Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವ-2024ರ ಲಾಂಛನ ಬಿಡುಗಡೆ ಸಮಾರಂಭದ ಪ್ರಯುಕ್ತ ಉತ್ತಮ ಮಳೆ, ಮತ್ಸ್ಯಕ್ಷಾಮ ನಿವಾರಣೆಗಾಗಿ ಮತ್ತು ಗ್ರಾಮ ಸುಭಿಕ್ಷೆಗಾಗಿ ಗಂಗೊಳ್ಳಿಯಿಂದ ಕುಂಭಾಶಿವರೆಗೆ ಬೃಹತ್ ಪಾದಯಾತ್ರೆ ಭಾನುವಾರ ನಡೆಯಿತು. ಗಂಗೊಳ್ಳಿಯ ಕಲೈಕಾರ್ ಮಠ ಶ್ರೀ ನಗರ ಮಹಾಕಾಳಿ ದೇವಸ್ಥಾನದ ಸಮೀಪ ಚಂದ್ರ ಖಾರ್ವಿ ಗಂಗೊಳ್ಳಿ ಪಾದಯಾತ್ರೆಗೆ ಚಾಲನೆ ನೀಡಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಜಿ.ಭಾಸ್ಕರ ಕಲೈಕಾರ್ ದೀಪ ಪ್ರಜ್ವಲಿಸಿದರು. ಗಂಗೊಳ್ಳಿಯಿಂದ ಆರಂಭಗೊಂಡ ಪಾದಯಾತ್ರೆ ಕುಂಭಾಶಿಯ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪ ಸಮಾಪನಗೊಂಡಿತು. ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಗೌರವಾಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ, ಅಧ್ಯಕ್ಷ ಸತೀಶ್ ಜಿ., ಪ್ರಧಾನ ಕಾರ್ಯದರ್ಶಿ ನಿತಿನ್ ಖಾರ್ವಿ, ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಮಹಿಳಾ ಸಮಿತಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ, ಕಾರ್ಯದರ್ಶಿ ಸುಜಾತಾ ಬಾಬು ಖಾರ್ವಿ, ಪುರೋಹಿತರಾದ ಜಿ.ರಾಘವೇಂದ್ರ ನಾರಾಯಣ ಆಚಾರ್ಯ, ಸುವರ್ಣ ಮಹೋತ್ಸವ ಸಮಿತಿ ಸದಸ್ಯರು, ಮಹಿಳಾ ಸಮಿತಿ ಸದಸ್ಯರು, ಭಜಕರು ಪಾದಯಾತ್ರೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ. ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಾದ್ಯಂತ ಜೂನ್ 1 ರಂದು ಸಂಜೆ 4 ಗಂಟೆಯಿಂದ ಜೂನ್ 3 ರ ಮಧ್ಯರಾತ್ರಿ 12 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಲರಿ, ಸ್ಟಾರ್ ಹೋಟೆಲ್‌ಗಳಲ್ಲಿ, ಶೇಂದಿ ಅಂಗಡಿ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು ಜುಲೈ/ಆಗಸ್ಟ್ 2023ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಕಾಲೇಜಿಗೆ ಒಟ್ಟು ಐದು ರ್ಯಾಂಕ್ ದೊರಕಿವೆ. ಬಿ.ಎ. ಪದವಿ ಪರೀಕ್ಷೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ನಾಗರಾಜ್ ನಾಯಕ್ ಮತ್ತು ಜಯಂತಿ ನಾಯಕ್ ಅವರ ಪುತ್ರಿ ವರೇಣ್ಯ ನಾಯಕ್ ಅವರಿಗೆ ಪ್ರಥಮ ರ್ಯಾಂಕ್ ದೊರೆತಿದೆ. ಬಿಸಿಎ ಪದವಿ ಪರೀಕ್ಷೆಯಲ್ಲಿ ಬೈಂದೂರು ತಾಲೂಕಿನ ಶಾಜಿ ಜಾರ್ಜ್ ಮತ್ತು ಲಿಟ್ಟಿ ಮೋಲ್ ಅವರ ಪುತ್ರಿ ಸ್ಯಾಂಡ್ರಮೋಲ್ ಶಾಜಿ ಅವರಿಗೆ ದ್ವಿತೀಯ ರ್ಯಾಂಕ್, ಹೆಮ್ಮಾಡಿ ಗ್ರಾಮದ ಕೃಷ್ಣ ಪೂಜಾರಿ ಮತ್ತು ಬೇಬಿ ಪೂಜಾರಿ ಅವರ ಪುತ್ರಿ ಸ್ಮಿತಾ ಅವರಿಗೆ ನಾಲ್ಕನೇ ರ್ಯಾಂಕ್, ಕಿರಿಮಂಜೇಶ್ವರ ಗ್ರಾಮದ ವಾಸುದೇವ ನಾವಡ ಮತ್ತು ಕಮಲಾಕ್ಷಿ ನಾವಡ ಅವರ ಪುತ್ರಿ ಕವನ ನಾವಡ ಅವರಿಗೆ ಏಳನೇ ರ್ಯಾಂಕ್, ಮಣೂರು ಗ್ರಾಮದ ಕೃಷ್ಣ ಎನ್. ಮತ್ತು ಸುಜಾತಾ ಕೆ. ಅವರ ಪುತ್ರಿ ಛಾಯಾ ಕೆ.ಅವರಿಗೆ ಹತ್ತನೇ ರ್ಯಾಂಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪುಂದ ಗ್ರಾಮದ ಯುವಕ ಲೆಫ್ಟಿನೆಂಟ್‌ ಯು. ಆದರ್ಶ ವೈದ್ಯ ಅವರು ಸೇನಾ ಹೆಲಿಕಾಪ್ಟರ್ ಪೈಲೆಟ್ ಆಗಿ ನೇಮಕಗೊಂಡಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದಿಂದ ಆಯ್ಕೆಯಾದ ಏಕೈಕ ಪೈಲೆಟ್ ಎನಿಸಿಕೊಂಡಿದ್ದಾರೆ. ಇಂಜಿನಿಯರಿಂಗ್ ಪದವೀಧರರಾದ ಆದರ್ಶ ವೈದ್ಯ ಅವರು ಶಿಕ್ಷಣದ ಬಳಿಕ ಖಾಸಗಿ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಭಾರತೀಯ ಸೇನೆ ಆಯ್ಕೆಯಾದ ಬಳಿಕ ಖಾಸಗಿ ನೌಕರಿಗೆ ರಾಜೀನಾಮೆ ನೀಡಿ ಚೆನೈಗೆ ತೆರಳಿ, ಸೇನಾ ತರಬೇತಿಯ ಪಡೆದು ಲೆಫ್ಟಿನೆಂಟ್ ಆಗಿ ನೇಮಕಗೊಂಡರು. ಅಲ್ಲಿಯೇ ಆರ್ಮಿ ಏವಿಯೇಷನ್‌ನ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಪೈಲಟ್ ತರಬೇತಿಗೆ ಆಯ್ಕೆಯಾದರು. ಮೊದಲಿಗೆ 15ನೆಯ ಆರ್ಮರ್ಡ್ ರೆಜಿಮೆಂಟ್‌ಗೆ ಸೇರಿ, ಪಂಜಾಬಿನಲ್ಲಿ ಕಾರ್ಯನಿರ್ವಹಿಸಿದರು. ನಂತರ ಆರ್ಮಿ ಏವಿಯೇಷನ್‌ನ ಒಂದು ವರ್ಷದ ಪೈಲೆಟ್ ತರಬೇತಿ ಮುಗಿಸಿ, ಮೇ.22ರಂದು ನಾಸಿಕ್‌ನಲ್ಲಿ ನಡೆದ ಸಮಾರಂಭದಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ತೇರ್ಗಡೆ ಪ್ರಮಾಣ ಪತ್ರ ಪಡೆದರು. ಈ ಬಾರಿ ಪೈಲೆಟ್ ತರಬೇತಿ ಪೂರ್ಣಗೊಳಿಸಿದ ಕರ್ನಾಟಕದ ಏಕೈಕ ಅಧಿಕಾರಿ ಎಂಬ ಹೆಗ್ಗಳಿಕೆ ಆದರ್ಶ್ ಅವರದ್ದು. ಒಂದು ವರ್ಷದ ಪೈಲಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿದ್ದಾರ್ಥ ನಡುರಾತ್ರಿಯಲ್ಲಿ ತನ್ನ ಕಂದ ರಾಹುಲ ಪತ್ನಿ ಯಶೋಧರೆಯನ್ನು ತೊರೆದು ಯಾರಿಗೂ ಹೇಳದೆ ಅರಮನೆಯನ್ನು ತೊರೆದು ಹೋದ ಎಂಬ ತಪ್ಪು ಕಲ್ಪನೆ ಸಮಾಜದಲ್ಲಿ ಇದೆ. ಆದರೆ ಸಿದ್ಧಾರ್ಥ ದೇಶಾಂತರ ಹೋಗಲು ಕಾರಣವಾದ ಅಂಶವೆಂದರೆ, ರೋಹಿಣಿ ನದಿಯ ವಿವಾದದಲ್ಲಿ ಶಾಕ್ಯ ಸಂಘದ ನಿಯಮದಂತೆ ದೇಶಾಂತರ ಹೋಗುವ ಶಿಕ್ಷೆಯನ್ನು ಆಯ್ದುಕೊಂಡದ್ದು. ಸಿದ್ದಾರ್ಥ ತನ್ನ ಹೆಂಡತಿ ಮತ್ತು ಕುಟುಂಬದ ಸದಸ್ಯರೆಲ್ಲರ ಗಮನಕ್ಕೂ ತಂದು ಎಲ್ಲರನ್ನು ಒಪ್ಪಿಸಿ ಹಾಡು ಹಗಲಿನಲ್ಲೇ ದೇಶಾಂತರ ಹೊರಡುವ ತೀರ್ಮಾನ ಕೈಗೊಳ್ಳುತ್ತಾನೆ. ಇಂತಹ ಸತ್ಯಕ್ಕೆ ವಿರುದ್ಧವಾಗಿ ಕನ್ನಡ ಸಾಹಿತ್ಯದಲ್ಲಿ ಅನೇಕ ತಪ್ಪು ಸಂದೇಶ ನೀಡುವ ಸಂಕಥನಗಳು  ಹುಟ್ಟಿಕೊಂಡಿವೆ.  ಅದೇ ಸತ್ಯವೆಂದು ನಂಬಿದವರು ಹಾಗೆ  ನಂಬುವವರು ಈಗಲೂ ಇದ್ದಾರೆ. ಎಂದು ಉಡುಪಿಯ ವಕೀಲರು ಹಾಗೂ ಸಂಬುದ್ಧ ಟ್ರಸ್ಟ್ ನ ಕಾರ್ಯದರ್ಶಿಯಾಗಿರುವ ಮಂಜುನಾಥ್ ವಿ ಅವರು ಹೇಳಿದರು. ಅವರು ಸಮುದಾಯ ಕುಂದಾಪುರ ಕಳೆದ ಐದು ವರ್ಷಗಳಿಂದ ಪ್ರತಿ ತಿಂಗಳೂ ಆಯೋಜಿಸುತ್ತಿರುವ  ಮೇ “ತಿಂಗಳ ಓದು ” ಬುದ್ಧ ಪೂರ್ಣಿಮೆ ಪ್ರಯುಕ್ತ…

Read More

ಕುಂದಾಪುರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿಗೆ ಸಮೀಪದ ಸಿದ್ದಾಪುರ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿದ್ದಾಪುರ ಗ್ರಾಮದ ಪ್ರವೀಣ್ (26) ಪೊಲೀಸರು ವಶಕ್ಕೆ ಪಡೆದ ವ್ಯಕ್ತಿ. ಪೋಲೀಸರು ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು ಗಾಂಜಾ ಸೇವನೆ ಮಾಡಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕಟಣೆ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಳೆದ ಎರಡು ಚುನಾವಣೆಯಲ್ಲಿ ಸ್ಫರ್ಧೆ ಮಾಡಿದ್ದು, ಈ ಭಾರಿ ಕಾಂಗ್ರೆಸ್ ಟಿಕೆಟ್ ದೊರೆಯದ ಕಾರಣ ಸ್ವತಂತ್ರವಾಗಿ ಸ್ಪರ್ಧೆಗಿಳಿದಿದ್ದೇನೆ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್.ಪಿ ದಿನೇಶ್ ಹೇಳಿದರು. ಅವರು ಕುಂದಾಪುರ ಪ್ರೆಸ್ ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 10 ತಿಂಗಳ ಹಿಂದೆ ಪಕ್ಷದ ವರಿಷ್ಠರು ನನಗೆ ಟಿಕೆಟು ನೀಡುವುದಾಗಿ ತಿಳಿಸಿದ್ದರು. ಅಂತೆಯೇ ನಾನು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಕೊನೆಯ ಗಳಿಗೆಯಲ್ಲಿ ನನ್ನ ಹೆಸರನ್ನು ಕೈಬಿಟ್ಟು ಬೇರೆ ಪಕ್ಷದಿಂದ ಬಂದ ಅಭ್ಯರ್ಥಿಗೆ ಅವಕಾಶ ಕಲ್ಪಿಸಿದರು. ಸಂವಿಧಾನದ 4 ಮನೆ, 4 ಪಕ್ಷವನ್ನು ನೋಡಿರುವ ವ್ಯಕ್ತಿಗೆ ಈಗ ಪಕ್ಷ ಟಿಕೇಟು ನೀಡಲಾಗಿದೆ. ರಾಹುಲ್ ಗಾಂಧಿ, ಸಿದ್ಧರಾಮಯ್ಯ ಅವರಿಗೆ ನಿಂದಿಸಿರುವ ವ್ಯಕ್ತಿ ಕಾಂಗ್ರೆಸ್ ಅಭ್ಯರ್ಥಿ ಎಂದು ಒಪ್ಪಿಕೊಳ್ಳಲು ಮುಜುಗರವಾಗುತ್ತದೆ ಎಂದರು. ನಾನು 2012 ಮತ್ತು 2018ರಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಪ ಮತಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡವು ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟೆಯಲ್ಲಿ ನಡೆದ ಸಂಗೀತ ಸ್ಪರ್ಧೆಗಳಾದ ಚಿತ್ರಗೀತೆಯಲ್ಲಿ ಶ್ರೇಯಾ ಖಾರ್ವಿ ಪ್ರಥಮ, ಜಾನಪದ ಸಮೂಹ ಗೀತೆ ಪ್ರಥಮ ಹಾಗೂ ಪೂಜಾ ಆಚಾರ್ ಭಾಗವತಿಕೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಮುಖೇನ ಸಮಗ್ರ ಪುರಸ್ಕಾರವನ್ನು ಪಡೆದ ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಗುಜ್ಜಾಡಿ ರಕ್ಷಿತ್ ರಾವ್, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ. ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೊಲೀಸ್‌ ಇಲಾಖೆಯ ಜೀಪು ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು, ಜೀಪುನಲ್ಲಿದ್ದ ಎಸ್‌ಐ ಹಾಗೂ ಚಾಲಕ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಜೀಪು ಚಾಲಕ ರಾಮ ಅವರನ್ನು ಸಾಕ್ಷ್ಯಾಧಾರ ಕೊರತೆಯಿಂದ ನಿರ್ದೋಷಿಯೆಂದು ತೀರ್ಪು ನೀಡಲಾಗಿದೆ. 2013ರ ಮಾ.29 ರಂದು ಕುಂದಾಪುರದ ಗಾಂಧಿ ಮೈದಾನ ಬಳಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರದ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ರೋಹಿಣಿ ಡಿ. ಅವರು ಈ ತೀರ್ಪು ನೀಡಿದ್ದಾರೆ. ಅಂದು ಪೊಲೀಸ್‌ ಜೀಪಿನಲ್ಲಿ ಸಂಚರಿಸುತ್ತಿದ್ದ ಆಗಿನ ಕುಂದಾಪುರ ನಗರ ಠಾಣಾ ಎಸ್‌ಐ ರೇವತಿ ಅವರು ಜೀಪು ಚಾಲಕ, ಪೊಲೀಸ್‌ ಸಿಬ್ಬಂದಿ ರಾಮ ವಿರುದ್ಧವೇ ದೂರು ನೀಡಿದ್ದರು. ಕುಂದಾಪುರ ನಗರ ಠಾಣಾ ಎಸ್‌ಐ ಆಗಿದ್ದ ರೇವತಿ ಅವರು 2013ರ ಮಾ. 28 ರ ರಾತ್ರಿ ಇಲಾಖೆ ಜೀಪಿನಲ್ಲಿ ಕುಂದಾಪುರ, ಕೋಟೇಶ್ವರ, ಕುಂಭಾಶಿ ಕಡೆ ರೌಂಡ್ಸ್‌ ಮುಗಿಸಿ, ಮಾ. 29 ರ ಬೆಳಗ್ಗಿನ ಜಾವ 2.20 ರ…

Read More