Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕುಂದಬಾರಂದಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಹೊಸಾಡು ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್. ಕಲಿಕಾ ಹಬ್ಬ ಮತ್ತು ಮಕ್ಕಳ ಸಂತೆ (ಮೆಟ್ರಿಕ್ ಮೇಳ) ಕಾರ್ಯಕ್ರಮ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ವಿಶ್ವನಾಥ ಗಾಣಿಗ ವಹಿಸಿದ್ದರು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಭಾಷ್ ಶೆಟ್ಟಿ ಹೊಳ್ಮಗೆ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಮುಖ್ಯ ಶಿಕ್ಷಕರಾದ ಶಿವರಾಜ ಭಂಡಾರಿ ಎನ್. ಸ್ವಾಗತಿಸಿದರು. ಹೊಸಾಡು ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಸತೀಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನು ನುಡಿದರು. ವೇದಿಕೆಯಲ್ಲಿ ಹಿರಿಯ ನಿವೃತ್ತ ಶಿಕ್ಷಕ ರಾಜೀವ್ ಶೆಟ್ಟಿ ನೂಜಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಭಾಸ್ಕರ್ ಪೂಜಾರಿ, ರತ್ನ ಜಿ. ಶ್ರೀಯಾನ್, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಿವೃತ್ತ ಶಿಕ್ಷಕ ಸಂಜೀವ್ ಬಿಲ್ಲವ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷರು ರವಿ ಎಸ್. ಪೂಜಾರಿ, ಹೆಮ್ಮಾಡಿ ವೃತ್ತದ ಶಿಕ್ಷಣ ಸಂಯೋಜಕಾರದ ಯೋಗೀಶ್, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ. ನಾಗರಾಜ್ ಶೆಟ್ಟಿ, ರವಿಚಂದ್ರ, ಶೈಲಜಾ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಯುವ ಬಂಟರ ಸಂಘದ ಆಶ್ರಯದಲ್ಲಿ ಭಾರತದ ಪ್ರಥಮ ಮಹಿಳಾ ರಾಜ್ಯಪಾಲೆ, ಶ್ರೇಷ್ಠ ಕವಯತ್ರಿ, ಭಾರತದ ಕೋಗಿಲೆ ಸರೋಜಿನಿ ನಾಯ್ಡು ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸ್ವಾವಲಂಬಿ ಬದುಕು ಕಟ್ಟಿಕೊಂಡ ಉಪ್ಪಿನಕಾಯಿ ಅಜ್ಜಿ ಎಂದೇ ಖ್ಯಾತರಾದ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಐರಬೈಲು ನಿವಾಸಿ  ಗುಲಾಬಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕುಂದಾಪುರ ತಾಲೂಕು ಯುವ ಬಂಟರ ಸಂಘದ ಪರವಾಗಿ ಸಂಘದ ಗೌರವಾಧ್ಯಕ್ಷರಾದ ವತ್ಸಲಾ ದಯಾನಂದ ಶೆಟ್ಟಿ ಅವರ ಸ್ವಗ್ರಹದಲ್ಲಿ ಸನ್ಮಾನಿಸಿ ಗೌರವಿಸಿದರು. ಯುವ ಬಂಟರ ಸಂಘ ಗ್ರಾಮೀಣ ಪ್ರದೇಶದಲ್ಲಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಇಂತಹ ಗ್ರಾಮೀಣ ಪ್ರದೇಶದ ಮಹಿಳೆಯನ್ನು ಗುರುತಿಸಿ ಗೌರವಿಸುವುದು, ಶ್ಲಾಘನೀಯ. ಇಂತಹ ಕೆಲಸಗಳನ್ನು ಎಲ್ಲಾ ಸಂಘ ಸಂಸ್ಥೆಗಳು ಮಾಡಿದಾಗ ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುವ ಜೊತೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಹೇಳಿದರು. ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು, ಸ್ಥಾಪಕಾಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಜಯಪ್ರಕಾಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಾರಾಯಣ ಹೆಗ್ಡೆ ಆಯ್ಕೆಯಾಗಿದ್ದಾರೆ. ಇಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ನಿರ್ದೇಶಕರಾದ ವೆಂಕ್ಟ ಪೂಜಾರಿ, ಅರುಣ ಕುಮಾರ್‌, ಎಮ್. ಎಚ್. ಗುರುದತ್ತ, ಡಿ. ಸದಾಶಿವ ಶೇರುಗಾರ, ಹೆರಿಯ ದೇವಾಡಿಗ, ವಸಂತ ಕುಮಾ‌ರ್ ಶೆಟ್ಟಿ, ಚಿಕ್ಕು ಪೂಜಾರಿ, ನಾಗರಾಜ ಶೆಟ್ಟಿ, ಸತೀಶ, ಶಂಕರ ನಾಯ್ಕ, ಜ್ಯೋತಿ ಪೂಜಾರಿ, ಎಚ್.ವಿಜಯ ಶೇರುಗಾರ್ ಉಪಸ್ಥಿತರಿದ್ದರು. ಸಹಕಾರ ಇಲಾಖೆಯ ಸ್ವಾಮಿ ಚುನಾವಣಾಧಿಕಾರಿಯಾಗಿ ಭಾಗವಹಿಸಿ, ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತಾಪಚಂದ್ರ ಶೆಟ್ಟಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಕಾಶೀ ಮಠಕ್ಕೆ ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಪಾಂಡುರಂಗರಾವ್ ಸಾವಂತ್ ಅವರು ಗುರುವಾರ ಸಂಜೆ ಭೇಟಿ ನೀಡಿದರು. ದೇವರ ಹಾಗೂ ದೇವಳದ ಪ್ರಾಂಗಣದಲ್ಲಿರುವ ಉಭಯ ಗುರುಗಳ ವೃಂದಾವನಗಳ ದರ್ಶನ ಪಡೆದ ಸಿಎಂ ಪ್ರಮೋದ ಸಾವಂತ್, ಬಾಲಕಾಶ್ರಮದ ಮಕ್ಕಳೊಂದಿಗೆ ಕೆಲಕಾಲ ಕುಶಲೋಪರಿ ನಡೆಸಿದರು. ಮಠಕ್ಕೆ ಭೇಟಿ ನೀಡಿದ ಅವರನ್ನು ಮಠದ ಆಡಳಿತ ಮಂಡಳಿ ಸದಸ್ಯರು ಶಾಲು ಹೊದಿಸಿ ದೇವರ ಪ್ರಸಾದ ನೀಡಿ ಗೌರವಿಸಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ರಂಗನಾಥ ಪಡಿಯಾರ್, ಬಿ.ಗಣೇಶ ಕಾಮತ್, ರಾಮಚಂದ್ರ ಪಡಿಯಾರ್, ದಿನಕರ ಶೆಣೈ, ಪದ್ಮನಾಭ ಶೆಣೈ ಕುಂದಾಪುರ, ದೇವಳದ ಅರ್ಚಕ ಸುರೇಂದ್ರ ಭಟ್, ಸಮಾಜ ಭಾಂದವರು, ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ  ವಿಶ್ವವಿದ್ಯಾನಿಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್‌ಗ್ರೇಡ್ ಪರೀಕ್ಷೆಯಲ್ಲಿ ಮೇಘನಾ ಪ್ರಭು ಕೊಕ್ಕರ್ಣೆ ಅವರು 93.75% ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಈಕೆ ಉಡುಪಿಯ ರಾಧಾಕೃಷ್ಣ ನೃತ್ಯನಿಕೇತನದ ಗುರು ಹಾಗೂ ನೃತ್ಯ ವಿದುಷಿ ವೀಣಾಮುರಳೀಧರ ಸಾಮುಗ ಇವರ ಶಿಷ್ಯೆ. ಅವರು ಕೊಕ್ಕರ್ಣೆ ದೀಪಕ್ ಪ್ರಭು ಮತ್ತು ಗಾಯತ್ರಿ ಡಿ .ಪ್ರಭು ದಂಪತಿಗಳ ಮಗಳಾಗಿದ್ದು ಬ್ರಹ್ಮಾವರ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್‌ನಲ್ಲಿ ಎಂಟನೆಯ ತರಗತಿಯಲ್ಲಿ ಶಿಕ್ಷಣಪಡೆಯುತ್ತಿದ್ದು, ಯಕ್ಷಗಾನ, ಭಜನೆಗಳಲ್ಲಿ ಹಾರ್ಮೋನಿಯಂ, ತಬಲಗಳನ್ನು ನುಡಿಸುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ತಾಲ್ಲೂಕಿನ ವಂಡಾರು ಗ್ರಾಮದ ಬೋರ್ಡ್‌ ಗಲ್ಲು ಎಂಬಲ್ಲಿ ವನ್ಯಪ್ರಾಣಿಗಳ ಹತ್ಯೆಗೈಯ್ಯಲು ವಂಡಾರು ಬ್ಲಾಕ್ ಅರಣ್ಯ ಪ್ರದೇಶದೊಳಗೆ ರಾತ್ರಿ ವೇಳೆ ಬಂದ ಭಟ್ಕಳ – ಶಿರೂರು ಮೂಲದ ಮೂವರು ವನ್ಯಜೀವಿ ಹಂತಕ ಆರೋಪಿಗಳನ್ನು ಶಂಕರನಾರಾಯಣ ವಲಯ ಅರಣ್ಯ ಅಧಿಕಾರಿಗಳ ತಂಡ  ಬಂಧಿಸಿದೆ. ಭಟ್ಕಳದ ಮೊಹಮ್ಮದ್ ಅಶ್ರಫ್ ಯಾನೆ ಮಾವಿಯಾ, ಶಿರೂರಿನವರಾದ ವಾಸೀಂ ಅಕ್ರಂ, ಆಲಿ ಬಾವು ಯಾಸಿನ್ ಬಂಧಿತರು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಆರೋಪಿಗಳಿಂದ ಒಂದು ಬಂದೂಕು, 11 ಕಾಡತೂಸು, 4 ಚಾಕುಗಳು, 01 ಮಚ್ಚು, 01 ಟಾರ್ಚ್, 03 ಮೊಬೈಲುಗಳು ಹಾಗೂ ಸಂಚಾರಕ್ಕೆ ಬಳಸಿದ ಒಂದು ಆಟೋ ರಿಕ್ಷಾವನ್ನು ವಶ ಪಡೆಯಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಅರೋಪಿಗಳು ಶಂಕರನಾರಾಯಣ ಅರಣ್ಯ ವಲಯದ ವಂಡಾರಿನ ಬಳಿ ಕಾಡು ಪ್ರಾಣಿಯನ್ನು ಹತ್ಯೆಗೈದು, ಕಾಡು ಪ್ರದೇಶದಲ್ಲಿ ಕರುಳನ್ನು ಎಸೆದಿದ್ದರು. ಇದರ ಸ್ಯಾಂಪಲ್  ಭಾರತೀಯ ವೈಡ್ ಲೈಫ್ ಸಂಸ್ಥೆಯಲ್ಲಿ ಪರೀಕ್ಷೆ ನಡೆಸಲಾಗಿದ್ದು, ಇದು ಕಾಡುಕೋಣ ಎಂಬುದಾಗಿ ದೃಢಪಟ್ಟಿರುತ್ತದೆ. ವನ್ಯಪ್ರಾಣಿ ಹತ್ಯೆ ಮಾಡಲಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇವರ ವತಿಯಿಂದ ನಡೆಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಾತಿ ಕಲ್ಪಿಸಲು ನಡೆಯಲಿರುವ ಪ್ರವೇಶ ಪರೀಕ್ಷೆಯು ಜಿಲ್ಲೆಯ ಒಟ್ಟು ಎರಡು ಪರೀಕ್ಷಾ ಕೇಂದ್ರಗಳಲ್ಲಿ ಫೆ. 15ರಂದು ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ. ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ 200 ಮೀ. ಸುತ್ತ ಸೈಬರ್ ಮತ್ತು ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ, ಯಾವುದೇ ಸಾರ್ವಜನಿಕರು 5 ಜನ ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ವಿಶೇಷ ರೈಲು ಒದಗಿಸುವಂತೆ ಗೌರವಾನ್ವಿತ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಲ್ಲಿ ಮನವಿ ಮಾಡಿದ್ದು, ಇದೀಗ ಅಧಿಕೃತ ಪ್ರಕಟಣೆಯನ್ನು ರೈಲ್ವೆ ಇಲಾಖೆ ಪ್ರಕಟಿಸಿದೆ. ಫೆ. 17ರಂದು ಮಧ್ಯಾಹ್ನ 12.30 ಗಂಟೆಗೆ ಉಡುಪಿಯಿಂದ ಹೊರಟು ಕುಂಭಮೇಳದತ್ತ ಪ್ರಯಾಣ ಬೆಳೆಸಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಯಾತ್ರಾರ್ಥಿಗಳಿಗೆ ಇದು ಬಹಳಷ್ಟು ಉಪಕಾರಿಯಾಗಿದ್ದು ಅತ್ಯಂತ ಕಡಿಮೆ ಖರ್ಚಿನಲ್ಲಿ ಕುಂಭಮೇಳಕ್ಕೆ ಹೋಗಿ ಬರಬಹುದು. ಈ ರೈಲು ಸೇವೆಯನ್ನು ಹೆಚ್ಚಿನ ಭಕ್ತಾದಿಗಳು ಉಪಯೋಗಿಸುವಂತೆ ಕೇಳಿಕೊಳ್ಳುತ್ತೇನೆ. ನನ್ನ ಮನವಿಯನ್ನು ಪುರಸ್ಕರಿಸಿದ ಕೇಂದ್ರ ರೈಲ್ವೆ ಇಲಾಖೆಯ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ವಿಶೇಷ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಫೆ.14ರಂದು ಬೆಳಿಗ್ಗೆಯಿಂದ ಟಿಕೆಟ್ ಲಭ್ಯವಿದ್ದು ರೈಲ್ವೆ ಇಲಾಖೆಯ ವೆಬ್‌ಸೈಟ್ ಅಥವಾ ಆಯಾ ರೈಲು ನಿಲ್ದಾಣಗಳ ಟಿಕೆಟ್ ಕೌಂಟರ್‌ನಲ್ಲಿ ಟಿಕೆಟ್ ಪಡೆದುಕೊಳ್ಳಬಹುದಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಹೇಳಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್  ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ. ಜೆಇಇ ಮೈನ್ಸ್ 2025ರ ಮೊದಲನೇ  ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿ ಗಿರೀಶ್ ಪೈ 98.921 ಪರ್ಸಂಟೈಲ್, ನಿಶ್ಚಿತ್  98.674 ಪರ್ಸಂಟೈಲ್, ಆಕಾಶ್ ಹೆಬ್ಬಾರ್  98.078 ಪರ್ಸಂಟೈಲ್, ಧೀರಜ್ ಜಿ.ಡಿ.97.787ಪರ್ಸಂಟೈಲ್, ಚಿರಂತನ್ 95.866 ಪರ್ಸಂಟೈಲ್, ಶಶಾಂಕ್ 93.722 ಪರ್ಸಂಟೈಲ್, ಪ್ರಸಾದ್ 93.701 ಪರ್ಸಂಟೈಲ್, ಶ್ರದ್ಧಾ 93.155,ಪರ್ಸಂಟೈಲ್, ಲಿಖಿತ್ 90.789 ಪರ್ಸಂಟೈಲ್, ರಿಯಾನ್ 90.563‌ ಪರ್ಸಂಟೈಲ್, ಅನಿರುದ್ದ್ 90.329 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿರುತ್ತದೆ. ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು ನಿಗಧಿಪಡಿಸಲಾಗಿರುತ್ತದೆ. ಸದರಿ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಸದರಿ ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ 20 ರಿಂದ 45 ವರ್ಷದ ವಯೋಮಿತಿಯೊಳಗಿನ ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಫೆಬ್ರವರಿ 25 ರ…

Read More