ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಋಷಿ ಮುನಿಗಳ ಕಾಲದಿಂದಲೂ ಬಂದಿರುವ ಆಯುರ್ವೇದ ಚಿಕಿತ್ಸಾ ಪದ್ದತಿಯ ಮೂಲ ವ್ಯವಸ್ಥೆಯನ್ನು ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ೨೦೧೪ರಲ್ಲಿ ಕೇಂದ್ರ ಆಯುಷ್ ಇಲಾಖೆ ಮೂಲಕ ದೇಶಾದ್ಯಂತ ದೊಡ್ಡಮಟ್ಟದಲ್ಲಿ ಚಾಲನೆ ನೀಡಿದರು. ಆಯುರ್ವೇದವೂ ಕೂಡ ವಿಜ್ಞಾನವೇ ಆಗಿದ್ದು, ನಾಟಿಮದ್ದು ಎಂಬ ಜನರ ಭಾವನೆಗಳನ್ನು ದೂರೀಕರಿಸಲು ಇಂತಹ ಮಾಹಿತಿ ಕಾರ್ಯಕ್ರಮಗಳು ಇಂದಿನ ಅನಿವಾರ್ಯ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಕಾಲ್ತೋಡು ಸರ್ಕಾರಿ ಆಯುಷ್ ಚಿಕಿತ್ಸಾಲಯದ ಆವರಣದಲ್ಲಿ ಶನಿವಾರ ಆಯುಷ್ ಇಲಾಖೆ ಬೆಂಗಳೂರು ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಗ್ರಾಪಂ ಕಾಲ್ತೊಡು, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೩-೨೦೨೪ನೇ ಸಾಲಿನ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಆಯುಷ್ ಸೇವಾ ಗ್ರಾಮ ಉದ್ಘಾಟಿಸಿ ಮಾತನಾಡಿದರು. ಸಮಯಕ್ಕೆ ಸರಿಯಾಗಿ ಉತ್ತಮ ಹಾಗೂ ಹಿತಮಿತವಾದ ಆಹಾರ ಸೇವನೆ, ಸರಿಯಾದ ಪ್ರಮಾಣದ ನಿದ್ರೆ, ಜ್ಞಾನವನ್ನು ವೃದ್ಧಿಸುವ ಬ್ರಹ್ಮಚರ್ಯೆ ಇವುಗಳು ಆರೋಗ್ಯದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಧಾರ್ಮಿಕ ಆಚರಣೆಗಳು ಶ್ರೇಯಸ್ಸು ನೀಡುವ ಜೊತೆಗೆ ಬದುಕಿಗೆ ನೆಮ್ಮದಿಯ ಸಂತೃಪ್ತಿ ನೀಡುತ್ತದೆ. ದೂರದೃಷ್ಟಿತ್ವದ ಕನಸಿನೊಂದಿಗೆ ಸಾವಿರಾರು ಕುಟುಂಬಗಳಿಗೆ ಧ.ಗ್ರಾ.ಯೋಜನೆ ಸ್ವಾವಲಂಬನೆಯ ಬದುಕು ನೀಡಿದೆ. ಸಾಮೂಹಿಕ ಸತ್ಯನಾರಾಯಣ ಪೂಜೆ ಮೂಲಕ ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರ ಕುಟುಂಬಗಳ ಜೊತೆಗೆ ಸಮಾಜಕ್ಕೂ ಕೂಡ ಒಳಿತು ನೀಡಲಿ ಎನ್ನುವುದು ಕಾವಂದರ ಆಶಯ ಎಂದು ಆಧ್ಯಾತ್ಮಿಕ ಚಿಂತಕ ಹಾಗೂ ಲೇಖಕ ಬಿ. ಚಂದ್ರಶೇಖರ ನಾವಡ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂದೂರು, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಂದೂರು ವಲಯ ಇದರ ವತಿಯಿಂದ ಯಡ್ತರೆ ಜೆಎನ್ಆರ್ ಕಲಾಮಂದಿರದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಧ.ಗ್ರಾ.ಯೋಜನೆಯ ಕೇಂದ್ರ ಸಮಿತಿ ಅಧ್ಯಕ್ಷ ಶಿರೂರು ವಾಸು ಮೇಸ್ತ ಅಧ್ಯಕ್ಷತೆವಹಿಸಿದ್ದರು. ಹಿರಿಯ ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ, ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ ಪಿ. ಆಚಾರ್ಯ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಲಾಗಿದ್ದು, ದತ್ತು ಸ್ವೀಕಾರ ಸಮಾರಂಭ ಮಾ.5ರ ಸಂಜೆ ಗಂಟೆ 6ಕ್ಕೆ ಶಾಲಾ ಆವರಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಜರುಗಲಿದೆ ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು. ಅವರು ಬೈಂದೂರು ಪ್ರೆಸ್ಕ್ಲ್ಬ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನಾನು ಕಲಿತ ಸರಕಾರಿ ಶಾಲೆಯನ್ನು ಉಳಿಸಿಕೊಳ್ಳಲು ಊರಿನವರ ಜೊತೆಗೂಡಿ ಮಾದರಿ ಶಾಲೆಯನ್ನಾಗಿ ರೂಪಿಸುವ ಉದ್ದೇಶ ಹೊಂದಿದ್ದು, ಇದಕ್ಕೆ ಶಾಲಾ ಎಸ್ಡಿಎಂಸಿ ಹಾಗೂ ಶಿಕ್ಷಕರೂ ಸಹಕಾರ ನೀಡುತ್ತಿದ್ದಾರೆ ಎಂದರು. ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ, ಮೂಲ ಸೌಕರ್ಯ ಒಳಗೊಂಡಂತೆ ಗುಣಮಟ್ಟದ ಶಿಕ್ಷಣ ನೀಡಲು ಚಿಂತನೆ ನಡೆಸಲಾಗಿದೆ. ಪ್ರಾರಂಭದಲ್ಲಿ ಹೊಸ ವಾಹನ ಖರೀದಿ, ಹೊಸ ಅತಿಥಿ ಶಿಕ್ಷಕರ ನೇಮಕಾತಿ ಮಾಡುವುದು, ಎಲ್ ಕೆಜಿ, ಯುಕೆಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂವಿಧಾನ ಜಾಗೃತಿಯ ಅಂಗವಾಗಿ ಸಾಲಿಗ್ರಾಮ ಕಾಯಾಕಿಂಗ್ ಪಾಯಿಂಟ್ ನಲ್ಲಿ ವಿನೂತನವಾಗಿ ಪ್ರವಾಸಿ ಬೋಟನ್ನು ಸಂವಿಧಾನ ಜಾಗೃತಿ ಪಥವನ್ನಾಗಿ ವಿನ್ಯಾಸಗೊಳಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂವಿಧಾನ ಜಾಗೃತಿ ಪಥಕ್ಕೆ ಈ ಮೂಲಕ ಚಾಲನೆ ನೀಡಲಾಯಿತು. ಸೀತಾ ನದಿಯಲ್ಲಿ ಕಾಯಾಕಿಂಗ್ ಮೂಲಕ ತೆರಳಿ ಮ್ಯಾಂಗ್ರೋ ಕಾಡುಗಳ ಮಧ್ಯೆ ನೀರಿನಲ್ಲಿ 75ಎಂದು ಕಾಯ ಕಿಂಗ್ ದೋಣಿಗಳನ್ನು ಬಳಸಿ ವಿನ್ಯಾಸಗೊಳಿಸಲಾಯಿತು. ಸಾಲಿಗ್ರಾಮ ಕಯಾಕಿಂಗ್ ಪಾಯಿಂಟ್ನಲ್ಲಿ ಇದಕ್ಕೂ ಮೊದಲು ಮತದಾನ ಜಾಗೃತಿ, ಪ್ಲಾಸ್ಟಿಕ್ ಜಾಗ್ರತಿ, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳನ್ನು ನವ ನವೀನ ಮಾದರಿಯ ಪ್ರಯೋಗಗಳ ಮೂಲಕ ಜನರಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತಲೇ ಬಂದಿದೆ. ಇದೀಗ ಸಂವಿಧಾನ ಜಾಗ್ರತಿ ಕಾರ್ಯಕ್ರಮವನ್ನು ಪ್ರಕೃತಿ ಮಡಿಲಲ್ಲಿ ಮಾಡಿ ಅಧಿಕಾರಿಗಳಿಂದ ಸೈ ಎನಿಸಿಕೊಂಡಿದೇ. ಈ ಸಂದರ್ಭದಲ್ಲಿ ಸಿಇಓ ಪ್ರತೀಕ್ ಬಾಯಲ್ ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್ ಆರ್, ಉಡುಪಿ ಎಡಿಸಿ ಮಮತಾ ದೇವಿ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕಿ ಅನಿತಾ ಮಡ್ಲೂರು, ಪ್ರೊಬೇಷನರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿರುವ ಸದಾಶಿವ ಡಿ. ಪಡುವರಿ, ನಾಗರಾಜ ಶೆಟ್ಟಿ ನಾಕಟ್ಟೆ ಹಾಗೂ ನಾಗರಾಜ ಗಾಣಿಗ ಬಂಕೇಶ್ವರ ಅವರು ಬುಧವಾರ ಪಟ್ಟಣ ಪಂಚಾಯತಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಸದಸ್ಯರ ಪರವಾಗಿ ಸದಾಶಿವ ಡಿ. ಪಡುವರಿ ಮಾತನಾಡಿ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ವ್ಯವಸ್ಥೆಯಲ್ಲಿ ಸಾಕಷ್ಟು ವೈರುಧ್ಯವಿದ್ದು, ಸಾಮಾನ್ಯ ಜನರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ. ಈ ನಿಟ್ಟಿನಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಜನರು ಹಾಗೂ ಸ್ಥಳೀಯ ಸರಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತೇವೆ ಎಂದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸೂರ್ಯಕಾಂತ್ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ಕೆ. ಬಾಬು ಶೆಟ್ಟಿ, ಶಂಕರ ಪೂಜಾರಿ, ಪುಪ್ಪರಾಜ ಶೆಟ್ಟಿ, ಅರವಿಂದ ಪೂಜಾರಿ, ಮೋಹನ್ ಪೂಜಾರಿ, ಗಣೇಶ್ ಪೂಜಾರಿ, ವೆಂಕಟರಮಣ ದೇವಾಡಿಗ ಮೊದಲಾದವರು ಮಾತನಾಡಿದರು. ಸದಸ್ಯರ ಹಿತೈಶಿಗಳು ಅಭಿನಂದಿಸಿದರು. ಶಿಕ್ಷಕ ಸುಧಾಕರ ಪಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.19: ಮಾನವ ಕಳ್ಳತನ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಕೆಯಾಗಿ ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದ್ದು, ಇದನ್ನು ತಡೆಗಟ್ಟುವಲ್ಲಿ ಸೂಕ್ತ ಕಾನೂನಿನ ಕ್ರಮವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು. ಅವರು ಇಂದು ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ನಡೆದ ಜಿಲ್ಲಾ ಮಟ್ಟದಲ್ಲಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದರು. ದೇಶದಲ್ಲಿ ಇಂತಹ ಅಪರಾಧಗಳನ್ನು ತಡೆಗಟ್ಟಲು ಅತ್ಯುತ್ತಮ ಕಾನೂನು ವ್ಯವಸ್ಥೆಗಳು ಇದ್ದರೂ ಸಹ, ಕಾನೂನುಗಳ ಅರಿವು ಹಾಗೂ ಸಮನ್ವಯದ ಕೊರತೆಯಿಂದಾಗಿ ಮಾನವ ಕಳ್ಳ ಸಾಗಾಣಿಕೆಯು ಬೆಳೆಯುತ್ತಿದ್ದು, ಕಾನೂನುಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಸ್ರೂರು ವಲಯದ ಕಂಡ್ಲೂರು ಕಾರ್ಯಕ್ಷೇತ್ರದಲ್ಲಿ ಸುತಾರ ಕೆರೆಯನ್ನು ಆಯ್ಕೆ ಮಾಡಿದ್ದು, ಕೆರೆ ಅಂಗಳದಲ್ಲಿ ಈ ದಿನ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಯೋಜನೆಯ ಪ್ರಾದೇಶಿಕ ಕಚೇರಿಯ ತಪಾಸಣಾ ವಿಭಾಗದ ಯೋಜನಾಧಿಕಾರಿ ಅಮರ್ ಪ್ರಸಾದ್ ಅವರು ಶುಭ ಹಾರೈಸಿ ಗುದ್ದಲಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕೆರೆ ಸಮಿತಿಯ ಅಧ್ಯಕ್ಷರು ದಿನಕರ ಆಚಾರ್, ಕಂಡ್ಲೂರು ಒಕ್ಕೂಟದ ಅಧ್ಯಕ್ಷರಾದಂತಹ ಗೌರಿ ಆರ್. ಶ್ರೀಯನ್, ಕಾವ್ರಾಡಿ ಒಕ್ಕೂಟ ಅಧ್ಯಕ್ಷರಾದ ಶಂಕರ್ ಆಚಾರ್, ನೇತಾಜಿ ಶಾಲೆಯ ಸಂಚಾಲಕರು ಹಾಗೂ ಕೆರೆ ಸಮಿತಿಯ ಗೌರವ ಅಧ್ಯಕ್ಷರಾದ ಸುಭಾಷ್ ಚಂದ್ರ ಶೆಟ್ಟಿ, ಕುಂದಾಪುರ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ರಾಜೇಂದ್ರ ಕುಮಾರ್, ಬಸ್ರೂರಿನ ಸಂಜು ಮೇಸ್ತ್ರಿ, ಕೆರೆ ಸಮಿತಿಯ ಉಪಾಧ್ಯಕ್ಷರು, ಖಜಾಂಜಿ, ಕೆರೆ ಸಮಿತಿಯ ಸದಸ್ಯರು, ಸ್ಥಳೀಯ ಸೇವಾಪ್ರತಿನಿಧಿಗಳು, ಹಿಟಾಚಿ ಡ್ರೈವರ್, ಕಾವ್ರಾಡಿ ಒಕ್ಕೂಟದ ಹಾಗೂ ಕಂಡ್ಲೂರು ಒಕ್ಕೂಟದ ಸದಸ್ಯರು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಫೆ.18: ಕರಾವಳಿಗರ ಒಕ್ಕೂಟ (ರಿ) ಬೆಂಗಳೂರು ಇವರ ನೇತೃತ್ವದಲ್ಲಿ ಫೆಬ್ರವರಿ 25ರ ಭಾನುವಾರ ಇಲ್ಲಿನ ಜೆ.ಪಿ ನಗರದ ಆರ್ಬಿಐ ಲೇಔಟ್ ಬಿಬಿಎಂಪಿ ಆಟದ ಮೈದಾನದಲ್ಲಿ ನಮ್ಮ ಕರಾವಳಿ ಉತ್ಸವ ಆಯೋಜಿಸಲಾಗಿದ್ದು ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಕರಾವಳಿ ಒಕ್ಕೂಟ ಬೆಂಗಳೂರಿನ ಅಧ್ಯಕ್ಷ ಕೆ. ಸುಬ್ರಾಯ ಭಟ್ ಹೇಳಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿ ಈ ಉತ್ಸವದಲ್ಲಿ ಕರಾವಳಿಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನು ಹಂದಾಡಿ ಯವರಿಂದ ನಗೆ ಹಬ್ಬ, ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಮೂಡಬಿದ್ರೆ ಇವರ ನಗೆ ಬುಗ್ಗೆ, ಅಂಭಾಭವಾನಿ ಮರಾಠಿ ಸಾಂಸ್ಕೃತಿಕ ಕಲಾ ವೇದಿಕೆ (ರಿ) ಪರ್ಕಳ ಇವರಿಂದ ಕರಾವಳಿ ಕಲಾ ವೈಭವ, ಹುಲಿ ಕುಣಿತ, ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು ಮಂದಾರ್ತಿ ಇವರಿಂದ ಶಿವದೂತ ಪಂಜುರ್ಲಿ ಯಕ್ಷಗಾನ, ಕರಾವಳಿಯ ಹುಲಿವೇಷ, ಗ್ರಾಮೀಣ ಕ್ರೀಡೆಗಳಾದ ಹಗ್ಗ ಜಗ್ಗಾಟ, ಮಡಿಕೆ ಒಡೆಯುವ ಸ್ಪರ್ಧೆ, ಚುಕ್ಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅರಾಟೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕೆನರಾ ಬ್ಯಾಂಕ್ ಮರವಂತೆ ಶಾಖಾ ಪ್ರಬಂಧಕ, ಮುಂಬಯಿ ಮೂಲದ ರಾಹುಲ್ ಬಾಲಕೃಷ್ಣ ರಂಖಬ್ಮೆ ಮೃತ ದುರ್ದೈವಿ. ಬೈಂದೂರು ಕಡೆಯಿಂದ ಕುಂದಾಪುರ ಕಡೆಯಿಂದ ಚಲಿಸುತ್ತಿದ್ದ ಲಾರಿ ಅರಾಟೆ ಬಳಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಮ್ಯಾನೇಜರ್ ರಾಹುಲ್ ಕುಂದಾಪುರದಲ್ಲಿ ವಾಸವಿದ್ದು, ಕೆಲಸ ಮುಗಿಸಿ ಮನೆಗೆ ತೆರಳುವ ಸಂದರ್ಭ ಈ ಅಪಘಾತ ಸಂಭವಿಸಿದೆ. ವರ್ಷದ ಹಿಂದಷ್ಟೇ ಅವರು ಮದುವೆಯಾಗಿದ್ದರು. ಬ್ಯಾಂಕಿನಲ್ಲಿಯೂ ಗ್ರಾಹಕರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದರು. ಅಪಘಾತದ ಬಳಿಕ ಲಾರಿ ಸಹಿತ ಚಾಲಕ ಪರಾರಿಯಾಗಲು ಯತ್ನಿಸಿದ್ದಾನೆ. ಲಾರಿಯನ್ನು ಹೆಮ್ಮಾಡಿ ಪೇಟೆಯೊಳಗೆ ನುಗ್ಗಿಸಿ ಪುನಃ ಬೈಂದೂರು ಕಡೆಗೆ ತೆರಳಿದ್ದು, ಮುಳ್ಳಿಕಟ್ಟೆ ಡಿವೈಡರ್ ಒಳಗೆ ರಾಂಗ್ ಸೈಡ್ನಲ್ಲಿ ತನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪುರಾಣಗಳಲ್ಲಿ ಗಣಪತಿಗೆ ಮೊದಲ ಪೂಜೆ ಸಲ್ಲಬೇಕು ಎಂದು ಹೇಳಲಾಗಿದ್ದರೂ ಗುರುವಿನ ಮಾರ್ಗದರ್ಶನದಲ್ಲಿ ಭಕ್ತಿ ನಿಷ್ಠೆಯಿಂದ ಭಗವಂತನನ್ನು ಧ್ಯಾನಿಸಿದಾಗ ಆತ್ಮದ ಎಲ್ಲಾ ನ್ಯೂನ್ಯತೆಗಳನ್ನು ಹೋಗಲಾಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಶ್ರೀ ಕಾಶೀ ಮಠಾಧೀಶ ಪರಮಪೂಜ್ಯ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದಂಗಳವರು ಹೇಳಿದರು. ಉಪ್ಪುಂದ ಅಂಬಾಗಿಲು ಶ್ರೀ ಅಶ್ವತ್ಥನಾರಾಯಣ ಮೂಡುಗಣಪತಿ ದೇವರ ಪ್ರೀತ್ಯರ್ಥವಾಗಿ ನೂತನವಾಗಿ ನಿರ್ಮಿಸಿರುವ ರಜತ ತೊಟ್ಟಿಲು ಹಾಗೂ ರಜತ ದ್ವಾರವನ್ನು ದೇವರಿಗೆ ಸಮರ್ಪಿಸಿ, ಪೂಜಾವಿಧಿಗಳನ್ನು ನೆರವೇರಿಸಿ ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಗುರುಗಳ ಆಶೀರ್ವಾದ ಮತ್ತು ಮಾರ್ಗದರ್ಶನದ ಮೂಲಕ ಮಾಡುವ ಪುಣ್ಯಕಾರ್ಯವನ್ನು ದೇವರು ಯಾವುದನ್ನೂ ಪರಿಶೀಲಿಸದೇ ಭಕ್ತರಿಗೆ ಅನುಗ್ರಹಿಸುತ್ತಾನೆ. ನಾವು ಶ್ರದ್ದಾ, ಭಕ್ತಿಯಿಂದ ದೇವರ ಆರಾಧಿಸುವುದೇ ಆಧ್ಯಾತ್ಮ. ಮೌಢ್ಯತೆ ಬಿಟ್ಟು ದೈವತ್ವದೆಡೆಗೆ ಹೋಗಬೇಕಾದರೆ ಉತ್ತಮ ಸಂಸ್ಕಾರ ಹಾಗೂ ಆಧ್ಯಾತ್ಮಿಕವಾಗಿ ಸಾಗಬೇಕು. ಯಜ್ಞಗಳ ಮೂಲಕ ನಡೆದ ಇಂದಿನ ರಜತ ದಾನದ ಪುಣ್ಯಫಲ ಸಮಸ್ತ ಜಿಎಸ್ಬಿ ಸಮಾಜ ಮತ್ತು ಗ್ರಾಮಸ್ಥರಿಗೆ ಸಲ್ಲುತ್ತದೆ ಎಂದು ಹರಸಿದರು. ಬೆಳಿಗ್ಗೆ ಅರ್ಚಕ…
