ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತು ಜೆಇಇ ಬಿ ಪ್ಲಾನಿಂಗ್‌ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಈ ವರ್ಷವೂ ಅತ್ಯುನ್ನತ ಫಲಿತಾಂಶ ಪಡೆದುಕೊಂಡಿದೆ. ಬಿ ಆರ್ಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ತೇಜಸ್ ವಿ. ನಾಯಕ್ 99.42 ಪಸೆಂಟೈಲ್, ಸಾಚಿ ಶಿವಕುಮಾರ್ ಕಡಿ 99.33 ಪಸೆಂಟೈಲ್ ಗಳಿಸಿ ಉತ್ತಮ ಸಾಧನೆಗೈದಿದ್ದಾರೆ. ಬಿ ಪ್ಲಾನಿಂಗ್ ಫಲಿತಾಂಶದಲ್ಲಿ ತೇಜಸ್ ವಿ. ನಾಯಕ್ 99.57 ಪಸೆಂಟೈಲ್ ಗಳಿಸಿದ್ದಾರೆ. ಹೀಗೆ ಒಟ್ಟು ಫಲಿತಾಂಶದಲ್ಲಿ 99 ಪಸೆಂಟೈಲಿಗಿಂತ ಅಧಿಕ 2 ವಿದ್ಯಾರ್ಥಿಗಳು, 97 ರಿಂದ ಅಧಿಕ 3, 95ಕ್ಕಿಂತ ಅಧಿಕ ೮ ಹಾಗೂ 16 ವಿದ್ಯಾರ್ಥಿಗಳು 90 ಪಸೆಂಟೈಲಿಗಿಂತ ಅಧಿಕ ಫಲಿತಾಂಶವನ್ನು ದಾಖಲಿಸಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದದವರು ಹಾಗೂ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಸಂಯೋಜಕರಾದ ಸುಮಂತ್ ದಾಮ್ಲೆ ಅವರು ಅಭಿನಂದಿಸಿ ಶ್ಲಾಘಿಸಿದ್ದಾರೆ. ತೇಜಸ್ ವಿ. ನಾಯಕ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಜಪ್ತಿ ಇಂಬಾಳಿಯ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ನೂತನ ಶಿಲಾಮಯ ಗುಡಿ ಲೋಕಾರ್ಪಣೆ, ಪುನಃ ಪ್ರತಿಷ್ಠಾ ಮತ್ತು ಬ್ರಹ್ಮಕುಂಭಾಭಿಷೇಕ ಮಹೋತ್ಸವವು ಫೆ.28 ರಿಂದ ಮಾ.03 ರ ತನಕ ಸನ್ನಿಧಾನದಲ್ಲಿ ನಡೆಯಲಿದೆ. ಫೆ.28 ಶುಕ್ರವಾರ ಬೆಳಿಗ್ಗೆ 8.00ರಿಂದ ಫಲನ್ಯಾಸ, ಪ್ರಾರ್ಥನೆ, ಗುರುಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ಋತ್ವಿಗರಣ, ಮಧುಪರ್ಕಪೂಜೆ, ವೇದ ಪಾರಾಯಣ ಪ್ರಾರಂಭ, ಮಹಾಗಣಪತಿ ಹೋಮ, ನವಗ್ರಹ ಹೋಮ ಸಂಜೆ 5.00ರಿಂದ ಶಸ್ತ್ರ ಪೂಜೆ, ಗೇಹ ಪರಿಗ್ರಹ, ಸ್ಥಾನ ಶುದ್ದಿ, ಪ್ರಾಸಾದ ಶುದ್ದಿ, ವಾಸ್ತು ಪೂಜೆ, ರಾಕ್ಷೆಘ್ನ ಹೋಮ, ವಾಸ್ತು ಹೋಮ, ಬಲಿದಾನ ನಡೆಯಲಿದೆ. ಫೆ.01 ಶನಿವಾರ ಬೆಳಿಗ್ಗೆ 8.00 ರಿಂದ ಗುರುಗಣಪತಿ ಪೂಜೆ, ಸ್ವಸ್ತಿಪುಣ್ಯಾಹ ವಾಚನ. ಮಂಟಪ ಸಂಸ್ಕಾರ, ಬಿಂಬಶುದ್ದಿ ಕಲಶಸ್ಥಾಪನೆ, ಬಿಂಬಶುದ್ಧಿ ಹೋಮ, ಅಗ್ನಿ ಜನನ, ಶಯ್ಯಾ ಕಲ್ಪನ, ಸಂಜೆ 5.00 ರಿಂದ ಬಿಂಬಧ್ಯಾನಾಧಿವಾಸ ಪೂಜೆ, ಅಧಿವಾಸಾಧಿ ಹೋಮಗಳು, ಚಕ್ರಾಬ್ಬ ಮಂಡಲ ಪೂಜೆ, ಗೋದೋಹನ, ಪಾಯಸ ಪೂಜೆ ನಡೆಯಲಿದೆ. ಫೆ.02 ಭಾನುವಾರ ಬೆಳಿಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ ನೀಡಲಾಗುವ ಮೆಡಲ್ ಆಫ್ ಮೇರಿಟ್ ಸೇವಾ ಪದಕಕ್ಕೆ ಉಡುಪಿ ಜಿಲ್ಲೆಯಿಂದ ಗುಣರತ್ನ ಅವರು ಆಯ್ಕೆಯಾಗಿದ್ದು ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಸೇವಾ ಪದಕ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅವಕಾಶ ಫೌಂಡೇಶನ್ ತನ್ನ ದಶಮಾನೋತ್ಸವದ ಅಂಗವಾಗಿ ಇತ್ತೀಚಿಗೆ ಅಮಾವಾಸೆಬೈಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಆರರಿಂದ ಎಂಟನೇ ತರಗತಿಯವರೆಗಿನ ವಿದ್ಯಾರ್ಥಿಗಳ ವಿಭಾಗದ ಗ್ರಾಮೀಣ ಜೀವನ ಕುರಿತಾದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಅವರು ಗಂಗೊಳ್ಳಿಯ ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಮತ್ತು ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದ ಜೆಇಇ ಮೈನ್ಸ್ ಬಿ. ಆರ್ಚ್ ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಯಾ 98.22 ಪರ್ಸಂಟೈಲ್ ಪಡೆದು ಸಾಧನೆ ಮೆರೆದಿದ್ದಾಳೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕಾಲೇಜಿನಲ್ಲಿ ತರಬೇತಿ ಪಡೆದ ಸಾವಿರಾರು ವಿದ್ಯಾರ್ಥಿಗಳು ರಾಜ್ಯ, ದೇಶ-ವಿದೇಶದ ಪ್ರತಿಷ್ಟಿತ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದು ವ್ಯಾಸಾಂಗ ಮಾಡುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ಹಕ್ಲಾಡಿ ಚನ್ನಕೇಶವ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ, ಗ್ರಾಮ ಪಂಚಾಯತ್ ಗುಜ್ಜಾಡಿ ಮತ್ತು ಹಳೆ ವಿದ್ಯಾರ್ಥಿ ಸಂಘ ಗುಜ್ಜಾಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು. ಶಾಲೆಯ ಎಸ್‌ಡಿಎಂಸಿ ಸದಸ್ಯೆ ಗಾಯತ್ರಿ ಕೊಡಂಚ ಶಿಬಿರ ಉದ್ಘಾಟಿಸಿದರು. ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ. ತನ್ವಿ ರೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಕಾರ್ಯದರ್ಶಿ ರಾಘವೇಂದ್ರ ಡಿ., ಗೌರವಾಧ್ಯಕ್ಷ ಎ.ಆರ್. ವಲಿವುಲ್ಲಾ, ಶಾಲೆಯ ಮುಖ್ಯೋಪಾಧ್ಯಾಯ ಗಂಗಾಧರ ಬಂಟ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನಲ್ಲಿ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಚೆಸ್ ಚಾಂಪ್ ನಡೆಯಿತು ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೌಂದರ್ಯ ಯು ಕೆ ಇಂಜಿನಿಯರ್ ಫಿಡೆ ತೀರ್ಪುಗಾರರು ಮತ್ತು ಚೆಸ್ ಕೋಚ್, ನಿರ್ದೇಶಕರು, ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಉಡುಪಿ ಮತ್ತು ಕಾಪು ಮಾತನಾಡಿ, ಕ್ರಿಶ 6ನೇ ಶತಮಾನಕ್ಕೂ ಮೊದಲೇ ಚೆಸ್ ಭಾರತೀಯರಿಗೆ ಪರಿಚಯವಾಗಿತ್ತು ಎಂಬುದು ತಜ್ಞರ ಅಭಿಪ್ರಾಯ. ಈ ಜನಪ್ರಿಯ ಆಟವು ಏಕಾಗ್ರತೆ, ಸ್ಮರಣೆ, ತಾರ್ಕಿಕ ಚಿಂತನೆ, ಸಮಸ್ಯೆ ಪರಿಹರಿಸುವ ಕೌಶಲ್ಯ, ಆತ್ಮವಿಶ್ವಾಸ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ. ಸಮೀಕ್ಷೆಯ ಪ್ರಕಾರ 605 ಮಿಲಿಯನ್ ಜನರಿಗೆ ನಿಯಮಿತವಾಗಿ ಚೆಸ್ ಆಡುವ ಹವ್ಯಾಸವಿದೆ. ಇದೊಂದು ಮೋಜಿನ ಮಿದುಳಿನ ವ್ಯಾಯಾಮ ಈ ಆಟವನ್ನು ಎಲ್ಲ ವಯಸ್ಸಿನ ಜನ ಪ್ರಪಂಚದಾದ್ಯಂತ ಪ್ರೀತಿಸುತ್ತಾರೆ. ಕಿರಿಯ ವಯಸ್ಸಿನಿಂದಲೇ ಚೆಸ್ ಆಟವನ್ನು ಆಡುವುದರಿಂದ ಮಕ್ಕಳಲ್ಲಿ ಚಿಂತನೆ ಮತ್ತು ಸಮಸ್ಯೆ ಪರಿಹರಿಸುವ ಕೌಶಲ್ಯವನ್ನು ಪರಿಹಾರಿಸಿಕೊಳ್ಳುವಲ್ಲಿ ಸಹಾಯಕವಾಗುತ್ತದೆ. ಶಾಲೆಯಲ್ಲಿ ಲಭ್ಯವಿರುವ ಅವಕಾಶಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸನಾತನ ಹಿಂದು ಧರ್ಮಕ್ಕೆ ಸಹಸ್ರಾರು ವರ್ಷಗಳ ಇತಿಹಾಸವಿದ್ದು, ಭದ್ರ ಬುನಾದಿ ಮೇಲೆ ನಿಂತಿದೆ. ಸನಾತನ ಧರ್ಮ ಒಂದು ಉತ್ತಮ ಜೀವನ ಪದ್ಧತಿ. ಈ ದೇಶದ ಸಂಸ್ಕಾರಯುತ ನಾಗರಿಕರು ಸಮಾಜಕ್ಕೆ ಹಾಗೂ ದೇಶಕ್ಕೆ ಉಪಯುಕ್ತವಾಗಬಲ್ಲರು ಮತ್ತು ದೇಶ ಮತ್ತು ಧರ್ಮವನ್ನು ರಕ್ಷಿಸಬಲ್ಲರು ಎಂದು ಸುರತ್ಕಲ್‌ನ ಶ್ರೀನಿವಾಸ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಡಾ. ವಿನಾಯಕ ಶೆಣೈ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾ ಭವನದಲ್ಲಿ ಜರಗಿದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇದರ 38ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಬೌದ್ಧಿಕ್ ನೀಡಿ ಮಾತನಾಡಿದರು. ಪರಕೀಯರ ದಾಳಿಗೆ ಸಿಲುಕಿದ ಪರಿಣಾಮ ನಮ್ಮ ಸಂಸ್ಕೃತಿ ಮೇಲೆ ಅತ್ಯಾಚಾರ, ಅವಹೇಳನ ಪಾಶ್ಚಿಮಾತ್ಯರಿಂದ ನಡೆಯಿತು. ಪಾಶ್ಚಿಮಾತ್ಯ ಶಿಕ್ಷಣವನ್ನು ವೈಭವೀಕರಿಸಲಾಯಿತು. ಹಿಂದು ಧರ್ಮದ ಮೇಲೆ, ಹಿಂದು ಶೈಕ್ಷಣಿಕ ಕ್ರಮದ ಮೇಲೆ ಬಹಳ ದಾಳಿ ನಡೆದಿದ್ದರೂ, ಇಂದಿಗೂ ಸನಾತನ ಹಿಂದು ಧರ್ಮ ಇತರ ರಾಷ್ಟ್ರಗಳಿಗೆ ಮಾದರಿಯಾಗಿ ಉತ್ತಮ ಸಮಾಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಆಶ್ರಯದಲ್ಲಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಸಂಯೋಜನೆಯ ” ಉದ್ಯೋಗ ಮೇಳ -2025 ” ಯಶಸ್ವಿಯಾಗಿ ನಡೆಯಿತು. ಉದ್ಯೋಗ ಮೇಳವನ್ನು ಉದ್ಘಾಟಿಸಿದ ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ -” ಇದು ಸ್ಪರ್ಧಾತ್ಮಕ ಜಗತ್ತು, ಇಂದಿನ ನವ ಪೀಳಿಗೆ ಶೈಕ್ಷಣಿಕ ಸಾಧನೆಯಲ್ಲಿ ಮುಂದಿದ್ದು ಅವರ ಅರ್ಹತೆಗೆ ತಕ್ಕ ಉದ್ಯೋಗದ ಅನಿವಾರ್ಯತೆಯಿದೆ. ಆ ನೆಲೆಯಲ್ಲಿ 119 ವರ್ಷಗಳ ಭವ್ಯ ಇತಿಹಾಸವುಳ್ಳ ಬ್ಯಾರೀಸ್ ಶಿಕ್ಷಣ ಸಂಸ್ಥೆಗಳು ಸುತ್ತಮುತ್ತಲಿನ ಯುವಪೀಳಿಗೆಗೆ ಶಿಕ್ಷಣ ನೀಡುವುದರೊಂದಿಗೆ ಇದೀಗ ಉದ್ಯೋಗವನ್ನೂ ನೀಡುವ ಪುಣ್ಯತಮ ಕಾರ್ಯವಾದ ಈ ಉದ್ಯೋಗ ಮೇಳವನ್ನು ಆಯೋಜಿಸಿರುವ ಕಾರ್ಯ ಶ್ಲಾಘನೀಯ ” ಎಂದು ನುಡಿದರು. ಮುಖ್ಯ ಅತಿಥಿಗಳಾದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮವನ್ನು ದ್ದೇಶಿಸಿ -” ಇಂದು ಒಂದು ಶಿಕ್ಷಣ ಸಂಸ್ಥೆಯನ್ನು ಕಟ್ಟಿ ವಿದ್ಯಾದಾನ ಮಾಡುವುದೇ ತಪಸ್ಸು ! ಶಿಕ್ಷಣದಿಂದ ಮಾತ್ರ ಸಮಾಜದ ಪ್ರಗತಿ ಸಾಧ್ಯ ಹಾಗಾಗಿ ಗುಣಮಟ್ಟದ ಶಿಕ್ಷಣ ನೀಡಿ ಇದೀಗ ಉದ್ಯೋಗವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಎನ್.ಎಸ್.ಎಸ್. ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಾಗಾವಿ ಗದಗದಲ್ಲಿ ಇತ್ತೀಚಿಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಕುಂದಾಪುರದ ಡಾI ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕಿ ಬ್ರಾಹ್ಮಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿದ್ದಾರೆ. ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಗುಂಪು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಮೆರವಣಿಗೆಯಲ್ಲಿ ಪ್ರಥಮ ಹಾಗೂ ಸಮೂಹಗಾನ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಸಮಗ್ರ ಪ್ರಶಸ್ತಿ ಪಡೆದಿದೆ. ಬ್ರಾಹ್ಮಿ ಬಳ್ಕೂರಿನ ರಜನಿ ಅಶೋಕ್ ಹಾಗೂ ಅಂಪಾರಿನ ಅಶೋಕ್ ಕೆ. ದಂಪತಿಗಳ ಪುತ್ರಿ. ಅವರಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ. ಎಂ. ಸುಕುಮಾರ ಶೆಟ್ಟಿ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಮಂಗಳೂರು ವಿ.ವಿ. ಎನ್.ಎಸ್.ಎಸ್. ಸಂಯೋಜನಾಧಿಕಾರಿಗಳಾದ ಡಾ. ಶೇಷಪ್ಪ ಕೆ.…
