ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ ವಿಭಾಗದ ವತಿಯಿಂದ ‘ಇನ್ಸ್‌ಪೀರಿಯಾ – 2025’ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು. ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಪಾನ್ ಮೂಲದ ಸಕ್ರಾ ವರ್ಲ್ಡ್ ಹಾಸ್ಪಿಟಲ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಯುಚಿ ನಗಾನೊ ಮುಖ್ಯ ಅತಿಥಿಯಾಗಿ ಮಾತನಾಡಿ, ಕೃತಕ ಬುದ್ಧಿಮತ್ತೆ ಹಾಗೂ ಇನ್ನಿತರ ತಂತ್ರಜ್ಞಾನಗಳ ಪ್ರಗತಿಯೊಂದಿಗೆ ಆರೋಗ್ಯ ನಿರ್ವಹಣಾ ಕ್ಷೇತ್ರವು ಬಹಳಷ್ಟು ಮುಂದುವರಿದಿದೆ. ವೈದ್ಯಕೀಯ ಕ್ಷೇತ್ರವು ಸೋಂಕುಗಳನ್ನು ತಡೆಗಟ್ಟಿ ರೋಗಿಯ ಚೇತರಿಕೆಗೆ ಗಮನ ನೀಡುವುದರೊಂದಿಗೆ ಆಸ್ಪತ್ರೆಗಳು ಮನೆಯ ವಾತಾವರಣವನ್ನು ಕಲ್ಪಿಸಿಕೊಡುವಂತಿರಬೇಕು. ಆಸ್ಪತ್ರೆ ನಿರ್ವಹಣೆಯ ಕುರಿತು ಸೂಕ್ಷ್ಮದೃಷ್ಠಿ ಬೆಳೆಸಿಕೊಳ್ಳಲು ನಮ್ಮಲ್ಲಿರುವ ಜ್ಞಾನ, ಕನಸುಗಳು ಹಾಗೂ ಆಶಯಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಕು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಹೆಚ್ಚಿನ ಆಸ್ಪತ್ರೆಗಳನ್ನು ಕಾರ್ಪೋರೇಟ್ ಸಂಸ್ಥೆಗಳು ನಿರ್ವಹಿಸುವುದರಿಂದ ಜನಸಾಮಾನ್ಯರಿಗೆ ವ್ಯವಸ್ಥೆಗಳು ಬಳಸಿಕೊಳ್ಳಲು ಅನುಕೂಲಕರವಾಗಿಲ್ಲ. ಆಸ್ಪತ್ರೆಯ ನಿರ್ವಾಹಕರು ರೋಗಿಗಳ ಮೇಲೆ ಸಹಾನುಭೂತಿಯ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಹೊಸ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತಿಹಾಸವನ್ನು ಅರ್ಥಮಾಡಿಕೊಳ್ಳುವುದು ಅನುಭವಿಸುವುದು ಇತರರಿಗೆ ಹೇಳುವುದು ನಮ್ಮ ಜವಾಬ್ದಾರಿ ಎನ್ನುವುದನ್ನು ಮರೆತುಬಿಟ್ಟೆದ್ದೇವೊ ಅನ್ನುವಷ್ಟರ ಮಟ್ಟಿಗೆ ಇತಿಹಾಸದ ನೆನಪುಗಳು ನಮ್ಮಿಂದ ದೂರವಾಗುತ್ತಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ & ಸಾಯನ್ಸ್ ಕಾಲೇಜು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಬೆಂಗಳೂರು ಹಾಗೂ ಧಾರವಾಡ ವಲಯ, ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ಅಧ್ಯಾಪಕರ ಸಂಘ ಇವರ ಸಹಯೋಗದೊಂದಿಗೆ ನಡೆದ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾದ 3 ದಿನಗಳ ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನದ ಉದ್ಘಾಟಿಸಿ ಮಾತನಾಡಿದರು. ನಮ್ಮ ಐತಿಹಾಸಿಕ ದಾಖಲೆಗಳು ಪರಂಪರೆ, ಸಂಸ್ಕೃತಿ ಮತ್ತು ವಾಸ್ತು ಶಿಲ್ಪಗಳ ಮಹತ್ವವನ್ನು ಕುರಿತು ವಿಶೇಷ ಅಧ್ಯಯನಗಳ ಅವಶ್ಯಕತೆ ಇದೆ. ಇತಿಹಾಸವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿಯನ್ನು ಅರಿತು ಆ ನೆಲೆಯಲ್ಲಿ ಕಾರ್ಯಪ್ರವೃತ್ತರಾಗೋಣ ಎಂದು ಹೇಳಿದರು. 35ನೇ ವಾರ್ಷಿಕ ಮಹಾಅಧೀವೆಶೇನದ ಸರ್ವಾಧ್ಯಕ್ಷತೆಯನ್ನು ಮಂಗಳೂರು ಹಾಗೂ ದೆಹಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ಶಿವರಾತ್ರಿ ಸೇವಾ ಸಮಿತಿ ಗಂಗೊಳ್ಳಿ ಇದರ ವತಿಯಿಂದ ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ 3ನೇ ವರ್ಷದ ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಗುರುವಾರ ಪ್ರಾರಂಭವಾಯಿತು. ಮೀನ ಲಗ್ನ ಸುಮೂಹೂರ್ತದಲ್ಲಿ ದೀಪ ಸ್ಥಾಪನೆಯೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕ ರವೀಶ್ ಭಟ್ ಅವರು ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸೇವಾ ಸಮಿತಿ ಅಧ್ಯಕ್ಷ ವಿ. ನಾಗರಾಜ ಖಾರ್ವಿ, ಗೌರವಾಧ್ಯಕ್ಷ ರಾಜ ಗಂಗೊಳ್ಳಿ, ದುರ್ಗರಾಜ ಪೂಜಾರಿ, ವರದಾ ಶೇರುಗಾರ್, ನಾಗೇಶ ಖಾರ್ವಿ ದಾಕುಹಿತ್ಲು, ಸುಬ್ಬ ಖಾರ್ವಿ ಗುಡ್ಡೆಕೇರಿ, ಶ್ರೀಧರ ಖಾರ್ವಿ ದಾಕುಹಿತ್ಲು, ಸಮಿತಿ ಸದಸ್ಯರು, ವಿವಿಧ ಭಜನಾ ಮಂಡಳಿಗಳ ಸದಸ್ಯರು, ಮೊದಲಾದವರು ಉಪಸ್ಥಿತರಿದ್ದರು. 27ರಂದು ದೀಪ ವಿಸರ್ಜನೆಯೊಂದಿಗೆ ಭಜನೆಯ ಮಂಗಲೋತ್ಸವ ನಡೆಯಲಿದೆ. ಮಹಾಶಿವರಾತ್ರಿ ಪ್ರಯುಕ್ತ 26ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ವೀರೇಶ್ವರ ದೇವರಿಗೆ ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ ಮತ್ತಿತರ ಪೂಜೆ ಪುನಸ್ಕಾರಗಳು ನಡೆಯಲಿದ್ದು, ಸಂಜೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಉಡುಪಿ ಜಿಲ್ಲೆ ಹಾಗೂ ಸಮುದಾಯ ವೈದ್ಯಕೀಯ ವಿಭಾಗ, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಾಹೆ ಮಣಿಪಾಲ ಇವರ ಸಹಯೋಗದೊಂದಿಗೆ ಪ್ರಸೂತಿ ತಜ್ಞರಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯದ ಸಮಗ್ರ ಅಧ್ಯಯನದ ಕುರಿತು ಒಂದು ದಿನದ ಕಾರ್ಯಗಾರವು ಇಂದು ನಗರದ ಮಣಿಪಾಲ ಕೆ.ಎಂ.ಸಿ.ಯ ಡಾ. ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ತಾಯಿ ಹಾಗೂ ಮಕ್ಕಳ ಸಾವುಗಳು ಅತ್ಯಲ್ಪವಿದ್ದು, ಪ್ರತೀ ತಾಯಿ ಹಾಗೂ ಮಗುವಿನ ಸಾವುಗಳನ್ನು ತಡೆಯಲು ಸರ್ವ ಪ್ರಯತ್ನಗಳನ್ನು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಮಾಡಬೇಕು. ಜಿಲ್ಲೆಯಲ್ಲಿ ಹೆರಿಗೆ ಸಮಯದಲ್ಲಿ ಸ್ವಾಭಾವಿಕವಾಗಿ ಆಗುವ ರೀತಿ ಒತ್ತು ನೀಡಬೇಕು. ಒಂದೊಮ್ಮೆ ಅನಿವಾರ್ಯ ತುರ್ತು ಸಂದರ್ಭದಲ್ಲಿ ಮಾತ್ರ ಸಿಜೇರಿಯನ್ ಮಾಡುವ ಮೂಲಕ ಡೆಲಿವರಿ ಮಾಡಿಸಬೇಕು ಎಂದರು. ಹದಿಹರೆಯದ ಯುವ ಹೆಣ್ಣು ಮಕ್ಕಳಿಗೆ ಪೌಷ್ಠಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೀವನ ಮೌಲ್ಯಗಳು ಕಲಿಯುವುದಲ್ಲ, ಪಾಲಿಸುವಂತದದ್ದು. ಹೀಗಾಗಿ ತಂದೆ, ತಾಯಿ, ಗುರುಗಳು ಜೀವನದ ಅತ್ಯಮೂಲ್ಯ ಮೌಲ್ಯ. ಅವರ ಆದರ್ಶ ಬದುಕು ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಬೇಕು. ಅದರೊಂದಿಗೆ ವ್ಯಕ್ತಿತ್ವಪೂರ್ಣ ಜೀವನವನ್ನು ಪ್ರಾಮಾಣಿಕವಾಗಿ ರೂಢಿಸಿಕೊಂಡಾಗ ವ್ಯಕ್ತಿಯ ಬದುಕಿಗೆ ಬೆಲೆ ಬರುತ್ತದೆ ಎಂದು ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ವಿನಾಯಕ್ ಭಟ್ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ “ಜೀವನ ಮೌಲ್ಯ” ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಇಂದಿನ ಶಿಕ್ಷಣ ಪದ್ಧತಿಯಲ್ಲಿ ಮೌಲ್ಯ ಶಿಕ್ಷಣವನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕಾವ್ಯ ಸ್ವಾಗತಿಸಿ, ಸ್ವಾತಿ ಅತಿಥಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಚಟುವಟಿಕೆಗಳು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪಗಳು ಪ್ರಾಕೃತಿಕವಾಗಿ ಇದ್ದು, ಇಲ್ಲಿನ ಪ್ರಾಕೃತಿಕ ಸೌಂದರ್ಯ ಸೊಬಗು ಪ್ರವಾಸಿಗರನ್ನು ಮನಸೂರೆಗೊಳಿಸುತ್ತವೆ. ಈ ತಾಣದಲ್ಲಿ ಪ್ರವಾಸಿಗರ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು. ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸಿಗರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಆಧುನಿಕತೆಯ ಸ್ವರೂಪದೊಂದಿಗೆ ಜನಾಕರ್ಷಣೀಯವಾಗಿ ಕೈಗೊಳ್ಳಬೇಕು. ಪ್ರವಾಸಿಗರಿಗೆ ವಾಹನಗಳ ಪಾಕಿಂಗ್ ವ್ಯವಸ್ಥೆ, ಆಸನದ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು. ತ್ರಾಸಿ ಬೀಚ್‌ನ ನಿರ್ವಹಣೆ ಹಾಗೂ ಜಲ ಸಾಹಸ ಚಟುವಟಿಕೆಗಳಿಗೆ ಗುತ್ತಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತ ದೇಶವು ಜಗತ್ತಿನಲ್ಲಿ ಅತಿ ಹೆಚ್ಚು ಯುವ ಸಂಪತ್ತನ್ನು ಹೊಂದಿರುವ ರಾಷ್ಟ್ರವಾಗಿದ್ದು, ಸೃಜನಾತ್ಮಕ ಕೌಶಲ್ಯಗಳನ್ನು ನಮ್ಮ ಯುವಪೀಳಿಗೆ ಹೊಂದಿದ್ದಾರೆ. ಅವರುಗಳ ಕೌಶಲ್ಯವನ್ನು ಹೊರತರುವಲ್ಲಿ ಉದ್ಯೋಗ ಮೇಳಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕೌಶಲ್ಯ ರೋಜ್‌ಗಾರ್ ಮೇಳ – ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿರುವ ಯಾವುದೇ ಸರ್ಕಾರಿ ಹುದ್ದೆಯನ್ನು ಯಾರೂ ಕೂಡ ಶಿಫಾರಸ್ಸು ಮಾಡಿ, ನೀಡಲು ಸಾಧ್ಯವಿಲ್ಲ. ಸ್ವಂತ ಬದುಕನ್ನು ಕಟ್ಟಿಕೊಳ್ಳುವ ಅನಿವಾರ್ಯತೆಯಲ್ಲಿ ನಾವುಗಳು ಇದ್ದೇವೆ. ಉದ್ಯೋಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಗ್ರಾಮದ ನ್ಯಾಯಬೆಲೆ ಅಂಗಡಿಗಳಲ್ಲಿ ಮಧ್ಯಾಹ್ನ ಪಡಿತರ ವಿತರಣೆ ಮಾಡದೆ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು ಸರ್ಕಾರ ನಿಗದಿಪಡಿಸಿದಂತೆ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೂ ಪಡಿತರ ವಿತರಿಸುವಂತೆ ಮತ್ತು ನ್ಯಾಯಬೆಲೆ ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಆಗದಂತೆ ತಡೆಯುವಂತೆ ಕೋರಿ ಶಿರೂರು ಗ್ರಾಮದ ಆಹಾರ ಖಾತ್ರಿ ಸಮಿತಿಯ ಅಧ್ಯಕ್ಷರು ಹಾಗು ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವ ಸಾಮಾಜಿಕ ಹೋರಾಟಗಾರರಾದ ರಾಘು ಶಿರೂರು, ಯೋಗೇಶ್ ಶಿರೂರು, ರಾಮಚಂದ್ರ ಆಚಾರಿ, ಸಾಯಿನಾಥ ಜೋಗುರು, ರವಿ ಹಕ್ಲರ್ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಅನಂತರ ಅಂಗಾಂಗದಾನದ ಮೂಲಕ ಇತರರಿಗೆ ಜೀವ ನೀಡಿ ಸಾರ್ಥಕತೆ ಮೆರೆದ ಘಟನೆ ನಡೆದಿದೆ. ಕುಂದಾಪುರದ ನಿವಾಸಿ ರಾಘವೇಂದ್ರ (35) ಅವರು ಫೆ.17ರಂದು ಮಧ್ಯರಾತ್ರಿ 12.20 ವೇಳೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ತೀವ್ರ ಗಾಯಗಳ ಅನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಸಂಪೂರ್ಣ ವೈದ್ಯಕೀಯ ಚಿಕಿತ್ಸೆಯ ಹೊರತಾಗಿಯೂ ರಾಘವೇಂದ್ರ ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣ ಕಂಡುಬರಲಿಲ್ಲ. ಮಾನವ ಅಂಗಾಂಗ ಕಸಿ ಕಾಯಿದೆ 1994 ರ ಪ್ರಕಾರ ಪರಿಣಿತ ವೈದ್ಯರ ಸಮಿತಿಯು ಎರಡು ಬಾರಿ ಅಧಿಕೃತವಾಗಿ ಬ್ರೈನ್ ಡೆಡ್ ಎಂದು ಘೋಷಿಸಿತು. ರಾಘವೇಂದ್ರ ಅವರ ಕುಟುಂಬವು ಅವರ ಕಾರ್ಯಸಾಧ್ಯವಾದ ಅಂಗಾಂಗಳನ್ನು ದಾನ ಮಾಡುವ ನಿರ್ಧಾರವನ್ನು ತೆಗೆದುಕೊಂಡರು. ಆ ಮೂಲಕ ಅಗತ್ಯವಿರುವ ಇತರರಿಗೆ ಅಂಗ ದಾನ ಮಾಡಲು ನಿರ್ಧರಿಸಲಾಯಿತು. ಅದರಂತೆ ರಾಘವೇಂದ್ರ ಅವರ ಒಂದು ಕಿಡ್ನಿ ಮತ್ತು ಯಕೃತ್ತನ್ನು ಮಂಗಳೂರಿನ ಎಜೆ ಆಸ್ಪತ್ರೆ, ಶ್ವಾಸಕೋಶವನ್ನು ಸಿಕಂದರಾಬಾದ್‌ನ ಕಿಮ್ಸ್ ಆಸ್ಪತ್ರೆಗೆ ಹಾಗೂ ಒಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಇದರ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಜಗದೀಶ್ ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ ಉಪ್ಪಳ್ಳಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಜಗದೀಶ್ ಪೂಜಾರಿ ಹಕ್ಕಾಡಿ ಅವರು ಮಾತನಾಡಿ, 13 ಜನರ ನಮ್ಮ ತಂಡದ ಮೇಲೆ ನಂಬಿಕೆ ಇರಿಸಿ ಸಂಘದ ಸದಸ್ಯರು ಆಯ್ಕೆ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ ಭರವಸೆಯಂತೆ ಕೃಷಿ ಸಾಲವನ್ನು ತಕ್ಷಣ ನೀಡುವ ವ್ಯವಸ್ಥೆ, ನಾವುಂದ ಅರೆಹೊಳೆ ಗಣೇಶನಗರದ ಮಧ್ಯೆಭಾಗದಲ್ಲಿ ರೇಷನ್ ವಿತರಿಸುವ ಕೇಂದ್ರೆ ಸ್ಥಾಪಿಸುವ ವ್ಯವಸ್ಥೆ ಸೇರಿದಂತೆ ಇನ್ನಿತರ ಭರವಸೆಯನ್ನು ಮುಂದಿನ 5 ವರ್ಷದಲ್ಲಿ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ನರಸಿಂಹ ದೇವಾಡಿಗ, ಶ್ರೀನಿವಾಸ ಪೂಜಾರಿ, ಗಣೇಶ್ ಪೂಜಾರಿ, ಪ್ರಭಾಕರ ಎಂ.ಖಾರ್ವಿ, ಹರಿಶ್ಚಂದ್ರ ಆಚಾರ್ಯ, ಲಕ್ಷ್ಮೀ, ಶಕುಂತಲಾ, ಗಣೇಶ್ ಪೂಜಾರಿ, ವೀರೇಂದ್ರ ಹೆಗ್ಡೆ, ರಾಮ ಕಂತಿಹೊಂಡ, ಸುರೇಶ್ ನಾಯ್ಕ ಉಪಸ್ಥಿತರಿದ್ದರು. ಚುನಾವಣಾ ಅಧಿಕಾರಿ ಸುನೀಲ್ ಕುಮಾರ್…
