Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳಿಗೆ ಆದ್ಯತೆ ನೀಡಿ, ಮುಂಬರುವ ಮೂರು ವರ್ಷಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಕಾಲಸಂಕ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲೆನಾಡು ಭಾಗಗಳಲ್ಲಿ ಹಳ್ಳ-ಕೊಳ್ಳಗಳನ್ನು ದಾಟಲು ಗ್ರಾಮೀಣ ಭಾಗದ ಜನರು ಕಾಲುಸಂಕಗಳನ್ನೇ ತಮ್ಮ ಸಂಚಾರಕ್ಕೆ ಬಳಸುತ್ತಾರೆ. ಈ ಹಿಂದೆ ಅವಘಡಗಳೂ ಸಹ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಡೆದಿವೆ. ಜನರ ಅನುಕೂಲಕ್ಕೆ ಜಿಲ್ಲೆಯಲ್ಲಿ 413 ಹೊಸಕಾಲು ಸಂಕಗಳ ನಿಮಾಣಕ್ಕೆ ಪ್ರಸ್ತಾವನೆಯನ್ನು 51.77 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಈಗಾಗಳೆ ಈ ಹಿಂದೆ 30 ಕೋಟಿ. ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಬಾಕಿ ಉಳಿದ ಅನುದಾನವನ್ನು ಹಂತ ಹಂತವಾಗಿ ಬಿಡುಗಡೆಗೊಳಿಸಿ, ಮುಂಬರುವ ಮೂರು ವರ್ಷಗಳ ಒಳಗಾಗಿ ಕಾಲುಸಂಕಗಳನ್ನು ನಿರ್ಮಾಣಮಾಡಲಾಗುವುದು ಎಂದರು. ಹೆದ್ದಾರಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಮಂಜುನಾಥ್‌ ಕುಲಾಲ್ ಜನ್ಸಾಲೆ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಒಬ್ಬ ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತ, ಆರ್‌ಜಿಪಿಆರ್‌ಎಸ್‌ ವಂಡ್ಸೆ ಬ್ಲಾಕ್ ಸಂಯೋಜಕರಿಗೆ ಉಡುಪಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿಗೆ ನಾಮ ನಿರ್ದೇಶನ ಮಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರಿಗೆ ಮಂಜುನಾಥ ಕುಲಾಲ್ ಅವರು ಧನ್ಯವಾದವನ್ನು ಸಲ್ಲಿಸಿದ್ದಾರೆ. ಸಮಿತಿಯ ಸಂಪೂರ್ಣ ವಿವರ ಇಂತಿದೆಅಶೋಕ್ ಕುಮಾರ್ ಕೊಡವೂರು – ಅಧ್ಯಕ್ಷರು,ಪ್ರಶಾಂತ್ ಜತ್ತನ್ನ – ಉಪಾಧ್ಯಕ್ಷರುಸತೀಶ್ ಜಪ್ತಿ – ಉಪಾಧ್ಯಕ್ಷರುಸಂತೋಷ್ ಕುಲಾಲ್ ಪೆರ್ಡೂರು – ಉಪಾಧ್ಯಕ್ಷರುಉದಯ್ ಕುಮಾರ್ ಶೆಟ್ಟಿ ಮುನಿಯಾಲು – ಉಪಾಧ್ಯಕ್ಷರುಗೀತಾ ವಾಗ್ಲೆ – ಉಪಾಧ್ಯಕ್ಷರು ಸದಸ್ಯರು: ಅರವಿಂದ ಪೂಜಾರಿ, ಚಂದ್ರ ಶೇಖರ್ ಬಾಯರಿ, ಮೋಹನ ಪೂಜಾರಿ, ಹರಿಪ್ರಸಾದ್ ಶೆಟ್ಟಿ, ನವೀನ್ ಚಂದ್ರ ಅಡ್ವೆ, ಪ್ರದೀಪ್ ಕುಮಾರ್ ಶೆಟ್ಟಿ,  ರಮೇಶ್ ಕಾಂಚನ್, ಶಂಕರ್ ಶೇರಿಗಾರ್, ಮಂಜುನಾಥ ಕುಲಾಲ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಗ್ರಾಮದ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ವರ್ಧ‍ಂತ್ಯೋತ್ಸವ  ಹಾಗೂ ಭಜನೋತ್ಸವವು ಫೆ.19 ಬುಧವಾರದಂದು ಜರುಗಲಿದೆ. ಬೆಳಿಗ್ಗೆ 7.30ಕ್ಕೆ ಭಜನಾ ದೀಪ ಸ್ಥಾಪನೆ ಹಾಗೂ ಗಂಟೆ 9.00 ರಿಂದ ಶ್ರೀ ದೇವಿಗೆ ಕಲಶಾಭೀಷೇಕ, ಚಂಡಿಕಾ ಹೋಮ, ನಾಗದೇವರ ಸನ್ನಿದಿಯಲ್ಲಿ ಕಲಾಹೋಮ, ಕಲಶಾಭಿಷೇಕ, ಮಹಾಪೂಜೆ, ಚಂಡಿಕಾಹೋಮ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 6.00ರಿಂದ ನಗರೋತ್ಸವ ಮತ್ತು ರಾತ್ರಿ 8.00 ಕ್ಕೆ ರಂಗಪೂಜೆ, ದೀಪ ವಿಸರ್ಜನೆ, ಮಹಾಪೂಜೆ ಪ್ರಸಾದ ವಿತರಣೆ, 8.30ರಿಂದ ಅನ್ನಸಂತರ್ಪಣೆ ನಡೆಯಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಚಿಕೆನ್ ಸಾಲ್ ನಲ್ಲಿ ವಿಸ್ತರಣಾ ಚಟುವಟಿಕೆಯನ್ನು ಹಮ್ಮಿಕೊಂಡಿದ್ದು, ಶಾಲಾ ಮಕ್ಕಳಿಗೆ ಬರೆಯುವ ಪರಿಕರಗಳನ್ನು ನೀಡಿದ್ದಲ್ಲದೆ, ಶಿಸ್ತು, ಸ್ವಚ್ಛತೆ, ಉತ್ತಮ ನಡವಳಿಕೆಗಳ ಕುರಿತು ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರೇಮ ಕುಮಾರಿ ಹಾಗೂ ಶಿಕ್ಷಕವೃಂದ, ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ದೀಪಿಕಾ ಜಿ. ಪ್ರಾಧ್ಯಾಪಕರಾದ ರವೀನಾ ಸಿ. ಪೂಜಾರಿ, ಸ್ಟಾಲಿನ್ ಡಿಸೋಜ, ಸ್ವಾತಿ ರಾವ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸದಾಶಿವ ಖಾರ್ವಿ ಮತ್ತು ಉಪಾಧ್ಯಕ್ಷರಾಗಿ ಸೂರಜ್ ಖಾರ್ವಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಎಂ.ಸಿ. ಸ್ವಾಮಿ ನೇತೃತ್ವದಲ್ಲಿ ಸಂಘದ ಗಂಗೊಳ್ಳಿ ಪ್ರಧಾನ ಕಛೇರಿಯಲ್ಲಿ ಸೋಮವಾರ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ನಿರ್ದೇಶಕರಾದ ಚಂದ್ರ ಖಾರ್ವಿ, ಮೋಹನ ಖಾರ್ವಿ, ಸುಶೀಲ ಖಾರ್ವಿ, ರಾಘವೇಂದ್ರ ಖಾರ್ವಿ, ಮಹೇಶ ಖಾರ್ವಿ, ರೋಹಿತ್ ಎ.ಕೆ., ಸುಮತಿ, ಉಷಾ ಖಾರ್ವಿ, ಭಾರತಿ, ವ್ಯವಸ್ಥಾಪಕ ಮೋಹನ ಖಾರ್ವಿ ಉಪಸ್ಥಿತರಿದ್ದರು. ಕಳೆದ ಅವಧಿಯಲ್ಲಿ ಸದಾಶಿವ ಖಾರ್ವಿ ಅವರು ಅಧ್ಯಕ್ಷರಾಗಿ ಮತ್ತು ಸೂರಜ್ ಖಾರ್ವಿ ಅವರು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 2024-25 ರಿಂದ 2026-30ನೇ ಸಾಲಿನ ಐದು ವರ್ಷದ ಸಂಘದ ಆಡಳಿತ ಮಂಡಳಿಯ ಎಲ್ಲಾ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿತ್ತು. ಸಾಮಾನ್ಯ ಸ್ಥಾನದಿಂದ ಸದಾಶಿವ ಖಾರ್ವಿ, ಚಂದ್ರ ಖಾರ್ವಿ, ಮೋಹನ ಖಾರ್ವಿ, ಸುಶೀಲ ಖಾರ್ವಿ, ರಾಘವೇಂದ್ರ ಖಾರ್ವಿ, ಮಹೇಶ ಖಾರ್ವಿ, ರೋಹಿತ್ ಎ.ಕೆ., ಪ.ಜಾತಿ ಸ್ಥಾನದಿಂದ ಸುಮತಿ, ಹಿಂದುಳಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜದ ನೂನ್ಯತೆಗಳನ್ನು ಗುರುತಿಸಿ, ಸಮಾಜವನ್ನು ಒಟ್ಟಾಗಿಸುವುದರ ಮೂಲಕ ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಸಮಾನತೆಯ ಬದುಕಿಗೆ ಹೆಚ್ಚು ಮಹತ್ವ ನೀಡಿ ಬಂಜಾರ ಸಮುದಾಯದ ಉನ್ನತಿಗಾಗಿ ಹೋರಾಡಿದ ಮಹಾನ್ ಸಂತ ಸೇವಲಾಲರು. ಅಧೋಗತಿಯಲ್ಲಿರುವ ಸಮಾಜದ ಏಳಿಗೆಗಾಗಿ ಪ್ರತಿಯೊಂದು ಸಮುದಾಯದಲ್ಲೂ ಜನ್ಮ ತಾಳಿದ ಅದೇಷ್ಟೋ ಮಹಾಪುರುಷರ ನಿದರ್ಶನಗಳು ನಮ್ಮ ಕಣ್ಣ ಮುಂದೆ ಇದೆ. ಸೇವಲಾಲ್ ಕೂಡ ತನ್ನ ಸಮಾಜವನ್ನು ದಾರ್ಶನಿಕರಾಗಿ, ಸಂತರಾಗಿ, ಚಿಂತಕರಾಗಿ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ ಎಂದರು. …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಒಂದು ದಿನದ ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮ ಕಾಲೇಜಿನ ಶೀ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ. ರಾಧಾಕೃಷ್ಣ ಶೆಟ್ಟಿ ಉದ್ಘಾಟಿಸಿ ಉಪನ್ಯಾಸಕರಿಗೆ ಶೈಕ್ಷಣಿಕ ಅಭಿವೃದ್ಧಿ, ತರಬೇತಿ , ಸಂಶೋಧನೆ, ತಂತ್ರ ಜ್ಞಾನದ ಬಳಕೆ ಬಗ್ಗೆ ಮಾಹಿತಿ ಅತಿ ಅಗತ್ಯವಾಗಿದೆ. ಉಪನ್ಯಾಸಕರು ಶೈಕ್ಷಣಿಕವಾಗಿ ಸಮರ್ಥರಾದಾಗ ಮಾತ್ರ ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲು ಸಾಧ್ಯ ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ನಡೆಯಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಜೈನ್ ಪರಿಗಣಿತ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರಾದ ಅನಿಲಾ ಬಾಜಪೇಯಿ ಭಾಗವಹಿಸಿ ಉಪನ್ಯಾಸಕರಿಗೆ ತರಬೇತಿ ನೀಡಿದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ನಾರಾಯಣ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರವಿಚಂದ್ರ ಕಾರ್ಯಕ್ರಮ ಸಂಯೋಜಿಸಿದರು. ಐಕ್ಯೂಏಸಿ ಸಂಯೋಜಕರಾದ ಸಂದೀಪ್ ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪ್ರಾಮಾಣಿಕತೆ ಎಂಬುದು ನಮ್ಮ ನೈತಿಕ ಮತ್ತು ಸಾಮಾಜಿಕ ಬದುಕಿನ ಬಹುಮುಖ್ಯ ಅಂಶ. ಜೀವನದಲ್ಲಿ ಕಷ್ಟ, ವಿಫಲತೆಗಳು ಹಾಗೂ ಆಕಸ್ಮಿಕ ಸಮಸ್ಯೆಗಳು ಬಂದರೂ, ಪ್ರಾಮಾಣಿಕತೆಯ ಹಾದಿಯಲ್ಲಿ ನಡೆದರೆ ಯಶಸ್ಸು ನಮಗೆ ಖಂಡಿತ ಒಲಿಯುತ್ತದೆ ಎಂದು ಮಾಜಿ ಸಚಿವ ಹಾಗೂ ರಾಜ್ ಫಿಶ್ ಮೀಲ್ ಆಂಡ್ ಆಯಿಲ್ ಕಂಪೆನಿಯ ವ್ಯವಸ್ಥಾಪಕ ಪಾಲುದಾರ ಪ್ರಮೋದ ಮಧ್ವರಾಜ್ ನುಡಿದರು. ಅವರು ಕುವೆಂಪು ಸಭಾಂಗಣದಲ್ಲಿ ನಡೆದ ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ನೂತನ ವಿದ್ಯಾರ್ಥಿ ಸ್ಟಾರ್ಟ್‌ಅಫ್ ವೇದಿಕೆ ’ಟ್ರೈಬ್ಲೇಜ್’ನ್ನು ಉದ್ಘಾಟಿಸಿ, ’ಯಶಸ್ವಿ ನಾಯಕತ್ವದ ತಂತ್ರಗಳುʼ ವಿಷಯದ ಕುರಿತು ಮಾತನಾಡಿದರು. ನಮ್ಮ ಪರಂಪರೆ, ಸಂಸ್ಕೃತಿ, ಆಚರಣೆ, ಗುರುಹಿರಿಯರು, ಪಾಲಕರು, ಪೋಷಕರನ್ನು ಮರೆತ ದಿನ, ನಮ್ಮ ಅವನತಿ ಪ್ರಾರಂಭವಾಗುತ್ತದೆ. ದುರಾದೃಷ್ಟಾವಷಾತ್ ನಮ್ಮ ಇಂದಿನ ಸಮಾಜ ಭಾರತೀಯ ಭವ್ಯ ಪರಂಪರೆಯನ್ನು ಕಡೆಗಾಣಿಸುತ್ತಾ ಸಾಗಿದೆ. ನಮ್ಮ ಸಂಸ್ಕೃತಿಯ ಭಾಗವಾಗಿದ್ದ ಎರಡು ಕೈಗಳನ್ನು ಜೋಡಿಸಿ ವಂದಿಸುವ ಸಂಸ್ಕೃತಿ ನಮ್ಮಲ್ಲಿ ಮರೆಯಾಗಿ ವಿದೇಶಗಳಲ್ಲಿ ಆಳವಡಿಸಿಕೊಳ್ಳಲಾಗುತ್ತಿದೆ. ಇದು ಸಲ್ಲದು ಎಂದರು. ತನ್ನ ಜೀವನ ವೃತಾಂತವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಗ್ರಾಮದ ಬವಳಾಡಿ ನಿವಾಸಿ ರಮೇಶ್ ಪೂಜಾರಿ (45) ಎಂಬ ವ್ಯಕ್ತಿಯು ಜ. 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434, ಕಂಟ್ರೋಲ್ ರೂಂ 100, 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಾಜಾಥಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು. ಈಗಲೂ ಸಹ ಈ ಯೋಜನೆಗಳ ಲಾಭ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶವಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲೆಯಾದ್ಯಂತ ಸಂಚರಿಸಿ, ಮಾಹಿತಿ ನೀಡಲಿರುವ ಕಲಾಜಾಥಾ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಜಿಲ್ಲೆಯಲ್ಲಿ ಬಹುತೇಕ ಜನರು ಒಂದಲ್ಲಾ ಒಂದು ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಇದ್ದಾರೆ. ಜಿಲ್ಲೆಯ ಅರ್ಹ ಪ್ರತಿಯೊಬ್ಬರಿಗೂ ಯೋಜನೆಯನ್ನು…

Read More