Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಡಿಬಿಐ ಬ್ಯಾಂಕ್ ಕುಂದಾಪುರ ಶಾಖೆ ವತಿಯಿಂದ ಅಂಪಾರು ಮೂಡುಬಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್‌ ಕೊಡುಗೆಯಾಗಿ ನೀಡಲಾಯಿತು . ಈ ಸಂದರ್ಭದಲ್ಲಿ ಐಡಿಬಿಐ ಬ್ಯಾಂಕಿನ ಸಹಾಯಕ ಜನರಲ್ ಮ್ಯಾನೇಜರ್ ನಾಗರಾಜ್ ಕಮ್ಮಾರ, ಕುಂದಾಪುರ ಶಾಖೆಯ ವ್ಯವಸ್ಥಾಪಕ ಕಿರಣ್ ಕುಮಾರ್ ಶಿಂಧೆ, ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜುನಾಥ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೋಹರ್ ಶೆಟ್ಟಿ , ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಮತ್ತು ಎಸ್‌.ಡಿ.ಎಂ.ಸಿ.ಯ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಫೆ. 21ರಿಂದ ಮೂರು ದಿನಗಳ ಕಾಲ ನಡೆಯುವ “ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನ”ದ ಸರ್ವಾಧ್ಯಕ್ಷರಾಗಿ ಭಾರತೀಯ ಇತಿಹಾಸ ತಜ್ಞ, ಶಿಕ್ಷಣ ತಜ್ಞ, ದೆಹಲಿಯ ಕೇಶವನ್ ವೆಳುತ್ತಾಟ್ ಅವರನ್ನುಆಯ್ಕೆ ಮಾಡಲಾಗಿದೆ. ಅವರು ಕೇರಳ ಮೂಲದವರಾಗಿದ್ದು ಮಧ್ಯಯುಗದ ದಕ್ಷಿಣ ಭಾರತೀಯ ಇತಿಹಾಸದಲ್ಲಿ ವಿಶೇಷ ಪರಿಣಿತರು. ಶಾಸನ ತಜ್ಞರು, ಸಂಸ್ಕೃತ, ತಮಿಳು, ಕನ್ನಡ, ಮಲೆಯಾಳಂ ಭಾಷೆ ಅರಿತಿರುವ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಆನಂತರ ದೆಹಲಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದ್ದರು. ದೇಶದ ಹಲವು ವಿಶ್ವ ವಿದ್ಯಾನಿಲಯಗಳಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿದ್ದಾರೆ. ಹಲವು ಗ್ರಂಥಗಳನ್ನು ಬರೆದಿದ್ದಾರೆ. ಕ್ಯಾಲಿಕಟ್ ವಿ.ವಿ. ಯಿಂದ ಸ್ನಾತ್ತಕೋತ್ತರ ಪದವಿ ಹಾಗೂ ಡಾಕ್ಟರೇಟ್, ಜವಹರಲಾಲ್ ನೆಹರು ವಿ.ವಿ. ಯಿಂದ ಎಂ.ಫಿಲ್. ಪದವಿ ಪಡೆದ ಅವರು ದೇಶದ ಶ್ರೇಷ್ಠ ಇತಿಹಾಸ ಹಾಗೂ ಶಿಕ್ಷಣ ತಜ್ಞ, ಶಾಸನತಜ್ಞರಲ್ಲಿ ಪ್ರಮುಖರಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹನುಮಾನ್ ಚಾಲೀಸ್ ನ ಎಲ್ಲಾ ಪದ್ಯಗಳನ್ನು 5 ನಿಮಿಷ 35 ಸೆಕೆಂಡುಗಳಲ್ಲಿ ಪಠಣ ಮಾಡಿದ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ನರ್ಸರಿ  ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿ ಅಮೋಘ ಶರತ್ ಶೇಟ್, ಅವರಿಗೆ ಇಂಡಿಯನ್ ಬುಕ್ ಆಪ್ ರೆಕಾರ್ಡ್ (IBR) ನವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ವಡ್ಡರ್ಸೆಯ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಡೆದ ಯಕ್ಷಗಾನ ಪ್ರದರ್ಶನದ ಪೂರ್ವದಲ್ಲಿ ಬನ್ನಾಡಿ ನಾರಿಬೆಟ್ಟು ದಿ| ಕಿಶೋರ್ ಹೆಗ್ಡೆ ಸಂಸ್ಮರಣೆ ಕಾರ್ಯಕ್ರಮ ‘ಕಿಶೋರ ನೆನಪು’ ನಡೆಯಿತು.  ದಿ| ಕಿಶೋರ್ ಹೆಗ್ಡೆ ಅವರು ಶ್ರೀ ಸಿದ್ದೇಶ್ವರ ಯಕ್ಷರಂಗ, ಬನ್ನಾಡಿ ಇದರ ಪ್ರಧಾನ ಕಲಾವಿದರಾಗಿದ್ದರು. ಯಕ್ಷಗಾನದ ಕೆಲವು ವಿಶಿಷ್ಟ ಪಾತ್ರಗಳಿಗೆ ತನ್ನ ಮಾತಿನ ವೈಖರಿ ಹಾಗೂ ರಂಗ ನಡೆಯ ಮೂಲಕ ಜೀವ ತುಂಬಿದವರು. ಹವ್ಯಾಸಿ ಕಲಾವಿದರಲ್ಲಿ ಕಿಶೋರ್ ಹೆಗ್ಡೆ ಮರೆಯಲಾಗದ ಚೇತನ ಎಂದು ಯಕ್ಷ ಗುರು ಗೋವಿಂದ ಉರಾಳರು ಸಂಸ್ಮರಣೀಯ ನುಡಿಗಳ ನಾಡಿದರು. ಒ.ಎನ್.ಜಿ.ಸಿ. ಗೋವಾ ಇಲ್ಲಿನ ನಿವೃತ್ತ ಚೀಫ್ ಮ್ಯಾನೇಜರ್ ನಾರಾಯಣ ಆಚಾರ್ ಬನ್ನಾಡಿ ಶಾಲಾ ದಿನಗಳಲ್ಲಿ ಸಹಪಾಠಿಯಾಗಿದ್ದ ಕಿಶೋರ್ ಹೆಗ್ಡೆ ಅವರ ಕಲಾ ಪ್ರತಿಭೆಯನ್ನು ಕೊಂಡಾಡಿ ಅಧ್ಯಕ್ಷೀಯ ನುಡಿಗಳನ್ನಾಡಿದರು. …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳೀಸಲಾಗಿದ್ದು, ಈ ಯೋಜನೆ ಮೂಲಕ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲಾಗುತ್ತಿದೆ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನದ ಆಧಾರದ ಮೇರೆಗೆ ಯುವ ಪರಿವರ್ತಕರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ, ಕನಿಷ್ಠ 21 ರಿಂದ 35 ವರ್ಷದ ಒಳಗಿನ, ಕನ್ನಡ ಸ್ಪಷ್ಟವಾಗಿ ಮಾತನಾಡುವ ಹಾಗೂ ಸಂವಹನ ಕಲೆ ಕೌಶಲ್ಯ ಹೊಂದಿರುವ ಆಸಕ್ತ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡಗಳನ್ನು ಹೊಂದಿದ ಅಭ್ಯರ್ಥಿಗಳು ಅರ್ಜಿಯನ್ನು ಬಿಳಿಹಾಳೆಯಲ್ಲಿ ಸಂಪೂರ್ಣ ಹೆಸರು, ವಯಸ್ಸು, ವಿಳಾಸ ಹಾಗೂ ತಮ್ಮ ಮೂಲ ದಾಖಲಾತಿಗಳನ್ನು ಫೆಬ್ರವರಿ 28 ರ ಸಂಜೆ 5 ಗಂಟೆಯ ಒಳಗಾಗಿ ಖುದ್ದಾಗಿ ಉಪ ನಿರ್ದೇಶಕರ ಕಛೇರಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮುಸ್ಲಿಂ ಭಾಂದವ್ಯ ವೇದಿಕೆ ಕರ್ನಾಟಕದ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ  ಡಾ. ಎಂ. ಮೋಹನ್ ಆಳ್ವರಿಗೆ ಸೌಹಾರ್ದ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಯಕ್ಷಗಾನ ಅರ್ಥದಾರಿ ಜಬ್ಬಾರ್ ಸಮೊ ಸಂಪಾಜೆ ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮೂಲಕ ಆಧುನಿಕ ಕಾಲಕ್ಕೆ ಅಗತ್ಯವಿರುವ ಶಿಕ್ಷಣ ವ್ಯವಸ್ಥೆ, ನೂತನ ಪ್ರಯೋಗಗಳನ್ನು ಹಳ್ಳಿಗಳಿಗೂ ತಲುಪಿಸುವ ಕಾರ್ಯವಾಗುತ್ತಿದೆ. ಅಲ್ಲದೇ ಮೂಡುಬಿದಿರೆಯ ಸಂಸ್ಕೃತಿಯ ಪರಂಪರೆಯನ್ನು ಮುಂದುವರಿಸಲು ಮೋಹನ್ ಆಳ್ವರು ಸೌಹಾರ್ದಯುತವಾಗಿ ಶ್ರಮಿಸುತ್ತಿದ್ದಾರೆ. ಇವರು ನಾಡಿನ ಅಸ್ಮಿತೆಯನ್ನು ಮೈಗೂಡಿಸಿಕೊಂಡು ವಿಶ್ವವ್ಯಾಪಕವಾಗಿ ಅಂಗೀಕೃತ ಹೊಂದಿರುವ ಓರ್ವ ಮಹಾನ್ ಸಾಧಕ ಎಂದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಎಂ. ಮೋಹನ್ ಆಳ್ವ, ಮನಸ್ಸು ಹಾಗೂ ಜೀವನ ಪದ್ಧತಿಯನ್ನು ಉತ್ತಮಗೊಳಿಸುವ ಮೂಲಕ ಸೌಹಾರ್ದ ಜೀವನ ನಡೆಸಲು ಸಾಧ್ಯ. ಬದುಕಿನ ಪ್ರತಿ ಹಂತದಲ್ಲೂ ಮೌಲ್ಯಯುತವಾಗಿರುವುದು ಬಹಳ ಅಗತ್ಯ. ತನ್ನ 73 ವರ್ಷಗಳ ಬದುಕಿನ ರೀತಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಗೆ ಭಾರತ್ ಸ್ಕೌಟ್ಸ್  ಮತ್ತು ಗೈಡ್ಸ್ ರಾಜ್ಯ ಆಯುಕ್ತರಾದ ಪಿ. ಜಿ. ಆರ್. ಸಿಂಧ್ಯಾ ಅವರು ಭೇಟಿ ನೀಡಿ, ಸ್ಕೌಟ್ಸ್ ಮತ್ತು ಗೈಡ್ಸ್ ದ್ಯೇಯೋದ್ದೇಶದ ಕುರಿತು ವಿಸ್ತೃತವಾದ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳೊಂದಿಗೆ ತಮ್ಮ ಸುಧೀರ್ಘ ಅನುಭವವನ್ನು ಹಂಚಿಕೊಂಡರು. ಮದರ್ ತೆರೇಸಾ ಶಿಕ್ಷಣ ಸಂಸ್ಥೆಯು ಆಯೋಜಿಸಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ, ಆಡಳಿತ ಮಂಡಳಿಯು ಮದರ್ ತೆರೇಸಾರವರ ಆದರ್ಶ ಮೌಲ್ಯಗಳಿಂದ ಪ್ರೇರಿತರಾಗಿ ಮಂಗಳೂರಿನಿಂದ ಬಂದು ಕುಗ್ರಾಮವಾದ  ಶಂಕರನಾರಾಯಣದಲ್ಲಿ ಕಳೆದ 26 ವರ್ಷಗಳ ಹಿಂದೆ  ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ ಇಂದು ಹೆಮ್ಮರವಾಗಿ ಬೆಳೆದು ಜಿಲ್ಲೆಯಲ್ಲೇ ಗುಣಮಟ್ಟದ ಶಿಕ್ಷಣ ಸಂಸ್ಥೆಯಾಗಿ ಬೆಳೆದು ನಿಲ್ಲಲು ಕಾರಣಿಕರ್ತರಾದ ಶಮಿತಾ ರಾವ್ ಮತ್ತು ರೆನಿಟಾ ಲೋಬೊ ಅವರ ಸಾಂಘಿಕ ಪರಿಶ್ರಮ ನಿಜಕ್ಕೂ ಪ್ರಶಂಸನೀಯ ಎಂದರು. ಸ್ಕೌಟ್ ಮತ್ತು ಗೈಡ್ಸ್ ನ ಸಮಾಜಮುಖಿ ಕಾರ್ಯಗಳು ವಿದ್ಯಾರ್ಥಿಗಳಿಗೆ ಸಾಮಾಜಿಕ ಸೇವಾ ಮನೋಭಾವನೆ ಬೆಳೆಸುವಲ್ಲಿ ಸಹಕಾರಿಯಾಗುತ್ತದೆ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವನ್ನು ಸ್ಕೌಟ್ಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು / ಪಡೆಯಲು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಅಡಚಣೆ ಉಂಟಾದಲ್ಲಿ ಈ ಕೆಳಕಂಡ ಜಿಲ್ಲಾಧಿಕಾರಿಯವರ ಕಛೇರಿ ಹಾಗೂ ತಹಶೀಲ್ದಾರರ ಕಛೇರಿಯ ಸಹಾಯವಾಣಿಯನ್ನು ಸಂರ್ಪಕಿಸಬಹುದಾಗಿದೆ. ಜಿಲ್ಲಾಧಿಕಾರಿ ಕಛೇರಿ ಸಹಾಯವಾಣಿ ಸಂಖ್ಯೆ: 0820-2574924, ತಹಶೀಲ್ದಾರರ ಕಛೇರಿಯ ಸಹಾಯವಾಣಿ ಸಂಖ್ಯೆಗಳಾದ ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201. ಬ್ರಹ್ಮಾವರ ದೂ.ಸಂಖ್ಯೆ: 0820-2560494, ಬೈಂದೂರು ದೂ.ಸಂಖ್ಯೆ: 08254-251657, ಕಾಪು ದೂ.ಸಂಖ್ಯೆ: 0820-2551444 ಹಾಗೂ ಹೆಬ್ರಿ ದೂ.ಸಂಖ್ಯೆ :08258-230201 ಅನ್ನು ಸಂಪರ್ಕಿಸಬಹುದಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗುರುಕುಲ ಸಂಸ್ಥೆಯಲ್ಲಿ ಅಜ್ಜ ಅಜ್ಜಿಯಂದಿರ ದಿನಾಚರಣೆಯು ಶುಕ್ರವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.  ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ನಿವೃತ್ತ ಉಪನ್ಯಾಸಕಿ, ಲೇಖಕಿ ಡಾ. ರೇಖಾ ವಿ. ಬನ್ನಾಡಿ ಅವರು ಸ್ವಸ್ಥ ಸಮಾಜದ ನಿರ್ಮಾಣವಾಗಬೇಕಾದರೆ ಅಲ್ಲಿ ಮುಖ್ಯವಾಗಿ ಕಂಡು ಬರುವುದು ಕುಟುಂಬ ವ್ಯವಸ್ಥೆ, ಆದರೆ ಇಂದು ಕುಟುಂಬ ತನ್ನ ಹೃದಯವಂತಿಕೆಯನ್ನು ಕಳೆದುಕೊಂಡು ಮಕ್ಕಳಿಗೆ ಸಿಗಬೇಕಾದ ಮೌಲ್ಯಗಳು, ನೀತಿ ಕಥೆಗಳು, ಜೀವನ ಪಾಠಗಳು ಸಿಗುತ್ತಿಲ್ಲ. ಎಲ್ಲರೂ ಸ್ವತಂತ್ರ ಬದುಕಿನ ಮೋಹದಿಂದ ಹಿರಿಯರಿಂದ ದೂರವಾದರೆ, ಮಕ್ಕಳನ್ನು ಕೂಡ ಅವರ ಪ್ರೀತಿಯಿಂದ ದೂರವಾಗುವಂತೆ ಮಾಡುತ್ತಿದ್ದಾರೆ. ಶಾಲಾ ಪರೀಕ್ಷೆಯಲ್ಲಿ ಹೇಗೆ ಹೊಂದಿಸಿ ಬರೆ, ಸರಿ/ತಪ್ಪು ಗುರುತಿಸಿ, ಬಿಟ್ಟ ಪದ ತುಂಬಿಸಿ ಎಂಬ ಹಂತಗಳು ಇರುತ್ತದೆಯೋ, ಬದುಕಿನ ಪರೀಕ್ಷೆಯನ್ನು ಬರೆಯುವಾಗ ಕೂಡ ಇದೆಲ್ಲಾ ಸಾಮಾನ್ಯ, ಆಗ ಅಲ್ಲಿ ಹೊಂದಾಣಿಕೆ ತುಂಬಾ ಮುಖ್ಯ ಎನ್ನುವುದನ್ನು ವಿವಿಧ ನಿದರ್ಶನಗಳ ಮೂಲಕ ಅರ್ಥಪೂರ್ಣವಾಗಿ ತಿಳಿಸುವುದರ ಜೊತೆಗೆ ಪೋಷಕರು ತಮ್ಮ ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯಬೇಕು, ಅದರಲ್ಲೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕುಂದಬಾರಂದಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಹೊಸಾಡು ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್. ಕಲಿಕಾ ಹಬ್ಬ ಮತ್ತು ಮಕ್ಕಳ ಸಂತೆ (ಮೆಟ್ರಿಕ್ ಮೇಳ) ಕಾರ್ಯಕ್ರಮ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ವಿಶ್ವನಾಥ ಗಾಣಿಗ ವಹಿಸಿದ್ದರು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಭಾಷ್ ಶೆಟ್ಟಿ ಹೊಳ್ಮಗೆ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಮುಖ್ಯ ಶಿಕ್ಷಕರಾದ ಶಿವರಾಜ ಭಂಡಾರಿ ಎನ್. ಸ್ವಾಗತಿಸಿದರು. ಹೊಸಾಡು ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಸತೀಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನು ನುಡಿದರು. ವೇದಿಕೆಯಲ್ಲಿ ಹಿರಿಯ ನಿವೃತ್ತ ಶಿಕ್ಷಕ ರಾಜೀವ್ ಶೆಟ್ಟಿ ನೂಜಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಭಾಸ್ಕರ್ ಪೂಜಾರಿ, ರತ್ನ ಜಿ. ಶ್ರೀಯಾನ್, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಿವೃತ್ತ ಶಿಕ್ಷಕ ಸಂಜೀವ್ ಬಿಲ್ಲವ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷರು ರವಿ ಎಸ್. ಪೂಜಾರಿ, ಹೆಮ್ಮಾಡಿ ವೃತ್ತದ ಶಿಕ್ಷಣ ಸಂಯೋಜಕಾರದ ಯೋಗೀಶ್, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ. ನಾಗರಾಜ್ ಶೆಟ್ಟಿ, ರವಿಚಂದ್ರ, ಶೈಲಜಾ,…

Read More