Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಗುರುವಾರ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ. ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಟಾನಗಳು ಶಾಸ್ತ್ರೋಕ್ತವಾಗಿ ನಡೆಯಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಊರ ಪರ ಊರಿನ ಭಜಕರು ಉತ್ಸವದಲ್ಲಿ ಪಾಲ್ಗೊಂಡು ಮೊದಲಾದವರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರವು ಅನೇಕ ಸಂಶೋಧನಾ ನಿರತ ವಿದ್ಯಾರ್ಥಿಗಳಿಗೆ ಸಹಕರಿಸುವುದರೊಂದಿಗೆ, ಕನ್ನಡ ಸಾರಸ್ವತ ಲೋಕಕ್ಕೆ ರಾಷ್ಟ್ರಕವಿ ಗೋವಿಂದ ಪೈ ಅವರ ಸಾಹಿತ್ಯ ಕೃತಿಗಳು ಅಪಾರ ಕೊಡುಗೆ ನೀಡಿವೆ ಎಂದು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ| ಬಿ. ಜಗದೀಶ್ ಶೆಟ್ಟಿ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಸಂಘವು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭ ಕನ್ನಡ ಕರಾವಳಿ ಭಾಗದ ಸಾಂಸ್ಕೃತಿಕ ಕಿರುಚಿತ್ರ ಪ್ರದರ್ಶಿಸಲಾಯಿತು. ಸಂಶೋಧನ ಕೇಂದ್ರದ ಡಾ. ಅರುಣ್ ಕುಮಾರ್, ಕಾಲೇಜಿನ ಆಡಳಿತ ನಿಕಾಯಕರು ಮತ್ತು ಯಕ್ಷಗಾನ ಸಂಘದ ಸಂಯೋಜಕರಾದ ರಕ್ಷಿತ್ ರಾವ್ ಗುಜ್ಜಾಡಿ, ಸುಹಾಸ್ ಜಟ್ಟಿಮನೆ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಿಎ ಫೌಂಡೇಶನ್ -2025ರ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯುವುದರ ಮೂಲಕ ಜಿಲ್ಲೆಯಲ್ಲೇ  ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಸಾತ್ವಿಕ್ ವಿ. ಶೆಟ್ಟಿ -256, ಸಾನ್ವಿ ಆರ್. ಶೆಟ್ಟಿ -221 ಹಾಗೂ ಶ್ರೇಯಸ್ ಯು -208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ವಿಶೇಷ ತರಬೇತಿ ನೀಡುತ್ತಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯು ಜಿಲ್ಲೆಯಲ್ಲೇ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಈ ಸಾಧಕ ಪ್ರತಿಭೆಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐ. ಸಿ. ಸಿ. ಕತಾರ್, ಮುಂಬೈ ಹಾಲ್ ನಲ್ಲಿ ನಡೆದ ಬಿಲ್ಲವಾಸ್ ಕತಾರ್ ನ ಕಾರ್ಯಕಾರಿ ಮತ್ತು ಸಲಹಾ ಮಂಡಳಿಯ ಸಭೆಯಲ್ಲಿ ಪ್ರಸ್ತುತ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಪರ್ಣ ಅವರನ್ನು ಸರ್ವಾನುಮತದಿಂದ ಬಿಲ್ಲವಾಸ್ ಕತಾರ್ ನ  ಅಧ್ಯಕ್ಷೆಯಾಗಿ ಆಯ್ಕೆ ಮಾಡಲಾಯಿತು ಎಂದು ಮಾಜಿ ಅಧ್ಯಕ್ಷರಾದ ರಘುನಾಥ್ ಅಂಚನ್ ಅವರು ಘೋಷಿಸಿ ಶುಭ ಹಾರೈಸಿದರು. ಅಪರ್ಣ ಅವರು ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್, ಮಂಗಳೂರು ನಿವಾಸಿಯಾಗಿದ್ದು, ಎಂ.ಬಿ.ಎ. ಮಾನವ ಸಂಪನ್ಮೂಲ ಪದವಿಯನ್ನು ಹೊಂದಿದ್ದಾರೆ. ಕತಾರ್ ನ ಸುಪ್ರಸಿದ್ದ ಕಂಪೆನಿಗಳಲ್ಲಿ ಒಂದಾದ ಗಲ್ಫಾರ್ ಅಲ್ ಮಿಸ್ನಾಡ್ ಕಂಪನಿಯಲ್ಲಿ ಮಾನವ ಸಂಪನ್ಮೂಲ ವಿಭಾಗೀಯ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿಲ್ಲವಾಸ್ ಕತಾರ್ ನ ಉಪಾಧ್ಯಕ್ಷರಾಗಿ ಜಯರಾಮ ಸುವರ್ಣ ಅವರನ್ನು ನೇಮಿಸಲಾಯಿತು. ಪ್ರಸ್ತುತ ಕಾರ್ಯಕಾರಿ ಸಮಿತಿಯಲ್ಲಿ ಮಹೇಶ್ ಕುಮಾರ್ ಕಾರ್ಯದರ್ಶಿ, ಸಂದೀಪ್ ಕೋಟ್ಯಾನ್ ಜೊತೆ ಕಾರ್ಯದರ್ಶಿ, ಅಜಯ್ ಕೋಟ್ಯಾನ್ ಕೋಶಾಧಿಕಾರಿ, ಸೀಮಾ ಉಮೇಶ್ ಪೂಜಾರಿ ಕ್ರೀಡಾ ಕಾರ್ಯದರ್ಶಿ, ಪೂಜಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಚರಂಡಿಗೆ ಬಿದ್ದ ಪರಿಣಾಮ ಅವರು ಸಾವನ್ನಪ್ಪಿದ ಘಟನೆ ಗುರುವಾರ ಸಂಭವಿಸಿದೆ. ಬೈಂದೂರು ಬಾಡ ನಿವಾಸಿ ಸಂಜಯ ಕುಮಾರ (52) ಮೃತ ದುರ್ದೈವಿ. ಕೊಂಕಣ ರೈಲ್ವೆಯಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ಟ್ರಾಕ್‌ಮ್ಯಾನ್ ಕಾರ್ಯನಿರ್ವಹಿಸುತ್ತಿದ್ದು ಇವರು ರಾತ್ರಿ ಪಾಳಿ ಡ್ಯೂಟಿ ಮುಗಿಸಿ ಬೆಳಗ್ಗೆ 7 ರಿಂದ 7:30 ಸುಮಾರಿಗೆ ಭಟ್ಕಳ ದಿಂದ ಬೈಂದೂರು ಕಡೆಗೆ ತಮ್ಮ ಬೈಕ್ ಮೇಲೆ ತೆರಳುವ ಸಂದರ್ಭದಲ್ಲಿ ಘಟನೆ ನಡೆದಿದೆ. ಬೆಳಕೆ ಸೊಸೈಟಿಯ ಹತ್ತಿರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಆಕಸ್ಮಿಕವಾಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ಇದ್ದ ಚರಂಡಿಯಲ್ಲಿ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದರು. ಈ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ರೈಲ್ವೇ ಜೂನಿಯರ್ ಇಂಜಿನಿಯರ ಆದ ಪಾಯಸ್ ದೂರು ನೀಡಿದ್ದಾರೆ. ಗ್ರಾಮೀಣ ಠಾಣೆ ಪಿ.ಎಸ್.ಐ ರನ್ ಗೌಡ್ ಸ್ಥಳಕ್ಕೆ ತೆರಳಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಮಾನವ ಹಕ್ಕು ಸಂಘವು ಜಂಟಿಯಾಗಿ ಜೆ.ಸಿ.ಐ ಕುಂದಾಪುರದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ “ಮಹಿಳೆ – ಕಾನೂನು ಮತ್ತು ಮಾನಸಿಕ ಒತ್ತಡ” ಎಂಬ ಕಾರ್ಯಕ್ರಮವು  ನೆರವೇರಿತು. ಕಾರ್ಯಕ್ರಮದ ಉಧ್ಘಾಟಕರಾಗಿ ಆಗಮಿಸಿದ ಜೆ.ಸಿ.ಐ ಸೌಜನ್ಯ ಹೆಗ್ಡೆ, ಪೂರ್ವ ರಾಷ್ಟ್ರೀಯ ಕಾನೂನು ಸಲಹೆಗಾರರು, ಜೆ.ಸಿ.ಐ ಇಂಡಿಯಾ ಇವರು “ಮಹಿಳೆ ಆಕೆಯ ಅರ್ಹತೆಗೆ ತಕ್ಕ ಕೆಲಸವನ್ನು ಮಾಡಲು ಅರ್ಹಳು. ಮಹಿಳೆ ತನ್ನ ಕನಸನ್ನು ನನಸಾಗಿಸಲು ಸದಾ ಪ್ರಯತ್ನಿಸುತ್ತಾಳೆ” ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ವಕೀಲರು ಮತ್ತು ವಕೀಲರ ಸಂಘದ ಅಧ್ಯಕ್ಷರಾದ ಪ್ರಮೋದ್ ಹಂದೆ ಅವರು ಮಾತನಾಡಿ “ಮನುಷ್ಯನು ತನ್ನಲ್ಲಿ ಋಣಾತ್ಮಕ ವಿಚಾರವನ್ನು ಬೆಳೆಸಿಕೊಳ್ಳದೇ, ಧನಾತ್ಮಕ ವಿಚಾರವನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರು ತಾಳ್ಮೆಯಿಂದ ಯೋಚಿಸಿ ನಿರ್ಧಾರವನ್ನು ಕೈಗೊಳ್ಳಬೇಕೇ ಹೊರತು ದುಡುಕಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳಬಾರದು. ಹಾಗೆಯೇ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವನ್ನು ಮೂಡಿಸಿದರು”. ಕುಂದಾಪುರದ ಜೆ.ಸಿ.ಐ ಸ್ಥಾಪಕ ಅಧ್ಯಕ್ಷರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಯಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ವಿಜ್ಞಾನ ಮೇಳಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ವಿಜ್ಞಾನ, ಕಲೆಯ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು, ಜೊತೆಯಲ್ಲಿ ಸಂಹವನ ಮಾಡುವ ಸಾಮಾರ್ಥ್ಯವೂ ಬರುತ್ತದೆ. ವಂಡ್ಸೆಯ ಸರಕಾರಿ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ವಿಜ್ಞಾನ ಮತ್ತು ಕಲಾ ಮೇಳ ಅತ್ಯಂತ ಯಶಸ್ವಿಯಾಗಿ ನಡೆಯುತ್ತದೆ. ಇದು ನಿರಂತರವಾಗಿ ನಡೆಯಲಿ ಎಂದು ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಅಭಿಪ್ರಾಯಪಟ್ಟರು. ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ ನಡೆದ ವಿಜ್ಞಾನ ಹಾಗೂ ಕಲಾ ಮೇಳವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷೆ ಡಾ. ಪೂರ್ಣಿಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ನಿವೃತ್ತ ಸರಕಾರಿ ಅಧಿಕಾರಿ ಬಿ. ಎನ್. ಶೆಟ್ಟಿ ಬಗ್ವಾಡಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮಕ್ಕಳಿಗೆ ಶಿಕ್ಷಣದೊಂದಿಗೆ ಕಲೆ, ಸಾಹಿತ್ಯ, ನಾಟಕಗಳ ಬಗ್ಗೆ ಆಸಕ್ತಿ ಮೂಡಿಸಬೇಕು, ಇವುಗಳಿಂದ ಮಾತ್ರ ಅವರ ಮನಸ್ಸು ಅರಳಲು ಸಾಧ್ಯವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ  ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಲಾವಣ್ಯ ಬೈಂದೂರು ಆಶ್ರಯದಲ್ಲಿ ನಡೆದ ಮಾಜಿ ಶಾಸಕ ದಿ. ಕೆ.ಲಕ್ಷ್ಮೀನಾರಾಯಣ ಸ್ಮರಣಾರ್ಥ ಇದರ 48ನೇ ವರ್ಷದ ವಾರ್ಷಿಕೋತ್ಸವ, ರಂಗಪಂಚಮಿ – 2025 ರಂಗೋತ್ಸವ ಇದರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಲಾವಣ್ಯ ಸಂಸ್ಥೆಯ ಬೈಂದೂರು ಭಾಗದ ಜನರಿಗೆ ನಾಟಕಗಳ ಬಗ್ಗೆ ಅಭಿರುಚಿ ಮೂಡಿಸಿದ ಮೊದಲ ಸಂಸ್ಥೆ ಎಂಬ ಹೆಗ್ಗಳಿಗೆ ಗಳಿಸಿದೆ. ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದ ಈ ಸಂಸ್ಥೆ ರಂಗಭೂಮಿಗೆ ಅಪಾರ ಕೊಡುಗೆ ನೀಡಿದೆ. ಪ್ರಬುದ್ದ ಕಲಾವಿದರ ತಂಡವಾಗಿರುವ ಲಾವಣ್ಯ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವುದು ಮಹೋನ್ನತವಾದ ಸಾಧನೆಯಾಗಿದೆ. ಆಧುನಿಕತೆಯ ಬದಲಾವಣೆಗಳೊಂದಿಗೆ ರಂಗಭೂಮಿ ತನ್ನ ಮೌಲ್ಯಗಳನ್ನು ಉಳಿಸಿಕೊಂಡು ಮುನ್ನೆಡೆಯಬೇಕಾಗಿದೆ ಎಂದರು. ಖಂಬದಕೋಣೆ ರೈತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಕೊಠಾರಿ ಸೇವಾ ಸಂಘ ರಿ. ಕರ್ಕಿ ಕನ್ಯಾನ, ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ., ಕೆಎಂಸಿ ಮಣಿಪಾಲ ರಕ್ತನಿಧಿ ವಿಭಾಗ ಇವರ ಸಹಕಾರದಲ್ಲಿ ಶ್ರೀ ಚೌಡೇಶ್ವರಿ ಕನ್ವೆನ್ಷನ್ ಸೆಂಟರ್,‌ ಕೊಠಾರಿ ಸಮುದಾಯ ಭವನ ಕರ್ಕಿ ಕನ್ಯಾನದಲ್ಲಿ‌ ನಡೆದ ರಕ್ತದಾನ ಶಿಬಿರವನ್ನು ವ್ಯವಸ್ಥಾಪನ ಸಮಿತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ‌ ಸೌಕೂರು ಇದರ ಅಧ್ಯಕ್ಷರಾದ ಕಿಶನ್ ಹೆಗ್ಡೆ ಉದ್ಘಾಟಿಸಿದರು. ‌ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘದ ಅಧ್ಯಕ್ಷರಾದ ಸೀತಾರಾಮ ಕೊಠಾರಿ ಸಭಾಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ರಂಗನಾಥ್ ವೈ., ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸತೀಶ್ ಸಾಲ್ಯಾನ್ ಮಣಿಪಾಲ್, ಹಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ರೋವನ್ ಡಿ’ ಕೋಸ್ತಾ, ಕುಂದಾಪುರ ವಿಜಯ ಕರ್ನಾಟಕ ಪತ್ರಿಕಾ ಸಂಪಾದಕರಾದ ಜಾನ್ ಡಿ’ಸೋಜ,‌ ಹಟ್ಟಿಯಂಗಡಿ ಗ್ರಾಮ‌ ಪಂಚಾಯತ್ ‌ಮಾಜಿ ಅಧ್ಯಕ್ಷ ರಾಜೀವ ಶೆಟ್ಟಿ, ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ಕೆ. ನಾಗಪ್ಪ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಎ ಫೌಂಡೇಶನ್ ಪರೀಕ್ಷೆ 2025ರಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ. ವಿದ್ಯಾರ್ಥಿಗಳಾದ ವಿಘ್ನೇಶ್ 228 ಅಂಕಗಳು, ಕೌಶಲ್ ಆಚಾರ್ 209 ಅಂಕಗಳು, ರಿತೇಶ್ ಮೊಗವೀರ 208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆಯೊಂದಿಗೆ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More