Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು – 300 ಟ್ರೀಸ್ ಯೋಜನೆಯ ಭಾಗವಾಗಿ ಬೈಂದೂರು ತಾಲೂಕಿನ ನಾಯ್ಕನಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ ಮತ್ತು ಕ್ರೀಡಾ ಸಾಮಾಗ್ರಿಗಳನ್ನು ಒಳಗೊಂಡ ‘ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ’ವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿದರು. ಗ್ರಂಥಾಲಯಕ್ಕೆ ಪುಸ್ತಕಗಳನ್ನು, ಕ್ರೀಡಾ ಸಾಮಗ್ರಿಗಳನ್ನು ಹಸ್ತಾoತರಿಸಿದರು ಹಾಗೂ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಆಯೋಜಿಸಿದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು ನಂತರ ಮಾತನಾಡಿದ ಶಾಸಕರು ತಮ್ಮ ಪರಿಕಲ್ಪನೆಯ ಸಮೃದ್ಧ ಬೈಂದೂರು ಯೋಜನೆಯ ಬಗ್ಗೆ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 300 ಟ್ರೀಸ್ ಬಗ್ಗೆ ವಿವರಿಸಿದರು. ಊರಿನ ಶಾಲೆ ಅಭಿವೃದ್ಧಿಯಲ್ಲಿ ರಾಜಕೀಯ ಮಾಡದೆ ಎಲ್ಲರೂ ಸೇರಿ ಪ್ರಯತ್ನ ಮಾಡೋಣ ಎಂದು ತಿಳಿಸುತ್ತ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಊರ, ಪರ ಊರ ದಾನಿಗಳ ನೆರವನ್ನೂ ಸ್ಮರಿಸಿದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ಸ್ವಯಂಸ್ಪೂರ್ತಿ ಫೌಂಡೇಶನ್ ಜಡ್ಕಲ್ ನಾಗರಾಜ ಶೆಟ್ಟಿ ಅವರು, ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಓದಲು ಕಲಿಕಾ ಸ್ನೇಹಿ ವಾತಾವರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬ್ಯಾಂಕ್‌ಗಳ ಮ್ಯಾನೆಜರ್‌ಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಜನಸಾಮಾನ್ಯರ ದೈನಂದಿನ ಬ್ಯಾಂಕಿಂಗ್ ವ್ಯವಹಾರದಲ್ಲಿ ಉತ್ತಮ ಸೇವೆಯನ್ನು ಒದಗಿಸಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬ್ಯಾಂಕಿನ ವ್ಯವಹಾರಗಳು ಸುಲಭವಾಗಿ ಸಾರ್ವಜನಿಕರಿಗೆ ಲಭ್ಯವಾಗಲು ಹಾಗೂ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಮನ್ವಯವನ್ನು ಸುಲಭಗೊಳಿಸಲು ಬ್ಯಾಂಕ್‌ಗಳು, ಸರ್ಕಾರಿ ಸಂಸ್ಥೆಗಳು ಹಾಗೂ ಇಲಾಖೆಗಳನ್ನೊಳಗೊಂಡಂತೆ ಸಮಿತಿಯ ಸಭೆಯನ್ನು ಕರೆಯಲಾಗುತ್ತದೆ. ಈ ಸಭೆಗೆ ಎಲ್ಲಾ ವಾಣಿಜ್ಯ ಬ್ಯಾಂಕ್‌ಗಳ ಅಧಿಕಾರಿಗಳು ಅಗತ್ಯ ದಾಖಲೆಗಳೊಂದಿಗೆ ತಪ್ಪದೇ ಹಾಜರಾಗಬೇಕೆಂದು ಸೂಚನೆ ನೀಡಿದರು. ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ ಜಿಲ್ಲೆಯ ಉದ್ಯಮಿಗಳನ್ನು ಬೆಂಬಲಿಸುವುದರೊಂದಿಗೆ ಉದ್ಯೋಗಾವಕಾಶ ಸೃಷ್ಠಿಸಲು 595 ಫಲಾನುಭವಿಗಳಿಗೆ 39.98 ಕೋಟಿ ರೂ. ಸಾಲ ವಿತರಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನಸ್ಪಂದನ ಕಾರ್ಯಕ್ರಮ ಆಯೋಜಿಸುವ ಕುರಿತು ಹೆಚ್ಚಿನ ಪ್ರಚಾರ ಕೈಗೊಂಡಲ್ಲಿ ಸಾರ್ವಜನಿಕರಿಗೆ ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅನುಕೂಲವಾಗುತ್ತದೆ. ಜನಸ್ಪಂದನ ಕಾರ್ಯಕ್ರಮವನ್ನು  ಕಾಟಚಾರಕ್ಕೆ ಮಾಡದೆ ಆಗಿಂದಾಗ್ಗೆ ತಾಲೂಕು ಮಟ್ಟದಲ್ಲಿ ಕೈಗೊಳ್ಳಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಕುಂದಾಪುರ ಶಾಸ್ರೀ ಸರ್ಕಲ್ ಬಳಿಯ ಆರ್.ಎನ್.ಶೆಟ್ಟಿ ಸಭಾಭವನ (ಬಂಟರ ಯಾನೆ ನಾಡವರ ಸಂಕೀರ್ಣ) ದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಇಲಾಖೆಗಳಲ್ಲಿ ನಿತ್ಯ ಸಾರ್ವಜನಿಕರ ಕೆಲಸವನ್ನು ಸುಗಮವಾಗಿ ಆಗುವ ರೀತಿಯಲ್ಲಿ ಆಗಬೇಕು ಎಂದ ಅವರು, ಕೆಲವೊಮ್ಮೆ ಪಹಣಿ ಬದಲಾವಣೆಗೆ ವರ್ಷಗಟ್ಟಲೇ ಕಾಯುವಂತಹ ಪರಿಸ್ಥಿತಿ ಇದೆ. ಅವುಗಳು ಕಾಲಮಿತಿಯೊಳಗೆ ಆಗಬೇಕು ಎಂದರು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ ಜನಸ್ಪಂದನ ಕಾರ್ಯಕ್ರಮದಲ್ಲಿ ನೀಡಿರುವ ಅಹವಾಲುಗಳನ್ನು ಇಲಾಖೆಯ ಅಧಿಕಾರಿಗಳು ನಿರ್ಲಕ್ಷಯ ವಹಿಸದೇ ಶೀಘ್ರದಲ್ಲಿಯೇ ಸ್ಪಂದಿಸಿ, ಸಮಸ್ಯೆಗಳನ್ನು ನಿಯಮಾನುಸಾರ ಬಗೆಹರಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜನಸ್ಪಂದನ ಕಾರ್ಯಕ್ರಮವನ್ನು ಕಳೆದ ವರ್ಷದಿಂದಲೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ ವಿದ್ಯಾಸಂಸ್ಥೆಯ ವಾರ್ಷಿಕ ಸಂಚಿಕೆಯು ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಕಾರಣವಾಗುತ್ತದೆ ಸುಪ್ತ ಮನಸ್ಸಿನ ಭಾವನೆಗಳಿಗೆ ವೇದಿಕೆಯಾಗುತ್ತದೆ. ಶಿಕ್ಷಣವು ಉದ್ಯಮವಾಗುತ್ತಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಕ್ರಿಯಾಶೀಲತೆ ಶೂನ್ಯವಾಗುತ್ತಿದೆ ಇಂತಹ ಸಮಯದಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪಿಯು ಕಾಲೇಜಿನ ವಾರ್ಷಿಕ ಸಂಚಿಕೆ ವಿದ್ಯಾರ್ಥಿಗಳಲ್ಲಿನ ಕೌಶಲ್ಯವನ್ನು ಹೊರಹೊಮ್ಮಿಸುವಲ್ಲಿ ಗಮನಾರ್ಹ ಕಾರ್ಯವಾಗಿದೆ ಎಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉದಯ ಕುಮಾರ್ ಶೆಟ್ಟಿ ಹೇಳಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ 2023 – 24ನೇ ಸಾಲಿನ ಶೈಕ್ಷಣಿಕ ವರ್ಷದ ಕಾಲೇಜು ವಾರ್ಷಿಕ ಸಂಚಿಕೆ ದೃಷ್ಟಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಡಾ. ಕಾಶಿನಾಥ್ ಪೈ, ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್, ಹಿರಿಯ ಆಂಗ್ಲ ಭಾಷೆ ಉಪನ್ಯಾಸಕ ಥಾಮಸ್ ಪಿ.ಎ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸೃಷ್ಟಿ ಸ್ವಾಗತಿಸಿದರು. ಭಾರತಿ ಪರಿಚಯಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮ ಪಂಚಾಯಿತಿಗಳಲ್ಲಿನ ಜಲ್ ಜೀವನ್ ಮಿಷನ್ ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ, ಮೊಬೈಲ್ ಟವರ್ ಲೈಸೆನ್ಸ್ ನೀಡುವ ಬಗ್ಗೆ ಹಾಗೂ ಸಾರ್ವಜನಿಕರಿಗೆ ಕ್ಲಪ್ತ ಸಮಯದಲ್ಲಿ ಸೇವೆಯನ್ನು ಒದಗಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಬಗ್ಗೆ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಪ್ರತಿಕಿಯಿಸಿ, ಸಮಸ್ಯೆ ಪರಿಹಾರಕ್ಕಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಾ,ಪಂ ಕಾರ್ಯನಿರ್ವಹಣಾಧಿಕಾರಿ, ಇಂಜಿನಿಯರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ  ಕುಂದಾಪುರ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಜರೂರು ಸಭೆ ನಡೆಸಿ ಸಮಸ್ಯೆ ಪರಿಹರಿಸುವ ಬಗ್ಗೆ ತಿಳಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಆರ್.ಎನ್. ಶೆಟ್ಟಿ ಹಾಲ್ ನಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ನಡೆದ ಜನಸ್ಪಂದನ ಕಾರ್ಯಕ್ರಮ ಕೇವಲ ಕಾಟಚಾರದ ಸಭೆಯಂತಾಗಿದೆ. ಮುಖ್ಯಮಂತ್ರಿಯವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ಜನಸ್ಪಂದನ ಕಾರ್ಯಕ್ರಮವನ್ನು ಕಾಟಚಾರಕ್ಕೆ ಮಾಡಿದ ಸಂಬಂಧಿತ ಅಧಿಕಾರಿಗಳ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ. ಪತ್ರಿಕೆಯವರನ್ನು, ವಿವಿಧ ಸ್ಥರದ ಜನಪ್ರತಿನಿದಿನಗಳನ್ನು ಕಾಟಚಾರಕ್ಕೆ ಸಭೆಗೆ ಆಹ್ವಾನ ನೀಡಿ, ಸಭೆಯಲ್ಲಿ ಅರ್ಜಿಗಳ ವಿಲೇವಾರಿ ಹೆಸರಲ್ಲಿ ಮಾಧ್ಯಮದವರನ್ನು, ಜನಪ್ರತಿನಿದಿನಗಳನ್ನು, ಸಾರ್ವಜನಿಕರನ್ನು ಕತ್ತಲೆಯಲ್ಲಿ ಇಟ್ಟು ಅವರಷ್ಟಕ್ಕೆ ಅವರು ಸಭೆ ನಡೆಸಿದ್ದು ಸರ್ಕಾರದ ಜನಪರ ಕಾರ್ಯಕ್ರಮವಾದ ಜನ ಸ್ಪಂದನ ಕಾರ್ಯಕ್ರಮಕ್ಕೆ ಮಾಡಿದ ಅವಮಾನವಾಗಿದೆ. ಈ ಬಗ್ಗೆ ಕುಂದಾಪುರ ಹಾಗೂ ಬೈಂದೂರು ಶಾಸಕರ ಎದುರಲ್ಲಿ ಧ್ವನಿ ಎತ್ತಿದ ಸಾರ್ವಜನಿಕರು ಹಾಗೂ ಮಾಧ್ಯಮದವರ ವಿರುದ್ಧ ಜಿಲ್ಲಾಡಳಿತ ಬಾಯಿಮುಚ್ಚಿಸುವ ಪ್ರಯತ್ನ ಮಾಡಿದ್ದು ಜನವಿರೋಧಿ ಕ್ರಮವಾಗಿದೆ. ಸರಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ಜನಸ್ಪಂದನ ಕಾರ್ಯಕ್ರಮವನ್ನು ಕಾಟಚಾರಕ್ಕೆ ಮಾಡಿದ ಸಂಬಂಧಿತ ಅಧಿಕಾರಿಗಳ ಮೇಲೆ…

Read More

ಕುಂದಾಪುರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್‌ನಲ್ಲಿ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ. ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯದಂತಹ ಕೋರ್ಸುಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ನಿಗಮದ ವೆಬ್‌ಸೈಟ್ kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನ. ನಿಗಮದ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ದಾಖಲಾತಿಗಳನ್ನು ಜುಲೈ 8 ರ ಒಳಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, 1ನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574990 ಅಥವಾ ಉಡುಪಿ ದೂ.ಸಂ: 0820-2574596, ಕಾರ್ಕಳ ದೂ.ಸಂ: 08258-231101 ಹಾಗೂ ಕುಂದಾಪುರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜ್ಯಾದ್ಯಂತ ಕಬಾಬ್, ಮೀನು ಫ್ರೈಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದರೆ 7 ವರ್ಷಗಳವರೆಗೆ ಗರಿಷ್ಠ ಶಿಕ್ಷೆ ಹಾಗೂ 10 ಲಕ್ಷ ರೂ.ವರೆಗೆ ದಂಡ ವಿಧಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ರಾಸಾಯನಿಕ ಮಾದರಿ ಕಂಡುಬಂದಿದೆ. ಈ ಎರಡು ಅಂಶಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಎಂದು ವರದಿ ಬಂದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತ ಈ ತೀರ್ಮಾನ ಕೈಗೊಂಡಿದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಈ ಹಿಂದೆ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ ಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿತ್ತು. ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನ FSSAI…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮೊದಲ ಭಾರಿಗೆ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದರು. ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣವಚನ ತೆಗೆದುಕೊಂಡ ಕೋಟ ಈ ವೇಳೆ ಅವರು ಕನ್ನಡದ ಶಾಲು ಧರಿಸಿದ್ದು ವಿಶೇಷವಾಗಿತ್ತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿನ್ನು ಸಾಸ್ತಾನದಲ್ಲಿ ಸನ್ಮಾನಿಸಿದ ಬಳಿಕ ಅಭಿನಂದನಾ ಭಾಷಣದಲ್ಲಿ ಸಂಸತ್ತಿನ ಪ್ರಮಾಣ ಮಾಡುವಾಗ ಕನ್ನಡದ ಶಾಲು ಹಾಕಿಕೊಂಡು ಕನ್ನಡದಲ್ಲಿ ಪ್ರಮಾಣ ವಚನ ಮಾಡಬೇಕೆಂದು ಉಡುಪಿ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ವಿನಂತಿಸಿದ್ದರು. ಅಂದು ಹೊದಿಸಲಾಗಿದ್ದ ಕನ್ನಡ ಶಾಲನ್ನು ಧರಿಸಿ ಕೋಟ ಅವರು ಪ್ರಮಾಣವಚನ ಸ್ವೀಕರಿಸಿದರು. ► ಕಬಾಬ್, ಫಿಶ್ ಫ್ರೈಗೆ ಕೃತಕ ಬಣ್ಣ ಬಳಕೆಗೆ ನಿರ್ಬಂರ್ಧ. ಉಲ್ಲಂಘಿಸಿದ್ರೆ ಕಠಿಣ ಶಿಕ್ಷೆ, ದಂಡ – https://kundapraa.com/?p=73504 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 18ನೇ ಲೋಕಸಭೆಗೆ ನಾಲ್ಕನೇ ಭಾರಿ ಸಂಸತ್‌ ಸದಸ್ಯರಾಗಿ ಬಿ.ವೈ. ರಾಘವೇಂದ್ರ ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು. ಸಂಸತ್‌ ಸದಸ್ಯರಾಗಿ ಪ್ರಮಾಣ ವಚನ ತೆಗೆದುಕೊಳ್ಳುವ ಸಂದರ್ಭದಲ್ಲಿ ಬಹುತೇಕ ಸಂಸದರು ದೇವರಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಬಿ ವೈ ರಾಘವೇಂದ್ರರವರು ಮತದಾರ ದೇವರು ಎಂದು ಪ್ರಮಾಣ ವಚನವನ್ನು ಸ್ವೀಕರಿಸಿದರು. ► ಕಬಾಬ್, ಫಿಶ್ ಫ್ರೈಗೆ ಕೃತಕ ಬಣ್ಣ ಬಳಕೆಗೆ ನಿರ್ಬಂರ್ಧ. ಉಲ್ಲಂಘಿಸಿದ್ರೆ ಕಠಿಣ ಶಿಕ್ಷೆ, ದಂಡ – https://kundapraa.com/?p=73504 .

Read More