ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಪಕ್ಷ ತನ್ನ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ್ದು, ಬೈಂದೂರು ಕ್ಷೇತ್ರಕ್ಕೆ ಗುರುರಾಜ ಗಂಟಿಹೊಳೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಈ ಮೂಲಕ ಬೈಂದೂರು ಹಾಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ಮಿಸ್ ಆಗಿದೆ. ಬೈಂದೂರು ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಗಳ ಪಟ್ಟಿಯಲ್ಲಿ ಹಲವು ಹೆಸರುಗಳಿದ್ದು ಭಾರಿ ಜಟಾಪಟಿ ಏರ್ಪಟ್ಟಿತ್ತು. ಮೊದಲ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿ ಅಂತಿಮಗೊಳಿಸಲು ಸಾಧ್ಯವಾಗಿತ್ತು. ಕೊನೆಗೂ ಕಗ್ಗಂಟಾಗಿದ್ದ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದ್ದು, ಚುನಾವಣಾ ಕಣ ರಂಗೇರಲಿದೆ. ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಬಡವರ ಮನೆ ಹುಡುಗನಿಗೆ ಟಿಕೆಟ್ ದೊರೆತಿದೆ ಎಂದು ಸಂದೇಶದೊಂದಿಗಿನ ಪೋಸ್ಟ್ ವೈರಲ್ ಆಗುತ್ತಿದೆ. ಬೈಂದೂರು ಕ್ಷೇತ್ರದಲ್ಲಿ ಕಳೆದ ಎರಡೂವರೆ ದಶಕಗಳಿಂದಲೂ ರಾಷ್ಟ್ರೀಯ ಪಕ್ಷಗಳ ನಡುವೆ ಹಣಾಹಣಿ ನಡೆಯುತ್ತಿದ್ದು, ಈ ಭಾರಿಯೂ ಕಾಂಗ್ರೆಸ್ ಪಕ್ಷದ ಕೆ. ಗೋಪಾಲ ಪೂಜಾರಿ ಹಾಗೂ ಬಿಜೆಪಿ ಪಕ್ಷದ ಗುರುರಾಜ ಗಂಟಿಹೊಳೆ ಅವರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ವಿಧಾನಸಭಾ ಚುನಾವಣೆಗೆ ಸರ್ವ ತಯಾರಿಗಳು ನಡೆಯುತ್ತಿದ್ದು, ಈ ನಡುವೆ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪೈಕಿ ಉಡುಪಿ ಜಿಲ್ಲೆಯ 5 ಕ್ಷೇತ್ರಗಳ ಪೈಕಿ ಬೈಂದೂರು ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಿರಣ್ ಕುಮಾರ್ ಕೊಡ್ಗಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ವಿ. ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಯಶಪಾಲ್ ಸುವರ್ಣ, ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸುರೇಶ್ ಶೆಟ್ಟಿ ಗುರ್ಮೆ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಬೈಂದೂರು ಹಾಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿಯ ರಘುಪತಿ ಭಟ್ ಹಾಗೂ ಕಾಪುವಿನ ಲಾಲಾಜಿ ಆರ್. ಮೆಂಡನ್ ಅವರಿಗೆ ಟಿಕೆಟ್ ಮಿಸ್ ಆಗಿದೆ. ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರಿಗೆ ಈ ಭಾರಿ ಬಿಜೆಪಿಯಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಲಾಗಿದೆ. ಪಕ್ಷದ ವರಿಷ್ಠರು ಹಾಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರಿಗೆ ಪೋನ್ ಮೂಲಕ ಸಂಪರ್ಕಿಸಿದ್ದು, ಈ ಭಾರಿ ತಮಗೆ ಟಿಕೆಟ್ ನೀಡಲಾಗುತ್ತಿಲ್ಲ. ಹೊಸ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಸೂಚಿಸಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಸುಕುಮಾರ ಶೆಟ್ಟಿ ಅವರು ಟಿಕೆಟ್ ವಂಚಿತರಾಗಿರುವ ವಿಚಾರ ತಿಳಿಯುತ್ತಿದ್ದಂತೆ ಸುಕುಮಾರ ಶೆಟ್ಟಿ ಅವರ ನಿವಾಸಕ್ಕೆ ಅವರ ಅಭಿಮಾನಿಗಳು ತೆರಳಿ ಬಿಜೆಪಿ ಪಕ್ಷದ ವರಿಷ್ಠರ ನಡೆಯ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಬೈಂದೂರು ಬಿಜೆಪಿ ಪಕ್ಷದ ಪ್ರಮುಖರ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಬೈಂದೂರು ಬಿಜೆಪಿಯಿಂದ ಎರಡು ಅವಧಿಗೆ ಸ್ಪರ್ಧಿಸಿದ್ದ ಸುಕುಮಾರ ಶೆಟ್ಟಿ ಅವರು ಒಂದು ಭಾರಿ ಸೋತು, ಎರಡನೇ ದೊಡ್ಡ ಅಂತರದಿಂದಲೇ ಗೆಲುವ ಸಾಧಿಸಿದ್ದರು. ಅವರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳೂ ಕಾರ್ಯಗಳು ನಡೆದಿದ್ದವು. ಸುಕುಮಾರ ಶೆಟ್ಟು ಪಕ್ಷದ ಕಾರ್ಯಕರ್ತರೊಂದಿಗೆ ಹೊಂದಿದ್ದ ಸಂಘರ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬಿಜೆಪಿ ಪಕ್ಷದ ಎಂಎಲ್ಎ ಟಿಕೆಟ್ ಅಕಾಂಕ್ಷಿ ಆಗಿರುವ ಹಿರಿಯ ಮುಖಂಡ ಕೆ. ಬಾಬು ಶೆಟ್ಟಿ ಅವರಿಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಎಲ್ಲೆಡೆ ಹರಿದಾಡಿದ್ದು, ಮಂಗಳವಾರ ಬಿಜೆಪಿ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಬೆಂಬಲ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬೆಳಿಗ್ಗೆಯೇ ಅವರ ಮನೆಯ ಮುಂದೆ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಟಿಕೆಟ್ ಆಕಾಂಕ್ಷಿ ಕೆ. ಬಾಬು ಶೆಟ್ಟಿ ಅವರು ಮಾತನಾಡಿ, ಪಕ್ಷದಕ್ಕಾಗಿ ಮೂರು ದಶಕಗಳಿಂದ ದುಡಿಯುತ್ತಿರುವ ನಾನು ಟಿಕೆಟ್ಗಾಗಿ ಬೇಡಿಕೆ ಇರಿಸಿದ್ದೇನೆ. ಅದಕ್ಕೆ ತಕ್ಕಂತೆ ನಮಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂಬ ಮಾಹಿತಿಗಳು ಬರುತ್ತಿದೆ. ಏನೇ ಆದರೂ ಪಕ್ಷದ ಗೆಲುವಿಗಾಗಿ ಶ್ರಮಿಸೋಣ ಎಂದರು. ಈ ವೇಳೆ ಉಪಸ್ಥಿತರಿದ್ದ ಹಿರಿಯ ಮುಖಂಡ ಕೆ. ನಾರಾಯಣ ಹೆಗ್ಡೆ, ಸದಾಶಿವ ಪಡುವರಿ, ಮಹೇಂದ್ರ ಪೂಜಾರಿ ನಾವುಂದ, ಪುಪ್ಪರಾಜ್ ಶೆಟ್ಟಿ ಶಿರೂರು, ಪ್ರವೀಣಕುಮಾರ್ ಶೆಟ್ಟಿ ಕಡ್ಕೆ ಮೊದಲಾದವರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿ, ಬಾಬು ಶೆಟ್ಟಿ ಅವರಿಗೆ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಗಡಿಭಾಗದಲ್ಲಿ ಒಟ್ಟು ಮೂರು ಚೆಕ್ ಪೋಸ್ಟ್ ಇದ್ದು, ಪೊಲೀಸ್ ಸಿಬ್ಬಂದಿಗಳು ಹಾಗೂ ಪ್ಯಾರಾ ಮಿಲಿಟರಿ ಸಿಬ್ಬಂದಿ 3 ಪಾಳಿಯಲ್ಲಿ ದಿನವಿಡಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೈಂದೂರು ಚುನಾವಣಾಧಿಕಾರಿ ಗಂಗಣ್ಣನವರರ್ ರಾತ್ರಿ ವೇಳೆಯಲ್ಲಿ ಕೊಲ್ಲೂರು ದಳಿ ಹಾಗೂ ಶಿರೂರು ಚೆಕ್ ಪೊಸ್ಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿರೂರು ರಾಷ್ಟ್ರೀಯ ಹೆದ್ದಾರಿ 66, ಕೊಲ್ಲೂರು ದಳಿಯ ರಾಷ್ಟ್ರೀಯ ಹೆದ್ದಾರಿ 766ಸಿ ಹಾಗೂ ಹೊಸಂಗಡಿ ರಾಜ್ಯ ಹೆದ್ದಾರಿಯಲ್ಲಿ ಚೆಕ್ ಪೋಸ್ಟ್ ಇದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕುರಿತಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನೀರಿನ ಲಭ್ಯತೆ, ಟ್ಯಾಂಕರ್ ಮೂಲಕ ನೀರು ನೀಡಲು ಅಗತ್ಯವಿರುವ ಕುಟುಂಬಗಳ ಸಂಖ್ಯೆಯನ್ನು ನಿಖರವಾಗಿ ತಿಳಿದುಕೊಂಡು, ಪಿಡಿಓ ಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಗಳನ್ನು ಗ್ರಾಮ ಪಂಚಾಯತ್ವಾರು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಪ್ರಸಕ್ತ ಸಾಲಿನಲ್ಲಿ ಇದುವರೆಗೂ ಮಳೆಯಾಗದಿರುವ ಕಾರಣ ಮುಂದಿನ ಎರಡು ತಿಂಗಳುಗಳನ್ನು ಗಮನದಲ್ಲಿಟ್ಟುಕೊಂಡು,ನೀರಿನ ಸಮರ್ಪಕ ಪೂರೈಕೆಗೆ, ಲಭ್ಯವಿರುವ ನೀರಿನ ಮೂಲಗಳು ಮತ್ತು ಪರ್ಯಾಯ ಮೂಲಗಳ ಬಗ್ಗೆ ಕ್ರಮವಹಿಸಲು ತಿಳಿಸಿದರು. ಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗಳಿಗೆ ಆಗಮಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲೆ – ಕಲಾವಿದರಿಗೆ ಪ್ರೋತ್ಸಾಹ ಸಮಾಜದ ಆದ್ಯ ಕರ್ತವ್ಯವಾಗಬೇಕು ಎಂದು ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಇಲ್ಲಿನ ಶಾಸರದ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ 3 ದಿನಗಳ ಸುರಭಿ ಜೈಸಿರಿ ಕಾರ್ಯಕ್ರಮದ ಸಮಾರೋಪದಲ್ಲಿ ಉಪ್ಪಿನಕುದ್ರು ಗೊಂಬೆಯಾಟದ ಸೂತ್ರಧಾರ ಭಾಸ್ಕರ ಕೊಗ್ಗ ಕಾಮತ್ ಅವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಬಹಳಷ್ಟು ಜಾನಪದ ಕಲೆಗಳು ಇಂದು ಅವಸಾನದಂಚಿನಲ್ಲಿವೆ. ಸಮಾಜ, ಸರಕಾರದ ಪ್ರೋತ್ಸಾಹದ ಕೊರತೆಯಿಂದ ಹಾಗಾಗಿದೆ. ಹೊಸ ಪೀಳಿಗೆಗೆ ಅವುಗಳನ್ನು ಪರಿಚಯಿಸುವ ಕಾರ್ಯ ನಡೆಯಬೇಕು. ಯಕ್ಷಗಾನ ಗೊಂಬೆಯಾಟದ ಸೊಗಡನ್ನು ವಿಶ್ವದೆಲ್ಲೆಡೆ ಪಸರಿಸಿದ ಕೊಗ್ಗ ಕಾಮತ್ ಹಾದಿಯಲ್ಲಿ ಅವರ ಮಗ ಭಾಸ್ಕರ ಕೊಗ್ಗ ಕಾಮತ್ ಹೆಜ್ಜೆ ಹಾಕಿರುವುದು ಕಲೆಯ ಉಳಿವಿನ ದೃಷ್ಟಿಯಿಂದ ಶ್ಲಾಘನೀಯ ಎಂದರು. ಪ್ರಶಸ್ತಿ ಸ್ವೀಕರಿಸಿದ ಭಾಸ್ಕರ ಕೊಗ್ಗ ಕಾಮತ್ ಅವರು ಮಾತನಾಡಿ ಜಾನಪದ ಕಲೆಗಳು ಉಳಿದರೆ ಉತ್ತಮ ಸಮಾಜದ ನಿರ್ಮಾಣ ಸಾಧ್ಯ. ಜನರ ಸಹಕಾರದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಮಾರ್ಕೆಟ್ ಬಳಿ ಮನೆಯೊಂದರಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕದ್ದೊಯ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಕೃತ್ಯದಲ್ಲಿ 18 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 12 ಲಕ್ಷ ರೂ. ನಗದು ಕದ್ದೊಯ್ಯಲಾಗಿರುವ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿರೂರು ಮಾರ್ಕೆಟ್ ಬಳಿ ಹಾರ್ಡ್ವೇರ್ ಉದ್ಯಮ ನಡೆಸುತ್ತಿರುವ ಮಹಮ್ಮದ್ ಅಜೀಮ್ ಎನ್ನುವವರು ಸಂಜೆ ಪತ್ನಿ ಮನೆಗೆ ತೆರಳಿ ಮರಳುವ ವೇಳೆ ಗ್ರಾಹಕರಿಂದ ಪಡೆದಿದ್ದ ನಗದನ್ನು ಮನೆಯಲ್ಲಿ ಇರಿಸಿ ಮತ್ತೆ ಊಟಕ್ಕೆಂದು ತೆರಳಿದ್ದರು. ಮರಳಿ ಮನೆಗೆ ಬಂದು ನೋಡಿದಾಗ ಚಿನ್ನ ಹಾಗೂ ಹಣ ಕಳವುಗೈದಿರುವುದು ಬೆಳಕಿಗೆ ಬಂದಿದೆ. ಹಾರ್ಡ್ವೇರ್ ವ್ಯವಹಾರದಿಂದ ಬಂದ ಹಣವನ್ನು 2-3 ದಿನಗಳಿಗೊಮ್ಮೆ ಬ್ಯಾಂಕಿಗೆ ಹಾಕುತ್ತಿದ್ದರಿಂದ ಮನೆಯಲ್ಲಿಯೇ ಎಲ್ಲಾ ಹಣವನ್ನೂ ಇರಿಸಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ತನಿಕೆ ನಡೆಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇ.ಎಲ್.ಸಿ ಮತ್ತು ಎನ್.ಎಸ್.ಎಸ್ ಘಟಕಗಳು, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ಜಿಲ್ಲೆ ಮತ್ತು ತಾಲ್ಲೂಕು ಸ್ವೀಪ್ ಸಮಿತಿ ಬೈಂದೂರು ಇವರ ಸಹಯೋಗದೊಂದಿಗೆ ‘ಮತದಾರರ ಜಾಗೃತಿ ಅಭಿಯಾನ’ದ ಭಾಗವಾಗಿ ಮತದಾರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ 118 ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳಾದ ಜಗದೀಶ್ ಗಂಗಣ್ಣನವರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ “ಮಾದರಿ ನೀತಿ ಸಂಹಿತೆ ಕುರಿತು ಹಾಗೂ ಮತಯಂತ್ರಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ಎಲ್ಲೇ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ತಾಲ್ಲೂಕು ಚುನಾವಣಾ ಸಹಾಯವಾಣಿಗೆ ಮಾಹಿತಿ ನೀಡುವಂತೆ ತಿಳಿಸಿದರು”. ಬೈಂದೂರು ತಹಶೀಲ್ದಾರರಾದ ಪ್ರಭುಸ್ವಾಮಿ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಮತದಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು”. ತಾ.ಪಂ ಕಾರ್ಯನಿರ್ವಹಣಾ ಅಧಿಕಾರಿಗಳಾದ ಭಾರತಿಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ತಾಲ್ಲೂಕು ಕಛೇರಿ ಬೈಂದೂರು ಇದರ ಉಪ ತಹಶೀಲ್ದಾರರಾದ ಭೀಮಪ್ಪ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರತಿಫಲಾಪೇಕ್ಷೆ ಇಲ್ಲದೇ ತಮ್ಮ ಕರ್ತವ್ಯದಲ್ಲಿ ತೊಡಗಿಕೊಳ್ಳುವವರಿಗೆ ಜನರ ಮನಸ್ಸಿನಲ್ಲಿಯೂ ದೊಡ್ಡ ಸ್ಥಾನ ದೊರೆಯುತ್ತದೆ ಅಲ್ಲದೇ ಗೌರವ ಸನ್ಮಾನಗಳು ಅರಸಿ ಬರುತ್ತವೆ ಎಂದು ನೆಹರು ಯುವ ಕೇಂದ್ರದ ಪ್ರಾಂತೀಯ ಹಾಗೂ ರಾಜ್ಯ ನಿರ್ದೇಶಕ ನಟರಾಜ್ ಹೇಳಿದರು. ಅವರು ಉಡುಪಿ ಜಿಲ್ಲೆಯ ವಿವಿಧ ಯುವಕ ಹಾಗೂ ಯುವತಿ ಮಂಡಲಗಳ ನೇತೃತ್ವದಲ್ಲಿ ಇಲ್ಲಿನ ಕ್ರಿಸ್ಟ್ ಸ್ಕೂಲ್ ಆವರಣದಲ್ಲಿ ಆಯೋಜಿಸಲಾದ ಜಿಲ್ಲಾ ಯುವ ಸಮನ್ವಯಾಧಿಕಾರಿ ವಿಲ್ಫ್ರೆಡ್ ಡಿಸೋಜಾ ಅವರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ವಿಲ್ಫ್ರೆಡ್ ಡಿಸೋಜಾ ಅವರನ್ನು ಸನ್ಮಾನಿಸಿ ಮಾತನಾಡಿ ನೆಹರು ಯುವ ಕೇಂದ್ರದಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸುವ ಅಧಿಕಾರಿಗಳ ಪೈಕಿ ವಿಲ್ಫ್ರೆಡ್ ಅವರೂ ಓರ್ವರಾಗಿದ್ದು, ಅವರ ಕಾರ್ಯಕ್ಷಮತೆಗೆ ಇಂದಿನ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದರು. ಯುವ ಕೇಂದ್ರದ ಮೂಲಕ ಯುವಕರನ್ನು ಸಂಘಟನಾತ್ಮವಾಗಿ ತೊಡಗಿಕೊಳ್ಳುವಂತೆ ಮಾಡಲು ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಯುವ ಸಬಲೀಕರಣ ಇಲಾಖೆಯ ಜೊತೆಗೂಡಿ ಸ್ವಸಹಾಯ ಗುಂಪುಗಳನ್ನು ರಚಿಸಲು ಯೋಜಿಸಲಾಗಿದೆ ಎಂದರು. ಉಡುಪಿ ಜಿಲ್ಲೆಗೆ ಕಳೆದ ಮೂರು ವರ್ಷಗಳಿಂದ ರಾಜ್ಯ…
