ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನಾಧರಿತ ಬೆಳೆ ವಿಮೆ ಯೋಜನೆಯಡಿ ಬೆಳೆ ಸಾಲ ಹೊಂದಿರುವ ರೈತರನ್ನು ಸಂಪೂರ್ಣ ಬೆಳೆ ವಿಮೆ ಯೋಜನೆಗೆ ಒಳಪಡಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬೆಳೆ ಸಾಲ ಹೊಂದಿದ ರೈತರನ್ನು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮಾ ಯೋಜನೆಗೆ ಒಳಪಡಿಸಲು ಆಗಸ್ಟ್ 25 ರ ವರೆಗೆ ಅವಧಿ ವಿಸ್ತರಣೆ ಮಾಡಿ ಅವಕಾಶ ಕಲ್ಪಿಸಲಾಗಿದ್ದು. ಬೆಳೆ ವಿಮೆಗೆ ಒಳಪಡದ ಬೆಳೆ ಸಾಲ ಹೊಂದಿರುವ ರೈತರು ಕೂಡಲೇ ತಮ್ಮ ಬೆಳೆ ಸಾಲ ಹೊಂದಿರುವ ಬ್ಯಾಂಕ್ನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೊಳನಕಲ್ಲು ಕಿರಿಯ ಪ್ರಾಥಮಿಕ ಶಾಲೆ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾ ಅಭಿವೃದ್ಧಿಯನ್ನು ಕಾಣುತ್ತಿದೆ. ಗ್ರಾಮೀಣ ಕನ್ನಡ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಹೆಚ್ಚು ಹೆಚ್ಚು ಅವಕಾಶ ನೀಡುತ್ತಾ, ದೇಶಭಕ್ತಿ ಬೆಳೆಯುವಂತೆ ಮಾಡಬೇಕು ಎಂದು ತಾಲೂಕು ಪಂಚಾಯತ್ ಕುಂದಾಪುರದ ಮಾಜಿ ಸದಸ್ಯರಾದ ಪ್ರದೀಪ್ ಕುಮಾರ್ ಶೆಟ್ಟಿ ಅವರು ಕೊಳನಕಲ್ಲು ಶಾಲೆಯಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಸುಬ್ರಹ್ಮಣ್ಯ ಕೆದ್ಲಾಯ ಅವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲಿ ವಿದ್ಯಾರ್ಥಿಗಳಿಗೆ ಉಲ್ಲಾಸ್ ಡಿಸಿಲ್ವಾ ಕೋಟೇಶ್ವರ ಮತ್ತು ಪಾರ್ವತಿ ಸಿಲ್ಕ್ಸ್ ಬಿದ್ಕಲ್ಕಟ್ಟೆ ಅವರು ಜಂಟಿಯಾಗಿ ನೀಡಿದ ಸಮವಸ್ತ್ರ ವಿತರಿಸಲಾಯಿತು. ಶಾಲೆಯ ಸೌಂದರ್ಯೀಕರಣಕ್ಕೆ ದೇಣಿಗೆ ನೀಡಿದ ಸತ್ಯನಾರಾಯಣ ಕೆದ್ಲಾಯ, ಸಮವಸ್ತ್ರದ ಭಾಗಶಃ ದೇಣಿಗೆ ನೀಡಿದ ಪಾರ್ವತಿ ಸಿಲ್ಕ್ಸ್ ಬಿದ್ಕಲ್ಕಟ್ಟೆ ಆಡಳಿತ ಪಾಲುದಾರರಾದ. ದಿನೇಶ್ ಕುಲಾಲ್ ಮತ್ತು ಪ್ರಶಾಂತ ಕುಲಾಲ್ ಅವರನ್ನು ಸನ್ಮಾನಿಸಲಾಯಿತು. ಶಾಲಾ ಸುಣ್ಣ ಬಣ್ಣಕ್ಕೆ ದೇಣಿಗೆ ನೀಡಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ ಮತ್ತು ಸಮನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ವೆಬ್ಸೈಟ್ https://ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://bcwd.karnataka.gov.in ಸಹಾಯವಾಣಿ ಸಂಖ್ಯೆ: 8050770005 ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ದೂ.ಸಂಖ್ಯೆ: 1902 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೃಷಿ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಲು ರೈತರ ಶ್ರಮ ಮತ್ತು ಕೃಷಿಯಲ್ಲಿ ಸಕ್ರೀಯ ಪಾಲುಗಾರಿಕೆ ಕಾರಣವಾಗಿರುತ್ತದೆ. ಅಂತಹ ರೈತರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಪ್ರಶಸ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಮಳೆಯಾಶ್ರಿತ ಭತ್ತದ ಬೆಳೆ ಸ್ಪರ್ಧೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಜಿಲ್ಲೆಯ ರೈತರು ಹಾಗೂ ರೈತ ಮಹಿಳೆಯರು ವಿವಿಧ ಹಂತದ ಬೆಳೆ ಸ್ಪರ್ಧೆಗೆ ಅಗತ್ಯ ದಾಖಲಾತಿಗಳಾದ ಪಹಣಿ, ಜಾತಿ ಪ್ರಮಾಣ ಪತ್ರ, ರೈತರ ಛಾಯಾಚಿತ್ರ, ಗುರುತಿನ ಚೀಟಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳೊಂದಿಗೆ ಆಗಸ್ಟ್ 31 ರ ಒಳಗಾಗಿ ಸಿಟಿಝನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ಸೇವಾ ಕೆಂದ್ರ ಹಾಗೂ ಸ್ವತಃ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿ. ಎಸ್. ಬಿ ಮಹಿಳಾ ಮಂಡಳಿ ಗಂಗೊಳ್ಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರ ಆಶೀರ್ವಾದ, ಮಾರ್ಗದರ್ಶನದಲ್ಲಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವಿದ್ಯಾಧಿರಾಜ ಸಭಾಭವನದಲ್ಲಿ ಜರಗಿತು. ದೇವಳದ ತಾಂತ್ರಿಕ ಜಿ. ವಸಂತ ಭಟ್ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವೃತದ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ನಡೆಯಿತು. ಜಿಎಸ್ಬಿ ಸಮಾಜದ ಮುತ್ತೈದೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು. ದೇವಳದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ, ದೇವಳದ ಆಡಳಿತ ಮೊಕ್ತೇಸರ ಎನ್. ಸದಾಶಿವ ನಾಯಕ್, ಜಿ. ವೆಂಕಟೇಶ ನಾಯಕ್, ಜಿಎಸ್ಬಿ ಮಹಿಳಾ ಮಂಡಳಿ ಅಧ್ಯಕ್ಷೆ ನಿರ್ಮಲಾ ಡಿ. ನಾಯಕ್, ಕಾರ್ಯದರ್ಶಿ ವಿಜಯಶ್ರೀ ವಿ. ಆಚಾರ್ಯ, ಪುರೋಹಿತರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಜಿಎಸ್ಬಿ ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಸಮಾಜಬಾಂಧವರು, ಊರಿನ ಹತ್ತು ಸಮಸ್ತರು, ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ಗಣೇಶ್ ಕಾರ್ಣಿಕ್ ಅವರು ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸ್ವಾತಂತ್ರ್ಯದ ಕನಸುಗಾರರು ಸ್ವಾತಂತ್ರ್ಯವ ನಮಗೆ ಧಾರೆಯನೆರೆದರು. ಅದನ್ನು ನಾವು ಉಳಿಸೋಣ. ಉಳಿಸಿ ಮುಂದಕ್ಕೆ ಬೆಳೆಸೋಣ ಎಂಬ ಸಂದೇಶವನ್ನು ನೀಡಿದರು. ದೇಶಕ್ಕಾಗಿ ಬದುಕುವ ಮೂಲಕ ನಮ್ಮ ಸೈನಿಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಗೌರವಿಸಬೇಕು. ನಮ್ಮ ದೇಶವನ್ನು ನಮ್ಮ ತಾಯಿ ಎಂದು ಗೌರವಿಸಿ ಎಂಬ ವಿಶೇಷ ಸಂದೇಶದೊಂದಿಗೆ ಅವರು ಈ ದಿನದ ಮಹತ್ವದ ಕುರಿತು ಭಾಷಣ ಮಾಡಿದರು. ಧ್ವಜಾರೋಹಣದ ಬಳಿಕ ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ” ಕ್ರಿಯೇಟಿವ್ ಸವಿಗಾನ ” ಎಂಬ ಶೀರ್ಷಿಕೆಯಡಿ ದೇಶಭಕ್ತಿ ಗೀತೆ ಮತ್ತು ಸದಭಿರುಚಿಯ ಗೀತಗಾಯನ ಕಾರ್ಯಕ್ರಮ ‘ ಸಪ್ತಸ್ವರ ‘ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದ ಕೊನೆಯಲ್ಲಿ ಅತಿಥಿ ಅಭ್ಯಾಗತರೆಲ್ಲರನ್ನು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಎಲ್ಲರಿಗೂ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕಬೋಧಕೇತರ ವೃಂದದವರು, ವಿದ್ಯಾರ್ಥಿವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥರಾದ ರಾಜೇಶ್ ಶೆಟ್ಟಿಅವರು ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಲೋಹಿತ್ ಎಸ್. ಕೆ. ಅವರು ಕಾರ್ಯಕ್ರಮ ನಿರ್ವಹಣೆ ನಡೆಸಿಕೊಟ್ಟರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಕಾಂತಾರ ಸಿನಿಮಾದ ನಟನೆಗಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಮನರಂಜನಾ ಚಿತ್ರ ವಿಭಾಗದಲ್ಲಿಯೂ ‘ಕಾಂತಾರ’ ಸಿನಿಮಾಗೆ ಪ್ರಶಸ್ತಿ ಲಭಿಸಿದೆ. ಈ ಮೂಲಕ ಈ ಸಲದ ರಾಷ್ಟ್ರ ಪ್ರಶಸ್ತಿ ಪಟ್ಟಿಯಲ್ಲಿ ಕನ್ನಡದ ಸಿನಿಮಾಗಳು ಹೊಸ ದಾಖಲೆ ಬರೆದಿವೆ. ಹೊಂಬಾಳೆ ಫಿಲಂಸ್ ಬ್ಯಾನರ್ನಲ್ಲಿ ನಿರ್ಮಾಣವಾಗಿದ್ದ ಈ ಸಿನಿಮಾ, ಕೇವಲ 16 ಕೋಟಿ ಬಜೆಟ್ನಲ್ಲಿ ನಿರ್ಮಾಣವಾಗಿ, ಬರೋಬ್ಬರಿ 400 ಪ್ಲಸ್ ಕೋಟಿ ಗಳಿಕೆ ಕಂಡಿತ್ತು. 2022ರ ಸೆಪ್ಟೆಂಬರ್22ರಂದು ಕನ್ನಡದಲ್ಲಿ ಮಾತ್ರ ತೆರೆಕಂಡಿದ್ದ ಈ ಸಿನಿಮಾ, ಅದಾದ ಬಳಿಕ ಬೇರೆ ಭಾಷೆಗಳಿಗೂ ಡಬ್ ಆಗಿ ಮೋಡಿ ಮಾಡಿತ್ತು. ಇದೀಗ ಇದೇ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ಗರಿ ಮುಡಿಗೇರಿದೆ. 2022ರ ಜನವರಿ 1ರಿಂದ ಡಿಸೆಂಬರ್ 31 ಅವಧಿಯಲ್ಲಿ ಸೆನ್ಸಾರ್ ಆಗಿರುವ ಸಿನಿಮಾಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಇದೀಗ ಈ ಪ್ರಶಸ್ತಿ ಪಟ್ಟಿಯ ಪೈಕಿ ಅತ್ಯುತ್ತಮ ನಟ ಪ್ರಶಸ್ತಿಗಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಒಂದು ಯುನಿಟ್ ರಕ್ತದಿಂದ ಮೂವರು ವ್ಯಕ್ತಿಗಳ ಜೀವ ರಕ್ಷಣೆ ಮಾಡಲು ಸಾಧ್ಯವಿದೆ. ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಕೆಲವು ವಾರಗಳಲ್ಲಿ ದೇಹವು ರಕ್ತವನ್ನು ನವೀಕರಿಸಲು ಅನುವು ಮಾಡಿಕೊಡುವುದಲ್ಲದೇ ಪರೋಪಕಾರ ಮಾಡಿದಂತೆಯೂ ಆಗುತ್ತದೆ ಎಂದು ಕೆ.ಎಂ.ಸಿ ರಕ್ತನಿಧಿ ವಿಭಾಗದ ವೈದ್ಯ ಡಾ. ಆಶಿಷ್ ಚೋಪ್ರಾ ಹೇಳಿದರು. ಅವರು ರೋಟರಿ ಕ್ಲಬ್ ಬೈಂದೂರು ನೇತೃತ್ವದಲ್ಲಿ ಶ್ರೀ ನಾರಾಯಣಗುರು ಕಲಾ ಮತ್ತು ಕ್ರೀಡಾ ಸಂಘ ಬಿಜೂರು, ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಂಘ, ಶ್ರೀ ರಾಮಕ್ಷತ್ರಿಯ ಯುವಕ ಸಮಾಜ ಬೈಂದೂರು, ಆಸರೆ ಬಳಗ ಫಿಶರೀಸ್ ಕಾಲೋನಿ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಕೆ.ಎಂ.ಸಿ ರಕ್ತನಿಧಿ ವಿಭಾಗದ ಮೂಲಕ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು. ಆರೋಗ್ಯವಂತ ಮನಷ್ಯಗೆ ವರ್ಷದಲ್ಲಿ ನಾಲ್ಕು ಭಾರಿ ರಕ್ತದಾನ ಮಾಡಲು ಅವಕಾಶವಿದೆ. ಇದು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುವುದಲ್ಲದೇ ಜೀವನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾಂತಂತ್ರ್ಯೋತ್ಸವ ದಿನಾಚರಣೆ ಹಾಗೂ ಶಾಲಾ ವಾಹನ ಹಸ್ತಾಂತರ ಸಮಾರಂಭ ಗುರುವಾರ ಜರುಗಿತು. ಶಾಲೆಯ ಹಳೆ ವಿದ್ಯಾರ್ಥಿ, ಉದ್ಯಮಿ ಸುಭಾಷ್ ಪೂಜಾರಿ ಅವರು 9 ಲಕ್ಷ ಮೌಲ್ಯದ ಶಾಲಾ ವಾಹನವನ್ನು ಶಾಲೆಗೆ ಹಸ್ತಾಂತರಿಸಿದರು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಸುರೇಶ್ ಪೂಜಾರಿ ಧ್ವಜಾರೋಹಣ ನೆರವೇರಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ಶಂಕರ ಪೂಜಾರಿ, ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಯದರ್ಶಿ ಸುಧಾಕರ ಮೋಗವೀರ, ಎಸ್.ಡಿ.ಎಂ.ಸಿ ಸದಸ್ಯೆ ನಾಗವೇಣಿ, ವಿಧ್ಯಾರ್ಥಿ ನಾಯಕ ವಿನಿತ್ ಕುಮಾರ್, ಉಪಸ್ಥಿತರಿದ್ದರು. ಈ ಸಂದರ್ಭ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ ಸುಭಾಷ್ ಪೂಜಾರಿ ಹಾಗೂ ವಾಹನಕ್ಕೆ ಇಂಧನಕ್ಕೆ ಧನಸಹಾಯ ಮಾಡಿದ ಉದ್ಯಮಿ ರಾಜೇಶ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವಿ.ವಿ.ವಿ.ಮಂಡಳಿ ರಿ. ಇದರ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಅವರು ಧ್ವಜಾರೋಹಣಗೈದು, ದೇಶ ಬಿಡುಗಡೆಗಾಗಿ ಹೋರಾಟಗೈದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ, ರಾಷ್ಟ್ರೀಯ ಮನೋಭಾವನೆಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ಉಪಸ್ಥಿತರಿದ್ದು, ದೇಶಕ್ಕಾಗಿ ಹೋರಾಡುವ ಯೋಧರು, ಅನ್ನ ನೀಡುವ ರೈತ ಇವರು ನಮ್ಮ ದೇಶದ ರಿಯಲ್ ಹಿರೋಗಳೆಂದರು. ಸ್ವಾತಂತ್ರ್ಯ ಸಂಗ್ರಾಮದ ಯಶೋಗಾತೆಯನ್ನು ಸ್ಮರಿಸಿದರು. ಸಮಾರಂಭದಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ, ಕಾಲೇಜಿನ ಹಾಗೂ ಪ್ರೌಢಶಾಲೆಯ ಬೋಧಕ/ಬೋಧಕೇತರ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ ಸ್ವಾಗತಿಸಿ, ವಂದಿಸಿದರು.
