Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಾಜಾಥಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು. ಈಗಲೂ ಸಹ ಈ ಯೋಜನೆಗಳ ಲಾಭ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶವಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲೆಯಾದ್ಯಂತ ಸಂಚರಿಸಿ, ಮಾಹಿತಿ ನೀಡಲಿರುವ ಕಲಾಜಾಥಾ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಜಿಲ್ಲೆಯಲ್ಲಿ ಬಹುತೇಕ ಜನರು ಒಂದಲ್ಲಾ ಒಂದು ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಇದ್ದಾರೆ. ಜಿಲ್ಲೆಯ ಅರ್ಹ ಪ್ರತಿಯೊಬ್ಬರಿಗೂ ಯೋಜನೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಅಸಮಾನತೆಯನ್ನು ಹೋಗಲಾಡಿಸುವ ಉದ್ಧೇಶದಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ (ಮಗಳನ್ನು ಉಳಿಸಿ ಮಗಳನ್ನು ಓದಿಸಿ) ಯೋಜನೆಯು 10 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಪೂರಕವಾದ ಕಾನೂನು ಅರಿವು ಮತ್ತು ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ 1976 ಕುರಿತ ಜಿಲ್ಲಾ ಮಟ್ಟ, ತಾಲೂಕು ಮಟ್ಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ನಾಗರಾಜ್‌ ಕಾಮಧೇನು ನೇತೃತ್ವದ ತಂಡಕ್ಕೆ ಅಭೂತಪರ್ವ ಗೆಲುವು ಲಭಿಸಿದೆ. ಸಾಮನ್ಯ ವರ್ಗದಲ್ಲಿ ಕೆ. ನಾಗರಾಜ ರಾವ್‌ ಕಾಮಧೇನು , ಅಜೇಯ ಹವಾಲ್ದಾರ್‌, ಬಿ. ಶ್ರೀಧರ, ಸತೀಶ ನರಸಿಂಹ ಶೇರೆಗಾರ, ಕೆ. ಅಶೋಕ ಬೆಟ್ಟಿನ್‌, ಎಂ.ಜಿ. ರಾಜೇಶ್‌, ಶ್ರೀದರ ಪಿ.ಎಸ್‌. ಕೆ. ಸೂರ್ಯಕಾಂತ, ಕೃಷ್ಣಯ್ಯ ವಿ. ಮದ್ದೋಡಿ, ಹಿಂದುಳಿದ ವರ್ಗ ʼಎ’ಸ್ಥಾನದಿಂದ ಬಿ. ರಾಧಕೃಷ್ಣ ನಾಯಕ್‌, ಆಯ್ಕೆಯಾದರು. ಮಹಿಳಾ ಮೀಸಲು ಸ್ಥಾನದಿಂದ ರಶ್ಮಿ ಪುಷ್ಪರಾಜ್‌, ಶಾರದ ವಿಜಯ್‌, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ ಒಟ್ಟು 10 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 2 ಮಹಿಳಾ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಸಹಕಾರ ಸಂಘಗಳ ಸಹಾಯಕಿ ನಿಬಂಧಕಿ ಸುಕನ್ಯಾ ಚುನಾವಣೆ ನಡೆಸಿ ಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಡಿಬಿಐ ಬ್ಯಾಂಕ್ ಕುಂದಾಪುರ ಶಾಖೆ ವತಿಯಿಂದ ಅಂಪಾರು ಮೂಡುಬಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್‌ ಕೊಡುಗೆಯಾಗಿ ನೀಡಲಾಯಿತು . ಈ ಸಂದರ್ಭದಲ್ಲಿ ಐಡಿಬಿಐ ಬ್ಯಾಂಕಿನ ಸಹಾಯಕ ಜನರಲ್ ಮ್ಯಾನೇಜರ್ ನಾಗರಾಜ್ ಕಮ್ಮಾರ, ಕುಂದಾಪುರ ಶಾಖೆಯ ವ್ಯವಸ್ಥಾಪಕ ಕಿರಣ್ ಕುಮಾರ್ ಶಿಂಧೆ, ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜುನಾಥ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೋಹರ್ ಶೆಟ್ಟಿ , ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಮತ್ತು ಎಸ್‌.ಡಿ.ಎಂ.ಸಿ.ಯ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಫೆ. 21ರಿಂದ ಮೂರು ದಿನಗಳ ಕಾಲ ನಡೆಯುವ “ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನ”ದ ಸರ್ವಾಧ್ಯಕ್ಷರಾಗಿ ಭಾರತೀಯ ಇತಿಹಾಸ ತಜ್ಞ, ಶಿಕ್ಷಣ ತಜ್ಞ, ದೆಹಲಿಯ ಕೇಶವನ್ ವೆಳುತ್ತಾಟ್ ಅವರನ್ನುಆಯ್ಕೆ ಮಾಡಲಾಗಿದೆ. ಅವರು ಕೇರಳ ಮೂಲದವರಾಗಿದ್ದು ಮಧ್ಯಯುಗದ ದಕ್ಷಿಣ ಭಾರತೀಯ ಇತಿಹಾಸದಲ್ಲಿ ವಿಶೇಷ ಪರಿಣಿತರು. ಶಾಸನ ತಜ್ಞರು, ಸಂಸ್ಕೃತ, ತಮಿಳು, ಕನ್ನಡ, ಮಲೆಯಾಳಂ ಭಾಷೆ ಅರಿತಿರುವ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಆನಂತರ ದೆಹಲಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದ್ದರು. ದೇಶದ ಹಲವು ವಿಶ್ವ ವಿದ್ಯಾನಿಲಯಗಳಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿದ್ದಾರೆ. ಹಲವು ಗ್ರಂಥಗಳನ್ನು ಬರೆದಿದ್ದಾರೆ. ಕ್ಯಾಲಿಕಟ್ ವಿ.ವಿ. ಯಿಂದ ಸ್ನಾತ್ತಕೋತ್ತರ ಪದವಿ ಹಾಗೂ ಡಾಕ್ಟರೇಟ್, ಜವಹರಲಾಲ್ ನೆಹರು ವಿ.ವಿ. ಯಿಂದ ಎಂ.ಫಿಲ್. ಪದವಿ ಪಡೆದ ಅವರು ದೇಶದ ಶ್ರೇಷ್ಠ ಇತಿಹಾಸ ಹಾಗೂ ಶಿಕ್ಷಣ ತಜ್ಞ, ಶಾಸನತಜ್ಞರಲ್ಲಿ ಪ್ರಮುಖರಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹನುಮಾನ್ ಚಾಲೀಸ್ ನ ಎಲ್ಲಾ ಪದ್ಯಗಳನ್ನು 5 ನಿಮಿಷ 35 ಸೆಕೆಂಡುಗಳಲ್ಲಿ ಪಠಣ ಮಾಡಿದ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ನರ್ಸರಿ  ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿ ಅಮೋಘ ಶರತ್ ಶೇಟ್, ಅವರಿಗೆ ಇಂಡಿಯನ್ ಬುಕ್ ಆಪ್ ರೆಕಾರ್ಡ್ (IBR) ನವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ವಡ್ಡರ್ಸೆಯ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಡೆದ ಯಕ್ಷಗಾನ ಪ್ರದರ್ಶನದ ಪೂರ್ವದಲ್ಲಿ ಬನ್ನಾಡಿ ನಾರಿಬೆಟ್ಟು ದಿ| ಕಿಶೋರ್ ಹೆಗ್ಡೆ ಸಂಸ್ಮರಣೆ ಕಾರ್ಯಕ್ರಮ ‘ಕಿಶೋರ ನೆನಪು’ ನಡೆಯಿತು.  ದಿ| ಕಿಶೋರ್ ಹೆಗ್ಡೆ ಅವರು ಶ್ರೀ ಸಿದ್ದೇಶ್ವರ ಯಕ್ಷರಂಗ, ಬನ್ನಾಡಿ ಇದರ ಪ್ರಧಾನ ಕಲಾವಿದರಾಗಿದ್ದರು. ಯಕ್ಷಗಾನದ ಕೆಲವು ವಿಶಿಷ್ಟ ಪಾತ್ರಗಳಿಗೆ ತನ್ನ ಮಾತಿನ ವೈಖರಿ ಹಾಗೂ ರಂಗ ನಡೆಯ ಮೂಲಕ ಜೀವ ತುಂಬಿದವರು. ಹವ್ಯಾಸಿ ಕಲಾವಿದರಲ್ಲಿ ಕಿಶೋರ್ ಹೆಗ್ಡೆ ಮರೆಯಲಾಗದ ಚೇತನ ಎಂದು ಯಕ್ಷ ಗುರು ಗೋವಿಂದ ಉರಾಳರು ಸಂಸ್ಮರಣೀಯ ನುಡಿಗಳ ನಾಡಿದರು. ಒ.ಎನ್.ಜಿ.ಸಿ. ಗೋವಾ ಇಲ್ಲಿನ ನಿವೃತ್ತ ಚೀಫ್ ಮ್ಯಾನೇಜರ್ ನಾರಾಯಣ ಆಚಾರ್ ಬನ್ನಾಡಿ ಶಾಲಾ ದಿನಗಳಲ್ಲಿ ಸಹಪಾಠಿಯಾಗಿದ್ದ ಕಿಶೋರ್ ಹೆಗ್ಡೆ ಅವರ ಕಲಾ ಪ್ರತಿಭೆಯನ್ನು ಕೊಂಡಾಡಿ ಅಧ್ಯಕ್ಷೀಯ ನುಡಿಗಳನ್ನಾಡಿದರು. …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳೀಸಲಾಗಿದ್ದು, ಈ ಯೋಜನೆ ಮೂಲಕ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲಾಗುತ್ತಿದೆ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನದ ಆಧಾರದ ಮೇರೆಗೆ ಯುವ ಪರಿವರ್ತಕರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ, ಕನಿಷ್ಠ 21 ರಿಂದ 35 ವರ್ಷದ ಒಳಗಿನ, ಕನ್ನಡ ಸ್ಪಷ್ಟವಾಗಿ ಮಾತನಾಡುವ ಹಾಗೂ ಸಂವಹನ ಕಲೆ ಕೌಶಲ್ಯ ಹೊಂದಿರುವ ಆಸಕ್ತ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡಗಳನ್ನು ಹೊಂದಿದ ಅಭ್ಯರ್ಥಿಗಳು ಅರ್ಜಿಯನ್ನು ಬಿಳಿಹಾಳೆಯಲ್ಲಿ ಸಂಪೂರ್ಣ ಹೆಸರು, ವಯಸ್ಸು, ವಿಳಾಸ ಹಾಗೂ ತಮ್ಮ ಮೂಲ ದಾಖಲಾತಿಗಳನ್ನು ಫೆಬ್ರವರಿ 28 ರ ಸಂಜೆ 5 ಗಂಟೆಯ ಒಳಗಾಗಿ ಖುದ್ದಾಗಿ ಉಪ ನಿರ್ದೇಶಕರ ಕಛೇರಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮುಸ್ಲಿಂ ಭಾಂದವ್ಯ ವೇದಿಕೆ ಕರ್ನಾಟಕದ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ  ಡಾ. ಎಂ. ಮೋಹನ್ ಆಳ್ವರಿಗೆ ಸೌಹಾರ್ದ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಯಕ್ಷಗಾನ ಅರ್ಥದಾರಿ ಜಬ್ಬಾರ್ ಸಮೊ ಸಂಪಾಜೆ ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮೂಲಕ ಆಧುನಿಕ ಕಾಲಕ್ಕೆ ಅಗತ್ಯವಿರುವ ಶಿಕ್ಷಣ ವ್ಯವಸ್ಥೆ, ನೂತನ ಪ್ರಯೋಗಗಳನ್ನು ಹಳ್ಳಿಗಳಿಗೂ ತಲುಪಿಸುವ ಕಾರ್ಯವಾಗುತ್ತಿದೆ. ಅಲ್ಲದೇ ಮೂಡುಬಿದಿರೆಯ ಸಂಸ್ಕೃತಿಯ ಪರಂಪರೆಯನ್ನು ಮುಂದುವರಿಸಲು ಮೋಹನ್ ಆಳ್ವರು ಸೌಹಾರ್ದಯುತವಾಗಿ ಶ್ರಮಿಸುತ್ತಿದ್ದಾರೆ. ಇವರು ನಾಡಿನ ಅಸ್ಮಿತೆಯನ್ನು ಮೈಗೂಡಿಸಿಕೊಂಡು ವಿಶ್ವವ್ಯಾಪಕವಾಗಿ ಅಂಗೀಕೃತ ಹೊಂದಿರುವ ಓರ್ವ ಮಹಾನ್ ಸಾಧಕ ಎಂದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಎಂ. ಮೋಹನ್ ಆಳ್ವ, ಮನಸ್ಸು ಹಾಗೂ ಜೀವನ ಪದ್ಧತಿಯನ್ನು ಉತ್ತಮಗೊಳಿಸುವ ಮೂಲಕ ಸೌಹಾರ್ದ ಜೀವನ ನಡೆಸಲು ಸಾಧ್ಯ. ಬದುಕಿನ ಪ್ರತಿ ಹಂತದಲ್ಲೂ ಮೌಲ್ಯಯುತವಾಗಿರುವುದು ಬಹಳ ಅಗತ್ಯ. ತನ್ನ 73 ವರ್ಷಗಳ ಬದುಕಿನ ರೀತಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಗೆ ಭಾರತ್ ಸ್ಕೌಟ್ಸ್  ಮತ್ತು ಗೈಡ್ಸ್ ರಾಜ್ಯ ಆಯುಕ್ತರಾದ ಪಿ. ಜಿ. ಆರ್. ಸಿಂಧ್ಯಾ ಅವರು ಭೇಟಿ ನೀಡಿ, ಸ್ಕೌಟ್ಸ್ ಮತ್ತು ಗೈಡ್ಸ್ ದ್ಯೇಯೋದ್ದೇಶದ ಕುರಿತು ವಿಸ್ತೃತವಾದ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳೊಂದಿಗೆ ತಮ್ಮ ಸುಧೀರ್ಘ ಅನುಭವವನ್ನು ಹಂಚಿಕೊಂಡರು. ಮದರ್ ತೆರೇಸಾ ಶಿಕ್ಷಣ ಸಂಸ್ಥೆಯು ಆಯೋಜಿಸಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ, ಆಡಳಿತ ಮಂಡಳಿಯು ಮದರ್ ತೆರೇಸಾರವರ ಆದರ್ಶ ಮೌಲ್ಯಗಳಿಂದ ಪ್ರೇರಿತರಾಗಿ ಮಂಗಳೂರಿನಿಂದ ಬಂದು ಕುಗ್ರಾಮವಾದ  ಶಂಕರನಾರಾಯಣದಲ್ಲಿ ಕಳೆದ 26 ವರ್ಷಗಳ ಹಿಂದೆ  ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ ಇಂದು ಹೆಮ್ಮರವಾಗಿ ಬೆಳೆದು ಜಿಲ್ಲೆಯಲ್ಲೇ ಗುಣಮಟ್ಟದ ಶಿಕ್ಷಣ ಸಂಸ್ಥೆಯಾಗಿ ಬೆಳೆದು ನಿಲ್ಲಲು ಕಾರಣಿಕರ್ತರಾದ ಶಮಿತಾ ರಾವ್ ಮತ್ತು ರೆನಿಟಾ ಲೋಬೊ ಅವರ ಸಾಂಘಿಕ ಪರಿಶ್ರಮ ನಿಜಕ್ಕೂ ಪ್ರಶಂಸನೀಯ ಎಂದರು. ಸ್ಕೌಟ್ ಮತ್ತು ಗೈಡ್ಸ್ ನ ಸಮಾಜಮುಖಿ ಕಾರ್ಯಗಳು ವಿದ್ಯಾರ್ಥಿಗಳಿಗೆ ಸಾಮಾಜಿಕ ಸೇವಾ ಮನೋಭಾವನೆ ಬೆಳೆಸುವಲ್ಲಿ ಸಹಕಾರಿಯಾಗುತ್ತದೆ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವನ್ನು ಸ್ಕೌಟ್ಸ್…

Read More