ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪಂಚಗಂಗಾವಳಿ ನದಿಯ ಹೂಳೆತ್ತಿ ನದಿಯನ್ನು ರಕ್ಷಣೆ ಮಾಡುವಂತೆ ಪಂಚಗಂಗಾವಳಿ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಆಗ್ರಹಿಸಿದ್ದಾರೆ. ಐದು ನದಿಗಳು ಸೇರುವ ಕುಂದಾಪುರದ ಪಂಚ ಗಂಗಾವಳಿ ನದಿ ಬಹಳ ರಮಣೀಯ. ಸಾವಿರಾರು ಕುಟುಂಬಗಳ ಜೀವನಕ್ಕೆ ಆಶ್ರಯ ನೀಡುವ ತಾಣ. ವಿಹಾರಕ್ಕೂ ಬಹಳ ಅದ್ಭುತವಾದ ಪ್ರದೇಶ. ಆದರೆ ವರ್ಷದಿಂದ ವರ್ಷಕ್ಕೆ ನದಿಯಲ್ಲಿ ಹೂಳು ತುಂಬುತ್ತಾ ಹೋಗಿ ನದಿ ಸಂಪೂರ್ಣ ಕಳಾಹೀನವಾಗಿದೆ. ಹೂಳು ತುಂಬಿದ ಸ್ಥಳ ಗಳಲ್ಲೇ ಗಿಡಗಳು ಬೆಳೆದು ಕಾಡಿನಂತಾಗಿದೆ. ಹೊಸ ಹೊಸ ಕುದುರುಗಳು ಹುಟ್ಟಿವೆ. ಮೀನುಗಾರರಿಗೆ, ಚಿಪ್ಪು ಕಾರ್ಮಿಕರಿಗೆ ಜೀವನ ನಡೆಸಲು ಅನುಕೂಲ ಇಲ್ಲದೇ ನೂರಾರು ಕುಟುಂಬಗಳ ಮೇಲೆ ಪರಿಣಾಮ ಉಂಟಾಗಿದೆ. ಪ್ರವಾಸೋದ್ಯಮಕ್ಕೆ ಬಹಳ ಪ್ರಾಶಸ್ತ್ಯವಾಗಿದ್ದ ಈ ಸ್ಥಳ ಸಂಪೂರ್ಣ ನಿರ್ಲಕ್ಷಕ್ಕೆ ಒಳಪಟ್ಟಿದ್ದು, ಜನರು ಭರವಸೆಯನ್ನೇ ಕಳೆದುಕೊಂಡಂತೆ ಆಗಿದೆ. ನದಿ ಇಳಿತದ ಸಂದರ್ಭದಲ್ಲಂತೂ ಮರುಭೂಮಿಯಂತೆ ಕಾಣಿಸುತ್ತಿದೆ. ಕುಂದಾಪುರದ ಈ ಕೇಂದ್ರ ಸ್ಥಳದಲ್ಲಿ ಬಹಳಷ್ಟು ಯೋಜನೆಗಳ ಅನುಷ್ಠಾನ ಈ ಹಿಂದೆ ಬೇಡಿಕೆ ಇಡಲಾಗಿದ್ದರೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಹಳೆಅಳಿವೆ ಬಳಿ ಯುವಕ ಸಮುದ್ರದಲ್ಲಿ ಮರಣಬಲೆ ಬಿಡಲು ಹೋಗಿ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಮೃತ ಯುವಕ ಬೀಜಾಡಿ ಪೆಟ್ಟಿ ಮನೆ ಕುಮಾರ್ ಅವರ ಪುತ್ರ ಮೇಘರಾಜ್ (24)ಎಂದು ಗುರುತಿಸಲಾಗಿದೆ. ಅವರು ಬೆಳಗ್ಗೆ ಹಳೆ ಅಳಿವೆ ಬಳಿ ಸಮುದ್ರದಲ್ಲಿ ಮರಣಬಲೆ ಬಿಡಲೆಂದು ಹೋದ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ನೀರುಪಾಲಾಗಿದ್ದಾರೆ. ಸಂಜೆ ವೇಳೆ ಬೀಜಾಡಿ ಸಮೀಪ ಕಡಲ ಎಡಭಾಗದಲ್ಲಿ ಮೃತದೇಹ ದಡ ಸೇರಿದೆ. ಸ್ಥಳಕ್ಕಾಗಮಿಸಿದ ಕರಾವಳಿ ಕಾವಲು ಪಡೆಯ ಸುದರ್ಶನ್ ಎಸ್. ಕುಂದರ್, ಕೃಷ್ಣ ಕಾಂಚನ್, ಸಂತೋಷ್ ಪೂಜಾರಿ, ಸುಧಾಕರ್ ಖಾರ್ವಿ ಅವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ವೇದಿಕೆ, ಡೆಕಾಥ್ಲಾನ್ ಮತ್ತು ಏರೋಡೈನಾಮಿಕ್ಸ್ ಸಹಯೋಗದಲ್ಲಿ ಸ್ವರಾಜ್ಯ ಮೈದಾನದಲ್ಲಿ ಆಳ್ವಾಸ್ ಸಂಸ್ಥೆಯ ಮಹಿಳಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಮಂಗಳೂರಿನ ಇಂಡಿಯನ್ ಕೋಸ್ಟ್ ಗಾರ್ಡ್‌ನ ಸಹಾಯಕ ಕಮಾಂಡೆಂಟ್ ಪ್ರಿಯಾ ಮಾತನಾಡಿ, ಮಹಿಳೆಯರು ಈಗ ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಪುರುಷನಷ್ಟೇ ಸಮರ್ಥರಾಗಿ ಎಲ್ಲಾ ಕೆಲಸಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ರಾಷ್ಟ್ರದ ಗಡಿಗಳನ್ನು ಕಾಪಾಡುವುದು ಅತ್ಯಂತ ಕಠಿಣ ಕೆಲಸವಾದರೂ, ಮಹಿಳೆಯರು ಈ ಸವಾಲಿನ ಕೆಲಸಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಸಂಸ್ಥೆಗಳ ಮಹಿಳಾ ಉದ್ಯೋಗಿಗಳಿಂದ ಪಥಸಂಚಲನದೊಂದಿಗೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಆಳ್ವಾಸ್ ಸೆಂಟ್ರಲ್ ಶಾಲೆಯ ಕ್ರೀಡಾ ಶಿಕ್ಷಕರಾದ ಆಶಾ, ಉ? ಕುಮಾರಿ ಮತ್ತು ಚಿತ್ರಾವತಿ, ಆಳ್ವಾಸ್ ಪ್ರಾಥಮಿಕ ಶಾಲೆಯ ಕವಿತಾ, ಆಳ್ವಾಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ-1 ಹುದ್ದೆ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿ-1 ಹುದ್ದೆ ಹಾಗೂ ಮೂಡುಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿ-1 ಹುದ್ದೆಯನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಸಭೆ ವ್ಯಾಪ್ತಿಯಲ್ಲಿ ರಸ್ತೆಗಳಿಗೆ ಕಾಂಕ್ರೀಟಿಕರಣ ಮಾಡುವುದು ಉತ್ತಮ ಕೆಲಸ ಹಾಗೂ ಇದು ಶಾಶ್ವತ ಕಾಮಗಾರಿ ಕೂಡ ಹೌದು. ಆದರೆ ಹೆಚ್ಚಿನ ಕಡೆ ರಸ್ತೆ ಕಾಂಕ್ರೀಟಿಕರಣ ಆಗುವಾಗ ಅಗಲವಾದ ರಸ್ತೆಗಳು ಕಿರಿದಾಗಿ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಪಾಯಕಾರಿ ಆಗುತ್ತಿವೆ ಎಂದು ಕುಂದಾಪುರದ ನ್ಯಾಯವಾದಿ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ. ಅಗಲವಾದ ರಸ್ತೆಗೆ ಕಿರಿದಾಗಿ ಕಾಂಕ್ರೀಟ್ ಹಾಕಿ ರಸ್ತೆಯ ಇಕ್ಕೆಲಗಳಲ್ಲಿ ಯಾವುದೇ ಸಮರ್ಪಕ ಕೆಲಸ ಮಾಡದೆ ಅಪಾಯಕಾರಿಯಾಗಿ ಬಿಟ್ಟಿರುವುದು ಹೆಚ್ಚಿನ ರಸ್ತೆಗಳಲ್ಲಿ ನೋಡಬಹುದು. ಇದು ಪುರಸಭೆಯ ಕಟಾಚಾರದ ಕಾಮಗಾರಿ ನಿರ್ವಹಣೆಯಾಗಿದೆ. ಇನ್ನು ಮುಂದಾದರೂ ಪುರಸಭೆ ರಸ್ತೆ ಕಾಂಕ್ರೀಟಿಕರಣ ಮಾಡುವಾಗ ಅಗಲವಾದ ರಸ್ತೆಗಳನ್ನು ಕಿರಿದು ಮಾಡದೆ ಸಂಚಾರಕ್ಕೆ ಯೋಗ್ಯ ರೀತಿಯಲ್ಲಿ ಕಾಮಗಾರಿಗಳನ್ನು ನಿರ್ವಹಿಸಬೇಕು ಹಾಗೂ ಇದರ ಬಗ್ಗೆ ಪುರಸಭೆ ಆಡಳಿತ ಹಾಗೂ ಅಧಿಕಾರಿಗಳು ಗಮನಹರಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ಆಗೃಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಮ್ಮ ಹಿರಿಯರ ಜೀವನ ತಳಹದಿ, ಅವರ ಆದರ್ಶ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಹೆಸರು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ತಿಳಿ ಹೇಳುವ ಕಾಯಕ ಸಾರ್ಥಕ್ಯ ಕಂಡ ಕ್ಷಣಗಳಿಗೆ ವೇದಿಕೆ ಕಲ್ಪಿಸಿದೆ. ವಾಸುದೇವ ನಾಯಕ್ ಎಂದರೆ ನನ್ನಗೆ ಆ ಕಾಲದಲ್ಲಿ ಅನ್ನ ಅರಿವೆ, ಆಸರೆ ನೀಡಿದ ಮಹಾಶಕ್ತಿ ಶಾಶ್ವತವಾಗಿ ನೆನಪುಳಿಯುವಂತ ವ್ಯಕ್ತಿಯಾಗಿದ್ದಾರೆ, ಕಷ್ಟದಲ್ಲಿರುವರಿಗೆ ನೆರವು ನೀಡುವ ಅವರ ಮನಸ್ಥಿತಿ ಮಸ್ತಕದಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದುಕೊಂಡಿದೆ. ಅಂತವರ ಹೆಸರನ್ನು ಉಳಿಸುವ ಪಂಚವರ್ಣ ಸಂಘಟನೆ ಸಮಾಜಮುಖಿ ಕಾರ್ಯಚಟುವಟಿಕೆಗಳು ಇನ್ನಷ್ಟು ಗಟ್ಟಿಗೊಳಿಸುವಂತೆ ಮಾಡಿದೆ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೋಟದ ಮಹತೋಭಾರ ಹಿರೇಮಹಾಲಿಂಗೇಶ್ವರ ದೇಗುಲದ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಕೋಟದ ಪಂಚವರ್ಣ ಸಂಘಟನೆಯ ಸಹಕಾರದೊಂದಿಗೆ ನಡೆದ ಕೋಟದ ರಾಘವ ನಾಯಕ್ ಸಹೋದರರ ವತಿಯಿಂದ ಅವರ ತಂದೆ ಕೋಟ ವಾಸುದೇವ ನಾಯಕ್ ಸ್ಮರಣಾರ್ಥ ನಿರ್ಮಾಣಗೊಂಡ ಸಾರ್ವಜನಿಕರಿಗೆ ಅನುಕೂಲ ಸೃಷ್ಠಿಸುವ ತಂಗುದಾಣವನ್ನು ಲೋಕಾರ್ಪಣೆಗೊಳಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದ 80ನೇ ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ನಡೆದ ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಶ್ರೀ ಮಾಣಿ ಸಿದ್ಧಲಿಂಗೇಶ್ವರ ಮೊವಾಡಿ ತ್ರಾಸಿ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು. ಒಟ್ಟು 12 ತಂಡಗಳು ಭಜನಾ ತಂಡಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ಶ್ರೀ ಪ್ರಸನ್ನ ಗಣಪತಿ ಭಜನಾ ಮಂಡಳಿ ಮೂಡ್ಲಕಟ್ಟೆ ದ್ವಿತೀಯ ಮತ್ತು ಶ್ರೀ ಯಕ್ಷದೇವತೆ ಭಜನಾ ಮಂಡಳಿ ಶಿರೂರು ತಂಡವು ತೃತೀಯ ಬಹುಮಾನ ಪಡೆದುಕೊಂಡಿತು. ಸಮಾರೋಪ ಸಮಾರಂಭದಲ್ಲಿ ಮತ್ಸ್ಯೋದ್ಯಮಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಜಿ.ಕೆ. ಮಹೇಶ್, ತೀರ್ಪುಗಾರರಾದ ಡಾ. ಗಣೇಶ್ ಗಂಗೊಳ್ಳಿ, ಬಿ.ಪ್ರಕಾಶ್ ಶೆಣೈ ಗಂಗೊಳ್ಳಿ, ಡಾ.ಸಚಿನ್ ಸಾಲಿಯಾನ್ ಮಲ್ಪೆ, ದೇವಸ್ಥಾನದ ಅಧ್ಯಕ್ಷ ಗುರುರಾಜ್ ಗಂಗೊಳ್ಳಿ, ಕರುಣಾಕರ ಎಂ., ಅರ್ಚಕರಾದ ಜಿ.ಟಿ.ಕೃ? ಮತ್ತು ಅಶೋಕ್ ಎನ್.ಡಿ. ವಿಜೇತರಿಗೆ ಬಹುಮಾನ ವಿತರಣೆ ಮಾಡಿ ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಬೆಂಗಳೂರಿನ ಜೆಪಿ ನಗರದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್‌ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೇರಿ ಗೋ ರೌಂಡ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್‌ನ 50ನೇ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಬೆಂಗಳೂರಿನ ಜೆಪಿ ನಗರದ ಆರ್‌ಬಿಐ ಲೇಔಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್ಸ್‌ನಲ್ಲಿ ಆಳ್ವಾಸ್ ತಂಡ ತಮಿಳುನಾಡುವಿನ ಪಿ.ಎಸ್.ಎನ್.ಎ ದಿಂಡಿಗಲ್ ತಂಡವನ್ನು 35-31 ಅಂಕಗಳಿಂದ ಮಣಿಸಿ ಗೋಲ್ಡ್ ಮೆಡಲ್ ಪ್ರಶಸ್ತಿಯನ್ನು ಪಡೆದುಕೊಂಡಿತು.ವಿಜೇತ ಆಳ್ವಾಸ್ ತಂಡವು ಸೂಪರ್ ಲೀಗ ಹಾಗೂ ಇತರ ಪಂದ್ಯಗಳಲ್ಲಿ ಆತಿಥೇಯ ಮೇರಿ ಗೋ ರೌಂಡ್ ಹಾಗೂ ಟಿಬಿಬಿಸಿ ತಿರುವತ್ತೂರು ತಂಡಗಳನ್ನು ಸೋಲಿಸಿತ್ತು. ಟೂರ್ನಿಯಲ್ಲಿ ರಾಷ್ಟ್ರದ 10 ಪ್ರಮುಖ ಆಹ್ವಾನಿತ ತಂಡಗಳು ಭಾಗವಹಿಸಿದ್ದವು. ಆಳ್ವಾಸ್ ತಂಡದ ಲಕ್ಷ್ಮೀದೇವಿ ಟೂರ್ನಿಯ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಮ್ ಜಿ.ಎನ್. ಪೂಜಾರಿ ತನ್ನ 14ನೇ ವಯಸ್ಸಿನಲ್ಲಿ ಗರಿಷ್ಟ ವಿಭಿನ್ನ ರಾಗಗಳನ್ನು ಕೊಳಲಿನಲ್ಲಿ ಒಂದು ನಿಮಿಷದಲ್ಲಿ ನುಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆಯನ್ನು ನಿರ್ಮಿಸಿದ್ದಾನೆ. ಈತ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಗಣೇಶ ಅವರ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವೇಳೆ ವಿದ್ಯಾರ್ಥಿನಿಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಿಸಿ ಪರಾರಿಯಾದ ಘಟನೆ ಶಿರೂರು ಗ್ರಾಮದ ಅಳ್ವೆಗದ್ದೆ ಎಂಬಲ್ಲಿ ಸೋಮವಾರ ಸಂಜೆ 6 ಗಂಟೆಯ ಹೊತ್ತಿಗೆ ನಡೆದಿದೆ. ಕುಂದಾಪುರ ಕಾಲೇಜಿನಿಂದ ಕರಿಕಟ್ಟೆ ಕ್ರಾಸ್ ಬಳಿ ಬಸ್ ಇಳಿದು ಅಳ್ಳೆಗದ್ದೆ ರಸ್ತೆಯಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಮೋಟಾರ್ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ವಿದ್ಯಾರ್ಥಿನಿಯ ಕುತ್ತಿಗೆಯಲ್ಲಿದ್ದ 10 ಗ್ರಾಂ ತೂಕದ ಸುಮಾರು 81 ಸಾವಿರ ಮೌಲ್ಯದ ಚಿನ್ನದ ಸರ ಅಪಹರಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬೈಂದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
