ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಳ್ಳಿಹೊಳೆ ಗ್ರಾಮದ ರವೀಂದ್ರ (40) ಅವರು ಗೋಪಾಲ ಅವರ ಬೈಕಿನಲ್ಲಿ ಗೋಪಾಲ ಅವರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಡಿ. 25ರಂದು ಅಮಾಸೆಬೈಲುನಿಂದ ಸಿದ್ದಾಪುರ ಬರುತ್ತಿದ್ದರು. ಸಿದ್ದಾಪುರ ಗ್ರಾಮದ ಕಾರಿಮಕ್ಕಿ ಹೈಗುಳಿ ದೈವಸ್ಥಾನ ಬಳಿ ಎದುರು ಕಡೆಯಿಂದ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡರು. ಸ್ಥಳೀಯ ಸಹಕಾರದಿಂದ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳಾವರ ಗ್ರಾಮದ ಸಳ್ವಾಡಿಯ ಉದಯ ಅವರ ಪುತ್ರಿ ಮುಗ್ಧ (25) ಅವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಡಿ. 25ರಂದು ಕಾಳಾವರ ಗ್ರಾಮದ ಸಳ್ವಾಡಿಯಲ್ಲಿ ನಡೆದಿದೆ. ಈಕೆ ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ಡಿ. 25ರಂದು ಮನೆಗೆ ಬಂದಿದ್ದರು. ರಾತ್ರಿ 10.30ರ ಸುಮಾರಿಗೆ ಮನೆಯ ಬಾವಿ ಬಳಿಗೆ ಹೋಗಿದ್ದಾಗ ಆಕಸ್ಮಿಕವಾಗಿ ಬಿದ್ದರು ಎನ್ನಲಾಗಿದೆ. ಡಿ. 26ರ ಬೆಳಿಗ್ಗೆ ಮೃತದೇಹವನ್ನು ಸ್ಥಳೀಯರು, ಅಗ್ನಿಶಾಮಕದಳದವರ ಸಹಾಯದಿಂದ ಶವವನ್ನು ಮೇಲಕ್ಕೆತ್ತಲಾಯಿತು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಮತ್ತು ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣಾ ಸಂಸ್ಥೆ, ಹೈದರಾಬಾದ್ ಇವರ ಸಹಯೋಗದಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಅಥವಾ ಆಸಕ್ತಿ ಇರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸಮಗ್ರ ಕೃಷಿ ಪದ್ಧತಿಯಲ್ಲಿ 5 ದಿನಗಳ ಕಾಲ ತರಬೇತಿಯನ್ನು 2025 ರ ಜನವರಿ 7 ರಿಂದ 11 ರ ವರೆಗೆ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಆಸಕ್ತ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ, ಕೃಷಿ ಭೂಮಿಯ ಪಹಣಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ವಾಟ್ಸಪ್ಪ್ ನಂಬರ್ಗೆ 9972247539 ಕಳುಹಿಸಬಹುದಾಗಿದೆ. ಜನವರಿ 5 ರ ಒಳಗಾಗಿ ಬರುವ ಮೊದಲ 40 ಅರ್ಜಿಗಳಿಗೆ ಮಾತ್ರ ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ ಮೇಲ್ಕಂಡ ವಾಟ್ಸಪ್ಪ್ ನಂಬರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷೆಯು ಡಿಸೆಂಬರ್ 29 ರಂದು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದಿಂದ ಈ ಕೆಳಗಿನಂತೆ ತಿಳಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ತಿಳಿಸಿದ್ದಾರೆ. ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಂಡ ಪ್ರವೇಶ ಪತ್ರವನ್ನು ಹಾಗೂ ಅಭ್ಯರ್ಥಿಯ ಭಾವಚಿತ್ರವಿರುವ ಮೂಲ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರುಪಡಿಸಿದ ನಂತರವೇ ಪರೀಕ್ಷಾ ಉಪಕೇಂದ್ರವನ್ನು ಪ್ರವೇಶಿಸಲು ಅನುಮತಿ ನೀಡಲಾಗುವುದು. ಮೂಲ ಗುರುತಿನ ಚೀಟಿ ಹಾಜರುಪಡಿಸದ ಅಭ್ಯರ್ಥಿಗಳಿಗೆ ಪರೀಕ್ಷಾ ಉಪಕೇಂದ್ರವನ್ನು ಪ್ರವೇಶಿಸಲು ಅನುಮತಿ ಇರುವುದಿಲ್ಲ. ಅಭ್ಯರ್ಥಿಗಳು ಪರೀಕ್ಷಾ ದಿನಗಳಂದು ಬೆಳಗ್ಗಿನ ಹಾಗೂ ಮಧ್ಯಾಹ್ನದ ಅಧಿವೇಶನಗಳ ಪರೀಕ್ಷೆ ಪ್ರಾರಂಭವಾಗುವ 02 ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಮೊಬೈಲ್, ಕ್ಯಾಲ್ಕುಲೇಟರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳು ಡಿಸೆಂಬರ್ 29 ರಂದು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು, ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾಸ್ ಪಿಯು ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿದ್ಯಾರ್ಥಿಗಳಿಗೆ ಒಂದು ದಿನದ ಕೈಗಾರಿಕಾ ಭೇಟಿ ಹಮ್ಮಿಕೊಳ್ಳಲಾಯಿತು. ಉಡುಪಿ ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆ ಸಂಸ್ಥೆಗಳಿಗೆ 70 ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಭೇಟಿ ನೀಡಿ, ವಿವಿಧ ದಿನ ಬಳಕೆಯ ಗ್ರಹೋಪಯೋಗಿ ವಸ್ತುಗಳ ಉತ್ಪಾದನೆ, ನೂತನ ತಂತ್ರಗಾರಿಕೆಯ ಬಳಕೆ, ಪ್ರೊಡಕ್ಷನ್ ಮತ್ತು ಪ್ರೋಸೆಸ್ಸಿಂಗ್, ಕಚ್ಚಾವಸ್ತುಗಳ ಬಳಕೆಯಿಂದ ಉತ್ಪಾದನೆಯಾಗುವ ತ್ಯಾಜ್ಯಗಳ ಮರುಬಳಕೆ, ಉದಯವಾಣಿ ದಿನಪತ್ರಿಕೆಯ ಉತ್ಪಾದನೆಯನ್ನು ಪ್ರಾಯೋಗಿಕವಾಗಿ ನೋಡಿ ಹೆಚ್ಚಿನ ತಿಳುವಳಿಕೆಯನ್ನು ಪಡೆದುಕೊಂಡರು ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರಾದ ಗೀತಾ, ರಸಿಕ ಮತ್ತು ಸುಮಾ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಗಸ್ಟ್ 16 ರಂದು ನೇಮಕಾತಿ ಅಧಿಸೂಚನೆ ಹೊರಡಿಸಿ, ಸೆಪ್ಟಂಬರ್ 19 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್ಸೈಟ್ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 1ನೇ ಹಂತದಲ್ಲಿಯೇ “Application Successfully Uploaded’’ ಎಂಬ ಮೇಸೆಜ್ ಅವರುಗಳ ಮೊಬೈಲ್ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 225 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 101 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ. ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ ಜನವರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಭಾರತದ ಮಾಜಿ ಕ್ರಿಕೆಟ್ ತಾರೆ ವಿ. ವಿ. ಎಸ್. ಲಕ್ಷ್ಮಣ್ ದಂಪತಿಗಳು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಭೇಟಿ ನೀಡಿದರು. ಈ ವೇಳೆ ಅವರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದು ಚಂಡಿಕಾ ಹೋಮ ನೆರವೇರಿಸಿದರು. ದೇವಳದಿಂದ ಅವರನ್ನು ಗೌರವಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಡಿ.26: ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 92 ವರ್ಷ ವಯಸ್ಸಾಗಿತ್ತು. ಇಂದು ರಾತ್ರಿ 8:06 ಗಂಟೆ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ರಾತ್ರಿ 9:51ಕ್ಕೆ ಅವರು ನಿಧನರಾದರು ಎಂದು ಏಮ್ಸ್ ತಿಳಿಸಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು. ದೇಶದ ಆರ್ಥಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.25: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತರು ಹಾಗೂ ಸಮನ್ವಯ ಸಹಕಾರಿ ಬಳಗ ಎಲ್ಲಾ 13 ಸ್ಥಾನಗಳನ್ನು ಗೆದ್ದು ಮೇಲುಗೈ ಸಾಧಿಸಿದೆ. ಸಾಮಾನ್ಯ ಕ್ಷೇತ್ರದಿಂದ ಟಿ. ನಾರಾಯಣ ಹೆಗ್ಡೆ, ಎಮ್. ಎಚ್. ಗುರುದತ್ತ, ಅರುಣ ಕುಮಾರ್, ವಸಂತ ಕುಮಾರ್ ಶೆಟ್ಟಿ, ವೆಂಕ್ಟ ಪೂಜಾರಿ, ಡಿ. ಸದಾಶಿವ ಶೇರುಗಾರ್, ಹೆರಿಯ ದೇವಾಡಿಗ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಚಿಕ್ಕು ಪೂಜಾರಿ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ನಾಗರಾಜ ಶೆಟ್ಟಿ, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಶಂಕರ ನಾಯ್ಕ್, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಸತೀಶ್, ಮಹಿಳಾ ಕ್ಷೇತ್ರದಿಂದ ಜ್ಯೋತಿ ಪೂಜಾರಿ, ಎಚ್. ವಿಜಯ ಶೇರುಗಾರ್ ಆಯ್ಕೆಯಾದರು. /ಕುಂದಾಪ್ರ ಡಾಟ್ ಕಾಂ/ ಯಡ್ತರೆ ಬಂಟರ ಭವನದಲ್ಲಿ ಸಂಘದ ಚುನಾವಣೆ ನಡೆದಿದ್ದು ಚುನಾವಣಾ ಅಧಿಕಾರಿಯಾಗಿ, ಸಹಕಾರ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್ ಸಿ,ಎಂ ಚುನಾವಣೆಯನ್ನು ನಡೆಸಿಕೊಟ್ಟರು. ಸದಸ್ಯರ…
