ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.24: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪಿಯು ಕಾಲೇಜುಗಳ ವಿದ್ಯಾರ್ಥಿಗಳಿಗೆ ಜುಲೈ 25ರ ಮಂಗಳವಾರ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳ ಜೊತೆಗೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಮತ್ತು ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಆದೇಶಿಸಿದ್ದಾರೆ. ಜುಲೈ 24ರಂದು ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಜುಲೈ 25ಕ್ಕೂ ಮುಂದುವರಿಸಲಾಗಿದೆ. ಮಂಗಳೂರು ವಿವಿಯಿಂದ ನಡೆಯಬೇಕಿದ್ದ ಮಂಗಳವಾರದ ಪರೀಕ್ಷೆಯನ್ನೂ ಮುಂದೂಡಲಾಗಿದೆ. ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳ ತೋಡುಗಳು ತುಂಬಿ ಹರಿಯುತ್ತಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.24: ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಸೂಚನೆ ಇದ್ದು, ಸದ್ಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಜುಲೈ 24, 25 ರೆಡ್ ಅಲರ್ಟ್ ಘೋಷಿಸಲಾಗಿದೆ. ಜು.29ರ ತನಕವೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಆರೆಂಟ್ ಅಲರ್ಟ್ ನೀಡಲಾಗಿದೆ. ಇನ್ನು ಬಾಗಲಕೋಟೆ, ಬೆಳಗಾವಿ,ಹವಾರಿ, ಕಲಬುರಗಿ, ಹಾವೇರಿ, ಹಾಸನ ವಿಜಯಪುರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ.24ರಿಂದ 28ರ ತನಕ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಮುಂದಿನ ಒಂದು ವಾರಗಳ ಕಾಲ ದಿನಗಳ ಕಾಲ ಮಳೆ ಅರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಭಾರಿ ಗಾಳಿ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಮನೆ, ಕೊಟ್ಟಿಗೆಗೆ ಹಾನಿ, ಮರ ಬಿದ್ದಿರುವ ಘಟನೆ ನಡೆದಿದೆ. ನದಿ ಪಾತ್ರದ ಪ್ರದೇಶಗಳಲ್ಲಿ ನೀರಿನ ಹರಿವು ಹೆಚ್ಚಿದ್ದು, ನೆರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ರಿ. [ಎಸ್ಕೆಪಿಎ] ಇದರ ಕುಂದಾಪುರ – ಬೈಂದೂರು ವಲಯದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಉಪ್ಪುಂದ, ಕಾರ್ಯದರ್ಶಿಯಾಗಿ ದಿನೇಶ್ ರಾಯಪ್ಪನ ಮಠ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಶಂಕರನಾರಾಯಣದಲ್ಲಿ ನಡೆದ ಜೆಸಿಐ ಭಾರತ ವಲಯ 15ರ ಬೆಳವಣಿಗೆ ಅಭಿವೃದ್ಧಿ ಮತ್ತು ವ್ಯವಹಾರ ಸಮ್ಮೇಳನದಲ್ಲಿ ಜೆಸಿಐ ಉಪ್ಪುಂದ ಪ್ರಸ್ತಕ್ತ ಸಾಲಿನ್ಲಲಿ ಅತ್ಯುತ್ತಮ ಕಾರ್ಯಕ್ರಮವನ್ನು ಆಯೋಜಿಸಿದಕ್ಕಾಗಿ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಅವರಿಗೆ ಬಿಸಿನೆಸ್ ವಿಭಾಗದಲ್ಲಿ ವಲಯದ ಟಾಪ್ ತ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ವಲಯ್ಯಾಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ, ಬಿಸಿನೆಸ್ ವಿಭಾಗದ ನಿರ್ದೇಶಕರಾದ ನಾಗರಾಜ್ ಪೂಜಾರಿ ನಿಕಟಪೂರ್ವ ಅಧ್ಯಕ್ಷರಾದ ರಾಯನ್ ಉದಯ್ ಕ್ರಾಸ್ತಾ, ಕಾರ್ಯಕ್ರಮ ವಿಭಾಗದ ನಿರ್ದೇಶಕರಾದ ಅಕ್ಷತಾ ಗಿರೀಶ್ ಉಪಾಧ್ಯಕ್ಷರಾದ ಮಂಜುನಾಥ್ ದೇವಾಡಿಗ ಪೂರ್ವ ಅಧ್ಯಕ್ಷರಾದ ಪ್ರಕಾಶ್ ಭಟ್, ಮಂಗೇಶ್ ಶ್ಯಾನುಭಾಗ್, ಸುಬ್ರಮಣ್ಯ ಜಿ, ಪುರಂದರ ಖಾರ್ವಿ, ಹಿರಿಯ ಸದಸ್ಯರಾದ ಗುರುರಾಜ್ ಹೆಬ್ಬಾರ್, ಶಿವಾನಂದ ಗಾಣಿಗ ಜೇಸಿರೇಟ್ ಅಧ್ಯಕ್ಷರಾದ ರೇಖಾ ಜೆಜೆಸಿ ಅಧ್ಯಕ್ಷರಾದ ನಿಶಾ ಸಂತೋಷ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸ್ನೇಹಿತರೊಂದಿಗೆ ಜಲಪಾತಕ್ಕೆ ತೆರಳಿದ್ದ ಯುವಕನೋರ್ವ ಕಾಲುಜಾರಿ ನೀರಿನಲ್ಲಿ ಬಿದ್ದು ಕೊಚ್ಚಿಹೋದ ಘಟನೆ ಕೊಲ್ಲೂರು ಸಮೀಪದ ಅರಶಿನಗುಂಡಿ ಎಂಬಲ್ಲಿ ನಡೆದಿದೆ. ನೋಡ ನೋಡುತ್ತಿದ್ದಂತೆ ನೀರಿಗೆ ಬಿದ್ದ ಈ ಘಟನೆ ಸ್ನೇಹಿತನ ಮೊಬೈಲಿನಲ್ಲಿ ಸೆರೆಯಾಗಿದೆ. ಭದ್ರಾವತಿ ತಾಲೂಕಿನ ಸುಣ್ಣದಹಳ್ಳಿ ನಿವಾಸಿ ಶರತ್ (23) ನೀರುಪಾಲಾದ ಯುವಕ. ಶರತ್ ಹಾಗೂ ಗುರುರಾಜ ಜೊತೆಗೂಡಿ ಭಾನುವಾರದಂದು ಭದ್ರಾವತಿಯಿಂದ ಕೊಲ್ಲೂರು ಗ್ರಾಮದ ಅರಶಿನಗುಂಡಿ ಜಲಪಾತ ನೋಡಲು ತೆರಳಿದ್ದಾರೆ. ಮಧ್ಯಾಹ್ನ 3-30ರ ಹೊತ್ತಿಗೆ ಜಲಪಾತ ಬಳಿ ಬಂಡೆಯ ಮೇಲೆ ನಿಂತಿದ್ದ ಶರತ್ ಆಯತಪ್ಪಿ ಕಾಲು ಜಾರಿ ಸೌಪರ್ಣಿಕ ನದಿಗೆ ಬಿದ್ದಿದ್ದು ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಶರತ್ ಪತ್ತೆಗೆ ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲು ಜಾರಿ ಬೀಳುವ ವೀಡಿಯೋ ಸ್ನೇಹಿತನ ಮೊಬೈಲಿನಲ್ಲಿ ಸೆರೆಯಾಗಿದೆ. ಅಪಾಯಕಾರಿ ನೀರಿನ ಹರಿವು ಹಾಗೂ ಬಂಡೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.23: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆ ವ್ಯಾಪ್ತಿಯ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.24ರ ಸೋಮವಾರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ, ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಹರಿವು ಇದ್ದು, ಮುಂದಿನ 24 ಗಂಟೆಯಲ್ಲಿ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲಮೋ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೊಷಿಸಿಲ್ಲ. ಆದರೆ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಮತ್ತು ಹಳ್ಳ ತೊರೆಗಳನ್ನು ದಾಟಿ ಬರುವ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಇರಲು ಸೂಚಿಸುವುದು, ಶಿಥಿಲ ಕಟ್ಟಡದಲ್ಲಿ ತರಗತಿ ನಡೆಸದಿರುವುದರ ಬಗ್ಗೆ ತಿಳಿಸಿದ್ದಾರೆ. ಮೊದಲು ಬೈಂದೂರು ತಾಲೂಕಿನ ಶಾಲಾ ಕಾಲೇಜಿಗೆ ಮಾತ್ರ ರಜೆ ಘೋಷಿಸಿ ಆದೇಶಿಸಿದ್ದರು. ಬಳಿಕ ಜಿಲ್ಲೆಗೆ ರಜೆ ಘೋಷಿಸಿ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ಯುವಪೀಳಿಗೆ ಭವಿಷ್ಯದ ಬದುಕಿಗಾಗಿ ಪರಿಸರದ ಮಹತ್ವವನ್ನು ಅರಿತು ಗಿಡಮರಗಳ ಉಳಿವಿಗೆ ಕೈಜೋಡಿಸಬೇಕಾಗಿದೆ ಎಂದು ಕೋಟ ಆರಕ್ಷಕ ಠಾಣೆಯ ಉಪನಿರೀಕ್ಷಕ ಶಂಭುಲಿಂಗಯ್ಯ ಕರೆ ನೀಡಿದ್ದಾರೆ. ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ (ರಿ.) ಉಳ್ತೂರು ಇವರ ವತಿಯಿಂದ ಉಳ್ತೂರಿನ ದೇವಸ್ಥಾನದ ವಠಾರದಲ್ಲಿ ಆಯೋಜಿಸಿದ್ದ “ಹಸಿರೇ ಉಸಿರು” ವನಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಗಿಡಮರಗಳ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಕೆದೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್ ಶೆಟ್ಟಿ ಮತ್ತು ವಿಜಯ್ ಕುಮಾರ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು. ಯುವಕ ಮಂಡಲದ ಅಧ್ಯಕ್ಷ ಅರುಣ್ ಶೆಟ್ಟಿ ಪ್ರಾಸ್ಥಾವಿಕ ಮಾತನಾಡಿದರು. ಗೌರವಾಧ್ಯಕ್ಷ ವೆಂಕಟೇಶ್ ಅಡಿಗ ಸ್ವಾಗತಿಸಿ, ಕಾರ್ಯದರ್ಶಿ ಹರೀಶ್ ಆಚಾರ್ಯ ವಂದಿಸಿದರು. ಪ್ರತಾಪ್ ಶಟ್ಟಿ ಉಳ್ತೂರು ಕಾರ್ಯಕ್ರಮ ನಿರೂಪಿಸಿದರು. ಉಳ್ತೂರು ಗ್ರಾಮದ ಸುಮಾರು 440 ಮನೆಗಳಿಗೂ ಸಸಿ ವಿತರಿಸುವುದು ಮತ್ತು ಉತ್ತಮವಾಗಿ ಸಾಕಿ ಸಲಹಿದವರಿಗೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸೂಕ್ತ ಸನ್ಮಾನ ಮತ್ತು ಗೌರವ ನೀಡಲು ತೀರ್ಮಾನಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಮಕ್ಷತ್ರಿಯ ಸಮುದಾಯವು ಸಮಾಜದಲ್ಲಿ ಪ್ರಗತಿಯ ಹಾದಿಯಲ್ಲಿದೆ. ಮುಂದೆ ಸಾಗಿದವರು ಎಲ್ಲರನ್ನೂ ಒಂದುಗೂಡಿಸಿಕೊಂಡು ಕೊಂಡೊಯ್ಯುವ ಮಹತ್ತರ ಕಾರ್ಯದಲ್ಲಿಯೂ ತೊಡಗಿಕೊಂಡಿದ್ದಾರೆ. ಹಾಗಾಗಿಯೇ ಇಂದು ವಿದ್ಯಾರ್ಥಿವೇತನ, ಮನೆನಿರ್ಮಾಣ ಸೇರಿದಂತೆ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಸಾಕಾರಗೊಳಿಸಲು ಸಾಧ್ಯವಾಗಿದೆ ಎಂದು ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ಹೇಳಿದರು. ಅವರು ಭಾನುವಾರ ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ರಿ. ಬೈಂದೂರು ಇದರ 11ನೇ ವರ್ಷದ ಟ್ರಸ್ಟ್ ದಿನಾಚರಣೆ ಹಾಗೂ ಸಾರ್ವಜನಿಕ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಇಂದು ಬದುಕಿನಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದು, ಅದಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯುವಂತಾಗಬೇಕುಎಂದರು. ಪ್ರೊಫೆಸರ್ ಡಾ. ಶಿವಾನಂದ ನಾಯಕ್ ಅವರು ಮಾತನಾಡಿ, ಆಧುನಿಕ ಯುಗದಲ್ಲಿ ಬದಲಾದ ಜೀವನಶೈಲಿ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಆದರೆ ನಮ್ಮ ದೇಹದ ಸಮಸ್ಯೆಗಳ ಬಗ್ಗೆಯೇ ಕಾಳಜಿ ಇಲ್ಲದೇ ಇದ್ದರೆ ಮುಂದೆ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಸರಳ ಯೋಗಾಭ್ಯಾಸ, ಆಹಾರ ಕ್ರಮಗಳನ್ನು ಅನುಸರಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಪ್ರದೇಶಗಳಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಬಸ್ ಸೌಕರ್ಯವೂ ಕಡಿಮೆ ಇದೆ. ಈಗಾಗಲೇ ನಿಗದಿತ ಸಮಯಕ್ಕೆ ತೆರಳುತ್ತಿದ್ದ ಬಸ್ ಸಮಯವನ್ನು ಬದಲಿಸಿ ಮತ್ತಷ್ಟು ತೊಂದರೆ ಮಾಡಲಾಗಿದೆ. ಬಸ್ ಸಮಯ ಬದಲಿಸುವಂತೆ ಆಗ್ರಹಿಸಿ ಮುದೂರು, ಕೆರಾಡಿ ಭಾಗದ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶನಿವಾರ ಎದುರು ಪ್ರತಿಭಟನೆ ನಡಸಿದರು. ವಿದ್ಯಾರ್ಥಿ ಪ್ರತಿನಿಧಿ ಕವಿತಾ ಆಚಾರ್ಯ ಮಾತನಾಡಿ, ಕುಂದಾಪುರದಿಂದ ಮುದೂರು ಮತ್ತು ಕೆರಾಡಿ ಭಾಗಕ್ಕೆ ಸಂಜೆ 4:30ಕ್ಕೆ ಇದ್ದ ಸರಕಾರಿ ಬಸ್ ಸಮಯ ಬದಲಿಸಿ ಸಂಜೆ 5 15ಕ್ಕೆ ಮಾಡಿರುವುದು ಸಮಸ್ಯೆ ಉಂಟುಮಾಡಿದೆ. ಬಸ್ ಇಳಿದು ಕಾಡು ಪ್ರದೇಶದಲ್ಲಿ 2 ರಿಂದ 3ಕಿ.ಮೀ ನೆಡೆದುಕೊಂಡು ಹೊಳೆ, ಕಾಲುಸಂಕ ದಾಟಿ ಹೋಗುವಷ್ಟರಲ್ಲಿ ರಾತ್ರಿಯಾಗುತ್ತದೆ. ವಿದ್ಯಾರ್ಥಿನಿಯರಿಗೆ ಏನಾದರೂ ಸಮಸ್ಯೆಗಳಾದಲ್ಲಿ ಹೊಣೆ ಯಾರು ಎಂದವರು ಪ್ರಶ್ನಿಸಿದರು. ಮೊದಲಿನ ಸಮಯಕ್ಕೆ ಕುಂದಾಪುರದಿಂದ ಸರಕಾರಿ ಬಸ್ಸುಗಳು ಹೊರಡುವಂತೆ ಮಾಡಬೇಕು, ಅವ್ಯವಸ್ಥೆ ಹೀಗೆಯೇ ಮುಂದುವರಿದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟಿಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು. ಈ ವೇಳೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆಎಂಎಫ್ ಉತ್ಪನ್ನವಾದ ನಂದಿನಿ ಹಾಲು ಖರೀದಿ ದರವನ್ನು ಪ್ರತಿ ಲೀಟರಿಗೆ ರೂ.3 ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿರುವುದು ರಾಜ್ಯದ ಹೈನುಗಾರರಿಗೆ ಬಲ ತುಂಬಿದಂತಾಗಿದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುವುದಾಗಿ ದ.ಕ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ, ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ. ಅವಿಭಜಿತ ದಕ ಜಿಲ್ಲೆಯಲ್ಲಿ ಸುಮಾರು 65 ಸಾವಿರ ಹೈನುಗಾರರಿಂದ ಹಾಲು ಶೇಖರಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ ಪಶು ಆಹಾರದ ಬೆಲೆಯನ್ನು ಹೆಚ್ಚಿಸಲಾಗಿತ್ತು ಆದರೆ ಅದಕ್ಕೆ ತಕ್ಕಂತೆ ಹಾಲು ಖರೀದಿ ದರ ಏರಿಕೆಯಾಗಿರಲಿಲ್ಲ. ಪಶುಪಾಲನೆಯ ಸಂಕಷ್ಟದ ಜೊತೆಗೆ ಹಾಲಿಗೆ ಸರಿಯಾದ ಧಾರಣೆ ಸಿಗದಿರುವುದರಿಂದ ರೈತರು ಕಂಗಾಲಾಗಿದ್ದು, ತಮ್ಮ ಜಾನುವಾರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೆಎಂಎಫ್ ಖರೀದಿ ದರವನ್ನು ರೂ.5ಕ್ಕೆ ಏರಿಸುವ ಬೇಡಿಕೆ ಇರಿಸಿದ್ದು, ಸದ್ಯ ರೂ.3 ಏರಿಸಲು ನಿರ್ಣಯಿಸಲಾಗಿದೆ. ಇದು ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಪ್ರೋತ್ಸಾಹಿಸಿದಂತಾಗಿದೆ ಎಂದಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಹಾಲು…
