Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನಿಯೋಗ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘಕ್ಕೆ ಸೋಮವಾರ ಭೇಟಿ ನೀಡಿತು. ಸಹಕಾರಿಯ ಅಭಿವೃದ್ಧಿಗೋಸ್ಕರ ಅಧ್ಯಯನ ಪ್ರವಾಸದ ನಿಮಿತ್ತ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಗೆ ಭೇಟಿ ನೀಡಿದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರು, ನಿರ್ದೇಶಕರು, ಪ್ರಧಾನ ವ್ಯವಸ್ಥಾಪಕರು ಹಾಗೂ ೧೦ ಶಾಖೆಗಳ ಶಾಖಾ ವ್ಯವಸ್ಥಾಪಕರನ್ನೊಳಗೊಂಡ ತಂಡ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘದಲ್ಲಿ ಸಾಲ ನೀಡುವ ದಾಖಲೆ ಪತ್ರಗಳ ಮಾಹಿತಿ, ಸಾಲ ವಸೂತಿ, ಸಹಕಾರಿಯ ಬೆಳವಣಿಗೆ ಕೈಗೊಳ್ಳಲಾದ ಕ್ರಮಗಳು, ಠೇವಣಿ ಸ್ವೀಕಾರ, ಸಂಘವನ್ನು ಅಭಿವೃದ್ಧಿಪಡಿಸುವ ಬಗ್ಗೆ ಸವಿಸ್ತಾರವಾಗಿ ಚರ್ಚೆ ನಡೆಸಿ ಮಾಹಿತಿಗಳನ್ನು ಪಡೆದುಕೊಂಡರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಮತ್ತು ಎನ್. ಎಸ್. ಎಸ್ ಘಟಕಗಳು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಬೈಂದೂರು ಸಮುದಾಯ ಅರೋಗ್ಯ ಕೆಂದ್ರದ ಸಹಯೋಗದೊಂದಿಗೆ ಎಚ್.ಐ.ವಿ ತಡೆಗಟ್ಟುವ ಕ್ರಮ ಮತ್ತು ಯುವಕರಲ್ಲಿ ಅರಿವು” ಎಂಬ ಮಾಹಿತಿ ಕಾರ್ಯಗಾರವನ್ನು ನಡೆಯಿತು. ಈ ಕಾರ್ಯಕ್ರಮದಲ್ಲಿ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿ ವಾಸಂತಿ, ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ “ಏಡ್ಸ್ ಹರಡುವಿಕೆಯನ್ನು ತಡೆಗಟ್ಟುವ ಕ್ರಮಗಳು, ಮುಂಜಾಗ್ರತೆ ಹಾಗೂ ಜನಸಾಮಾನ್ಯರಲ್ಲಿ ಈ ಕುರಿತು ಅರಿವು ಮೂಡಿಸುವ ಅವಶ್ಯಕತೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ಜೊತೆಗೇ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಜಾಗೃತಿಗೊಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷೀಯ ನುಡಿಗಳನ್ನಾಡಿದರು. ಯುವ ರೆಡ್ ಕ್ರಾಸ್ ಹಾಗೂ ರೆಡ್ ರಿಬ್ಬನ್ ಕ್ಲಬ್ ಸಂಚಾಲಕರಾದ ಡಾ. ಶಿವಕುಮಾರ ಪಿ.ವಿ, ಪ್ರಾಸ್ತಾವಿಕವಾಗಿ ಮಾತನಾಡಿದರು .…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಮಕುಮಾರ್ ಅವರು ಎ.23ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಇದ್ದು, ಡಿಕೆಶಿ ಅವರ ಕಾರ್ಯಕ್ರಮದಲ್ಲಿಯೇ ಬಿಜೆಪಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದರು. ರಾಜ್ಯ ಬಿಜೆಪಿ ಸರಕಾರ ಅಭಿವೃದ್ಧಿಯ ಭರವಸೆಯನ್ನಷ್ಟೇ ನೀಡುತ್ತಾ ಬಂದಿದ್ದು, ಯಾವುದನ್ನೂ ಕಾರ್ಯರೂಪಕ್ಕೆ ತಂದಿಲ್ಲ. ಕರಾವಳಿಕ ಮೀನುಗಾರರಿಗೆ ಅನ್ಯಾಯ ಎಸಗುತ್ತಲೇ ಬಂದಿದೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿನ ಯೋಜನೆಗಳನ್ನು ಕಡಿತಗೊಳಿಸಿ ಜನರಿಗೆ ಮೋಸ ಮಾಡಿದ್ದು, ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ತಕ್ಷಣ ಜಾರಿಗೆ ಬರಲಿದೆ ಎಂದರು. ಈ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬ್ಲಾಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಕೌಶಲ್ಯ ಬೆಳೆಸುವ ಉದ್ಧೇಶದಿಂದ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗವು ಆಯೋಜಿಸಿರುವ ’ವಿ-ಗ್ರೋ’ ಬ್ಯುಸಿನೆಸ್ ಡೇ ಇದರ ಮೊದಲನೇ ಹಂತದ ವ್ಯವಹಾರ ಯೋಜನೆ ಪ್ರಸ್ತುತಿ ಕಾರ್ಯಕ್ರಮ ನೆರವೇರಿತು. ವಿದ್ಯಾರ್ಥಿಗಳು ತಮ್ಮಲ್ಲಿರುವ ವ್ಯವಹಾರ ಜ್ಞಾನವನ್ನು, ಹೊಸ ಹೊಸ ಕ್ರಿಯಾ ಯೋಜನೆ ಮತ್ತು ಯೋಚನೆಯನ್ನು ಪ್ರಸ್ತುತ ಪಡಿಸುವ ಮೂಲಕ, ಕೌಶಲ್ಯ ಅಭಿವೃದ್ಧಿಗೆ ಇದೊಂದು ಸೂಕ್ತ ವೇದಿಕೆಯಾಗಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಪ್ರಾಸ್ತಾವಿಸಿದರು. ತೀರ್ಪುಗಾರರಾಗಿ ಶಂಕರನಾರಾಯಣ ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಗೀತಾ, ಭಟ್ಕಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಮೋಹಿನಿ ಅತ್ತಿಮನೆ ಹಾಗೂ ಕುಂದಾಪುರ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಮಂಜುನಾಥ್ ಎಮ್. ಉಪಸ್ಥಿತರಿದ್ದರು. ವಾಣಿಜ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬೈಂದೂರು ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭ ಜೆಡಿಎಸ್ ಮುಖಂಡರುಗಳಾದ ಶ್ರೀಕಾಂತ್ ಅಡಿಗ, ಸಂದೇಶ್ ಭಟ್ ಉಪ್ಪುಂದ, ಜಯಶೀಲ ಶೆಟ್ಟಿ, ಮಕ್ಡ್ಯಾಮ್ ಇಸ್ಮಾಹಿಲ್, ರಿಯಾಜ್ ನಾವುಂದ, ಗಿರೀಶ್ ಮರವಂತೆ, ಯಾಸಿನ್ ಉಪ್ಪುಂದ, ವಾಹಬ್ ಇಬ್ರಾಹಿಂ ಮಾರುತಿ ಕೊಲ್ಲೂರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ ಚುನಾವಣೆಯಲ್ಲಿ ಬಿಜೆಪಿಯವರು ಅಪಪ್ರಚಾರ ಮೂಲಕ ಧರ್ಮ ರಾಜಕಾರಣ ಮಾಡಿ ಕಾಂಗ್ರೆಸ್ಸನ್ನು ಸೋಲಿಸಿರಬಹುದು. ಆದರೆ ಈ ಬಾರಿ ಯಾವುದೇ ಆಟಗಳು ಬೈಂದೂರಿನಲ್ಲಿ ನಡೆಯುವುದಿಲ್ಲ. ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು. ಬೈಂದೂರು ಬಸ್‌ಸ್ಟ್ಯಾಂಡ್ ಮೈದಾನದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದರು. ರಾಜ್ಯ ಸರ್ಕಾರದ ದುರಾಡಳಿತದಿಂದ ಜನಸಾಮಾನ್ಯರು ಬದಲಾವಣೆ ಬಯಸಿದ್ದು, ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೋಪಾಲ ಪೂಜಾರಿ ಜಯಗಳಿಸಲಿದ್ದಾರೆ ಎಂದರು. ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ಧರ್ಮಾಧಾರಿತ ವಿಷಯಗಳನ್ನು ಮುಂದಿಟ್ಟುಕೊಂಡು ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಜನರಿಗೆ ಅನ್ಯಾಯ ಮಾಡಿದ್ದೀರಿ. ಜನರನ್ನು ಭಾವನಾತ್ಮಕ ವ್ಯೂಹದೊಳಗೆ ಸಿಲುಕಿಸಿ ಮತಗಳಿಸಿದ್ದೀರಿ. ಆದರೆ ಪ್ರತೀ ಬಾರಿಯೂ ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಹಿಂದುತ್ವ ಹಾಗೂ ಕೇಸರಿಶಾಲು ಕೇವಲ ಬಿಜೆಪಿಯವರು ಮಾತ್ರ ಗುತ್ತಿಗೆ ಪಡೆದಿದ್ದಲ್ಲ. ಇದನ್ನು ಸಾಬೀತು ಮಾಡಲು ನಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಎ.18: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಇಂದು ಬೈಂದೂರಿನ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್ ಅವರು ನಾಮಪತ್ರ ಸ್ವೀಕರಿಸಿದರು. ನಾಮಪತ್ರ ಸಲ್ಲಿಸಿ ಮಾತನಾಡಿದ ಕೆ. ಗೋಪಾಲ ಪೂಜಾರಿ ಅವರು ನನ್ನ ನಾಲ್ಕು ಭಾರಿಯ ಶಾಸಕತ್ವದ ಅವಧಿಯ್ಲಲಿ ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಸಿರುವ ಅಭಿವೃದ್ಧಿ ಕಾಮಗಾರಿಗಳು ಮೆಚ್ಚಿ ಜನರು ಮತ್ತೆ ತನ್ನನ್ನು ಬೆಂಬಲಿಸಲಿದ್ದಾರೆಂಬ ವಿಶ್ವಾಸವಿದೆ. ಬಿಜೆಪಿಯ ಸುಳ್ಳು ಭರವಸೆಗಳಿಂದ ಜನರು ಬೇಸತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ವಾಸುದೇವ ಯಡಿಯಾಳ್, ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. 

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬಿಜೆಪಿ ಪಕ್ಷ ಸಂಘಟಿತ ಹೋರಾಟದ ಮೂಲಕ ನಮ್ಮ ಅಭ್ಯರ್ಥಿಯ ಗೆಲವಿಗೆ ಪಣ ತೊಟ್ಟಿದ್ದು, ಎ.20ರಂದು ನಡೆಯಲಿರುವ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೈಂದೂರು ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಜರುಗಿದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಎ.20ರ ಬೆಳಿಗ್ಗೆ 9:30ಕ್ಕೆ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ನಾಮಪತ್ರ ಸಲ್ಲಿಸುವ ಮೊದಲು ಕಾರ್ಯಕರ್ತರ ಸಭೆಯ ನಡೆಯಲಿದ್ದು, 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಬಳಿಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಅಭ್ಯರ್ಥಿ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು. ಶಾಸಕ ಸುಕುಮಾರ ಶೆಟ್ಟಿ ಅವರು ಅಭ್ಯರ್ಥಿಯ ಜೊತೆಗೆ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ವೆರಿಟೊ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನ ಉದ್ಘಾಟನಾ ಸಮಾರಂಭವು ಇತ್ತಿಚಿಗೆ ಬೆಂಗಳೂರಿನ ಕಲ್ಯಾಣ ನಗರದ ಕಾಸ್ಮೋಪಾಲಿಟನ್ ಕ್ಲಬ್ ನಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಮಾಜಿ ಸಾಲಿಸಿಟರ್ ಜನರಲ್ (ಭಾರತ ಸರ್ಕಾರ) ಮತ್ತು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಮಾತನಾಡಿ, ಮಾಧ್ಯಮಗಳಲ್ಲಿ ಪರಿಶುದ್ಧತೆ ಇದ್ದಾಗ ಸ್ವಚ್ಛ ಮತ್ತು ಸ್ವೀಕಾರಾರ್ಹ ಪ್ರಜಾಪ್ರಭುತ್ವ ಬರುತ್ತದೆ. “ನಾನು ಕರ್ನಾಟಕ ಲೋಕಾಯುಕ್ತಕ್ಕೆ ಬಂದ ನಂತರ ಜನರ ಕಷ್ಟಗಳನ್ನು ತಿಳಿದುಕೊಂಡೆ. ಸಮಾಜದಲ್ಲಿ ನಡೆಯುವ ತಪ್ಪುಗಳಿಗೆ ವ್ಯಕ್ತಿ ಮಾತ್ರ ಅಲ್ಲದೆ ಸುತ್ತ ಇರುವ ಪರಿಸರವೂ ಕಾರಣವಾಗುತ್ತದೆ. ಸುಮಾರು 50-60 ವರ್ಷಗಳ ಹಿಂದೆ ಸಮಾಜದ ಜನರು ದುಷ್ಟ ಕೆಲಸಗಳನ್ನು ಮಾಡಿದ್ದಕ್ಕಾಗಿ ವ್ಯಕ್ತಿ ಮತ್ತು ಇಡೀ ಕುಟುಂಬವನ್ನು ಬಹಿಷ್ಕರಿಸುತ್ತಿದ್ದರು. ಹಾಗಾಗಿ ಜನರು ತಪ್ಪು ಮಾಡಲು ಹೆದರುತ್ತಿದ್ದರು. ಈಗ ಶ್ರೀಮಂತ ಮತ್ತು ಶಕ್ತಿಶಾಲಿಯಾಗಲು ಹುಚ್ಚು ಓಟವಿದೆ, ಅದು ನಿಲ್ಲಬೇಕು ಎಂದರು. ಯುವಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಇತರರ ಜೇಬಿನಿಂದ ಹಣವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಮ್ಮ ಸಮಾಜ ಸೇವೆ, ಸಾಮಾಜಿಕ ಚಟುವಟಿಕೆಗಳಿಂದ ಖ್ಯಾತರಾದ ಬಾಬಣ್ಣ ಎಂದೇ ಕರೆಯಲ್ಪಡುತ್ತಿದ್ದ ಗೆಳೆಯರ ಬಳಗ ಹಂಗ್ಳೂರು ಸಂಸ್ಥೆಯ ಅಧ್ಯಕ್ಷ ವಿ. ಬಾಬು ಶೆಟ್ಟಿ (೮೧) ಇವರು ಕೋಟೇಶ್ವರ ಅಂಕದಕಟ್ಟೆಯ ಸ್ವಗೃಹದಲ್ಲಿ ಸೋಮವಾರ ಎ. ೧೭ರಂದು ನಿಧನರಾದರು. ಗೆಳೆಯರ ಬಳಗ ಹಂಗ್ಳೂರು ಸಂಘ ಸ್ಥಾಪನೆಯಾದ ೧೯೬೫ ರಿಂದ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದ ಇವರು ೫೮ ವರ್ಷಗಳಿಂದ ಸತತವಾಗಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಹಂಗ್ಳೂರು ವಿನಾಯಕ ಟಾಕೀಸ್ ಬಳಿ, ಸಂಘದ ಸ್ವಂತ ಕಟ್ಟಡದ ನಿರ್ಮಾಣಗೊಂಡ ನಂತರ ಶಿಕ್ಷಣ, ಸಂಗೀತ, ನಾಟಕ, ಸಾಹಿತ್ಯ ಎಲ್ಲಾ ಕ್ಷೇತ್ರಗಳಲ್ಲೂ ಚಟುವಟಿಕೆ ನಡೆಸುವ ಕೇಂದ್ರವನ್ನಾಗಿ ಗೆಳೆಯರ ಬಳಗವನ್ನು ರೂಪಿಸಿದವರು ಬಾಬು ಶೆಟ್ಟಿಯವರು. ಸಂಗೀತ ಭಾರತಿ ಸಂಸ್ಥೆಗೆ ೨೦ ವರ್ಷಗಳ ಕಾಲ ಸಂಗೀತ ಶಾಲೆ ನಡೆಸಲು ಅವಕಾಶ ನೀಡಿದ್ದರು. ಮಕ್ಕಳಿಗಾಗಿ ಬಾಲವಾಡಿ ನಡೆಸುತ್ತಿದ್ದರು. ಶಿಶು ಮಂದಿರ ಆರಂಭಿಸಿದರು. ಸಾಹಿತ್ಯಾಸಕ್ತರಿಗಾಗಿ ಗ್ರಂಥಾಲಯ ಮಾಡಿದ್ದರು. ಇವರ ನೇತೃತ್ವದಲ್ಲಿ ರಂಗ ಭೂಮಿ ಚಟುವಟಿಕೆಗೆ ಬಹಳ ಪ್ರೋತ್ಸಾಹ ದೊರೆತು, ಪ್ರತಿಭಾವಂತರು…

Read More