Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.19: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಮೇ 20 ಮತ್ತು 21 ರಂದು ನಡೆಯಲಿದ್ದು, ಇದಕ್ಕಾಗಿ ಉಡುಪಿಯಲ್ಲಿ 6, ಕಾರ್ಕಳದಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಬ್ರಹ್ಮಾವರದಲ್ಲಿ 2 ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 5712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ (ಪ್ರಭಾರ) ಪ್ರಸನ್ನ ಹೆಚ್ ತಿಳಿಸಿದರು. ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ, 2023 ನೇ ನಾಲಿನ ಸಿಇಟಿ ಪರೀಕ್ಷೆ ಮತ್ತು ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡುವಂತೆ ತಿಳಿಸಿದ ಅವರು, ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಹಾಗೂ ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಶೀಲ್ದಾರ್ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಡ್ ಶೋ ಮೂಲಕ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಆಗಮಿಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಗುಜ್ಜಾಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು. ತೆರೆದ ವಾಹನದಲ್ಲಿ ಗುಜ್ಜಾಡಿಯ ವಿವಿಧೆಡೆ ರೋಡ್ ಶೋ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆ, ಚುನಾವಣೆಯಲ್ಲಿ ಗೆಲುವಿಗೆ ಸಹಕರಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯಕರ್ತರ ಶಾಸಕನಾಗಿ ಕಾರ್ಯ ನಿರ್ವಹಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು. ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ತಾಪಂ ಮಾಜಿ ಸದಸ್ಯ ಕರಣ್ ಪೂಜಾರಿ, ಬಿಜೆಪಿ ಮುಖಂಡ ಉಮೇಶ ಮೇಸ್ತ, ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಪಂ ಸದಸ್ಯರು, ವಿವಿಧ ಶಕ್ತಿ ಕೇಂದ್ರಗಳ ಅಧ್ಯಕ್ಷರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಎಸ್.ಎಸ್.ಎಲ್.ಸಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಬಂದಿದೆಯಾ? ಆದರೂ ವಿಜ್ಞಾನ ವಿಷಯ ತೆಗೆದುಕೊಂಡು ಸಾಧನೆ ಮಾಡಬೇಕೆಂಬ ಆಕಾಂಕ್ಷೆ ಇದೆಯೇ? ಗಣಿತದಲ್ಲಿ ಕಡಿಮೆ ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲೊಂದು ಸದಾವಕಾಶವಿದೆ. ಅದುವೇ ಹೋಂ ಸೈನ್ಸ್ ( ಗೃಹ ವಿಜ್ಞಾನ – PCBH) ವಿಭಾಗ. ಈ ವಿಭಾಗವನ್ನು ಆಯ್ಕೆ ಮಾಡಿಕೊಂಡರೆ ತಾಂತ್ರಿಕ ಕ್ಷೇತ್ರವನ್ನು ಹೊರತುಪಡಿಸಿ ಬೇರೆಲ್ಲಾ ಕ್ಷೇತ್ರಗಳಲ್ಲಿ ಮುಂದುವರೆಯಲು ನೀಟ್ ಬರೆಯಲು ಅವಕಾಶವಿದೆ. ತನ್ಮೂಲಕ ವೈದ್ಯಕೀಯ ಕ್ಷೇತ್ರದ ಬೇರೆ ಬೇರೆ ಕೋರ್ಸುಗಳನ್ನು ಅಂದರೆ ಎಂ.ಬಿ.ಬಿ.ಎಸ್, ವೆಟರ್ ನರಿ, ಪ್ಯಾರಾ ಮೆಡಿಕಲ್, ಆಯುರ್ವೇದಿಕ್, ಡಯಟಿಶಿಯನ್ ಮತ್ತು ಹೋಮಿಯೋಪತಿಯಂತಹ ಮೊದಲಾದ ಕ್ಷೇತ್ರಗಳಲ್ಲೂ ಸಾಧನೆ ಮಾಡಬಹುದು. ಇದಲ್ಲದೆ ಬಿ. ಎಸ್ ಸಿ ನರ್ಸಿಂಗ್, ಇಂಟರಿಯರ್ ಡೆಕೋರೇಷನ್, ಹಾಗೂ ಜೈವಿಕ ವಿಜ್ಞಾನ ದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆಯುವ ವಿಫುಲ ಅವಕಾಶಗಳು ಇದೆ. ಇದರ ಸಂಪೂರ್ಣ ಸದುಪಯೋಗ ವನ್ನು ಆಸಕ್ತ ಗ್ರಾಮೀಣ ವಿದ್ಯಾರ್ಥಿಗಳು…

Read More

ಕಾರ್ಯಕರ್ತರೇ 5 ವರ್ಷ ಎಂಎಲ್‌ಎ. ಹಿಂದುತ್ವ, ಬೈಂದೂರು ಅಭಿವೃದ್ಧಿಗೆ ಶ್ರಮಿಸೋಣ: ಗುರುರಾಜ ಶೆಟ್ಟಿ ಗಂಟಿಹೊಳೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಕೊನೆಯ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ 16173 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಗುರುರಾಜ್ ಗಂಟಿಹೊಳೆ 98628 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 82475 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 16173 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. 16 ಕೊನೆಯ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 102424 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ 60868ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 41556 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ 16ನೇ ಸುತ್ತಿನ ಮತ ಎಣಿಕೆ ಪೂರ್ಣವಾಗಿದ್ದು ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 40930 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 8ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 62311 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ 38151 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 24160 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಮತಎಣಿಕೆ ಪೂರ್ಣಗೊಳ್ಳುವ ವೇಳೆಗೆ ಬಿಜೆಪಿ ಮತ್ತಷ್ಟು ಲೀಡ್ ಪಡೆದುಕೊಳ್ಳಲಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರದ 7ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 57326 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ 34249 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 23077 ಮತಗಳ ಅಂತರದಿಂದ ಮುನ್ನಡೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ 178 ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 97447 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 81518 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 15929 ಮತಗಳ ಅಂತರದಿಂದ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ 16ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 88168 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 74244 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ವಿರುದ್ದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 13924 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ 9ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 53084 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 46140 ಮತಗಳನ್ನು…

Read More