ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ನಡೆಯಲಿರುವ 2 ದಿನಗಳ ಟೆಕ್ ಉತ್ಸವ್ – 2025, ಅಂತರಕಾಲೇಜು ತಂತ್ರಜ್ಞಾನ ಸಂಬಂಧಿ ಸ್ಪರ್ಧೆಗಳಿಗೆ ವಿದ್ಯಾಗಿರಿಯ ಡಾ. ವಿ. ಎಸ್. ಅಚಾರ್ಯ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು . ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಜ್ಯುಗೊ ಸ್ಟುಡಿಯೋ ಪ್ರೈ. ಲಿ. ನ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಮಾತನಾಡಿ, ತಂತ್ರಜ್ಞಾನ ಮುಂದುವರಿದಂತೆ ಅವುಗಳ ಬಳಕೆಗೆ ಅಗತ್ಯವಿರುವ ಪರಿಣತಿಯನ್ನು ಪಡೆದುಕೊಳ್ಳುವುದು ಬಹಳ ಅವಶ್ಯ. ಬದಲಾಗುತ್ತಿರುವ ತಂತ್ರಜ್ಞಾನದ ಅವಶ್ಯಕತೆ ಹಾಗೂ ಅವುಗಳ ಬಳಕೆ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಕಳೆದ 15 ವರ್ಷಗಳ ತಾಂತ್ರಿಕ ಬದಲಾವಣೆ ಗಣನೀಯವಾಗಿದ್ದು, ಮುಂದಿನ 2 ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆಯ ಬೆಳವಣಿಗೆಯು ಇನ್ನಷ್ಟು ಪ್ರಗತಿ ಹೊಂದಲಿದೆ. ಟೆಕ್ಕಿಗಳು, ಇಂಜಿನಿಯರ್ ಗಳು ತಂತ್ರಜ್ಞಾನವನ್ನು ಬಳಸುವ ವಿಧಾನದ ಮೇಲೆ ಒಟ್ಟು ಸಮಾಜದ ರೀತಿ ಅವಲಂಬಿತವಾಗಿರುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ತಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಯೊಂದು ಮನೆ ಮನೆಗೂ ನಲ್ಲಿ ನೀರು ಪೂರೈಸುವ ಜಲ್ ಜೀವನ ಮಿಷನ್ ಕಾಮಗಾರಿಯು ಈಗಾಗಲೇ ಶೇ. 92 ಪೂರ್ಣಗೊಂಡಿದೆ. ಬಾಕಿ ಉಳಿದ ಕಾಮಗರಿಗಳನ್ನು ಆದ್ಯತೆಯ ಮೇಲೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಜಾಗ್ರತಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಅಭಿಯಂತರರಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಗ್ರಾಮೀಣ ಭಾಗದ 247000 ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕವನ್ನು ಕಲ್ಪಿಸಲು ಜಲ ಜೀವನ ಅಡಿಯಲ್ಲಿ ಗುರಿ ಹೊಂದಲಾಗಿದ್ದು, ಇವರೆಗೆ 2,14,000 ಮನೆಗಳಿಗೆ ನಳ ಸೌಲಭ್ಯವನ್ನು ಒದಗಿಸಲಾಗಿದೆ. ಬಾಕಿ ಉಳಿದ ಮನೆಗಳಿಗೆ ನಳ ಸೌಲಭ್ಯ ಕಲ್ಪಿಸುವ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವುದರ ಜೊತೆಗೆ ಮಾರಣಾಂತಿಕ ಕಾಯಿಲೆಗೆ ಬಲಿಯಾಗುತ್ತಾರೆ. ಇವುಗಳಿಂದ ದೂರವಿದ್ದು, ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು. ಅವರು ಅಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಯುವ ರೆಡ್ಕ್ರಾಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ನಡೆದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯುವಜನರು ಅರಿವಿಲ್ಲದೆ ಕ್ಷಣಿಕ ಸುಖಕ್ಕಾಗಿ ಮದ್ಯ ಅಥವಾ ಮಾದಕ ವಸ್ತುಗಳಿಗೆ ಬಲಿಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ ಅವರನ್ನು ಕೆಪಿಸಿಸಿ ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆದೇಶಿಸಿದ್ದಾರೆ. ಅವರು 18 ವರ್ಷಗಳ ಕಾಲ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, 2013ರಲ್ಲಿ ಕುಂದಾಪುರದಿಂದ ವಿಧಾನಸಭೆಗೆ ಸ್ಪರ್ಧಿಸಿದ್ದರು. ಪ್ರಸ್ತುತ ಮಲ್ಯಾಡಿ ಶ್ರೀ ಮಹಾದೇವಿ ನಂದಿಕೇಶ್ವರ ದೈವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾಗಿ, ಕುಂದಾಪುರ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಸಕಾಂಗ ರೂಪಿಸಿದ ಕಾನೂನಿನ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿಯವರನ್ನು ರೋಬೋಟ್ ಗೆ ಹೋಲಿಸಿದ್ದು ಬೈಂದೂರು ಶಾಸಕರು ಪರೋಕ್ಷವಾಗಿ ಪೊಲೀಸ್ ವರಿಷ್ಟಾಧಿಕಾರಿಯವರಿಂದ ಕಾನೂನು ಮೀರಿ ಕೆಲಸ ಮಾಡಿಸುವ ನಿಲುವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಅವರು ಹೇಳಿದರು. ಉಡುಪಿ ಜಿಲ್ಲೆಗೆ ಕೆ. ಅರುಣ್ ಅವರು ಪೊಲೀಸ್ ವರಿಷ್ಟಾಧಿಕಾರಿಯಾಗಿ ಬಂದ ಮೇಲೆ ಕಾನೂನು ಸುವ್ಯವಸ್ಥೆ ಅತ್ಯಂತ ಉತ್ತಮವಾಗಿದೆ, ರಾಜಕೀಯ ಲಾಭಕ್ಕಾಗಿ ಕೋಮುದಳ್ಳುರಿಗೆ ಸಿಕ್ಕಿದ್ದ ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಯಾವುದೇ ಕೋಮುಗಲಭೆ ಇಲ್ಲವಾಗಿದೆ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ, ಇವತ್ತು ಅಕ್ರಮ ಗಾಣಿಗಾರಿಕೆ ತಡೆಯ ಬೇಕಾದದ್ದು ಪೊಲೀಸ್ ವರಿಷ್ಟಾಧಿಕಾರಿಯವರ ಕೆಲಸ, ಗಣಿಗಾರಿಕೆಯ ವಿಚಾರದಲ್ಲಿ ಶಾಸಕಾಂಗ ರೂಪಿಸಿದ ನೀತಿ, ನಿಯಮಗಳನ್ನು ಪಾಲನೆ ಮಾಡುವುದು ಪೊಲೀಸ್ ಇಲಾಖೆಯ ಕೆಲಸ ಹಾಗೂ ಪೊಲೀಸ್ ವರಿಷ್ಟಾಧಿಕಾರಿ ಅದನ್ನೇ ಮಾಡುತ್ತಿದ್ದಾರೆ. ಶಾಸನ ಸಭೆಯ ಗೌರವಾನ್ವಿತ ಸದಸ್ಯರಾದ ಬೈಂದೂರು ಶಾಸಕರು ಕರಾವಳಿಗೆ ಪ್ರತ್ಯೇಕ ಗಣಿ ನೀತಿ ತರುವಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತೀರ್ಥಹಳ್ಳಿ ಮತ್ತು ಉಡುಪಿ ಜಿಲ್ಲೆಯ ಕೊಲ್ಲೂರು ಮುಖ್ಯ ಅಂಚೆ ಕಛೇರಿಗಳಲ್ಲಿ ದೇಶದ ವಿವಿಧ ಸ್ಥಳಗಳಿಗೆ ತೆರಳುವ ಸಾರ್ವಜನಿಕರು/ಪ್ರಯಾಣಿಕರು ಮುಂಗಡವಾಗಿ ರೈಲ್ವೆ ಸೀಟುಗಳನ್ನು ಕಾಯ್ದಿರಿಸಿದ ಟಿಕೇಟ್ ಗಳನ್ನು ಬುಕ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದರು. ಸಾರ್ವಜನಿಕರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿಲ್ಲ. ಮುಂಗಡ ಟಿಕೇಟ್ ಗಳನ್ನು ಪಡೆಯದಿದ್ದಲ್ಲಿ ಈ ಸೌಲಭ್ಯವನ್ನು ರದ್ದುಪಡಿಸಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ಅದಕ್ಕೆ ಅವಕಾಶ ನೀಡದೇ ಸಾರ್ವಜನಿಕರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಮಹಿಳಾ ವೇದಿಕೆ ಮತ್ತು ಶ್ರೀ ಮಾತಾಮೃತಾನಂದಮಯಿ ಮಠ ಕೇರಳ ಇದರ ಆಯುರಾರೋಗ್ಯ ಸೌಖ್ಯಂ ಫೌಂಡೇಶನ್ ಇದರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಪರಿಸರ ಸ್ನೇಹಿಯಾದ ಮತ್ತು ಬಾಳೆದಿಂಡನ್ನು ಉಪಯೋಗಿಸಿ ಉತ್ಪಾದಿಸಿದ ಸೌಖ್ಯಂ ಸ್ಯಾನಿಟರಿ ಪ್ಯಾಡ್ ಗಳ ಉಚಿತ ವಿತರಣೆ ಕಾರ್ಯಕ್ರಮವು ಗುರುವಾರದಂದು ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನೆಕ್ಸಸ್ ಮಾಲ್ ಇದರ ಕಾರ್ಯನಿರ್ವಾಹಕ ವ್ಯವಸ್ಥಾಪಕರಾದ ನಿಶಾ ಅಂಚನ್ ಅವರು ಮಾತನಾಡಿ, ಪರಿಸರ ರಕ್ಷಣೆ ಮತ್ತು ಮಹಿಳೆಯರು ಸ್ವಚ್ಛತೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಋತುಚಕ್ರದ ಸಮಯದಲ್ಲಿ ಈ ಮರುಬಳಕೆ ಮಾಡಬಹುದಾದ ಪ್ಯಾಡ್ ಗಳ ಬಳಕೆಯ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು. ಆಯುರಾರೋಗ್ಯ ಸೌಖ್ಯ ಫೌಂಡೇಶನ್ನ ಕುಂದಾಪುರ ವಿಭಾಗದ ಪ್ರತಿನಿಧಿಯಾದ ಕಲ್ಪನಾ ಭಾಸ್ಕರ್ ಅವರು ಮಾತನಾಡಿ, ಸೌಖ್ಯಂ ಪಾಡ್ ಗಳನ್ನು ಸುಮಾರು ಆರು ವರ್ಷಗಳ ಕಾಲ ಬಳಸಬಹುದಾಗಿದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ 6 ರೈಲುಗಳಿಗೆ ರೈಲ್ವೆ ಸಚಿವಾಲಯವು ಕುಮಟಾ ಮತ್ತು ಕುಂದಾಪುರ ಸ್ಟೇಶನ್ಗಳಲ್ಲಿ ಪ್ರಾಯೋಗಿಕ ನಿಲುಗಡೆ ಮಾ. 15ರಿಂದ ನೀಡಲಾಗುವುದು. ತಿರುವನಂತಪುರಂ ಸೆಂಟ್ರಲ್ – ನಿಝಾಮುದ್ದೀನ್ ಎಕ್ಸ್ಪ್ರೆಸ್ (22653) ಹರ್ಝತ್ ರೈಲು ಕುಂದಾಪುರ ಸ್ಟೇಶನಿಗೆ ಮಾ. 15ರಂದು ಮಧ್ಯಾಹ್ನ 2.06ಕ್ಕೆ ಆಗಮಿಸಿ 2.08ಕ್ಕೆ ತೆರಳಲಿದೆ. ಹರ್ಝತ್ ನಿಝಾಮು ದ್ದೀನ್ – ಎರ್ನಾಕುಲಂ ಜಂಕ್ಷನ್ ಎಕ್ಸ್ಪ್ರೆಸ್ (22656) ರೈಲು ಮಾ. 15ರಂದು ಕುಂದಾಪುರಕ್ಕೆ ಮಧ್ಯಾಹ್ನ 1.28ಕ್ಕೆ ಆಗಮಿಸಿ 1.30ಕ್ಕೆ ತೆರಳಲಿದೆ. ಕೊಯಮತ್ತೂರು – ಹಿಸ್ಸಾರ್ ಎಕ್ಸ್ಪ್ರೆಸ್ (22476) ರೈಲು ಮಾ. 16ರಂದು ಕುಮಟಾ ಸ್ಟೇಶನಿಗೆ ರಾತ್ರಿ 1.46ಕ್ಕೆ ಆಗಮಿಸಿ, 1.48ಕ್ಕೆತೆರಳಲಿದೆ. ಹಿಸಾರ್ – ಕೊಯಮತ್ತೂರು ಎಕ್ಸ್ಪ್ರೆಸ್ (22475) ರೈಲು ಮಾ. 21ರಂದು ಬೆಳಗ್ಗೆ 2.10ಕ್ಕೆ ಆಗಮಿಸಿ, 2.12ಕ್ಕೆ ತೆರಳಲಿದೆ. ಹರ್ಝತ್ ನಿಝಾಮು ದ್ದೀನ್ – ತಿರುವನಂತಪುರಂ ಸೆಂಟ್ರಲ್ ಎಕ್ಸ್ಪ್ರೆಸ್ (22654) ರೈಲು ಕುಂದಾಪುರಕ್ಕೆ ಮಾ. 18ರಂದು ಮಧ್ಯಾಹ್ನ 1.28ಕ್ಕೆ ಆಗಮಿಸಿ 1.30ಕ್ಕೆ ತೆರಳಲಿದೆ. ಎರ್ನಾಕುಲಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ಹೋಳಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಸರಸ್ವತಿ ಮೂರ್ತಿಗೆ ಅರಶಿನ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು. ಗ್ರಂಥಪಾಲಕ ಮಹೇಶ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಸಂಪ್ರದಾಯದ ಹೋಳಿಯನ್ನು ಪರಿಚಯಿಸಲಾಯಿತು. ಕಾಲೇಜಿನ ಎಸ್ಕ್ಯೂಎಸಿ ಪ್ರತಿನಿಧಿ ಶ್ರದ್ಧಾ ಆರ್. ಸ್ವಾಗತಿಸಿ, ವಂದಿಸಿ, ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಕುಡಿಯುವ ನೀರಿನ ಮೂಲ, ಅದರ ಗುಣಮಟ್ಟ ಹಾಗೂ ಟ್ಯಾಂಕರ್ನ ಸ್ವಚ್ಛತೆ ಬಗ್ಗೆ ಜಿಲ್ಲಾಡಳಿತ ವಿಶೇಷ ಮುತುವರ್ಜಿವಹಿಸಬೇಕು ಎಂದು ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಈಗಾಗಲೇ ಬೇಸಗೆಯ ಬಿಸಿ ಏರುತ್ತಿದೆ. ಈ ಭಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾದರೂ ಸಹ ಬಿಸಿಲ ಬೇಗೆ ಹೆಚ್ಚಿರುವುದರಿಂದ ನೀರಿನ ಪ್ರಮಾಣ ಗಣನೀಯವಾಗಿ ಕುಸಿಯುವ ಸಾಧ್ಯತೆಯೂ ಹೆಚ್ಚಿದೆ. ನೀರಿನ ಪ್ರಮಾಣ ಕುಸಿಯದೆ ಇದ್ದರೂ ಸಹ ಹೆಚ್ಚಿನ ಗ್ರಾಮ ಪಂಚಾಯತ್ ಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವುದು ಒಂದು ವ್ಯವಸ್ಥಿತ ವ್ಯವಹಾರವಾಗಿ ಬಿಟ್ಟಿದೆ. ಇವತ್ತು ಕಲುಷಿತ ಆಹಾರ ಹಾಗೂ ಕಲುಷಿತ ನೀರಿನಿಂದ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವ ಈ ಕಾಲಘಟ್ಟದಲ್ಲಿ ಸ್ಥಳೀಯ ಸಂಸ್ಥೆಗಳು ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಪೂರೈಸುವಾಗ ಕುಡಿಯಲು ಯೋಗ್ಯವಲ್ಲದ ನೀರನ್ನು ಹೆಚ್ಚಿನ ಕಡೆ ಸರಬರಾಜು ಮಾಡುತ್ತಿರುರುವುದು…
