ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಸರಕಾರಿ ಅಸ್ಪತ್ರೆಯ ಆಡಳಿತಾಧಿಕಾರಿ ರಾಬರ್ಟ್ ರೆಬೆಲ್ಲೋ ರವರ ಮಾನಸಿಕ ಮತ್ತು ಲೈಂಗಿಕ ಕಿರುಕುಳ ಘಟನೆಯು ಈ ಆಸ್ಪತ್ರೆಗೆ ಕಪ್ಪುಚುಕ್ಕಿಯಾಗಿದ್ದು ಪ್ರಕರಣದ ಸತ್ಯತೆಯನ್ನು ಮರೆಮಾಚದೇ ಇಲಾಖಾ ವತಿಯಿಂದ ತನಿಖೆ ನಡೆಸಿ ಅವರ ಅಮಾನತಿಗೆ ಶಿಪಾರಸ್ಸು ಮಾಡಿ ಮೇಲಾಧಿಕಾರಿಗಳಿಗೆ ವಿಸ್ತ್ರತ ವರದಿಯನ್ನು ನೀಡಬೇಕೆಂದು ಕುಂದಾಪುರ ಸಾರ್ವಜನಿಕ ನಿಯೋಗ ಮನವಿ ಮಾಡಿದೆ. ಕುಂದಾಪುರ ತಾಲೂಕು ಸರಕಾರಿ ಅಸ್ಪತ್ರೆಯು ಜಿಲ್ಲೆಯಲ್ಲಿಯೇ ಹೆಸರುವಾಸಿಯಾಗಿದ್ದು ತಾಲೂಕು ಮಾತ್ರವಲ್ಲದೇ ಹೊರ ಜಿಲ್ಲೆಗಳಿಂದಲೂ ಕೂಡ ಚಿಕಿತ್ಸೆಗಾಗಿ ಕುಂದಾಪುರ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಬರುತ್ತಿದ್ದು ಇಲ್ಲಿನ ಕುಂದಾಪುರದ ನಾಗರಿಕರು ತಲೆ ತಗ್ಗಿಸುವಂತಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಈಶ್ವರ್ ಗಢಾದ್ರವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಲತಾ, ಸಹಾಯಕ ಆಡಳಿತಾಧಿಕಾರಿ ಲಿನೋರಾ ಮಸ್ಕೇರನಾಸ್ ಕಚೇರಿ ಅಧೀಕ್ಷರಾದ ಶಾಲಿ ಉಪಸ್ಥಿತರಿದ್ದರು. ಕುಂದಾಪುರ ಸಾರ್ವಜನಿಕ ನಿಯೋಗದಲ್ಲಿ ರಾಜೇಶ್ ಕಾವೇರಿ, ಹೇರಿಕುದ್ರು ಸುನಿಲ್ ಶೆಟ್ಟಿ, ಬಲ್ಲಾಳ್ ಕಿಶೋರ್, ಪುರಸಭಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೂನ್ 01 ರಂದು ಶ್ರೀವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಟೆಂಶನ್ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ವಹಿಸಿದ್ದರು. ಸಿಎ ಗೋಪಾಲ ಕೃಷ್ಣ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ಕೋರ್ಸ್ ಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಹಾಗೆಯೇ ವಿದ್ಯಾರ್ಥಿಗಳಿಗೆ ಅಂಕಗಳಿಗಿಂತ ಕೌಶಲ್ಯ ಮುಖ್ಯ, ವಿದ್ಯಾರ್ಥಿಗಳು ಮನಸ್ಸಿನಲ್ಲಿ ಕೀಳರಿಮೆ ಬೆಳಸಿಕೊಳ್ಳದೇ ಸಾಧನೆಯ ಜೀವನ ನಿಮ್ಮದಾಗಬೇಕು ಎನ್ನುವ ಕಿವಿ ಮಾತನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಲತಾ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲೆಕ್ಕ ಶಾಸ್ತ್ರ ಉಪನ್ಯಾಸಕ ಸುಶಾಂತ್ ನಾಯಕ್ ಸಿಎ ಗೋಪಾಲಕೃಷ್ಣ ಭಟ್ ಅವರನ್ನು ಪರಿಚಯಿಸಿದರು. ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಸ್ವಾಗತಿಸಿದರು , ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ನಿಧಿ ವಂದಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ್ ಕಾರ್ಯಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ ವತಿಯಿಂದ ಇಲ್ಲಿನ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ‘ಸಾಹಿತ್ಯ ಸಹವಾಸ’ ಎಂಬ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಡಿಯೊ ಸರಣಿಯನ್ನು ಬಿಡುಗಡೆ ಮಾಡಿದ ನಾಡಿನ ಹಿರಿಯ ಸಾಹಿತಿ ಮತ್ತು ಚಿಂತಕ ಲಕ್ಷ್ಮೀಶ ತೋಳ್ಪಾಡಿಯವರು ಮಾತನಾಡಿ “ಮನಸ್ಸು ಮುಟ್ಟಬಹುದಾದ ಸೂಕ್ಷ್ಮಾತಿಸೂಕ್ಷ್ಮವಾದ ಲಹರಿಗಳನ್ನು, ಅಸ್ತಿತ್ವದ ಬಿಂದುಗಳನ್ನು ಈ ನೆಲದ ಮೂವರು ಮಹನೀಯರಾದ ಕಾರಂತರು, ಅನಂತಮೂರ್ತಿ ಮತ್ತು ಅಡಿಗರು ಮುಟ್ಟಿದವರು. ಅಡಿಗರು ಸಿದ್ಧಶೈಲಿಯಿಂದ ಹೊರಟು ಹೊಸಹುಟ್ಟು ಅಥವಾ ತಾವು ಪಡೆಯಬೇಕಾದ ನಾವೀನ್ಯತೆಯ ಅನುಕೂಲದ ಅನಿವಾರ್ಯತೆಯನ್ನು ತೋರಿಸಿಕೊಟ್ಟವರು ಎಂದು ಬಣ್ಣಿಸಿದರು.ಕಾರಂತರದು ಸ್ವಯಂಕೃತ ವ್ಯಕ್ತಿತ್ವ. ತಮ್ಮದಾರಿ ಮತ್ತು ಅಭಿವ್ಯಕ್ತಿಯನ್ನು ತಾನೇ ಕಂಡುಕೊಂಡವರು. ಅದೊಂದು ಚಾರಿತ್ರಿಕ ಸ್ಥಿತಿಯಷ್ಟೇ ಅಲ್ಲ, ಅದಕ್ಕೆ ಅವರ ವ್ಯಕ್ತಿತ್ವದ ಪ್ರಯೋಗಶೀಲತೆಯೂ ಕಾರಣ. ಅವರದು ಲಿಪಿಬದ್ಧ ಸಂಪ್ರದಾಯ ಕಡಿಮೆ. ಮೌಖಿಕ ಸಂಪ್ರದಾಯವೇ ಹೆಚ್ಚು. ವೇಗ, ತಾತ್ಕ್ಷಣಿತ ಪ್ರವೃತ್ತಿ ಅವರಲ್ಲಿ ಎದ್ದು ಕಾಣುವ ಗುಣಗಳು. ಅವರದು ಕಾಯುವಿಕೆಗೆ ಒಗ್ಗದ ಅಸಲು ಕಸುಬು. ಶಾಸ್ತ್ರಕ್ಕಿಂತ ಅವರಿಗೆ ಮನೋಧರ್ಮ ಪ್ರಧಾನವಾಗಿರುವ ಭಾವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿಗಳಿಗೆ ಬಸ್ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices ಮೂಲಕ ಉಚಿತವಾಗಿ ಹಾಗೂ ಕರ್ನಾಟಕ -ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ರೂ. 30/- ಸೇವಾ ಶುಲ್ಕವನ್ನು ಪಾವತಿಸಿ, ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಬಸ್ಸು ಪಾಸುಗಾಗಿ ಅರ್ಜಿ ಸಲ್ಲಿಸಲು ಡಿಕ್ಲರೇಷನ್ ಫಾರ್ಮ್ ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ನಿಗಮದ ವೆಬ್ಸೈಟ್ನಲ್ಲಿ https://ksrtc.karnataka.gov.in/ ನ್ನು ಡೌನ್ಲೋಡ್ ಮಾಡಿಕೊಂಡು, ಡಿಕ್ಲರೇಷನ್ ಫಾರ್ಮ್ ಅನ್ನು ಭರ್ತಿ ಮಾಡಿ ಶಾಲಾ/ಕಾಲೇಜು ಮುಖೋಪಾಧ್ಯಾಯರ/ಪ್ರಾಂಶುಪಾಲರ ಸಹಿ ಮತ್ತು ಶಾಲಾ/ಕಾಲೇಜು ಮೊಹರಿನೊಂದಿಗೆ ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡಬೇಕು. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರನ್ ಹೆಸರು/ವಿಳಾಸ ಮಾಹಿತಿಯನ್ನು ಅರ್ಜಿ ಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿಗಳು ಆಯ್ಕೆ ಮಾಡಿದ ಫಾರ್ಮ್ಗೆ ತೆರಳಿ, ನಿಗದಿತ ಪಾಸಿನ ಶುಲ್ಕ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ. ರಾಜ್ಯ ಸರಕಾರವು ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ವಿಶಿಷ್ಟ ರೀತಿಯಲ್ಲಿ ಸಂಪ್ರದಾಯಬದ್ಧವಾಗಿ ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕಾಶೀನಾಥ ಪಿ. ಪೈ ಮತ್ತು ಸಂಚಾಲಕ ಎನ್. ಸದಾಶಿವ ನಾಯಕ್ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಸರಕಾರದಿಂದ ನೀಡಲಾದ ಪಠ್ಯಪುಸ್ತಕ ಹಾಗೂ ಶಾಲಾ ಆಡಳಿತ ಮಂಡಳಿ ವತಿಯಿಂದ ನೀಡಲಾದ ಸಮವಸ್ತ್ರ, ಬೆಲ್ಟ್ಗಳನ್ನು ವಿತರಿಸಿ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಜಿ.ಅಜಿತ್ ಭಟ್, ಶಾಲೆಯ ಶಿಕ್ಷಕರಾದ ಮಹಾಬಲ ಆಚಾರ್ಯ, ದೇವು, ಲಕ್ಷ್ಮೀ ಖಾರ್ವಿ, ರೇಖಾ ಖಾರ್ವಿ, ಮಮತಾ ಖಾರ್ವಿ, ಭೂದೇವಿ, ಅಕ್ಷತಾ ವಿನಯ್, ಅಂಗನವಾಡಿ ಕಾರ್ಯಕರ್ತೆ ಕಮಲಾ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 10 ರ್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 21ನೇ ರ್ಯಾಂಕ್, ಬಿ.ಎನ್.ವೈ.ಎಸ್. ವಿಭಾಗದಲ್ಲಿ 24ನೇ ರ್ಯಾಂಕ್, ಬಿ.ಎಸ್.ಸಿ. ನರ್ಸಿಂಗ್ ವಿಭಾಗದಲ್ಲಿ 33 ನೇ ರ್ಯಾಂಕ್, ಪಶು ವೈದ್ಯಕೀಯ ವಿಭಾಗದಲ್ಲಿ 33ನೇ ರ್ಯಾಂಕ್, B-ಫಾರ್ಮ್ ಮತ್ತು D-ಫಾರ್ಮ್ ವಿಭಾಗಗಳಲ್ಲಿ 49 ನೇ ರ್ಯಾಂಕ್ ಗಳಿಸಿದ್ದಾರೆ. ವಿದ್ಯಾರ್ಥಿ ಶರತ್ ಹೆಚ್. ಪಿ. ಪಶು ವೈದ್ಯಕೀಯ ವಿಭಾಗದಲ್ಲಿ 26 ನೇ ರ್ಯಾಂಕ್, ಕೃಷಿ ವಿಜ್ಞಾನ ವಿಭಾಗದಲ್ಲಿ 37 ನೇ ರ್ಯಾಂಕ್ ಪಡೆದು ಶ್ಲಾಘನೀಯ ಸಾಧನೆ ಮಾಡಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 2024-25ನೇ ಶೈಕ್ಷಣಿಕ ಸಾಲಿನ ಎಲ್ ಕೆ ಜಿ ಯಿಂದ ಪಿ ಯು ಸಿ ವರೆಗಿನ ದಾಖಲಾತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದ್ದು, ಗುಣಮಟ್ಟದ ಶಿಕ್ಷಣ ಹೊಂದಿರುವ ಸಂಸ್ಥೆಯತ್ತ ಪೋಷಕರು ಒಲವು ತೋರಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದರಿಂದ ಸಿದ್ದಾಪುರ ಊರಿನ ಮಕ್ಕಳಿಗಾಗಿ ಬೇರೆ ವಾಹನ ವ್ಯವಸ್ಥೆ ಮಾಡಲಾಗಿದೆ. ಕಂಡ್ಲೂರು, ಗುಂಹೊಲ, ಬೇಳೂರು ಹಾಗೂ ಕೋಟೇಶ್ವರ ಈ ಮಾರ್ಗಗಳಿಗೆ ಹೊಸದಾಗಿ ವಾಹನ ಸೌಲಭ್ಯ ಒದಗಿಸಲು ಆಡಳಿತ ಮಂಡಳಿ 4 ಹೊಸ ಬಸ್ಸುಗಳನ್ನು ಖರೀದಿಸಿದೆ. ಮಂಗಳೂರಿನ ಅಮರಜ್ಯೋತಿ ಆಟೋಮೊಬೈಲ್ಸ್ ಜನರಲ್ ಮ್ಯಾನೇಜರ್ ರಾನ್ಸನ್ ಮಚಾಡೊ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ನ ಆಡಳಿತ ಅಧಿಕಾರಿಗಳಾದ ರೆನಿಟಾ ಲೋಬೊ ಮತ್ತು ಶಮಿತಾ ರಾವ್ ಇವರಿಗೆ ಕೀ ಮತ್ತು ಹೂಗುಚ್ಚ ನೀಡಿ ವಾಹನ ಹಸ್ತಾಂತರಿಸಿದರು.
ಕುಂದಾಪ್ರ ಡಾಟ್ ಕಾಂ ಮಾಹಿತಿ.ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ಜೂನ್ 03 ರಂದು ಬೆಳಗ್ಗೆ 08 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಮತಯಂತ್ರಗಳನ್ನು ಬಳಕೆ ಮಾಡುವುದಿಲ್ಲ. ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಗೆದ್ದ ಅಭ್ಯರ್ಥಿಯನ್ನು ಘೋಷಣೆ ಮಾಡುವುದರಿಂದ ಸರಿಯಾಗಿ ಮತದಾನ ಮಾಡಬೇಕು. ಇಲ್ಲವಾದಲ್ಲಿ ಮತ ಅಸಿಂಧುವಾಗುತ್ತದೆ. ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಅರ್ಹ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲಿದ್ದಾರೆ. ಮತದಾರರ ಮತಗಟ್ಟೆಯ ಭಾಗ ಮತ್ತು ಕ್ರಮ ಸಂಖ್ಯೆ, ಹೆಸರು ಮತ್ತು ಮತದಾನ ಕೇಂದ್ರದ ಸ್ಥಳದ ಬಗ್ಗೆ ಮಾಹಿತಿ ಹೊಂದಿರುವ ಮತದಾರರ ಚೀಟಿಯನ್ನು ಒದಗಿಸಲಾಗಿದೆ. ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ (ಎಪಿಕ್) ಅಥವಾ ಆಧಾರ್ಕಾರ್ಡ್, ಚಾಲನಾ ಪರವಾನಗಿ, ಪಾನ್ ಕಾರ್ಡ್, ರಾಜ್ಯ ಮತ್ತು ಕೇಂದ್ರ ಸರ್ಕಾರ, ಸಾರ್ವಜನಿಕ ವಲಯದ ಉದ್ಯಮಗಳು, ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕೆಗಳಿಂದ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಚೀಟಿ, ಎಂಪಿ, ಎಂಎಲ್ಎ, ಎಂಎಲ್ಸಿಗಳಿಗೆ ನೀಡಲಾದ ಅಧಿಕೃತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾದ ಘಟನೆ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉದ್ಯಮಿ ಶ್ರೇಯಸ್ ನಾಯ್ಕ (25) ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ದಾಖಲಾಗಿದೆ. ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಆರು ಕ್ಷೇತ್ರಗಳಿಗೆ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು, ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೋಜೇಗೌಡ ಮೊದಲ ಪ್ರಾಶಸ್ತ್ಯದ ಮತದಲ್ಲೇ ಗೆಲ್ಲುತ್ತಾರೆಂಬ ವಿಶ್ವಾಸ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ತಾಲೂಕಿನ ಕುಂಭಾಶಿಯ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಶ್ವರಪ್ಪ, ಧನಂಜಯ ಸರ್ಜಿ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಚರ್ಚೆ ಮಾಡಿದ್ದಾರೆ. ನಾನು ದೇವಸ್ಥಾನದ ಮುಂದೆ ನಿಂತು ಹೇಳುತ್ತಿದ್ದೇನೆ. ಅಭ್ಯರ್ಥಿ ಯಾರು ಎಂದು ಚರ್ಚೆ ಆದಾಗ ಈಶ್ವರಪ್ಪನವರೇ ಡಾ. ಸರ್ಜಿ ಅವರನ್ನು ಸೂಚಿಸಿದ್ದು ಡಾ. ಧನಂಜಯ ಸರ್ಜಿ ಸಜ್ಜನರಾಗಿದ್ದು ಅವರಿಗೆ ಅವಕಾಶ ಕೊಡಬೇಕು ಎಂದು ಅಭಿಪ್ರಾಯ ಹೇಳಿದ್ದ ಈಶ್ವರಪ್ಪ ಹಿಂದೆ ಹೇಳಿದ್ದನ್ನು ಮರೆತಿದ್ದಾರೆ ಎಂದು ಭಾವಿಸುತ್ತೇನೆ ಎಂದರು. ಬಿಜೆಪಿ ಒಟ್ಟಾಗಿ ಶ್ರಮ ಹಾಕುತ್ತಿದೆ. ಯಾವುದೇ ಗೊಂದಲ ಇಲ್ಲದೆ ನಮ್ಮ ಶಾಸಕರು, ನಾಯಕರು ಕೆಲಸ ಮಾಡುತ್ತಿದ್ದಾರೆ. ಅಭ್ಯರ್ಥಿಗಳನ್ನ ಗೆಲ್ಲಿಸುತ್ತದೆ ಎಂದ ವಿಜಯೇಂದ್ರ, ಜೂನ್…
