ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಅಂತರಾಷ್ಟ್ರೀಯ ಬೀಚ್ ಸ್ವಚ್ಛತಾ ದಿನಾಚರಣೆಯ ಅಂಗವಾಗಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ, ಗ್ರಾಮ ಪಂಚಾಯತ್ ತ್ರಾಸಿ ಹಾಗೂ ಲಯನ್ಸ್ ಕ್ಲಬ್ ತ್ರಾಸಿ-ಗಂಗೊಳ್ಳಿ, ಖಾರ್ವಿ ಆನ್ಲೈನ್.ಕಾಮ್ ಜಂಟಿ ಆಶ್ರಯದಲ್ಲಿ ತ್ರಾಸಿ-ಮರವಂತೆ ಬೀಚ್ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ಕರಾವಳಿ ಕಾವಲು ಪೊಲೀಸ್ ಠಾಣೆಯ ಉಪನಿರೀಕ್ಷಕ ಸುಬ್ರಹ್ಮಣ್ಯ ಹರ್ಕೇರಿ ಮಾತನಾಡಿ, ಸಮುದ್ರ ಜೈವಿಕ ವೈವಿಧ್ಯತೆಯ ತಾಣಗಳ ಆಗರವಾಗಿದ್ದು ಅದನ್ನು ಸಂರಕ್ಷಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ವತಿಯಿಂದ ನಿಯಮಿತವಾಗಿ ಸ್ವಚ್ಛತೆ ಮತ್ತು ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ನ ಅಧ್ಯಕ್ಷ ವಿವೇಕಾನಂದ ಪೂಜಾರಿ ಹಾಗೂ ಪದಾಧಿಕಾರಿಗಳು, ಕರಾವಳಿ ಕಾವಲು ಪೊಲೀಸ್ ಠಾಣೆಯ ಎಎಸ್ಐ ಭಾಸ್ಕರ್ ಮತ್ತು ಸಿಬ್ಬಂದಿಗಳು, ಕೆ.ಎನ್.ಡಿ ಸಿಬ್ಬಂದಿಗಳು ಹಾಗೂ ತ್ರಾಸಿ ಎಸ್ಎಲ್ಆರ್ಎಂ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಗುರುಕುಲ ಪದವಿಪೂರ್ವ ಕಾಲೇಜು ವಕ್ವಾಡಿ, ಕೋಟೇಶ್ವರ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಪುಟ್ಬಾಲ್ ಕ್ರೀಡಾಕೂಟದ ಸಮಾರೋಪ ಸಮಾರಂಭ ಶುಕ್ರವಾರದಂದು ಜರುಗಿತು. ಮುಖ್ಯ ಅತಿಥಿಗಳಾದ ಮಾರುತಿ ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಅವರು ಮಾತನಾಡಿ, ಆಟವು ಒಂದು ವಿಶೇಷ ಚಟುವಟಿಕೆ ಸೋಲೆ ಗೆಲವುವಿನ ಸೋಪಾನ ಹಾಗೂ ಮನಸ್ಸು ಯಾವಾಗಲೂ ಧನಾತ್ಮಕ ಚಿಂತನೆ ಮಾಡಬೇಕು ಎಂದು ಉದಾಹರಣೆಗಳಿಂದ ಕೂಡಿದ ಅಮೂಲ್ಯ ಸಂದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಕೆ.ಸುಭಾಶ್ಚಂದ್ರ ಶೆಟ್ಟಿ, ಜಂಟಿ ಆಡಳಿತ ನಿರ್ದೇಶಕರು, ಬಾಂಡ್ಯ ಎಜುಕೇಶನಲ್ ಟ್ರಸ್ಟ್, ಸುನಿಲ್ ಪ್ಯಾಟ್ರಿಕ್, ಪ್ರಾಂಶುಪಾಲರು ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿ ಕೋಟೇಶ್ವರ, ಉಡುಪಿ ಜಿಲ್ಲಾ ಕ್ರೀಡಾ ಸಂಯೋಜಕರಾದ ದಿನೇಶ್ ಶೆಟ್ಟಿ, ಕುಂದಾಪುರ ತಾಲ್ಲೂಕು ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅವಿನಾಶ್ ಆಚಾರ್ಯ ಉಪಸ್ಥಿತರಿದ್ದರು. ಕುಂದಾಪುರ ತಾಲ್ಲೂಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಅವರು ನಡೆಸಿದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಮೋಹಿತ್ ಎಂ. ಹಾಗೂ ಟಿ. ಪ್ರದೀಪ್ ಅವರು ತೇರ್ಗಡೆ ಹೊಂದಿ, ಎಸ್.ಎಸ್.ಬಿ (Srevice selection Board) ಸಂದರ್ಶನಕ್ಕೆ ಅರ್ಹತೆಯನ್ನು ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಸಂಯೋಜಕರಾದ ಸುಮಂತ್ ದಾಮ್ಲೆ ಅವರು ಶ್ಲಾಘಿಸಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮಪಡಿಸಿ, ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೇ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಜನತೆ ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡದೇ, ಶೈಕ್ಷಣಿಕ ಬೆಳವಣಿಗೆಯ ಕಡೆ ಗಮನಹರಿಸುವ ಮೂಲಕ ತಮ್ಮ ಬದುಕು ರೂಪಿಸಲು ಈಗಿನಿಂದಲೇ ದೃಢ ನಿರ್ಧಾರ ಕೈಗೊಂಡು ಉತ್ತಮ ಭವಿಷ್ಯದ ನಿರ್ಮಾಣದತ್ತ ಹೆಜ್ಜೆ ಹಾಕಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಅಮೃತ್ ಗಾರ್ಡನ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್ ಕ್ಲಬ್ ಅಮೃತ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಐಕ್ಯುಎಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿದಾಗ ನಮ್ಮ ದೇಶವನ್ನು ಹೊರತುಪಡಿಸಿ ವಿವಿಧೆಡೆ ಸಾಮಾಜಿಕ ಅಸ್ಥಿರತೆ ಇದ್ದು, ಇದರ ಪರಿಣಾಮ ಯುವಜನರ ಮೇಲೆ ಉಂಟಾಗುತ್ತದೆ. ನಮ್ಮ ದೇಶದಲ್ಲಿ ಬೇಧ, ಭಾವ, ಜಾತಿ ತಾರತಮ್ಯ ವಿಲ್ಲದೇ ಸಂವಿಧಾನದ ಆಶಯದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಧನ್ವಿ ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಅವರ ಪುತ್ರಿಯಾಗಿದ್ದು ಪ್ರಸ್ತುತ ಹೆಮ್ಮಾಡಿಯ ಜನತಾ ಇಂಡಿಪೆಂಡೆಂಟ್ ಪಿಯು ಕಾಲೇಜ್ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡತ್ತಿದ್ದಾರೆ. ಸೆ. 26ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯುವ ಸಾಲು ಮರದ ತಿಮ್ಮಕ್ಕನ 113ನೇ ಜನ್ಮದಿನದ ಸಂಭ್ರಮಚಾರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಗ್ರಹ ಸಚಿವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಗಂಗೊಳ್ಳಿ ಆಯೋಜನೆಯಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಜಲಜಾಗ್ರತಿ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಗಂಗೊಳ್ಳಿ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ್ ವಹಿಸಿದ್ದರು.ರೋಟರಿ ಜಿಲ್ಲಾ ಗವರ್ನರ್ ಸಿ.ಎ. ದೇವಾನಂದ್ ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನೆಲ-ಜಲ-ಪರಿಸರ ಜಿಲ್ಲಾ ಸಂಯೋಜಕರಾದ ಶಿವಾನಂದ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಜ್ಯ ಸಂಪನ್ಮೂಲ ವ್ಯಕ್ತಿ ರತ್ನ ಜೋಸೆಫ್ ಜಿ.ಎಮ್ ರೆಬೆಲ್ಲೊ ಅವರು ಮಾತನಾಡಿ, ಜಲಜಾಗ್ರತಿಯ ಕುರಿತಾಗಿ ಅರಿವು ಮೂಡಿಸಿದರು. ಮಳೆಕೊಯ್ಲು,ಜಲ ಮರುಪೂರಣ, ಜಲಕ್ಷಾಮ, ದ್ರವ ತ್ಯಾಜ್ಯ ಈ ಪ್ರಮುಖ ವಿಚಾರಗಳ ಕುರಿತು ಮಾಹಿತಿಯನ್ನು ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ ಪೂಜಾರಿ, ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ರಂಜಿತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆಯಲ್ಲಿ ತೃತೀಯ ಭಾಷೆಯಾಗಿ ಕೊಂಕಣಿಯನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕೊಂಕಣಿ ಸಾಂಸ್ಕೃತಿಕ ಸಂಘದ ಮುಖ್ಯಸ್ಥ ಎಂ. ಆರ್. ಕಾಮತ್ ಮತ್ತು ಉಷಾ ಪೈ ಹಾಗೂ ಕೊಡಿಯಾಲ್ ಕಬರ್ ಪತ್ರಿಕೆ ಮುಖ್ಯಸ್ಥ ವೆಂಕಟೇಶ ಬಾಳಿಗ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿವೇತನ ವಿತರಿಸಿ ಶುಭ ಹಾರೈಸಿದರು. ಜಿ.ಎಸ್.ವಿ.ಎಸ್ ಅಸೋಸಿಯೇನ್ ಕಾರ್ಯದರ್ಶಿ ಎಚ್.ಗಣೇಶ್ ಕಾಮತ್, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಎಸ್.ವಿ. ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಉಪಸ್ಥಿತರಿದ್ದರು. ಕೊಂಕಣಿ ಶಿಕ್ಷಕಿಯರಾದ ರೇಷ್ಮಾ ನಾಯಕ್ ಮತ್ತು ನಮಿತಾ ಶೆಣೈ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರ ತತ್ವದ ಮೂಲ ಆಶಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಿ, ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರಗಳಲ್ಲೂ ಗುರಿ ಮೀರಿ ಸಾಧನೆ ಮಾಡಿ, ವರದಿ ವರ್ಷದಲ್ಲಿ 6.01 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ನಡೆದ ಸಂಘದ ವಾರ್ಷಿಕ ಸರ್ವದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರದಿ ವರ್ಷದಲ್ಲಿ 1030 ಕೋಟಿ ರೂ. ಗೂ ಮಿಕ್ಕಿ ವ್ಯವಹಾರ ನಡೆಸಿ, ಸಂಘದ ನಾಲ್ಕು ಶಾಖೆಗಳ ಮೂಲಕ 238.08ಕೋಟಿ ರೂ. ಠೇವಣೆ ಸಂಗ್ರಹಿಸಿ, 200.22 ಕೋಟಿ ರೂ. ಸಾಲ ನೀಡಿದೆ, 77.18 ಕೋಟಿ ರೂ. ಹೂಡಿಕೆ ಮಾಡಿ, 32.05ಕೋಟಿ ರೂ. ನಿಧಿಗಳನ್ನು ಹೊಂದಿ ಸದೃಢವಾಗಿದೆ. 8400 ಸದಸ್ಯರನ್ನೊಳಗೊಂಡ 756 ರೈತಸಿರಿ ಸ್ವಸಹಾಯ ಗುಂಪುಗಳನ್ನು ಸಂಯೋಜಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ, ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಹಾಗೂ ಗಂಗೊಳ್ಳಿ ವಲಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘ ಇವರ ಸಹಯೋಗದೊಂದಿಗೆ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ ವರ್ಷ- 2024 ಅಂಗವಾಗಿ ಗಂಗೊಳ್ಳಿ ವಲಯ ಅಂಗನವಾಡಿ ಮಕ್ಕಳ ಚಿಣ್ಣರ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಶ್ರೀ ಶಾರದೋತ್ಸವ ಸಮತಿ ಅಧ್ಯಕ್ಷ ಸತೀಶ ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ, ಹಿರಿಯ ನಾಗರಿಕ ಬಿ.ಸದಾನಂದ ಶೆಣೈ, ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಉಮೇಶ್ ಟಿ.ಎಲ್., ಶಾಲೆಯ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್, ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ತೀರ್ಪುಗಾರರಾದ ಮಹಾಬಲ ಆಚಾರ್ಯ, ನಟರಾಜ್ ಮೇಲ್ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಸುಮಿತ್ರಾ ಜಿ., ಸರೋಜ…
