Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ನಿಮ್ಮ ಅಮೂಲ್ಯ ಸಮಯವನ್ನು ನಿಮ್ಮ ಮಕ್ಕಳಿಗಾಗಿ ಮೀಸಲಿಡಿ. ದಿನಕ್ಕೆ ಕನಿಷ್ಟ 3೦ ನಿಮಿಷಗಳನ್ನಾದರೂ ಮಕ್ಕಳ ಜೊತೆ ಕಳೆಯಿರಿ ಎಂದು ಮಂಗಳೂರಿನ ಇಸ್ಕಾನ್ ಒಕ್ಕೂಟದ ಮುಖ್ಯಸ್ಥ ಶ್ವೇತಾದ್ವೀಪ ದಾಸ ಹೇಳಿದರು. ಆಳ್ವಾಸ್ ಕೃಷಿ ಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಆಳ್ವಾಸ್ ಕಿಂಡರ್‌ಗಾರ್ಟನ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ಸ್ಮಾರ್ಟ್ ಫೋನ್, ಅಲೆಕ್ಸಾ, ಲ್ಯಾಪ್‌ಟಾಪ್‌ಗಿಂತಲೂ ಮುಖ್ಯವಾದ್ದದ್ದು ಪೋಷಕರ ಸಮಯ. ಮಕ್ಕಳ ಜೊತೆ ಕುಳಿತು ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ. ಇದರಿಂದ ಮಕ್ಕಳಿಗೂ ಹೊಸ ವಿಷಯಗಳ ಕುರಿತು ತಿಳಿಯುವ ಕುತೂಹಲ ಹೆಚ್ಚುತ್ತದೆ ಎಂದರು.  ನಿಮ್ಮ ಕನಸುಗಳನ್ನು ನಿಮ್ಮ ಮಕ್ಕಳ ಮೇಲೆ ಹೇರಬೇಡಿ. ಅವರೇ ಸ್ವಯಂ ಕನಸು ಕಾಣಲಿ ಎಂದು ಸಲಹೆ ನೀಡಿದರು. ಮಕ್ಕಳ ಪೋಷಣಾ ವಿಧಾನ ಬದಲಾಗುತ್ತಾ ಇರುತ್ತದೆ. ಪ್ರತಿ ಹಂತದಲ್ಲೂ ಯಾವ ವಿಷಯ ಮಕ್ಕಳಿಗೆ ಒಳಿತು -ಕೆಡುಕು ಎಂಬುದನ್ನು ತಿಳಿದುಕೊಳ್ಳಬೇಕು. ನಿರಾಕರಣೆಯನ್ನೂ ಸ್ವೀಕರಿಸುವ ಮನೋಭಾವ ಮಕ್ಕಳಲ್ಲಿ ವೃದ್ಧಿಯಾಗಬೇಕು. ಮಕ್ಕಳೊಂದಿಗೆ ಮಾತೃ ಭಾಷೆಯಲ್ಲೂ ಮಾತನಾಡುವ ಅಭ್ಯಾಸ ಬೆಳಿಸಿದಾಗ ಅವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ‘ಘೋಷಣೆ’ಸ್ಪರ್ಧೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿನಿ ಶೃದ್ಧಾ ಆರ್., ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಅವರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ., ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಸೇವಾ-ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 6 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂರ್ಪಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 09 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಗಸ್ಟ್ 16 ರಂದು ನೇಮಕಾತಿ ಅಧಿಸೂಚನೆ ಹೊರಡಿಸಿ, ಸೆಪ್ಟಂಬರ್ 19 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 1ನೇ ಹಂತದಲ್ಲಿಯೇ “Application Successfully Uploaded’’ ಎಂಬ ಮೇಸೆಜ್ ಅವರುಗಳ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 48 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 24 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ. ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ 2025 ರ ಜನವರಿ 5 ರ ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್‌ನಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಡಿ.30:  ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಾಸ್ತಾನ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಜನರ ವಾಹನಗಳಿಗೆ ಈ ಹಿಂದೆ ನೀಡುತ್ತಿದ್ದ ಹಾಗೆ ರಿಯಾಯಿತಿಯಲ್ಲಿ ಕಲ್ಪಿಸಬೇಕೆಂದು  ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ  ಕೋಟಾ ಶ್ರೀನಿವಾಸ ಪೂಜಾರಿ ಗುತ್ತಿಗೆದಾರರಿಗೆ ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ವಸೂಲಾತಿಗೆ ಸಂಬಂಧಿಸಿದದಂತೆ ಟೋಲ್ ಗಳಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯಿತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾಸ್ತಾನ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಲಿಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇದ್ದು, ಸ್ಥಳೀಯ ಜನರ ಸುಂಕ ವಸೂಲಾತಿ ಕೇಂದ್ರದ ಸುತ್ತಮುತ್ತ ವಾಸವಿದ್ದು, ದೈನಂದಿನ ಪ್ರತಿಯೊಂದು ಕಾರ್ಯಕ್ಕೂ ಟೋಲ್ ಅನ್ನು ದಾಟುವ ಪ್ರಸಂಗ ಒದಗಿ ಬರಲಿದ್ದು, ಪ್ರತಿ ಬಾರಿಯೂ ಶುಲ್ಕ ಪಾವತಿ ಮಾಡಲು ಕಷ್ಟ ಸಾಧ್ಯವಾಗಿರುತ್ತದೆ. ಕೋಟ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸ್ಥಳೀಯ ಖಾಸಗಿ ಹಾಗೂ ಸಣ್ಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ನಿರ್ದೇಶಕರ ಮಂಡಳಿಗೆ ಅವಿರೋಧ ಆಯ್ಕೆ ನಡೆದಿದೆ. ಕಾಂಗ್ರೆಸ್ ಬೆಂಬಲಿತ ಗುಂಪಿಗೆ ಒಂಬತ್ತು ಸ್ಥಾನ ಹಾಗೂ ಬಿಜೆಪಿ ಬೆಂಬಲಿತ ಗುಂಪಿಗೆ ನಾಲ್ಕು ಸ್ಥಾನ ದೊರಕಿದೆ. ಸಾಮಾನ್ಯ ಕ್ಷೇತ್ರದಲ್ಲಿ, ನವೀನ ಕುಮಾರ್ ಹೆಗ್ಡೆ ಶಾನಾಡಿ ಕೆದೂರು, ಸದಾನಂದ ಶೆಟ್ಟಿ ಕೆದೂರು, ಮೋಹನದಾಸ ಶೆಟ್ಟಿ ಎಂ, ಭರತ್ ಕುಮಾರ್ ಶೆಟ್ಟಿ, ಶರತ್ ಕುಮಾರ್ ಹೆಗ್ಡೆ, ರಮೇಶ್ ಸುವರ್ಣ ಕೋಟೇಶ್ವರ, ಗೋಪಾಲ ಕುಂಭಾಶಿ ಆಯ್ಕೆಗೊಂಡರು. ಮಹಿಳಾ ಮೀಸಲಾತಿಯಲ್ಲಿ ಆಶಾಲತಾ ಶೆಟ್ಟಿ ವಕ್ವಾಡಿ, ಸುಶೀಲ ಕೋಟೇಶ್ವರ ಆಯ್ಕೆಗೊಂಡರು. ಹಿಂದುಳಿದ ವರ್ಗ ಮೀಸಲು ಸ್ಥಾನ(ಪ್ರವರ್ಗಎ)ದಲ್ಲಿ ಅಶೋಕ್ ಪೂಜಾರಿ ಬೀಜಾಡಿ, ಹಿಂದುಳಿದ ವರ್ಗ ಮೀಸಲು ಸ್ಥಾನ (ಪ್ರವರ್ಗ ಬಿ)ದಲ್ಲಿ ಗೋಪಾಲ ಶೆಟ್ಟಿ ಹೊಸ್ಮಠ ಕೊರ್ಗಿ ಆಯ್ಕೆಯಾದರು. ಪ.ಜಾತಿ ಮೀಸಲು ಸ್ಥಾನದಲ್ಲಿ ಸುರೇಶ ಕೆ. ವಿ ಕಾಳಾವರ ಹಾಗ ಪ. ಪಂಗಡ ಮೀಸಲು ಸ್ಥಾನದಲ್ಲಿ ಚಿಕ್ಕು ಅಸೋಡು ಆಯ್ಕೆಗೊಂಡರು. ಮುಂದಿನ ಐದು ವರ್ಷಗಳ ಅವಧಿಗೆ ಜನವರಿ 5ರಂದು…

Read More

ಕುಂದಾಪ್ರ ಡ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಹಾರಾಷ್ಟ್ರದ ರಾಯಘಢ ಜಿಲ್ಲೆಯ ಕಾಮೋತೆಯಲ್ಲಿ ನಡೆದ  70 ನೇ ರಾಷ್ಟ್ರೀಯ ಸೀನಿಯರ್ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಚಾಂಪಿಯನ್ ಆಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆರು ವಿದ್ಯಾರ್ಥಿಗಳು ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು. ವಿಜೇತ ತಂಡದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆರು ಮಂದಿ ಆಟಗಾರರು ಭಾಗವಹಿಸಿದ್ದರು. ರಾಜ್ಯ ತಂಡದ ನಾಯಕಿ ಮೇಘನಾ ಎಚ್. ಎಂ., ಪಲ್ಲವಿ ಬಿ. ಎಸ್., ಸಹನಾ ಎಚ್. ವೈ, ಲಕ್ಷ್ಮಿ ದೇವಿ, ತನುಶ್ರೀ, ಗೀತಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ರಾಜ್ಯ ತಂಡದ ಪರವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ಆಳ್ವಾಸ್‌ನ ಪಲ್ಲವಿ ಬಿ.ಎಸ್. ಹಾಗೂ ಸಹನಾ ಎಚ್. ವೈ. ಅವರು ಅಖಿಲ ಭಾರತ ಬಾಲ್‌ಬ್ಯಾಡ್ಮಿಂಟನ್ ಫೆಡರೇಶನ್ ನೀಡುವ ‘ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿ’ಗೆ ಭಾಜನರಾದರು. ಲೀಗ್ ಹಂತದಲ್ಲಿ ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಆಂಧ್ರಪ್ರದೇಶ ತಂಡವನ್ನು ನೇರ ಸೆಟ್‌ಗಳಿಂದ ಸೋಲಿಸಿದ ಕರ್ನಾಟಕ ನಾಕ್‌ಔಟ್ ಹಂತಕ್ಕೆ ಅರ್ಹತೆ ಪಡೆದುಕೊಂಡಿತ್ತು. ಚಾಂಪಿಯನ್‌ಶಿಪ್‌ನಲ್ಲಿ 28 ರಾಜ್ಯ ತಂಡಗಳು ಭಾಗವಹಿಸಿದ್ದವು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ 21 ಕೆಎಆರ್‌ ಬಿಎನ್‌ ಎನ್‌ಸಿಸಿ ಉಡುಪಿಯ ಕೆಡೆಟ್ ಆಗಿರುವ ಸಿಎಸ್‌ಎಮ್‌ ನಿರ್ಭಯ್ ಯು ಶೆಟ್ಟಿ ಪ್ರತಿಷ್ಠಿತ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಮೊದಲ ಶಿಬಿರದಿಂದ ಪ್ರಾರಂಭಿಸಿ ಪೂರ್ವ ಆರ್‌ಡಿಸಿ I ಮತ್ತು III ರವರೆಗೆ  ಅಸಾಧಾರಣ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಪ್ರದರ್ಶಿಸಿ ನವದೆಹಲಿ ಗಣರಾಜ್ಯೋತ್ಸವ ಶಿಬಿರ 2025ಕ್ಕೆ ಹೆಮ್ಮೆಯಿಂದ ನಮ್ಮ 21 ಕೆಎಆರ್‌ ಬಿಎನ್‌ ಎನ್‌ಸಿಸಿ ಉಡುಪಿ, ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸುತ್ತಾರೆ. ಹಲವು ವರ್ಷಗಳ ನಂತರ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸುತ್ತಿರುವ ಪ್ರೌಢ ವಿಭಾಗದ ಕೆಡೆಟ್ ಇವರಾಗಿದ್ದು ಉಡುಪಿ ಬೆಟಾಲಿಯನ್ ಗೆ ಇದೊಂದು ಹೆಮ್ಮೆಯ ಸಂಗತಿ, ವಿದ್ಯಾರ್ಥಿಯ ಈ ಕಠಿಣ ಪರಿಶ್ರಮದ ಸಾಧನೆಗೆ ಪ್ರತಿ ಹಂತದಲ್ಲೂ ಪ್ರೋತ್ಸಾಹ ನೀಡಿ, ಹಂತ ಹಂತವಾಗಿ ಆತನಲ್ಲಿ ಆತ್ಮಸ್ಥೈರ್ಯ ತುಂಬುವಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಹಾಗೂ ಅಸೋಸಿಯೇಟ್ ಎನ್ ಸಿಸಿ ಅಧಿಕಾರಿ ವೆಂಕಟ ಕೃಷ್ಣ ಅವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಟಿ. ವಿಮಲಾ ವಿ. ಪೈ ಸಭಾಂಗಣದಲ್ಲಿ ಬಿಲ್ಲವರ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ನೆಡೆಯಿತು. ಮಾಜಿ ಶಾಸಕ ಗೋಪಾಲ ಪೂಜಾರಿ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಸಂಘಟನೆಯಿಂದ ಯಾವುದೇ ಕೆಲಸವನ್ನು ಸುಲಭವಾಗಿ ಮಾಡಲು ಸಾಧ್ಯ. ಎಲ್ಲರೂ ಸಂಘಟಿತರಾಗಿ ಪ್ರಯತ್ನ ನಡೆಸಿದರೆ ಯಶಸ್ಸು ದೊರೆಯುತ್ತದೆ. ಗಂಗೊಳ್ಳಿ ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಅಗತ್ಯವಿರುವ ನಿವೇಶನ ದೊರಕಿಸಿ ಕೊಡುವಲ್ಲಿ ಮತ್ತು ಸಂಘದ ಕಚೇರಿ ಪ್ರಾರಂಭಿಸಲು ಅಗತ್ಯ ನೆರವು ಒದಗಿಸುವುದಾಗಿ ಅವರು ಭರವಸೆ ನಿಡಿದರು. ಸಂಘದ ಅಧ್ಯಕ್ಷ ಗೋಪಾಲ್ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಬಿಲ್ಲವರ ಹಿತರಕ್ಷಣೆ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ ಶುಭ ಹಾರೈಸಿದರು. ಸಂಘದ ಪದಾಧಿಕಾರಿಗಳು ಈ ಸಂಧರ್ಭದಲ್ಲಿ ಗಂಗೊಳ್ಳಿ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಲ್ಲವ ಸಮಾಜ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಲಕ್ಷ್ಮಣ ಬಿಲ್ಲವ ಸ್ವಾಗತಿಸಿದರು. ಕೃಷ್ಣ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಖ್ಯಾತ ಚಿತ್ರ ನಟ, ನಿರ್ದೇಶಕ ಉಪೇಂದ್ರ ಹಾಗೂ ಮತ್ತಿತರರು ದೇವರ ದರ್ಶನಕ್ಕೆ ಆಗಮಿಸಿದ್ದರು. ಶ್ರೀ ದೇವಸ್ಥಾನದ ವತಿಯಿಂದ ಅವರನ್ನು ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಅರ್ಚಕ ಹಾಗೂ ಮಾಜಿ ಮೊಕ್ತೇಸರರಾದ ಕೆ. ಸೂರ್ಯನಾರಾಯಣ ಉಪಾಧ್ಯಾಯರು, ಮೊಕ್ತೇಸರ ನಿರಂಜನ ಉಪಾಧ್ಯಾಯರು ಪರ್ಯಾಯ ಅರ್ಚಕರಾದ ಕೃಷ್ಣಾನಂದ ಉಪಾಧ್ಯಾಯರು, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.

Read More