ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಮಿಕರಿಗೆ ಕೂಲಿ ನೀಡುವ ವಿಚಾರದಲ್ಲಿ ಮಾತನಾಡಿ, ಪೊಲೀಸರಿಗೆ ಮಾಹಿತಿ ನೀಡದಂತೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ನಕ್ಸಲ್ ಪದ್ಮನಾಭ ನೀಲುಗುಳಿಯನ್ನು ದೋಷಮುಕ್ತ ಗೊಳಿಸಿ ಕುಂದಾಪುರದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶ ನೀಡಿದ್ದಾರೆ. 2005ರಲ್ಲಿ ಕುಂದಾಪುರ ತಾಲೂಕಿನ ಹಳ್ಳಿಹೊಳೆಯ ಕೋಟುಗುಳಿ ಎಂಬಲ್ಲಿ ಗುರುದತ್ತ ಚಾತ್ರ ಎನ್ನುವವರ ಮನೆ ಸಮೀಪ ಓರ್ವ ಮಹಿಳೆ ಹಾಗೂ ಏಳು ಮಂದಿ ಪುರುಷರಿದ್ದ ತಂಡ ಬಂದೂಕು ಸಹಿತ ಆಗಮಿಸಿ ದೂರುದಾರ ಗುರುದತ್ತ ಅವರ ಬಳಿ ಕೆಲಸಗಾರರಿಗೆ ಸರಿಯಾದ ಸಂಬಳ ನೀಡದಿರುವ ಬಗ್ಗೆ ವಿಚಾರಿಸಿದ್ದರು. ಇದಾದ ಬಳಿಕ ಪೊಲೀಸರಿಗೆ ಯಾವುದೇ ಮಾಹಿತಿ ನೀಡದಂತೆ ಜೀವ ಬೆದರಿಕೆ ಹಾಕಿ ಈ ತಂಡ ಸ್ಥಳದಿಂದ ತೆರ ಳಿತ್ತು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಗುರುದತ್ತ ಚಾತ್ರ ಪ್ರಕರಣ ದಾಖಲಿಸಿದ್ದರು. ಇದರಲ್ಲಿ ಪದ್ಮನಾಭ ನೀಲುಗುಳಿ ಸಹಿತ ಏಳು ಮಂದಿ ಶಂಕಿತ ನಕ್ಸಲರ ಹೆಸರನ್ನು ಉಲ್ಲೇಖಿಸಲಾಗಿದ್ದು ಅವರೆಲ್ಲಾ ಕಾಡು ಪ್ರದೇಶದಲ್ಲಿ ನಿಷೇಧಿತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೇ. 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಸ್ಟನ್ ವಾಸ್ ಶೆಟ್ಟಿ (355), ರಾಹುಲ್ ಉಮೇಶ್ (313), ಎನ್. ಚಿರಂತನಾ(312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ. ಇಂಟರ್ ಮೀಡಿಯಟ್ ಗ್ರೂಪ್-02 ವಿಭಾಗದಲ್ಲಿ ಗಿರೀಶ್ (179) ಹಾಗೂ ತರುಣ್ ಕುಮಾರ್(152) ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗೂರು ಕೊಡೇರಿಯ ಕುಳ್ಳಿ ಗೋವಿಂದ ಖಾರ್ವಿ (72 ವರ್ಷ) ಅವರು ಗುರುವಾರ ಬೆಳಗಿನ ಜಾವ ನಿಧನರಾದರು. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಮತ್ತು ಜನಪರ ಕಾಳಜಿಯ ಮೂಲಕ ಜನಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದ ಅವರು, ತಮ್ಮ ಸರಳತೆ ಮತ್ತು ಸೇವಾಭಾವದಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಐರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳ ಸಭೆ ಇತ್ತೀಚಿಗೆ ಸಾಸ್ತಾನದ ಶಿವಕೃಪಾ ಕಲ್ಯಾಣ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಐರೋಡಿ ಗ್ರಾ.ಪಂ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳಿಗೆ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು. ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪಕ್ಷ ಸಂಘಟನೆಯ ,ಬಿಜೆಪಿಯ ಸಂಘಟನಾ ವ್ಯವಸ್ಥೆಯಲ್ಲಿ 2-3 ಬೂತ್‌ಗಳನ್ನು ಸೇರಿಸಿ ಒಂದು ಶಕ್ತಿಕೇಂದ್ರ ಮಾಡಲಾಗುತ್ತದೆ. ಬೂತ್ ಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಕೆಲಸ ಮಾಡುವುದು ಇದರ ಉದ್ದೇಶ ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಭಾಗವಹಿಸಿ, ಪಕ್ಷ ಬಲಪಡಿಸುವಿಕೆ ಹಾಗೂ ತಳಮಟ್ಟದ ಸಂಘಟನೆ ಬಗ್ಗೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದು ಮತ್ತು ಬೂತ್ ಮಟ್ಟದ ಸಂಘಟನೆಯನ್ನು ಚುರುಕುಗೊಳಿಸ ಬೇಕು ಎಂದು ಹೇಳಿದರು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಪಾಂಡೇಶ್ವರ ಗ್ರಾ.ಪಂ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳ ಸಭೆ ಬುಧವಾರ ಸಾಸ್ತಾನದ ಶಿವಕೃಪಾ ಸಭಾಗ್ರಹದಲ್ಲಿ ನಡೆಯಿತು. ಸಭೆಯಲ್ಲಿ ಪಾಂಡೇಶ್ವರ ವ್ಯಾಪ್ತಿಯ ಶಕ್ತಿಕೇಂದ್ರಗಳಿಗೆ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು. ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಂಡೇಶ್ವರ ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಶಕ್ತಿ ಕೇಂದ್ರದ ನೂತನ ತಂಡ ಶ್ರಮಿಸಲಿ. ಮುಂದಿನ ದಿನಗಳಲ್ಲಿ ಶಕ್ತಿ ಕೇಂದ್ರ ವಾರು ಸದಸ್ಯತ್ವ ಅಭಿಯಾನ ಹಾಗೂ ಪೇಜ್ ಪ್ರಮುಖರ ನೇಮಕಕ್ಕೆ ಆದ್ಯತೆ ನೀಡಲಾಗುವುದು ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಬಿಜೆಪಿಯ ಬಲ ತಳಮಟ್ಟದ ಸಂಘಟನೆಯಲ್ಲಿದೆ. ಬೂತ್ ಗೆದ್ದರೆ ಎಲ್ಲವನ್ನೂ ಗೆದ್ದಂತೆ. ಹಾಗಾಗಿ ಪ್ರತಿ ಬೂತ್‌ನಲ್ಲಿ ಯುವಕರು, ಮಹಿಳೆಯರು, ಹಿರಿಯರನ್ನು ಸೇರಿಸಿ ಸಮಿತಿ ಬಲಪಡಿಸಿ. ಸ್ಥಳೀಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಜನರ ವಿಶ್ವಾಸಗಳಿಸಿ. ಸಾಮಾಜಿಕ ಜಾಲತಾಣಗಳನ್ನು ಪಕ್ಷದ ಕೆಲಸಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಮತ್ತು ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ವತಿಯಿಂದ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳ ಸಭಾಂಗಣದಲ್ಲಿ ಸಂಸ್ಥೆಯಲ್ಲಿ ಸುದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಉಪನ್ಯಾಸಕ ಮತ್ತು ಸಿಬ್ಬಂದಿ ವರ್ಗದವರಿಗೆ ಬೀಳ್ಕೊಡುಗೆ ಸಮಾರಂಭವು ಇತ್ತೀಚಿಗೆ ನಡೆಯಿತು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಸುದೀರ್ಘ ವರ್ಷಗಳ ಕಾಲ ಹಿಂದಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ನಾರಾಯಣ ಈ ನಾಯ್ಕ್, ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಎಂ. ರಾಘವೇಂದ್ರ ಭಟ್, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶ್ರೀಲತಾ, ಭೌತಶಾಸ್ತ್ರ ಪ್ರಯೋಗಾಲಯದ ಸಹಾಯಕರಾಗಿ ಸೇವೆ ಸಲ್ಲಿಸಿದ ವಿಜಯ್ ಕುಮಾರ್, ಹೈಸ್ಕೂಲ್ ವಿಭಾಗದ ಕಚೇರಿ ಸಹಾಯಕರಾಗಿ ಕಾರ್ಯನಿರ್ವಹಿಸಿದ ಯಮುನಾ ಭಾಸ್ಕರ್ ಮತ್ತು ಅಟೆಂಡರ್ ಆಗಿ ಕಾರ್ಯನಿರ್ವಹಿಸಿದ ಜೀವನ್ ನಾಯಕ್ ಇವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು. ಉಪನ್ಯಾಸಕರಾದ ವೆಂಕಟೇಶ ಮೂರ್ತಿ ಎನ್.ಸಿ, ನರೇಂದ್ರ ಎಸ್. ಗಂಗೊಳ್ಳಿ ಮತ್ತು ಕಚೇರಿಯ ಪ್ರಮೋದ ಪೈ ಎಂ.ಜಿ ನಿವ್ರತ್ತರಿಗೆ ಶುಭ ಹಾರೈಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಡುಪಿ ಜಿಲ್ಲೆ ಪದವಿಪೂರ್ವ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ವಿವೇಕ ಪದವಿಪೂರ್ವ ಕಾಲೇಜು ಕೋಟ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗಾಗಿ ಒಂದು ದಿನದ ಪುನಶ್ಚೇತನ ಕಾರ್ಯಗಾರವು ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಟೆಕ್ನಾಲಜಿ ಸೆಂಟರ್ ನಲ್ಲಿ ನಡೆಯಿತು. ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವದ ಉಪ ನಿರ್ದೇಶಕರಾದ ಮಾರುತಿ ಕಾರ್ಯಗಾರವನ್ನು ಉದ್ಘಾಟಿಸಿದರು. ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವುಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಕೋಟ ವಿದ್ಯಾ ಸಂಘದ ಖಜಾಂಜಿ ವೆಲೇರಿಯನ್ ಮೆನೇಜಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸುರತ್ಕಲ್‌ನ ರಿಸರ್ಚ್ ಸ್ಕಾಲರ್ ಕೀರ್ತನ್ ಅವರು ಜೆನ್ ಜಿ. ಕಲಿಕಾರ್ಥಿಗಳ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಬಗೆಗೆ ದಿಕ್ಸೂಚಿ ಉಪನ್ಯಾಸವನ್ನು ನೀಡಿದರು. ಉಪನ್ಯಾಸಕರಾದ ಬಲರಾಮ ವೈದ್ಯ, ಹರೀಶ್ ಕುಮಾರ್, ಸಂತೋಷ್ ಕುಮಾರ್, ಸುರೇಂದ್ರ ಪೂಜಾರಿ ಮತ್ತು ಹೇಮಲತಾ ಲೆಕ್ಕಶಾಸ್ತ್ರ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಂಬೈನಲ್ಲಿ ನಡೆದ 19ನೇ ಮುಂಬೈ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡದ ಕಿರುಚಿತ್ರ ‘ದಿ ಹಗ್ ಆಫ್ ಎಂಪಿನೆಸ್’ (ಖಾಲಿತನದ ಅಪ್ಪುಗೆ) ರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ ಪ್ರಶಸ್ತಿ ಗೆದ್ದಿದೆ. ಚಿತ್ರದ ನಿರ್ದೇಶಕ ಡಾ. ಪ್ರದೀಪ್ ಕೆಂಚನೂರು ಅವರಿಗೆ ಪ್ರೀ ಪ್ರೆಸ್ತಿ ಅಂತರರಾಷ್ಟ್ರೀಯ ಕ್ರಿಟಿಕ್ ಅಸೋಸಿಯೇಷನ್ ನೀಡುವ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿಯನ್ನ ನೀಡಿ ಗೌರವಿಸಲಾಗಿದೆ. ಭಾರತೀಯ ಫಿಲ್ಮ ಸೊಸೈಟಿಗಳ ಒಕ್ಕೂಟದ ಉಪಾಧ್ಯಕ್ಷ ಪ್ರೇಮೇಂದ್ರ ಮಜುಂದಾರ್ ಅವರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇತಿಹಾಸ ಪ್ರಾಧ್ಯಾಪಕ ರಾಗಿರುವ ಡಾ. ಪ್ರದೀಪ್ ಕೆಂಚನೂರು ಅವರಿಗೆ ಇದು ಚೊಚ್ಚಲ ಚಿತ್ರವಾಗಿದ್ದು, ಮೊದಲ ಪ್ರಯತ್ನದಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ರಾಷ್ಟ್ರೀಯ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಎನ್‌ಎಫ್‌ಡಿಸಿ ಸಂಯುಕ್ತವಾಗಿ ಆಯೋಜಿಸಿದ್ದ ಈ ಚಿತ್ರೋತ್ಸವದಲ್ಲಿ 48 ರಾಷ್ಟ್ರಗಳಿಂದ 903 ಚಿತ್ರಗಳು ಸ್ಪರ್ಧಿಸಿದ್ದವು. ಡಾ. ಪ್ರದೀಪ್ ಅವರು ತಾಲೂಕಿನ ಕೆಂಚನೂರಿನ ಬಗ್ವಾಡಿಮನೆಯವರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಶ್ರೀ ರಾಮ ಕ್ಷತ್ರಿಯ ಯುವ ಸೇವಾ ಸಂಘ ರಿ. ಬೆಂಗಳೂರು ಇದರ 22ನೇ ವರ್ಷದ ಸಂಭ್ರಮಾಚರಣೆ – ನಮ್ಮ ಸಾಂಸ್ಕೃತಿಕ ಹಬ್ಬ ಸಮಾಜ ಬಂಧುಗಳ ಸಮ್ಮಿಲನ ಜುಲೈ 5ರ ಭಾನುವಾರ ಬೆಳಿಗ್ಗೆ 9:00 ರಿಂದ ಸಂಜೆ 6.30ರ ತನಕ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸಾಂಸ್ಕೃತಿಕ ಹಬ್ಬದ ಉದ್ಘಾಟನೆಯನ್ನು ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆ ಜಾರಿ ವಿಭಾಗದ ಸಹಾಯಕ ಆಯುಕ್ತ ಸತೀಶ್ ಬಟ್ವಾಡಿ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಬೆಂಗಳೂರು ರಾಮಕ್ಷತ್ರಿಯ ಯುವ ಸೇವಾ ಸಂಘದ ಅಧ್ಯಕ್ಷರಾದ ಗಣೇಶ್ ಬಾಳಯ್ಯನಮನೆ ವಹಿಸಲಿದ್ದಾರೆ ಹಾಗೂ ಇನ್ನಿತರ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 9:30 ರಿಂದ ಸಮಾಜ ಬಾಂಧವರಿಂದ ಸಾಂಸ್ಕೃತಿಕ ವೈಭವ (ನೃತ್ಯ, ಭರತನಾಟ್ಯ, ಪ್ರಹಸನ), ಸ್ಪರ್ಶ ಟ್ರಸ್ಟ್ ಮಕ್ಕಳ ಧಾಮ ಇವರಿಂದ ಡೊಳ್ಳು ಕುಣಿತ ಮತ್ತು ಮಧ್ಯಾಹ್ನ 1.00 ರಿಂದ 2.00 ಗಂಟೆಗೆ ಸಹ ಭೋಜನ ನಡೆಯಲಿದೆ. ಮಧ್ಯಾಹ್ನ 2ರಿಂದ 3.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಯಕತ್ವದ ಜವಾಬ್ದಾರಿ ಅರಿಯಲು ಶಾಲಾ ವಿದ್ಯಾರ್ಥಿ ಸಂಘ ಅಡಿಗಲ್ಲು ಎಂದು ಬಾರಕೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ. ಹೇಳಿದರು. ಅವರು ಶ್ರೀ ವಿದ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲ ಮಾಧ್ಯಮ ಶಾಲೆ ಹೇರಾಡಿ ಬಾರಕೂರಿನಲ್ಲಿ ಶಾಲಾ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲೆಯ ಸಂಚಾಲಕರಾದ ರಾಜಾರಾಮ್ ಶೆಟ್ಟಿ ವಹಿಸಿದ್ದರು, ವೇದಿಕೆಯಲ್ಲಿ ಶಾಲೆಯ ಮುಖ್ಯಸ್ಥರಾದ ಲಿಖಿತಾ ಕೊಠಾರಿ ಉಪಸ್ಥಿತರಿದ್ದರು. ಶಾಲೆಯಲ್ಲಿ ವಿದ್ಯುನ್ಮಾನ ಯಂತ್ರಗಳ ಮೂಲಕ ಮತದಾನ ನಡೆಸಲಾಗಿತ್ತು. ಶಾಲಾ ವಿದ್ಯಾರ್ಥಿ ನಾಯಕ ನಾಗಿ ಶೋಭಿತ್ ಎಸ್. ಶೆಟ್ಟಿ, ಉಪ ವಿದ್ಯಾರ್ಥಿ ನಾಯಕನಾಗಿ ಲಿಖಿತ್ ಕೆ., ಕ್ರೀಡಾ ಕಾರ್ಯದರ್ಶಿಯಾಗಿ ಆಯುಷ್, ಸಾಂಸ್ಕೃತಿಕ ಮಂತ್ರಿಯಾಗಿ ವೈಷ್ಣವಿ.ಜಿ. ಭಟ್, ಆರೋಗ್ಯ ಮಂತ್ರಿಯಾಗಿ ಅನುಷಾ, ವಿರೋಧ ಪಕ್ಷದ ನಾಯಕಿಯಾಗಿ ಸಿಯಾನಾ ಶೆಟ್ಟಿ, ಸಭಾಪತಿಯಾಗಿ ಪ್ರಸ್ತುತಿ ಅಧಿಕಾರ ವಹಿಸಿಕೊಂಡರು. ವಿಜ್ಞಾನ ಸಂಘದ ಅಧ್ಯಕ್ಷರಾಗಿ ಸಂಕೇತ ಮತ್ತು ಸನ್ನಿಧಿ ಪಿ., ಪರಿಸರ ಸಂಘದ ಅಧ್ಯಕ್ಷರಾಗಿ ಮಯೂರ್ ಮತ್ತು ಯಶಿಕಾ, ಸಾಹಿತ್ಯ…
