ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ ಗಂಗೊಳ್ಳಿ ಮತ್ತು ಶಾಲೆಯ ಅಮೃತ ಮಹೋತ್ಸವ ಸಮಿತಿ ವತಿಯಿಂದ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಕಾರ್ಯಾಗಾರ ಇತ್ತೀಚಿಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಪಿಎಸ್ಐ ಮುಕ್ತ ಅವರು ಮಕ್ಕಳ ಹಕ್ಕುಗಳು ಹಾಗೂ ಅದರ ರಕ್ಷಣೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರವಿಶಂಕರ್ ಖಾರ್ವಿ ವಹಿಸಿದ್ದರು. ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ದಿವಾಕರ ಖಾರ್ವಿ, ಸ್ಥಳ ದಾನಿ ಅಶೋಕ್ ಕಾನೋಜಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಕ್ಷ್ಮಣ್ ಖಾರ್ವಿ, ಪ್ರಭಾರ ಮುಖ್ಯ ಶಿಕ್ಷಕಿ ಯಶೋಧ ಉಪಸ್ಥಿತರಿದ್ದರು. ಸಹಶಿಕ್ಷಕಿಯರಾದ ಉಷಾ ಸ್ವಾಗತಿಸಿದರು. ಅನುಷಾ ಸಿ. ಬಂಗೇರಾ ಕಾರ್ಯಕ್ರಮ ನಿರ್ವಹಿಸಿದರು. ಆಶಾಲತಾ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮೃದು ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ನಾಂದಿ ಫೌಂಡೇಶನ್ ಮತ್ತು ಜಿಟಿಟಿ (GTT) ಫೌಂಡೇಶನ್ ಸಹಯೋಗದಲ್ಲಿ ಉದ್ಘಾಟಿಸಲಾಯಿತು. 8 ದಿನಗಳ ಈ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಕೌಶಲ್ಯಗಳನ್ನು ಉತ್ತೇಜಿಸುವ ಹಾಗೂ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಗೆ ತಯಾರಿಸಲು ಉದ್ದೇಶಿಸಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಮಾತನಾಡಿ, ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರ್ನಾಟಕ ಬ್ಯಾಂಕ್, ಕುಂದಾಪುರ ಶಾಖೆಯ ಅಧಿಕಾರಿಯಾದ ಉದಯ ಹೆಗ್ಡೆ ಮಾತನಾಡಿ, ಈ ಕಾಲದ ಸ್ಪರ್ಧಾತ್ಮಕ ಉದ್ಯೋಗ ಕ್ಷೇತ್ರದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಜಾಗೃತಿಯ ಬಗ್ಗೆ ಉಪನ್ಯಾಸ ನೀಡಿದರು. ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಯಾದ ತಿಮ್ಮಪ್ಪ ಡಿ. ಎಸ್. ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಸಹ ಪ್ರಾಧ್ಯಾಪಕರಾದ ಮಹೇಶ್ ಕುಮಾರ್ ಅವರು ಉದ್ಯೋಗ ತರಬೇತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಆಜ್ರಿ ಮಾನಂಜೆ, ಕಮಲಶಿಲೆ ಅಲ್ಲಿ ನೆರವೇರಿತು. ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ಶ್ರೀಧರ ಅಡಿಗ ಅವರು ಶಿಬಿರವನ್ನು ಉದ್ಘಾಟಿಸಿ ಶಿಬಿರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಶಿಬಿರಕ್ಕೆ ಶುಭಹಾರೈಸಿದರು. ತದನಂತರ ಹಂದಿಮನೆ ರಾಜೀವ ಶೆಟ್ಟಿ ಅವರು ವಾರ್ಷಿಕ ವಿಶೇಷ ಶಿಬಿರದ ಲೋಗೋ ವನ್ನು ಅನಾವರಣ ಗೊಳಿಸಿ ಭೌತಿಕ, ದೈಹಿಕ ಶ್ರಮದ ಮಹತ್ವವನ್ನು ತಿಳಿಸಿ ಶಿಬಿರ ಯಶಸ್ವಿಯಾಗಲೆಂದು ಹಾರೈಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅವರು ಏನ್. ಎಸ್. ಎಸ್. ಶಿಬಿರದ ಧ್ಯೇಯೋದ್ದೇಶಗಳನ್ನು ತಿಳಿಸಿ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಸತ್ಯನಾರಾಯಣ ಹತ್ವಾರ್, ಕಾಲೇಜಿನ ಕಛೇರಿ ಪ್ರಬಂಧಕರಾದ ಗೋಪಾಲ ನಾಯ್ಕ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಗೌರಿ ಬಾಯಿ, ಏನ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿ ಗ್ರಾಮದ ಗುಡಾರ್ಮಕ್ಕಿ ನಿವಾಸಿ ಬೇಬಿ ಶೆಡ್ತಿ (65) ಅವರು ಮನೆಯ ಹತ್ತಿರದ ಕೊಟ್ಟಿಗೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ದಿನಗಳಿಂದ ಅಧಿಕ ರಕ್ತದೊತ್ತಡ, ಕಾಲು ಗಂಟುನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಖಿನ್ನಿತರಾಗಿ ಮನೆಯ ಹತ್ತಿರದ ಕೊಟ್ಟಿಗೆಯ ಮಾಡಿನ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರ ಸಹೋದರ ವಿ. ನಾರಾಯಣ ಶೆಟ್ಟಿ ನೀಡಿದ ದೂರಿನಂತೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟಿಪ್ಪರ್ ಚಾಲಕನಾಗಿದ್ದ ಕಂದಾವರ ಗ್ರಾಮದ ಕೃಷ್ಣಮೂರ್ತಿ (29) ಅವರು ಕಂಡೂರು ಬಳಿ ಸ್ಕೂಟಿ ನಿಲ್ಲಿಸಿ, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಜು. 31ರ ರಾತ್ರಿ ಅಳಿಯ ಕಾರ್ತಿಕ್ಗೆ ಕರೆಮಾಡಿ “ನಾನು ಇಲ್ಲವಾದರೆ ನನ್ನ ಅಮ್ಮನನ್ನು ಚೆನ್ನಾಗಿ ನೋಡಿಕೋ’ ಎಂದು ಹೇಳಿ ಕರೆ ಕಡಿತ ಮಾಡಿದ್ದರು. ಅನಂತರ ಮತ್ತೆ ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ತಕ್ಷಣ ಕಾರ್ತಿಕ್ ಮನೆಯವರಿಗೆ ವಿಷಯ ತಿಳಿಸಿ ಹುಡುಕಾಡಿದಾಗ ಅವರ ಸ್ಕೂಟಿ ಕಂಡೂರು ಸೇತುವೆ ಬಳಿ ಪತ್ತೆಯಾಗಿದೆ. ಫೆ. 1ರ ಮಧ್ಯಾಹ್ನ ಮೃತದೇಹ ಕಂಡೂರು ಸೇತುವೆಯ ಅಡಿಭಾಗದಲ್ಲಿ ಪತ್ತೆಯಾಗಿದೆ. ಸಹೋದರ ಶ್ರೀಕಾಂತ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಉತ್ತರಖಂಡದ ಡೆಹ್ರಾಡೂನ್ನಲ್ಲಿ ಜರುಗಿದ ರಾಷ್ಟ್ರಿಯ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಉಷಾ ಎಸ್. ಆರ್. ಕಂಚಿನ ಪದಕವನ್ನು ಪಡೆದಿದ್ದಾರೆ. ಅವರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ. 87 ಕೆಜಿ ದೇಹ ತೂಕ ವಿಭಾಗದಲ್ಲಿ ಸ್ಪರ್ಧಿಸಿರುವ ಅವರು ಒಟ್ಟು 197 ಕೆಜಿ ಭಾರ ಎತ್ತಿ ಕಂಚಿನ ಪದಕಕ್ಕೆ ಪಾತ್ರರಾಗಿದ್ದಾರೆ. 76 ಕೆಜಿ ದೇಹತೂಕ ವಿಭಾಗದಲ್ಲಿ ಸ್ಪರ್ದಿಸಿದ್ದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ತನುಷಾ ನಾಲ್ಕನೇ ಸ್ಥಾನ ಪಡೆದಿದ್ದಾರೆ. ರಾಷ್ಟ್ರಿಯ ಕ್ರೀಡಾಕೂಟದ ವೇಯ್ಟ್ಲಿಫ್ಟಿಂಗ್ ವಿಭಾಗದಲ್ಲಿ ಅವರು ಇರ್ವರೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದವರು. ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕ್ರೀಡಾಪಟುಗಳ ಸಾಧನೆಯನ್ನು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿಗೆ ವಾಡಿಕೆ ಮಳೆಯು 4,535 ಮಿ.ಮೀ. ಇದ್ದು, ವಾಸ್ತವಿಕವಾಗಿ 5261 ಮಿ.ಮೀ. ನಷ್ಟು ಮಳೆಯಾಗಿ ಶೇ.16 ರಷ್ಟು ಹೆಚ್ಚು ಮಳೆಯಾಗಿದ್ದು, ನೀರಿನ ಕೊರತೆ ಆಗುವ ಸಾಧ್ಯತೆಗಳಿಲ್ಲದಿದ್ದರೂ ಸಹ ಅಂತರ್ಜಲ ಕುಸಿತಗೊಂಡು ಜಿಲ್ಲೆಯ ಯಾವುದೇ ಗ್ರಾಮ ಹಾಗೂ ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು. ಈ ಬಗ್ಗೆ ಗಮನಹರಿಸುವುದರೊಂದಿಗೆ ಹತ್ತಿರದಲ್ಲಿ ಲಭ್ಯತೆ ಇರುವ ನೀರಿನ ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದರು. ಕಳೆದ ಸಾಲಿನಲ್ಲಿ ಉಂಟಾದ ಮನೆ ಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವ ಹಾನಿ, ಬೆಳೆ ಹಾನಿ ಸೇರಿದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ ಗಂಗೊಳ್ಳಿ ಹಾಗೂ ಶಾಲೆಯ ಅಮೃತ ಮಹೋತ್ಸವ ವತಿಯಿಂದ ’ಮನೋದೈಹಿಕ ಬೆಳವಣಿಗೆ ಮತ್ತು ಭಾವನಾತ್ಮಕ ಬುದ್ಧಿಮತ್ತೆಯ ಪಾತ್ರ ’ಎಂಬ ವಿಷಯದ ಬಗ್ಗೆ ಕಾರ್ಯಾಗಾರವು ಶಾಲೆಯ ಸಭಾಂಗಣದಲ್ಲಿ ನಡೆಯಿತು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಮಾಹೆ ಮಣಿಪಾಲ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ನಿರ್ದೇಶಕಿ ಗೀತಾ ಕೌನ್ಸಿಲರ್ ಸುಜಾತ ದೀಪಕ್, ಶ್ರೀರಾಯನ್ ಮಥಾಯಸ್, ಕೆಲ್ವಿನ್ ಡಿಸೋಜಾ, ಅರವಿಂದ್ ಪಾಂಡೆ, ಕರುಣ ದೇವಾಡಿಗ ಹಾಗೂ ಗಣೇಶ್, ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ದಿವಾಕರ್ ಖಾರ್ವಿ ಉಪಸಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಯಶೋಧ ಸ್ವಾಗತಿಸಿದರು. ಸಹಶಿಕ್ಷಕಿ ರಾಧಿಕಾ ಕೆ. ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ಶಾಂತಿ ಖಾರ್ವಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಇದರ 38ನೇ ‘ಸ್ವಚ್ಛ ಕಡಲತೀರ – ಹಸಿರು ಕೋಡಿ’ ಅಭಿಯಾನವು ಭಾನುವಾರದಂದು ನಡೆಯಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿ ಸದಸ್ಯರಾದ ಡಾ. ಆಸೀಫ್ ಬ್ಯಾರಿ ಅವರು, ಸ್ವಚ್ಛತಾ ಕಾರ್ಯಕ್ಕೆ ಪಣತೊಟ್ಟು ಆಗಮಿಸಿದ ಎಲ್ಲರನ್ನೂ ಉದ್ದೇಶಿಸಿ ಮಾತನಾಡಿ “ನೀವೆಲ್ಲರೂ ನಿಜವಾದ ನಾಯಕರು ಎಂದು ತಿಳಿಸಿ, ಅವರಿಗೆ ಶುಭ ಹಾರೈಸಿದರು” ಈ ಸ್ವಚ್ಛತಾ ಕಾರ್ಯಕ್ಕೆ ನಿರಂತರ ಸಹಕಾರ ನೀಡುತ್ತಿರುವ ಕುಂದಾಪುರ ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಕೋಟೇಶ್ವರ ಪಂಚಾಯತಿ ಅಧ್ಯಕ್ಷರು ಹಾಗೂ ಸಿಬ್ಬಂದಿಗಳಿಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ. ಕೆ.ಎಂ ಅಬ್ದುಲ್ ರೆಹಮಾನ್ ಅವರು ಧನ್ಯವಾದ ಸಲ್ಲಿಸಿದರು. ಈ ಸ್ವಚ್ಛತಾ ಕಾಯಕದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗಗಳ ಮುಖ್ಯಸ್ಥರು, ಶಾಲಾಭಿವೃದ್ಧಿ ಮತ್ತು ಸಲಹಾ ಮಂಡಳಿ ಸದಸ್ಯರು, ಹಿತೈಷಿಗಳ ಬಳಗ, ಪೋಷಕರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಬ್ಯಾರೀಸ್ ಪದವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅವರವರು ಮಾಡಿದ ಕರ್ಮದ ಫಲವನ್ನು ಅವರವರೇ ಅನುಭವಿಸಬೇಕಾಗಿರುವ ಕಾರಣ ನಾವು ಕೆಟ್ಟ ಕರ್ಮಗಳನ್ನು ಎಂದಿಗೂ ಮಾಡಬಾರದು. ಏಕೆಂದರೆ ಕರ್ಮದ ಫಲ ತನ್ನ ವಿಳಾಸವನ್ನು ಎಂದಿಗೂ ಮರೆಯುವುದಿಲ್ಲ. ಎಂದು ಕೇರಳ ಕಾಸರಗೋಡಿನ ಬ್ರಹ್ಮಕುಮಾರಿ ಈಶ್ವರೀ ವಿದ್ಯಾಲಯದ ಮೇಲ್ವಿಚಾರಕಿ ರಾಜಯೋಗಿನಿ ಬಿ. ಕೆ. ವಿಜಯಲಕ್ಷ್ಮೀ ಅವರು ಹೇಳಿದರು. ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಜೆಸಿಐ ಬೈಂದೂರು ಸಿಟಿ ಘಟಕದ ಈ ವರ್ಷದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಓದಲು ಒಂದು ಕ್ಷಣ ಬೇಕಾಗುತ್ತದೆ. ಯೋಚನೆ ಮಾಡಲು ಒಂದು ನಿಮಿಷ ಬೇಕಾಗುತ್ತದೆ. ತಿಳಿಯಲು ಒಂದು ದಿನ ಬೇಕಾಗುತ್ತದೆ. ಆದರೆ ಉಳಿಸಿಕೊಳ್ಳಲು ಪೂರ್ಣ ಜೀವನವೇ ಬೇಕಾಗುತ್ತದೆ ಅದೇ ವಿಶ್ವಾಸ. ಈ ನೆಲೆಯಲ್ಲಿ ಪರಸ್ಪರ ನಂಬಿಕೆ, ವಿಶ್ವಾಸದಿಂದ ಸಂಘಟನೆ ಮೂಲಕ ಯುವಜನರಲ್ಲಿ ವ್ಯಕ್ತಿತ್ವ ವಿಕಸನದ ಮೂಲಕ ಮಾನವೀಯ ಮೌಲ್ಯ ರೂಪಿಸಿ ಸಮಾಜ ಸೇವಾ ಕಾರ್ಯ ಮಾಡುತ್ತಿರಿ ಎಂದರು. ನಿರ್ಗಮಿತ ಅಧ್ಯಕ್ಷೆ ಅನಿತಾ ಆರ್. ಕೆ. ಇವರು ಸ್ವಾಗತಿಸಿ,…
