Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಸಂಪದ್ಭರಿತ ಐತಿಹಾಸಿಕ ಹಿನ್ನೆಲೆಯ ಕುಂದಾಪುರ ತಾಲೂಕು ಎನ್ನುವಂತಹದ್ದು ಇತಿಹಾಸ ಪೂರ್ವದಿಂದಲೂ ಜನವಸತಿ ಹೊಂದಿರುವಂತಹದ್ದಾಗಿದೆ ಎಂದು ಮಾಹೆ, ಮಣಿಪಾಲ ಇದರ ಸಾಂಸ್ಕೃತಿಕ ಕೇಂದ್ರಗಳು ಇದರ ಆಡಳಿತಾಧಿಕಾರಿ  ಡಾ. ಜಗದೀಶ್ ಶೆಟ್ಟಿ ಹೇಳಿದರು . ಅವರು  ಫೆಬ್ರವರಿ 21, 22, ಮತ್ತು 23, 2025ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಬೆಂಗಳೂರು ಮತ್ತು ಧಾರವಾಡ ವಲಯ, ಮಂಗಳೂರು ವಿಶ್ವವಿದ್ಯಾಲಯ ಇತಿಹಾಸ ಅಧ್ಯಾಪಕರ ಸಂಘ ಮತ್ತು ಕಾಲೇಜಿನ ಐಕ್ಯೂಎಸಿ. ಇವರು ಸಹಯೋಗದಲ್ಲಿ ಆಯೋಜಿಸಿದ ” ಕರ್ನಾಟಕ ಇತಿಹಾಸ ಪರಿಷತ್ತು 35ನೇ  ವಾರ್ಷಿಕ ಮಹಾ ಅಧಿವೇಶನದಲ್ಲಿ ಫೆಬ್ರವರಿ 23 ರಂದು ನಡೆದ ” ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಮತ್ತು ಸಂಸ್ಕೃತಿ” ಎಂಬ ವಿಷಯದ ಕುರಿತ ಸಿಂಪೋಜಿಯಂ ಕಾರ್ಯಕ್ರಮದ  ಅಧ್ಯಕ್ಷತೆಯನ್ನು  ವಹಿಸಿ ಮಾತನಾಡಿದರು. ಕುಂದಾಪುರಕ್ಕೆ ಪ್ರಾಗೈತಿಹಾಸಿಕ ಹಿನ್ನೆಲೆ ಇದೆ. ನೂತನ ಶಿಲಾಯುಗದ ಕೊಡಲಿ ಎನ್ನುವುದು ಕುಂದಾಪುರದ ಗಡಿ ಪ್ರದೇಶವಾದ ಕೋಟತಟ್ಟು ಎಂಬಲ್ಲಿ ದೊರಕಿರುವಂತದ್ದು ಇದಕ್ಕೆ ಉತ್ತಮ ಉದಾಹರಣೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಜನಪರ ಉದ್ದೇಶಗಳನ್ನು ಇರಿಸಿಕೊಂಡು ಅನುಷ್ಠಾನವಾಗುವ ಸರ್ಕಾರಿ ಯೋಜನೆಗಳು ಯಾವುದೇ ಕಾರಣದಿಂದಲೂ ಅರ್ಧಕ್ಕೆ ನಿಲ್ಲಬಾರದು. ಯೋಜನೆಯ ಅನುಷ್ಠಾನದಲ್ಲಿ ಫಲಾನುಭವಿಗಳಿಗೆ ಏನಾದರೂ ಗೊಂದಲಗಳಿದ್ದಲ್ಲಿ ಅದನ್ನು ಪರಿಹರಿಸುವ ಹಾಗೂ ಮನವರಿಕೆ ಮಾಡುವ ಕೆಲಸಗಳು ಇಲಾಖೆಯ ಅಧಿಕಾರಿಗಳಿಂದ ಆಗಬೇಕು, ಉದ್ದೇಶಿತ ಅಣೆಕಟ್ಟಿನಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುವ ನೀರನ್ನು ಮಾತ್ರ, ಹೊರಕ್ಕೆ ಹಾಯಿಸುವ ಕೆಲಸವಾಗಬೇಕು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಗುಡೇ ದೇವಸ್ಥಾನದ ಏತ ನೀರಾವರಿ ಯೋಜನೆಯ ಕಾಮಗಾರಿ ಸ್ಥಳಕ್ಕೆ ಶನಿವಾರ ಬೆಳಿಗ್ಗೆ ಭೇಟಿ ನೀಡಿ, ಯೋಜನಾ ಪ್ರದೇಶವನ್ನು ವೀಕ್ಷಣೆ ಮಾಡಿ, ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಇವರಿಂದ ಈ ಯೋಜನೆಗೆ ಮಂಜೂರಾತಿ ದೊರಕಿತ್ತು. ವಾರಾಹಿ ಯೋಜನೆಯಡಿ ಬೈಂದೂರು ವಿಧಾನಸಭಾ ಕ್ಷೇತ್ರದ ಹಲವು ಭಾಗಗಳಿಗೆ ನೀರು ಒದಗಿಸುವ ಯೋಜನೆಗಳು ಯಶಸ್ವಿಯಾಗಿದೆ. ದೊಡ್ಡ ಮೊತ್ತದ ನೀರಾವರಿ ಯೋಜನೆಗಳಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನುಕೂಲವಾಗಬೇಕು. ಯಾರಿಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಬೆಂಗಳೂರು ಮತ್ತು ಧಾರವಾಡ ವಲಯ, ಮಂಗಳೂರು ವಿಶ್ವವಿದ್ಯಾಲಯ ಇತಿಹಾಸ ಅಧ್ಯಾಪಕರ ಸಂಘ ಮತ್ತು ಕಾಲೇಜಿನ ಐಕ್ಯೂಎಸಿ ಇವರು ಸಹಯೋಗದಲ್ಲಿ ಆಯೋಜಿಸಿದ “ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನದಲ್ಲಿ ಫೆಬ್ರವರಿ 21 ರಂದು ವಿವಿಧ ದತ್ತಿ ಉಪನ್ಯಾಸಗಳನ್ನು  ಪ್ರೊ. ಎಮ್. ಎನ್. ಶ್ರೀನಿವಾಸ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಅಶ್ವತ್ಥನಾರಾಯಣ ವಹಿಸಿದ್ದರು. ಪ್ರೊ. ‌ಎಸ್.ಶೆಟ್ಟರ್ ದತ್ತಿನಿಧಿ ಉಪನ್ಯಾಸದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ದೆಹಲಿ ವಿಶ್ವವಿದ್ಯಾಲನಿಯದ ವಿಶ್ರಾಂತ ಪ್ರಾಧ್ಯಾಪಕ ಮತ್ತು ಅಧಿವೇಶನದ ಸರ್ವಾಧ್ಯಕ್ಷರಾದ ಡಾ.ಕೇಶವನ್ ವೆಳುತ್ತಾಟ್ ಅವರು “ವೆನ್ ಎ ಹಿಸ್ಟ್ರಿಯೋಗ್ರಫಿ ಲೀಡ್ಸ್ ಪೋಯಟ್ರಿ: ಎ ಟ್ರಿಬ್ಯೂಟ್ ಟು ಪ್ರೊ.ಎಸ್.ಶೆಟ್ಟರ್” ಎಂಬ ವಿಷಯದ ಕುರಿತು ಮಾತನಾಡಿದರು. ಪ್ರೊ. ಎಲ್.ಪಿ.ರಾಜು ದತ್ತಿನಿಧಿ ಉಪನ್ಯಾಸದಲ್ಲಿ ಎಮ್.ಜಿ.ಎಮ್. ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ನಾಯಕ್ “ತುಳುನಾಡಿನ ಬುಡಕಟ್ಟು ದೈವಗಳು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಜಾಡಿ ಗ್ರಾಮದ ಸಾಯಿ ಗ್ರೀಮ್ – ಕಾರು ಶೋರೂಂನ ಬೀಗವನ್ನು ಒಡೆದು ಕಳ್ಳತನಕ್ಕೆ ಯತ್ನಿಸಿದ ಘಟನೆ ಫೆ. 19ರ ಬೆಳಗ್ಗಿನ ಜಾವ 2.02 ಗಂಟೆ ಸುಮಾರಿಗೆ ಬೆಳಕಿಗೆ ಬಂದಿದೆ. ಆರೋಪಿಗಳಿಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರಾಗಿದ್ದು, ಮಳಿಗೆಯ ಬೀಗವನ್ನು ಕಬ್ಬಿಣದ ರಾಡ್ ಹಾಗೂ ಸುತ್ತಿಗೆಯಿಂದ ಒಡೆಯುತ್ತಿರುವುದು ಕೆಮರಾದಲ್ಲಿ ಪತ್ತೆಯಾಗಿದೆ. ಕಳ್ಳತನಕ್ಕೆ ಯತ್ನಿಸುತ್ತಿರುವ ದೃಶ್ಯವನ್ನು ಮಳಿಗೆಯ ಪಾಲುದಾರ ನಾಗೇಂದ್ರ ಅವರು ಮೊಬೈಲ್‌ನಲ್ಲಿ ನೋಡಿ ಕೂಡಲೇ ಮಾಲಕರಾದ ನಿತಿನ್ ಅವರಿಗೆ ತಿಳಿಸಸಿದರು. ಕೂಡಲೇ ನಿತಿನ್ ಹಾಗೂ ನಾಗೇಂದ್ರ ಸ್ಥಳಕ್ಕೆ ಬಂದಿದ್ದು, ಅವರನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ. ಬೆಳಿಗ್ಗೆ ಕುಂದಾಪುರ ಪೋಲೀಸರು ಬಾಲಕರಿಬ್ಬರನ್ನು ಪತ್ತೆಹಚ್ಚಿ, ವಿಚಾರಣೆ ಬಳಿಕ ರಿಮ್ಯಾಂಡ್‌ ಹೋಮ್‌ಗೆ ಕಳುಹಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವ ಗುಣ, ಸಮಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಲು ಇಂತಹ ಕ್ಯಾಂಪುಗಳು ದೊಡ್ಡ ಮಟ್ಟದಲ್ಲಿ ಸಹಕಾರಿಯಾಗುತ್ತದೆ. ಶಿಬಿರದ ಯಶಸ್ಸಿಗೆ ಸಹಕರಿಸಿದ ಊರಿನ ಪ್ರತಿಯೊಬ್ಬರ ಶ್ರಮ ಉಲ್ಲೇಖನೀಯ ಎಂದು ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ ಅವರು ಹೇಳಿದರು. ಅವರು ಇಲ್ಲಿನ ವಡ್ಡರ್ಸೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಉದಯ್ ಕುಮಾರ್ ಶೆಟ್ಟಿ ಕೊತ್ತಾಡಿ, ನಿವೃತ್ತ ಶಿಕ್ಷಕ ಬಾಲಕೃಷ್ಣ ಶೆಟ್ಟಿ ವಡ್ಡರ್ಸೆ, ವೇಣುಗೋಪಾಲ ಶೆಟ್ಟಿ ಬನ್ನಾಡಿ,  ವಂಡಾರಿನ ಕೃಷ್ಣಪ್ರಸಾದ್ ಕ್ಯಾಶ್ಯು ಇಂಡಸ್ಟಿçಯ ಪ್ರವರ್ತಕ ಸಂಪತ್ ಕುಮಾರ್ ಶೆಟ್ಟಿ,  ಸಿ.ಎ. ಬ್ಯಾಂಕ್ ಕೋಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ, ವಡ್ಡರ್ಸೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್ ಆಚಾರ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಮನವಿ ಮೇರೆಗೆ ಆರಂಭಗೊಂಡಿರುವ ಕುಂಭ ಮೇಳ ವಿಶೇಷ ರೈಲಿನಲ್ಲಿ ಒತ್ತಡ ಹೆಚ್ಚಿರುವುದರಿಂದ ಮತ್ತೊಂದು ರೈಲಿನ ವ್ಯವಸ್ಥೆ ಮಾಡುವಂತೆ ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ದಕ್ಷಿಣ ರೈಲ್ವೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದರಿಂದ ಟಿಕೆಟ್ ಅಸಂಖ್ಯರಿಗೆ ಪಯಣ ವಂಚಿತ ಬೆಳೆಸುವ ಅವಕಾಶ ಲಭಿಸಲಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು ನಿಗಧಿಪಡಿಸಲಾಗಿರುತ್ತದೆ. ಸದರಿ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಸದರಿ ತರಬೇತಿ ಪಡೆಯಲು 10 ನೇ ತರಗತಿ ಉತ್ತೀರ್ಣರಾಗಿರುವ 20 ರಿಂದ 45 ವರ್ಷದ ವಯೋಮಿತಿಯೊಳಗಿನ ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ ವಿಭಾಗದ ವತಿಯಿಂದ ‘ಇನ್ಸ್‌ಪೀರಿಯಾ – 2025’ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು. ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಪಾನ್ ಮೂಲದ ಸಕ್ರಾ ವರ್ಲ್ಡ್ ಹಾಸ್ಪಿಟಲ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಯುಚಿ ನಗಾನೊ ಮುಖ್ಯ ಅತಿಥಿಯಾಗಿ ಮಾತನಾಡಿ, ಕೃತಕ ಬುದ್ಧಿಮತ್ತೆ ಹಾಗೂ ಇನ್ನಿತರ ತಂತ್ರಜ್ಞಾನಗಳ ಪ್ರಗತಿಯೊಂದಿಗೆ ಆರೋಗ್ಯ ನಿರ್ವಹಣಾ ಕ್ಷೇತ್ರವು ಬಹಳಷ್ಟು ಮುಂದುವರಿದಿದೆ. ವೈದ್ಯಕೀಯ ಕ್ಷೇತ್ರವು ಸೋಂಕುಗಳನ್ನು ತಡೆಗಟ್ಟಿ ರೋಗಿಯ ಚೇತರಿಕೆಗೆ ಗಮನ ನೀಡುವುದರೊಂದಿಗೆ ಆಸ್ಪತ್ರೆಗಳು ಮನೆಯ ವಾತಾವರಣವನ್ನು ಕಲ್ಪಿಸಿಕೊಡುವಂತಿರಬೇಕು. ಆಸ್ಪತ್ರೆ ನಿರ್ವಹಣೆಯ ಕುರಿತು ಸೂಕ್ಷ್ಮದೃಷ್ಠಿ ಬೆಳೆಸಿಕೊಳ್ಳಲು ನಮ್ಮಲ್ಲಿರುವ ಜ್ಞಾನ, ಕನಸುಗಳು ಹಾಗೂ ಆಶಯಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಕು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಹೆಚ್ಚಿನ ಆಸ್ಪತ್ರೆಗಳನ್ನು ಕಾರ್ಪೋರೇಟ್ ಸಂಸ್ಥೆಗಳು ನಿರ್ವಹಿಸುವುದರಿಂದ ಜನಸಾಮಾನ್ಯರಿಗೆ ವ್ಯವಸ್ಥೆಗಳು ಬಳಸಿಕೊಳ್ಳಲು ಅನುಕೂಲಕರವಾಗಿಲ್ಲ. ಆಸ್ಪತ್ರೆಯ ನಿರ್ವಾಹಕರು ರೋಗಿಗಳ ಮೇಲೆ ಸಹಾನುಭೂತಿಯ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಹೊಸ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇತಿಹಾಸವನ್ನು ಅರ್ಥಮಾಡಿಕೊಳ್ಳುವುದು ಅನುಭವಿಸುವುದು ಇತರರಿಗೆ ಹೇಳುವುದು ನಮ್ಮ ಜವಾಬ್ದಾರಿ ಎನ್ನುವುದನ್ನು ಮರೆತುಬಿಟ್ಟೆದ್ದೇವೊ ಅನ್ನುವಷ್ಟರ ಮಟ್ಟಿಗೆ ಇತಿಹಾಸದ ನೆನಪುಗಳು ನಮ್ಮಿಂದ ದೂರವಾಗುತ್ತಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ & ಸಾಯನ್ಸ್ ಕಾಲೇಜು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಬೆಂಗಳೂರು ಹಾಗೂ ಧಾರವಾಡ ವಲಯ, ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ಅಧ್ಯಾಪಕರ ಸಂಘ ಇವರ ಸಹಯೋಗದೊಂದಿಗೆ ನಡೆದ ಕಾಲೇಜಿನ ಆರ್‌.ಎನ್‌. ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾದ 3 ದಿನಗಳ ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನದ ಉದ್ಘಾಟಿಸಿ ಮಾತನಾಡಿದರು. ನಮ್ಮ ಐತಿಹಾಸಿಕ ದಾಖಲೆಗಳು ಪರಂಪರೆ, ಸಂಸ್ಕೃತಿ ಮತ್ತು ವಾಸ್ತು ಶಿಲ್ಪಗಳ ಮಹತ್ವವನ್ನು ಕುರಿತು ವಿಶೇಷ ಅಧ್ಯಯನಗಳ ಅವಶ್ಯಕತೆ ಇದೆ. ಇತಿಹಾಸವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿಯನ್ನು ಅರಿತು ಆ ನೆಲೆಯಲ್ಲಿ ಕಾರ್ಯಪ್ರವೃತ್ತರಾಗೋಣ ಎಂದು ಹೇಳಿದರು. 35ನೇ ವಾರ್ಷಿಕ ಮಹಾಅಧೀವೆಶೇನದ ಸರ್ವಾಧ್ಯಕ್ಷತೆಯನ್ನು ಮಂಗಳೂರು ಹಾಗೂ ದೆಹಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ಶಿವರಾತ್ರಿ ಸೇವಾ ಸಮಿತಿ ಗಂಗೊಳ್ಳಿ ಇದರ ವತಿಯಿಂದ ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ 3ನೇ ವರ್ಷದ ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಗುರುವಾರ ಪ್ರಾರಂಭವಾಯಿತು. ಮೀನ ಲಗ್ನ ಸುಮೂಹೂರ್ತದಲ್ಲಿ ದೀಪ ಸ್ಥಾಪನೆಯೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕ ರವೀಶ್ ಭಟ್ ಅವರು ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸೇವಾ ಸಮಿತಿ ಅಧ್ಯಕ್ಷ ವಿ. ನಾಗರಾಜ ಖಾರ್ವಿ, ಗೌರವಾಧ್ಯಕ್ಷ ರಾಜ ಗಂಗೊಳ್ಳಿ, ದುರ್ಗರಾಜ ಪೂಜಾರಿ, ವರದಾ ಶೇರುಗಾರ್, ನಾಗೇಶ ಖಾರ್ವಿ ದಾಕುಹಿತ್ಲು, ಸುಬ್ಬ ಖಾರ್ವಿ ಗುಡ್ಡೆಕೇರಿ, ಶ್ರೀಧರ ಖಾರ್ವಿ ದಾಕುಹಿತ್ಲು, ಸಮಿತಿ ಸದಸ್ಯರು, ವಿವಿಧ ಭಜನಾ ಮಂಡಳಿಗಳ ಸದಸ್ಯರು, ಮೊದಲಾದವರು ಉಪಸ್ಥಿತರಿದ್ದರು. 27ರಂದು ದೀಪ ವಿಸರ್ಜನೆಯೊಂದಿಗೆ ಭಜನೆಯ ಮಂಗಲೋತ್ಸವ ನಡೆಯಲಿದೆ. ಮಹಾಶಿವರಾತ್ರಿ ಪ್ರಯುಕ್ತ 26ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ವೀರೇಶ್ವರ ದೇವರಿಗೆ ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ ಮತ್ತಿತರ ಪೂಜೆ ಪುನಸ್ಕಾರಗಳು ನಡೆಯಲಿದ್ದು, ಸಂಜೆ…

Read More