ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಹೆರಂಜಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 13 ವರ್ಷ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಗೀತಾ ಇವರಿಗೆ ಶಾಲಾ ಅಧ್ಯಾಪಕ ವೃಂದ. ಎಸ್ ಡಿ ಎಂ ಸಿ ಸರ್ವ ಸದಸ್ಯರು ಮಕ್ಕಳ ಪಾಲಕ ಪೋಷಕರು ಹಳೆ ವಿದ್ಯಾರ್ಥಿಗಳು ವಿದ್ಯಾಭಿಮಾನಿಗಳು ಸೇರಿಕೊಂಡು ಚಿನ್ನದ ಉಂಗುರವನ್ನು ತೊಡಿಸಿ ಅಭಿನಂದನಾ ಪತ್ರವನ್ನು ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಾಗರತ್ನ ಆರ್. ಸಾಲಿಮನಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಂಬದಕೋಣೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಗಣೇಶ್ ದೇವಾಡಿಗ ಕಂಬದಕೋಣೆ ಗ್ರಾಮ ಪಂಚಾಯಿತಿ ಸದಸ್ಯ ಜಲಜಾಕ್ಷಿ ಗಾಣಿಗ, ಸಂಸ್ಕೃತ ಪಾಠಶಾಲಾ ಬಹುಳಾಪುರ ಇಲ್ಲಿಯ ಮುಖ್ಯ ಶಿಕ್ಷಕರಾದ ವಿದ್ವಾನ್ ತಿರುಮಲೇಶ್ವರ ಭಟ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಾಮಕೃಷ್ಣ ದೇವಾಡಿಗ, ಕೊಡುಗೈ ದಾನಿಗಳು ಉದ್ಯಮಿಗಳು ಧನುಷ್, ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣ ಪೂಜಾರಿ ಹಿತ್ಲ್ ಮನೆ, ಸ್ಪೂರ್ತಿ ಜನರಲ್ ಸ್ಟೋರ್ಸ್ ನ ಮಾಲಕರಾದ ಎಚ್. ವಿಜಯಕುಮಾರ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರ್ಕಾರ ವಿವಿಧ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಭಾಗದಲ್ಲಿರುವ ಸ್ಥಳೀಯ ಸಂಸ್ಥೆಗಳು ಇತರೆ ಜಿಲ್ಲೆಗಳಿಗೆ ಹೋಲಿಸಿದ್ದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಸರಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಯಥಾವತ್ತಾಗಿ ಸರಕಾರದ ಮಾರ್ಗಸೂಚಿಯನ್ವಯ ವಿಳಂಬವಿಲ್ಲದೇ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆಮಾಡಿಕೊಳ್ಳುವುದರೊಂದಿಗೆ ಇನ್ನಷ್ಟು ಉತ್ತಮ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಿ ರಾಜ್ಯಕ್ಕೆ ಮಾದರಿಯಾಗಬೇಕು ಎಂದರು. ಆಸ್ತಿ ತೆರಿಗೆ ವಸೂಲಾತಿಯಲ್ಲಿ ಬೈಂದೂರು ಹಾಗೂ ಕುಂದಾಪುರ ಸ್ಥಳೀಯ ಸಂಸ್ಥೆಗಳು ಜಿಲ್ಲೆಯ ಇತರೆ ಸ್ಥಳೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮುದಾಯದ ಅಭ್ಯುದಯಕ್ಕಾಗಿ ರೋಟರಿ ನೂರಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸ್ನೇಹ, ಸೇವೆ, ವಿಭಿನ್ನತೆಯಲ್ಲಿ ಏಕತೆಯನ್ನು ಸಾಧಿಸುವುದರೊಂದಿಗೆ ಸಮಾಜದ ಅಭ್ಯುದಯಕ್ಕಾಗಿ ಮುಂದಾಳತ್ವ ವಹಿಸಿಕೊಳ್ಳುವ ಕಾರ್ಯಗಳು ರೋಟರಿ ಮೂಲಕ ನಿರಂತರವಾಗಿ ನಡೆಯುತ್ತಲೇ ಇವೆ ಎಂದು ರೋಟರಿ ಜಿಲ್ಲೆ 3180ರ ಮಾಜಿ ಜಿಲ್ಲಾ ಗವರ್ನ್ರ್ ಡಾ. ಭರತೇಶ್ ಅದಿರಾಜ್ ಅವರು ಹೇಳಿದರು. ಅವರು ಭಾನುವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ರೋಟರಿ ಕ್ಲಬ್ ಬೈಂದೂರು ನೇತೃತ್ವದಲ್ಲಿ ಆಯೋಜಿಸಲಾದ ಆರ್.ಐ ಡಿಸ್ಟಿಕ್ 3182 ಝೋನ್-1ರ ಝೋನಲ್ ಮೆಂಬರ್ಶಿಪ್ ಡೆವೆಲಪ್ಮೆಂಟ್ ಮತ್ತು ಪಬ್ಲಿಕ್ ಇಮೇಜ್ ಸೆಮಿನಾರ್ನಲ್ಲಿ ಪಬ್ಲಿಕ್ ಇಮೇಜ್ ಬಗ್ಗೆ ಉಪನ್ಯಾಸ ನೀಡಿ ರೋಟರಿಯಿಂದ ಕೈಗೊಳ್ಳುವ ಸಮಾಜಮುಖಿ ಕಾರ್ಯಗಳನ್ನು ಸಮುದಾಯಕ್ಕೆ ತಿಳಿಯುವಂತೆ ಮಾಡುವುದು ಕೂಡ ಆಯಾ ಕ್ಲಬ್ಗಳ ಜವಾಬ್ದಾರಿಯಾಗಿದೆ. ರೋಟರಿಯ ಸಾಮಾಜಿಕ ಮೌಲ್ಯ ಹೆಚ್ಚಿಸುವಂತಹ ಕಾರ್ಯಗಳು ನಿರಂತರವಾಗಿ ಆಗಬೇಕಿದೆ ಎಂದರು. ರೋಟರಿ ಝೋನಲ್ ಲರ್ನಿಂಗ್ ಫೆಸಿಲಿಟೇಟರ್ ಡಾ. ಉಮೇಶ್ ಪುತ್ರನ್ ಅವರು ಮೆಂಬರ್ಶಿಪ್ ಡೆವಲಪ್ಮೆಂಟ್ ಬಗ್ಗೆ ಉಪನ್ಯಾಸ ನೀಡಿ ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿಯಲ್ಲಿ ವಿವಿಧ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಬಹಳಷ್ಟು ಕಾಯಿಲೆಗಳು ಮನುಷ್ಯನನ್ನು ಕಾಡುತ್ತಿದೆ. ಪಾಶ್ಚಿಮಾತ್ಯರ ಅನುಕರಣೆಯಿಂದಾಗಿ ನಮ್ಮ ಜೀವನ ಶೈಲಿಯನ್ನು ಹಾಗೂ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡಿದ್ದೇವೆ. ಇಂದಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದ್ದು, ಕಾಯಿಲೆರಹಿತವಾಗಿ ಆರೋಗ್ಯವಂತರಾಗಿ ಬದುಕಲು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕು. ದೇಹದ ರೋಗ ನಿರೋಧಕರ ಶಕ್ತಿಯನ್ನು ವೃದ್ಧಿಸಿಕೊಳ್ಳಲು ನಮ್ಮ ಸುತ್ತಮುತ್ತಲು ದೊರೆಯುವ ಔಷಧಿ ಸಸ್ಯಗಳನ್ನು ಆಹಾರ ರೂಪದಲ್ಲಿ ಹಾಗೂ ಸಣ್ಣಪುಟ್ಟ ಕಾಯಿಲೆಗಳಿಗೆ ಮನೆ ಮದ್ದಾಗಿ ಉಪಯೋಗಿಸಬಹುದು ಎಂದು ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಹೇಳಿದರು. ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ ಪ್ರಯುಕ್ತ ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ ಉದ್ಯಾವರ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕ ಇದರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಜರುಗಿದ ಉಚಿತ ಆರೋಗ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ವಿದ್ಯಾರ್ಥಿಗಳು ಶಿಸ್ತು ಹಾಗೂ ಸಮಯ ಪ್ರಜ್ಞೆಯನ್ನು ಮೈಗೂಡಿಸಿ ಕೊಂಡಾಗ ಯಶಸ್ಸು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಮತ್ತು ಮಹಿಳಾ ಕಲ್ಯಾಣ ಸಂಘದ ಉದ್ಘಾಟನೆ ಹಾಗೂ ಸಿ. ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ಪಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಋಣಾತ್ಮಕ ಚಿಂತೆಯನ್ನು ಬಿಡಬೇಕು. ಭಾವನಾತ್ಮಕ ವಿಷಯಗಳಿಗೆ ಮಹತ್ವ ನೀಡಬಾರದು. ದೈನಂದಿನ ಬದುಕಿನಲ್ಲಿ ಶೈಕ್ಷಣಿಕವಾಗಿ ಪರಿಶ್ರಮ ಹಾಕಬೇಕು. ವಾಣಿಜ್ಯ ಶಿಕ್ಷಣಕ್ಕೆ ಜಾಗತಿಕ ಮಟ್ಟದಲ್ಲಿ ಮಹತ್ವ ದೊರೆತಿದ್ದು, ಈ ನಿಟ್ಟಿನಲ್ಲಿ ಕಠಿಣ ಪರಿಶ್ರಮ ಹಾಕಿದರೆ ವಿದ್ಯಾರ್ಥಿಗಳ ಬದುಕು ಹಸನಾಗುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ. ಹಾಗೂ ಕಲಾವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ನಾರಾಯಣ ಗುರುಗಳ ತತ್ವ ಹಾಗೂ ಜೀವನ ಚರಿತ್ರೆ’ ಈ ವಿಷಯದ ಕುರಿತು ನಡೆದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಭಟ್ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ನನ್ನ ಸಿನಿಮಾದ ಕಥೆಗಳಿಗೆ ನನ್ನ ಊರು ಮತ್ತು ಯಕ್ಷಗಾನವೇ ಪ್ರೇರಣೆ ಎಂದು ಖ್ಯಾತ ನಟ- ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು. ‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ‘ಕುಂದಾಪುರ ಕನ್ನಡ ಹಬ್ಬ-2024’ರ ಮೊದಲ ದಿನವಾದ ಶನಿವಾರ ‘ಊರ ಗೌರವ’ ಸನ್ಮಾನ ಸ್ವೀಕರಿಸಿ ರಿಷಬ್ ಶೆಟ್ಟಿ ಮಾತನಾಡಿದರು. ಎಲ್ಲಿಗೆ ಹೋದರೂ, ಏನೇ ಮಾಡಿದರೂ, ಎಲ್ಲಿಂದ ಬಂದಿದ್ದೇವೆ ಎನ್ನುವುದು ಮುಖ್ಯ. ಆ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನನ್ನ ಸಿನಿಮಾದ ಎಲ್ಲ ಕಥೆಗಳಿಗೂ ಕುಂದಾಪುರದ ನನ್ನೂರು ಕೆರಾಡಿಯೇ ಕಾರಣ, ನಾನು ಬೆಳೆದ ಪರಿಸರವೇ ಪ್ರೇರಣೆ. ಅದರಲ್ಲೂ ಓದದೆಯೇ ರಾಮಾಯಣ-ಮಹಾಭಾರತದ ಸಾರ ತಿಳಿಯಲು ಯಕ್ಷಗಾನ ಕಾರಣ. ‘ಕಾಂತಾರ’ ಸಿನಿಮಾ ಚಿತ್ರೀಕರಣ ಕೂಡ ಕುಂದಾಪುರ ಪರಿಸರದಲ್ಲೇ ಆಗಿರುವುದು ಎಂದು ರಿಷಬ್ ಹೇಳಿದರು. ನಮ್ಮ ಭಾಷೆ ಸಂಸ್ಕೃತಿ ಮಕ್ಕಳಿಗೆ ಗೊತ್ತಾಗಬೇಕು. ಅದಕ್ಕಾಗಿ ಇಂಥ ಹಬ್ಬಗಳು ಅತ್ಯಗತ್ಯ. ತುಳಸಿ ಕಟ್ಟೆಗಳು ಅಪರೂಪ ಆಗಿರುವ ಈ ಕಾಲದಲ್ಲಿ ಇಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೊಲ್ಕತ್ತಾದ ಆರ್.ಜಿ.ಕರ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯನಿರತ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದೇಶಾದ್ಯಂತ 24 ಗಂಟೆಗಳ ಕಾಲ ತುರ್ತು ಸೇವೆ ಹೊರತುಪಡಿಸಿ ಇತರ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದು, ಶನಿವಾರ ಬೈಂದೂರು ಕುಂದಾಪುರ ಸೇರಿದಂತೆ ವಿವಿಧೆಡೆ ಸರಕಾರಿ ಹಾಗೂ ಖಾಸಗಿ ವೈದ್ಯರುಗಳು ಪ್ರತಿಭಟನೆ ನಡೆಸಿದ್ದಾರೆ. ಬೈಂದೂರಿನಲ್ಲಿ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿಯ ನೇತೃತ್ವದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಸರಕಾರಿ ಹಾಗೂ ಖಾಸಗಿ ವೈದ್ಯರುಗಳು ಪ್ರತಿಭಟನೆ ನಡೆಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು. ಈ ವೇಳೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್ ಅವರು ಮಾತನಾಡಿ, ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಘಟನೆ ವೈದ್ಯಕೀಯ ಸಮುದಾಯದ ಮನೋಸ್ಥೈರ್ಯವನ್ನು ಕುಗ್ಗಿಸಿದ್ದು, ವೈದ್ಯ ಸಮೂಹ ಇದನ್ನು ಗಂಭೀರವಾಗಿ ಖಂಡಿಸುತ್ತದೆ. ಘಟನೆಯಲ್ಲಿ ಭಾಗಿಯಾದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ರಕ್ಷಣೆ ಮತ್ತು ಅವರ ಮನೋಸ್ಥೈರ್ಯವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.17: ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರಸ್ ಮುಖಂಡ ಜಾಕೋಬ್ ಡಿಸೋಜಾರವರು ಇಂದು ಬೆಳಿಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ನಗರದ ಸಂಗಮ್ ಬಳಿಯ ನಿವಾಸಿಯಾದ ಜಾಕೋಬ್ ಅವರು, ಕಾಂಗ್ರೇಸ್ನ ತಳಮಟ್ಟದ ಕಾರ್ಯಕರ್ತರಾಗಿ ಕುಂದಾಪುರ ನಗರದ ಪುರಸಭಾ ಸದಸ್ಯರಾಗಿ, ಕುಂದಾಪುರ ಪುರಸಭೆಯ ಉಪಾಧ್ಯಕ್ಷರಾಗಿ ಹಾಗೂ ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ ಪುತ್ರ, ಪುತ್ರಿ ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ಪ್ರಾಣ ತ್ಯಾಗ ಬಲಿದಾನ ಮಾಡಿದ ಫಲವಾಗಿ ನಾವಿಂದು ದೇಶದಲ್ಲಿ ಶಾಂತಿಯಿಂದ ಸ್ವತಂತ್ರವಾಗಿ ನೆಲೆಸಲು ಸಾಧ್ಯವಾಗಿದೆ. ನಮ್ಮ ದೇಶ ಬಲಿಷ್ಠವಾಗಿ ಬೆಳೆಯುತ್ತಿದ್ದು, ವಿಶೇಷವಾಗಿ ರಕ್ಷಣಾ ವ್ಯವಸ್ಥೆ ಅತ್ಯಂತ ಸದೃಢವಾಗಿದೆ. ಇತರ ಎಲ್ಲಾ ರಾಷ್ಟ್ರಗಳು ನಮ್ಮ ದೇಶವನ್ನು ನೋಡುವ ಸ್ಥಿತಿಗೆ ಬಂದಿರುವುದು ದೇಶವಾಸಿಗಳಾದ ನಮ್ಮೆಲ್ಲರ ಸೌಭಾಗ್ಯ. ದೇಶದ ಪ್ರತಿಯೊಬ್ಬ ನಾಗರಿಕನು ದೇಶಾಭಿಮಾನ ಬೆಳೆಸಿಕೊಂಡು ದೇಶ ಸೇವೆಗಾಗಿ ಸಂಕಲ್ಪ ಮಾಡಬೇಕಿದೆ ಎಂದು ನಿವೃತ್ತ ಯೋದ ರಾಜೇಶ ಮೊಗವೀರ ಗಂಗೊಳ್ಳಿ ಹೇಳಿದರು. ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ – 2024 ಸಮಾರಂಭ, ದೇಶದ 78ನೇ ಸ್ವಾತಂತ್ರ್ಯೋತ್ಸವ ಹಾಗೂ ಕಾರ್ಗಿಲ್ ವಿಜಯೋತ್ಸವದ ರಜತ ಸಂಭ್ರಮಾಚರಣೆ ಪ್ರಯುಕ್ತ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಸಂಜೆ ಜರಗಿದ ಭಾರತ ಮಾತಾ ಪೂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಿವೃತ್ತ ಪೊಲೀಸ್ ಉಪನಿರೀಕ್ಷಕ ವಾಸಪ್ಪ ನಾಯ್ಕ್ ಉಡುಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.…
