ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ಎಸ್.ಎನ್.ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಾಲೇಜು ವಿಭಾಗದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಕುಂದಾಪುರದ ವಿದ್ಯಾರ್ಥಿನಿ ನವಮಿ ಎಸ್ ಶೆಟ್ಟಿ ವಿಜಯಶಾಲಿಯಾಗುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ಮತ್ತು ಆಶಿತ್ ಶೆಟ್ಟಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೇವೆ, ಸ್ನೇಹ, ವೈವಿಧ್ಯತೆ, ಸಮಗ್ರತೆ ಮತ್ತು ನಾಯಕತ್ವ ಎಂಬ ಮೌಲ್ಯದ ಮೂಲಕ ನಿರಂತರವಾಗಿ ಸಮಾಜದ ಅಭ್ಯುದಯಕ್ಕಾಗಿ ಶ್ರಮಿಸುತ್ತಾ ಬಂದಿರುವ ರೋಟರಿ ಸಂಸ್ಥೆ ತನ್ನದೇ ಆದ ಸಾಮಾಜಿಕ ಮೌಲ್ಯಗಳನ್ನು ಹೊಂದಿದೆ. ಆರೋಗ್ಯ, ಶಿಕ್ಷಣ, ಸಮುದಾಯದ ಅರಿವು ಹಾಗೂ ಅಭಿವೃದ್ಧಿಯಲ್ಲಿ ರೋಟರಿ ಹೆಚ್ಚಿನ ಕಾರ್ಯ ಮಾಡುತ್ತಿದೆ ಎಂದು ರೋಟರಿ ಜಿಲ್ಲೆ 3182ರ ಗವರ್ನರ್ ಸಿಎ ದೇವ್ ಆನಂದ್ ಹೇಳಿದರು. ಅವರು ಮಂಗಳವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಜರುಗಿದ ಬೈಂದೂರು ರೋಟರಿ ಕ್ಲಬ್ಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ರೋಟರಿ ಸದಸ್ಯರು ತಮ್ಮ ಉದ್ಯೋಗ ಹಾಗೂ ಸೇವೆಯಲ್ಲಿ ನೈತಿಕ ಮೌಲ್ಯಗಳನ್ನು ಕಾಯ್ದುಕೊಂಡು ಕಾರ್ಯನಿರ್ವಹಿಸುವುದರಿಂದ ಸಮುದಾಯದಲ್ಲಿ ಗೌರವ ಹೆಚ್ಚುತ್ತದೆ. ಪ್ರತಿ ಸದಸ್ಯರಿಗೂ ನಾಯಕರಾಗುವ ಸಮಾನ ಅವಕಾಶವಿದ್ದು ಅಂತರಾಷ್ಟ್ರೀಯ ರೋಟರಿ ಅಧ್ಯಕ್ಷರಾಗುವ ತನಕವೂ ಮಕ್ತ ಅವಕಾಶವಿದೆ ಎಂದರು. ಈ ಸಂದರ್ಭ ಬೈಂದೂರು ರೋಟರಿ ಟ್ರಸ್ಟ್ ವತಿಯಿಂದ 5 ಮಂದಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನಸಹಾಯ, ಮಹಿಳಾ ರೊಟೆರಿಯನ್ಗಳ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್ಪೋಸ್ಟ್ ಎದುರಿನ ನಿವಾಸಿ ಬಶೀರ್ ಅಹ್ಮದ್ ಅವರ ಪುತ್ರ ಮುಬಾಶೀರ್ (30) ಅವರು ಸೌದಿ ಅರೇಬಿಯಾದಲ್ಲಿ ಹಠಾತ್ತನೆ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸೆ. 25ರಂದು ಮಧ್ಯಾಹ್ನ ಸಂಭವಿಸಿದೆ. ಮುಬಾಶೀರ್ ಅವರು ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿದ್ದರು. 2 ವರ್ಷದ ಹಿಂದೆ ಮಹಾರಾಷ್ಟ್ರದ ಪುಣೆಯ ಯುವತಿಯೊಂದಿಗೆ ವಿವಾಹವಾಘಿದ್ದು, ಬಳಿಕ ಪತ್ನಿಯೊಂದಿಗೆ ಸೌದಿಯಲ್ಲಯೇ ನೆಲೆಸಿದ್ದರು. ಮೃತರು ಪತ್ನಿ, ತಾಯಿ, ತಂದೆ ಹಾಗೂ ಸಹೋದರನನ್ನು ಅಗಲಿದ್ದಾರೆ. ಅವರು ಕುಂದಾಪುರದ ಎಚ್ ಎಂಎಂ ಶಾಲೆ, ವಿಕೆಟರ್ ಶಾಲೆ, ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪೂರೈಸಿ ಆನಂತರ ಭಟ್ಕಳದ ಅಂಜುಮಾನ್ ಕಾಲೇಜಿನಲ್ಲಿಎಂಜಿನಿಯರಿಂಗ್ ಪದವಿ ಪೂರೈಸಿ ಸೌದಿಗೆ ತೆರಳಿದ್ದರು. ಅಂತ್ಯಕ್ರಿಯೆ ವಿಧಿವಿಧಾನಗಳ ಬಗ್ಗೆ ಸೌದಿ ದೇಶದ ಕಾನೂನು ಪ್ರಕ್ರಿಯೆಗಳು ಮುಗಿದ ಅನಂತರವೇ ತಿಳಿದು ಬರಬೇಕಿದೆ. ಕಷ್ಟಕ್ಕೆ ನೆರವಾಗುತ್ತಿದ್ದರು:ಊರಿನಲ್ಲಿದ್ದಾಗ ಜನರ ಸಂಕಷ್ಟಕ್ಕೆ ನೆರವಾಗುತ್ತಿದ್ದ ಮುಬಾಶೀರ್ ಅವರು 4 ವರ್ಷಗಳ ಹಿಂದೆ ತ್ರಾಸಿ – ಮರವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಿಂದ ವಾರಕ್ಕೆ ಎರಡು ದಿನ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ ಅಥವಾ ಚಿಕ್ಕಿ ಬಾಳೆಹಣ್ಣು ಇವುಗಳನ್ನು ವಿತರಿಸಲಾಗುತ್ತಿತ್ತು. ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ವಾರದ ನಾಲ್ಕು ದಿನಗಳ ಕಾಲ ಹೆಚ್ಚುವರಿಯಾಗಿ ನೀಡುವ ಕಾರ್ಯಕ್ರಮಕ್ಕೆ ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಬೋರ್ಡ್ ಹೈ ಸ್ಕೂಲ್)ನಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲಬಾರದು.ಭೌತಿಕವಾಗಿ ಮತ್ತು ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಈ ಯೋಜನೆಯು ಸಹಕಾರಿಯಾಗಿದ್ದು, ಸರಕಾರ ರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ವಾರದ ಎಲ್ಲಾ ದಿನಗಳಲ್ಲೂ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲು ರೂಪಾಯಿ 1500 ಕೋಟಿ ಮಿಕ್ಕಿ ಅನುದಾನವನ್ನು ನೀಡಿರುವ ಕ್ರಮ ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ, ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರುವ ಹಾಗೂ ಕನಿಷ್ಠ ಒಂದು ಎಕರೆ ವಿಸ್ತೀರ್ಣ ಸ್ವಂತ ಜಮೀನು ಹೊಂದಿರುವ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವಜನತೆಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಅವುಗಳಿಂದ ದೂರ ಉಳಿಯುವಂತೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವೀಡಿಯೋ ಕಾನ್ಸ್ರೆನ್ಸ್ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆ ಕುರಿತ ಎರಡನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವಜನತೆ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಮಾದಕ ವಸ್ತುಗಳಿಗೆ ಮಾರು ಹೋಗಿ ತಮ್ಮ ಶಿಕ್ಷಣದಿಂದ ವಂಚಿತ ಆಗುವುದರ ಜೊತೆಗೆ ತಮ್ಮ ಅರೋಗ್ಯವನ್ನು ಹಾಳುಮಾಡಿಕೊಂಡು ಭವಿಷ್ಯದ ಜೀವನವು ಉತ್ತಮವಾಗದೇ ಸಮಾಜದಲ್ಲಿ ಗೌರವವನ್ನು ಕಳೆದುಕೊಳ್ಳುವ ಸಾಧ್ಯತೆಗಳು ಇರುತ್ತವೆ. ಯುವಜನರಿಗೆ ಮಾದಕ ವಸ್ತುಗಳ ಸೇವನೆಯಿಂದ ದೂರ ಉಳಿಯುವ ಹಾಗೆ ಅರಿವು ಮೂಡಿಸುವುದು ಪೋಷಕರು, ಶಾಲಾ-ಕಾಲೇಜಿನ ಶಿಕ್ಷಣ ಸಂಸ್ಥೆಯವರು ಹಾಗೂ ಸರಕಾರದ ಪ್ರತಿನಿಧಿಗಳಾದ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದನ್ನು ಆದ್ಯತೆಯ ಮೇಲೆ ಮಾಡಬೇಕು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬ್ಯಾಂಕ್ಗಳ ಮ್ಯಾನೆಜರ್ಗಳು ಹಾಗೂ ಸಿಬ್ಬಂದಿಗಳು ಜನಸಾಮಾನ್ಯರೊಂದಿಗೆ ಬ್ಯಾಂಕಿನ ವ್ಯವಹಾರಗಳ ಕುರಿತು ಸ್ಥಳೀಯ ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ವ್ಯವಹರಿಸುವುದರಿಂದ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಕೃತ ಬ್ಯಾಂಕುಗಳ ಹೆಸರು ಹಾಗೂ ಸ್ಥಳಗಳನ್ನು ಬ್ಯಾಂಕುಗಳ ಬೋರ್ಡುಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಅಳವಡಿಸಬೇಕು. ಗ್ರಾಹಕರೊಂದಿಗೆ ಸಂವಹನ ಮಾಡಲು ಅನುಕೂಲವಾಗುವಂತೆ ಸ್ಥಳೀಯ ವ್ಯಕ್ತಿಗಳನ್ನು ನೇಮಿಸುವಂತೆ ತಿಳಿಸಿದರು. ಸಾರ್ವಜನಿಕರ ಜೀವನಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳು ಜಾರಿಯಲ್ಲಿವೆ. ಈ ಕುರಿತು ಬ್ಯಾಂಕ್ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜನಸಾಮಾನ್ಯರಿಗೆ ವ್ಯವಹಾರ ಚಟುವಟಿಕೆಗಳ ಕುರಿತು ಅರಿವು ಮೂಡಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಜನರನ್ನು ಯೋಜನೆಯ ಫಲಾನುಭವಿಗಳನ್ನಾಗಿಸಲು ಕ್ರಮ ವಹಿಸಬೇಕು ಎಂದರು. ಜಿಲ್ಲೆಯ ಬ್ಯಾಂಕ್ಗಳಲ್ಲಿ ಕಳೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಪಲ್ಟಿಯಾಗಿ ಐವರು ಗಾಯಗೊಂಡ ಘಟನೆ ಇಡೂರು ಕುಂಜ್ಞಾಡಿ ಸಮೀಪದ ಜನ್ನಾಲ್ ಎಂಬಲ್ಲಿ ಬಧವಾರ ಸಂಜೆ ನಡೆದಿದೆ. ಕೊಲ್ಲೂರಿನಿಂದ ತೆರಳುತ್ತಿದ್ದ ಮೆಣಸು ಸಾಗಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಕುಂದಾಪುರದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿ ಜನ್ನಾಲ್ ಎಂಬಲ್ಲಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಪಿಕ್ ಆಫ್ ವಾಹನ ಚಾಲಕ ನಿರ್ವಾಹಕರು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ರಾಘವೇಂದ್ರ (43) ವಾಸಿಂ (30) ಅಮೃತಾ (17), ಪ್ರತ್ಯಸ್ಥಿ (16), ಅಖಿತ್ (28) ಎಂದು ಗುರುತಿಸಲಾಗಿದೆ. ಗಾಯ ಗೊಂಡವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಅಪಘಾತದ ಪರಿಣಾಮ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. ಬಸ್ಸಿನಲ್ಲಿ ಮೂವತ್ತಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ” ಎಂಜಿನಿಯರಿಂಗ್, ಮೆಡಿಕಲ್ ಅಥವಾ ಇನ್ಯಾವುದೇ ವಾಣಿಜ್ಯ, ತಾಂತ್ರಿಕ ಕ್ಷೇತ್ರದಲ್ಲಿ ವ್ಯಾಸಂಗ ಮಾಡಿದವರೂ ಕೂಡ ಸೈನ್ಯವನ್ನು ಸೇರಿ ಸೇವೆ ಸಲ್ಲಿಸಬಹುದು. ಆಗ ಅದು ಶ್ರೇಷ್ಠವಾದ ದೇಶಸೇವೆಯಾಗುವುದೇ ಹೊರತು ವ್ಯಕ್ತಿಗತವಾದ ಹುದ್ದೆಯಾಗಿರುವುದಿಲ್ಲ. ಈ ನಿಟ್ಟಿನಲ್ಲಿ ನನ್ನ ಏಳಿಗೆಗೆ ಕಾರಣವಾದ ಆರ್.ಎನ್.ಎಸ್ ಪಿ.ಯು.ಕಾಲೇಜಿಗೆ ಕೃತಜ್ಞನಾಗಿದ್ದೇನೆ ” ಎಂದು ಭಾರತೀಯ ಭೂಸೈನ್ಯದಲ್ಲಿ ಲೆಫ್ಟಿನೆಂಟ್ ಹುದ್ದೆಗೆ ನೇಮಕಾತಿ ಹೊಂದಿದ ಕಾಲೇಜಿನ ಹೆಮ್ಮೆಯ ಹಳೆ ವಿದ್ಯಾರ್ಥಿ ಭರತ್ ಬಾಬು ದೇವಾಡಿಗ ಅವರು ಹೇಳಿದರು. ಕಾಲೇಜಿನ ವತಿಯಿಂದ ಹಮ್ಮಿಕೊಂಡ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾಲೇಜಿನ ಉಪನ್ಯಾಸಕಿಯರು ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ ಅವರಿಗೆ ಆರತಿ ಬೆಳಗಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿ ಅವರು ಮಾತನಾಡಿ , ಅತ್ಯಂತ ಕಠಿಣವಾದ ಭಾರತೀಯ ಸೇನಾ ಹುದ್ದೆಯಲ್ಲಿ ಭರತ್ ಬಾಬುರವರು ತಮ್ಮ ಪರಿಶ್ರಮ ಮತ್ತು ದಕ್ಷತೆಯಿಂದ ಯಶಸ್ಸುಗಳಿಸಲಿ ಎಂದು ಶುಭ ಹಾರೈಸಿದರು. ಉಪಪ್ರಾಂಶುಪಾಲರಾದ ಪ್ರೀತೇಶ್ ಶೆಟ್ಟಿ ಅವರು ವೇದಿಕೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಕಡ್ಡಾಯ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಜಾರಿ ಹೆಣ್ಣುಮಕ್ಕಳಿಗೆ ಶಾಲೆ ಆರಂಭ, ಶೇ100 ಪರಿಶುದ್ಧ ಶ್ರೀಗಂಧದ ಎಣ್ಣೆಯ ಸಾಬೂನು (ಮೈಸೂರು ಸ್ಯಾಂಡಲ್ ಸೋಪ್) ಉತ್ಪಾದನೆ, ಭಾರತದ ಮೊಟ್ಟಮೊದಲ ಚುನಾವಣೆ, ಮೊದಲ ವಿಮಾನ ನಿರ್ಮಾಣ, ಕುಟುಂಬ ಕಲ್ಯಾಣ ಯೋಜನೆ ಜಾರಿಗೊಳಿಸಿದ ಹೆಗ್ಗಳಿಕೆ ಮೈಸೂರಿನ ನಾಲ್ವಡಿ ಕೃ?ರಾಜ ಒಡೆಯರ್ ಅವರಿಗೆ ಸಲ್ಲುತ್ತದೆ ಎಂದು ಸಿವಿಲ್ ಎಂಜಿನಿಯರ್, ಮೆಟ್ರೋ ಪೊಲಿಟನ್ ಇತಿಹಾಸಕಾರ ಮತ್ತು ಸೋಶಿಯಲ್ ಮೀಡಿಯಾ ಇನ್ಫ್ಲ್ಯೂವೆನ್ಸರ್ ಧರ್ಮೇಂದ್ರ ಕುಮಾರ್ ಹೇಳಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ’ರೋಸ್ಟ್ರಮ್- ವಾಗ್ಮಿಗಳ ವೇದಿಕೆ’ ವತಿಯಿಂದ ಮಂಗಳವಾರ ನಡೆದ ’ಕರ್ನಾಟಕದ ಇತಿಹಾಸ’ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ವಿದ್ಯೆಗೆ ನೀಡಿದ ಪ್ರಾಮುಖ್ಯತೆ, ಪರಿಚಯಿಸಿದ ಲಸಿಕೆ, ಕುರುಡರಿಗಾಗಿ ಬ್ರೈಲ್ ಲಿಪಿ ತಂದಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ ಎಂದರು. ಕನ್ನಂಬಾಡಿ ಕಟ್ಟೆಯ ನಿರ್ಮಾಣ, ಮಹಾಯುದ್ಧದ ಖರ್ಚು ಭರಿಸಿರುವುದು, ಸ್ವಾತಂತ್ರ್ಯದತ್ತ ಇಟ್ಟ ಹೆಜ್ಜೆ, ಸ್ವತಂತ್ರ ಭಾರತದಲ್ಲಿ ಸರ್ಕಾರ ರಚನೆಗೆ…
