Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಮಾನವ ಹಕ್ಕು ಸಂಘವು ಜಂಟಿಯಾಗಿ ಜೆ.ಸಿ.ಐ ಕುಂದಾಪುರದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ “ಮಹಿಳೆ – ಕಾನೂನು ಮತ್ತು ಮಾನಸಿಕ ಒತ್ತಡ” ಎಂಬ ಕಾರ್ಯಕ್ರಮವು  ನೆರವೇರಿತು. ಕಾರ್ಯಕ್ರಮದ ಉಧ್ಘಾಟಕರಾಗಿ ಆಗಮಿಸಿದ ಜೆ.ಸಿ.ಐ ಸೌಜನ್ಯ ಹೆಗ್ಡೆ, ಪೂರ್ವ ರಾಷ್ಟ್ರೀಯ ಕಾನೂನು ಸಲಹೆಗಾರರು, ಜೆ.ಸಿ.ಐ ಇಂಡಿಯಾ ಇವರು “ಮಹಿಳೆ ಆಕೆಯ ಅರ್ಹತೆಗೆ ತಕ್ಕ ಕೆಲಸವನ್ನು ಮಾಡಲು ಅರ್ಹಳು. ಮಹಿಳೆ ತನ್ನ ಕನಸನ್ನು ನನಸಾಗಿಸಲು ಸದಾ ಪ್ರಯತ್ನಿಸುತ್ತಾಳೆ” ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ವಕೀಲರು ಮತ್ತು ವಕೀಲರ ಸಂಘದ ಅಧ್ಯಕ್ಷರಾದ ಪ್ರಮೋದ್ ಹಂದೆ ಅವರು ಮಾತನಾಡಿ “ಮನುಷ್ಯನು ತನ್ನಲ್ಲಿ ಋಣಾತ್ಮಕ ವಿಚಾರವನ್ನು ಬೆಳೆಸಿಕೊಳ್ಳದೇ, ಧನಾತ್ಮಕ ವಿಚಾರವನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರು ತಾಳ್ಮೆಯಿಂದ ಯೋಚಿಸಿ ನಿರ್ಧಾರವನ್ನು ಕೈಗೊಳ್ಳಬೇಕೇ ಹೊರತು ದುಡುಕಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳಬಾರದು. ಹಾಗೆಯೇ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವನ್ನು ಮೂಡಿಸಿದರು”. ಕುಂದಾಪುರದ ಜೆ.ಸಿ.ಐ ಸ್ಥಾಪಕ ಅಧ್ಯಕ್ಷರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಯಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ವಿಜ್ಞಾನ ಮೇಳಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ವಿಜ್ಞಾನ, ಕಲೆಯ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು, ಜೊತೆಯಲ್ಲಿ ಸಂಹವನ ಮಾಡುವ ಸಾಮಾರ್ಥ್ಯವೂ ಬರುತ್ತದೆ. ವಂಡ್ಸೆಯ ಸರಕಾರಿ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ವಿಜ್ಞಾನ ಮತ್ತು ಕಲಾ ಮೇಳ ಅತ್ಯಂತ ಯಶಸ್ವಿಯಾಗಿ ನಡೆಯುತ್ತದೆ. ಇದು ನಿರಂತರವಾಗಿ ನಡೆಯಲಿ ಎಂದು ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಅಭಿಪ್ರಾಯಪಟ್ಟರು. ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ ನಡೆದ ವಿಜ್ಞಾನ ಹಾಗೂ ಕಲಾ ಮೇಳವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷೆ ಡಾ. ಪೂರ್ಣಿಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ನಿವೃತ್ತ ಸರಕಾರಿ ಅಧಿಕಾರಿ ಬಿ. ಎನ್. ಶೆಟ್ಟಿ ಬಗ್ವಾಡಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮಕ್ಕಳಿಗೆ ಶಿಕ್ಷಣದೊಂದಿಗೆ ಕಲೆ, ಸಾಹಿತ್ಯ, ನಾಟಕಗಳ ಬಗ್ಗೆ ಆಸಕ್ತಿ ಮೂಡಿಸಬೇಕು, ಇವುಗಳಿಂದ ಮಾತ್ರ ಅವರ ಮನಸ್ಸು ಅರಳಲು ಸಾಧ್ಯವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ  ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಲಾವಣ್ಯ ಬೈಂದೂರು ಆಶ್ರಯದಲ್ಲಿ ನಡೆದ ಮಾಜಿ ಶಾಸಕ ದಿ. ಕೆ.ಲಕ್ಷ್ಮೀನಾರಾಯಣ ಸ್ಮರಣಾರ್ಥ ಇದರ 48ನೇ ವರ್ಷದ ವಾರ್ಷಿಕೋತ್ಸವ, ರಂಗಪಂಚಮಿ – 2025 ರಂಗೋತ್ಸವ ಇದರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಲಾವಣ್ಯ ಸಂಸ್ಥೆಯ ಬೈಂದೂರು ಭಾಗದ ಜನರಿಗೆ ನಾಟಕಗಳ ಬಗ್ಗೆ ಅಭಿರುಚಿ ಮೂಡಿಸಿದ ಮೊದಲ ಸಂಸ್ಥೆ ಎಂಬ ಹೆಗ್ಗಳಿಗೆ ಗಳಿಸಿದೆ. ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದ ಈ ಸಂಸ್ಥೆ ರಂಗಭೂಮಿಗೆ ಅಪಾರ ಕೊಡುಗೆ ನೀಡಿದೆ. ಪ್ರಬುದ್ದ ಕಲಾವಿದರ ತಂಡವಾಗಿರುವ ಲಾವಣ್ಯ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವುದು ಮಹೋನ್ನತವಾದ ಸಾಧನೆಯಾಗಿದೆ. ಆಧುನಿಕತೆಯ ಬದಲಾವಣೆಗಳೊಂದಿಗೆ ರಂಗಭೂಮಿ ತನ್ನ ಮೌಲ್ಯಗಳನ್ನು ಉಳಿಸಿಕೊಂಡು ಮುನ್ನೆಡೆಯಬೇಕಾಗಿದೆ ಎಂದರು. ಖಂಬದಕೋಣೆ ರೈತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಕೊಠಾರಿ ಸೇವಾ ಸಂಘ ರಿ. ಕರ್ಕಿ ಕನ್ಯಾನ, ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ., ಕೆಎಂಸಿ ಮಣಿಪಾಲ ರಕ್ತನಿಧಿ ವಿಭಾಗ ಇವರ ಸಹಕಾರದಲ್ಲಿ ಶ್ರೀ ಚೌಡೇಶ್ವರಿ ಕನ್ವೆನ್ಷನ್ ಸೆಂಟರ್,‌ ಕೊಠಾರಿ ಸಮುದಾಯ ಭವನ ಕರ್ಕಿ ಕನ್ಯಾನದಲ್ಲಿ‌ ನಡೆದ ರಕ್ತದಾನ ಶಿಬಿರವನ್ನು ವ್ಯವಸ್ಥಾಪನ ಸಮಿತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ‌ ಸೌಕೂರು ಇದರ ಅಧ್ಯಕ್ಷರಾದ ಕಿಶನ್ ಹೆಗ್ಡೆ ಉದ್ಘಾಟಿಸಿದರು. ‌ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘದ ಅಧ್ಯಕ್ಷರಾದ ಸೀತಾರಾಮ ಕೊಠಾರಿ ಸಭಾಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ರಂಗನಾಥ್ ವೈ., ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಸತೀಶ್ ಸಾಲ್ಯಾನ್ ಮಣಿಪಾಲ್, ಹಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ರೋವನ್ ಡಿ’ ಕೋಸ್ತಾ, ಕುಂದಾಪುರ ವಿಜಯ ಕರ್ನಾಟಕ ಪತ್ರಿಕಾ ಸಂಪಾದಕರಾದ ಜಾನ್ ಡಿ’ಸೋಜ,‌ ಹಟ್ಟಿಯಂಗಡಿ ಗ್ರಾಮ‌ ಪಂಚಾಯತ್ ‌ಮಾಜಿ ಅಧ್ಯಕ್ಷ ರಾಜೀವ ಶೆಟ್ಟಿ, ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ಕೆ. ನಾಗಪ್ಪ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಎ ಫೌಂಡೇಶನ್ ಪರೀಕ್ಷೆ 2025ರಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ. ವಿದ್ಯಾರ್ಥಿಗಳಾದ ವಿಘ್ನೇಶ್ 228 ಅಂಕಗಳು, ಕೌಶಲ್ ಆಚಾರ್ 209 ಅಂಕಗಳು, ರಿತೇಶ್ ಮೊಗವೀರ 208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆಯೊಂದಿಗೆ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರು ಕ್ಷೇತ್ರದ ಜ್ವಲಂತ ಸಮಸ್ಯೆಗಳ ಪರಿಹಾರ ಮಾಡುವುದನ್ನು ಬಿಟ್ಟು ಕೇವಲ ಸಚಿವರುಗಳಿಗೆ, ಇಲಾಖಾ ಅಧಿಕಾರಿಗಳಿಗೆ ಪತ್ರಗಳನ್ನು ನೀಡುವುದು ಅದನ್ನಾ ಪತ್ರಿಕೆಗಳಲ್ಲಿ ಪ್ರಚಾರ ಪಡಿಸುವ ಕೆಲಸ ಮಾಡುತ್ತಿದ್ದಾರೆ ಬಿಟ್ಟರೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ಮಾಡುವುದಿಲ್ಲಾ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಇವತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದು ಕ್ಷೇತ್ರದ ಶಾಸಕರು ವಿರೋಧ ಪಕ್ಷದವರಿರಬಹುದು ಆದರೆ ಕ್ಷೇತ್ರದ ಕೆಲವೊಂದು ಸಮಸ್ಯೆ ಇಂದು ನಿನ್ನೆಯದಲ್ಲಾ, ಅದೆಷ್ಟೋ ವರ್ಷಗಳಿಂದ ಕುಂದಾಪುರದ ಶಾಸಕರು, ಸಂಸದರು, ಪುರಸಭೆ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಎಲ್ಲಾ ಬಿಜೆಪಿ ಆಡಳಿತದಲ್ಲೇ ಇದೆ ಆದರೆ ಎಲ್ಲಾ ಸಮಸ್ಯೆಗಳು, ಜನರ ಬೇಡಿಕೆಗಳು ಮಾತ್ರ ಹಾಗೆಯೇ ಉಳಿದುಕೊಂಡಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲಾ ಸಮಸ್ಯೆಗಳು ರಾಜ್ಯ ಸರಕಾರದಿಂದಲೇ ಪರಿಹಾರವಾಗಬೇಕು ಎಂದಿಲ್ಲಾ, ಕೇಂದ್ರ ಸರ್ಕಾರ ಕೂಡ ಜನರ ಸಮಸ್ಯೆಗಳನ್ನು ಪರಿಹರಿಸಬಹುದು, ಆದರೆ ಶಾಸಕರು ಮತ್ತು ಸಂಸದರು ಕೇಂದ್ರ ಸರ್ಕಾರದ ಪ್ರಯೋಜಿತ ಸಮಸ್ಯೆಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಡಿಸೆಂಬರ್ 2024ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಯಾದ ಅಮನ್‌ರಾಜ್ (414), ಕಾರ್ತಿಕ್ ಇಂದ್ರ (412), ಸೌಖ್ಯ (389), ಆಕಾಶ್ ಎ. ಕಾಮತ್ (385), ವೈಷ್ಣವಿ ಬಿ.ವಿ. (384), ಕೆ. ದಿಶಾ ರಾವ್ (382), ರಾನ್ಸನ್ ಫೆರ್ನಾಂಡಿಸ್ (379), ರಾಮ್‌ನಾಥ್ ಎಸ್ ಪ್ರಭು (372), ರ್ಯ ಎಂ (370), ಸುಮಂತ್ ದೇಸಾಯಿ (360), ಸುಶಾಂತ್ ಎಸ್. (354), ಕೃತಿಕಾ (354), ಖುಷಿ ಯು. ಸಾಲಿಯಾನ್ (352), ಮೆಲನಿ (339), ಶಿವಾನಿ (335), ಸ್ಫೂರ್ತಿ (333), ಖುಷಿ ಹರೀಶ್ (331), ಭಾವನಾ (330), ಹರೀಶ್ (328), ಕೃತಿ (325), ಶ್ರೇಯಾ ಪೂಜಾರಿ (325), ಚಿನ್ಮಯ್ (315), ಶಿವಾನಿ ಕೋಟ್ಯಾನ್ (311), ಆಯುಷ್ ಎ ಕಾಮತ್ (307), ಪ್ರಕೃತಿ (307),  ಕೌಶಲ್ (301), ಕವನ (300) ಹಾಗೂ ಐಶ್ವರ್ಯ (300) ಇವರು ಗ್ರೂಪ್ -01 ಮತ್ತು ಗ್ರೂಪ್ -02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 8 ರಂದು ಬೆಳಗ್ಗೆ ಉಡುಪಿಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಏ. 16 ರಂದು ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ನಿಯಮಗಳನ್ನು ಸರಿಯಾಗಿ ಅರಿತುಕೊಂಡರೆ ಅಪಘಾತಗಳಾಗುವುದನ್ನು ದೊಡ್ಡ ಪ್ರಮಾಣದಲ್ಲಿ ತಡೆಯಬಹುದು. ವಿದ್ಯಾರ್ಥಿಗಳು ಹೆಲ್ಮೆಟ್ ಧರಿಸುವುದು, ಚಾಲನೆ ಪರವಾನಿಗೆ ಪತ್ರ ಇಟ್ಟುಕೊಳ್ಳುವುದು ಸೇರಿದಂತೆ ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ನರೇಶ್ ಹೇಳಿದರು.  ಅವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಯೋಜಿಸಿದ ಸಂಚಾರಿ ನಿಯಮಗಳ ಕುರಿತ ‘ಟ್ರಾಫಿಕ್ ಅರಿವು’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರವಿಚಂದ್ರ ಸಂಚಾರಿ ನಿಯಮಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಚಾರಿ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸದೆ, ಪ್ರಾಮಾಣಿಕವಾಗಿ ಅದನ್ನು ಪಾಲಿಸಬೇಕು. ಹೆತ್ತವರ ಕನಸುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕು ಎಂದರು. ಕಾಲೇಜಿನ ಉಪ-ಪ್ರಾಂಶುಪಾಲ ಹಾಗೂ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಶ್ರದ್ಧಾ, ಮನೀಶ್, ಸಿಂಚನಾ ಅತ್ಯುತ್ತಮ ಅಂಕವನ್ನು ದಾಖಲಿಸಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More