರದು. ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಪ್ರಾದೇಶಿಕ ಭಿನ್ನತೆಯನ್ನು ಮೀರಿ ಬಂಟ ಸಮುದಾಯದ ಹಾಗೂ ಸಮಾಜದ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು. ಗೋವಾದ ಲಕ್ಷ್ಮಿ ಎಂಪೈರ್ ಹೋಟೆಲ್ ನಲ್ಲಿ ಆಯೋಜಿಸಿದ ಗೋವಾ ಬಂಟರ ಸಂಘದ ರಜತ ಸಂಭ್ರಮ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದರು. ಜ್ಞಾನ ಸರೋವರ ರೆಸಿಡೆನ್ಸಿಯಲ್ ಸ್ಕೂಲ್‌ನ ಆಡಳಿತ ನಿರ್ದೇಶಕ ಸುಧಾಕರ ಶೆಟ್ಟಿ ಮಾತನಾಡಿ, ಬಂಟರು ಸ್ವಂತಿಕೆ, ಸ್ವಾಭಿಮಾನದಡಿಯಲ್ಲಿ ಬದುಕಿದವರು ಹಾಗೂ ಸಂಘಟನಾ ಚತುರರು. ಬೇರೆ ಬೇರೆ ಕ್ಷೇತ್ರಗಳಲ್ಲಿ ತಮ್ಮ ಚಾಪನ್ನು ಮೂಡಿಸುವುದರ ಜೊತೆಗೆ ನಾಡಿನ ಕಲೆ, ಸಾಹಿತ್ಯ, ಸಾಂಸ್ಕೃತಿಕ ವಿಷಯಗಳಿಗೆ ತಮ್ಮದೆ ಆದ ಕೊಡುಗೆಯನ್ನು ನೀಡುತ್ತಾ ಬಂದವರು. ಬಂಟರು ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗುವ ಮೂಲಕ ಸಾಮಾಜಿಕವಾಗಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡವರು ಎಂದು ಹೇಳಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಗೋವಾ ಬಂಟರ ಸಂಘದ ರಜತ ಸಂಭ್ರಮದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ ಇರಿಸಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಶೇಕರ ಬಿ. ಅವರನ್ನು ರೆಡ್ ಹ್ಯಾಂಡ್ ಆಗಿ ಉಡುಪಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. 9/11 ಮಾಡಿ ಕೊಡಲು 22 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ದೂರುದಾರರು ನೀಡಿದ ದೂರಿನಂತೆ ಈ ಕಾರ್ಯಾಚರಣೆ ನಡೆಸಲಾಗಿದೆ. ಲೋಕಾಯುಕ್ತ ಅಧೀಕ್ಷಕ ನಟರಾಜ್ ಅವರ ಮಾರ್ಗದರ್ಶನದಲ್ಲಿ ಪ್ರಭಾರ ಪೊಲೀಸ್ ಉಪಾಧೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಇನ್ಸ್‌ಪೆಕ್ಟ‌ರ್ ಅಮನುಲ್ಲ ಹಾಗೂ ಚಂದ್ರಶೇಖ‌ರ್, ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಪುಷ್ಪಲತಾ, ಮಲ್ಲಿಕಾ, ಅಬ್ದುಲ್ ಜಲಾಲ್, ಸತೀಶ್ ಹಂದಾಡಿ, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು, ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Read More