ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಕೊಡ ಮಾಡುವ ನಾಲ್ಕನೇ ವರ್ಷದ ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಏಳಜಿತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ವಿ.ಎಸ್. ವಿಶೇಷ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ. ಈಕೆ ರಾಜ್ಯ ಮತ್ತು ಜಿಲ್ಲಾಮಟ್ಟದ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾಳೆ. ಬೈಂದೂರು ಸುರಭಿ ಕಲಾ ಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದು ಮಕ್ಕಳ ನಾಟಕ, ನೃತ್ಯ, ಹಾಗೂ ಯಕ್ಷಗಾನದಲ್ಲಿ ರಾಜ್ಯಮಟ್ಟದಲ್ಲಿ ಹಲವಾರು ಕಾರ್ಯಕ್ರಮಗಳನ್ನು ನೀಡಿರುತ್ತಾಳೆ. ಸಾನ್ವಿ ಏಳಜಿತದ ವಸಂತ ಗೌಡ ಮತ್ತು ಶಾಂತಿ ಅವರ ಪುತ್ರಿ. ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಡಿ. 28ರಂದು ಮಧ್ಯಾಹ್ನ 2:30ಕ್ಕೆ ಪ್ರಧಾನ ಮಾಡಲಾಗುತ್ತದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.25: ಸೇನಾ ಟ್ರಕ್ ಅಪಘಾತದಲ್ಲಿ ಮರಣ ಹೊಂದಿದ ಯೋಧ, ಹವಾಲ್ದಾರ್ ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರವನ್ನು ಗುರುವಾರ ಜಮ್ಮುವಿನಿಂದ ಸೇನಾ ವಿಮಾನ ಮೂಲಕ ರಾತ್ರಿ ಹೊತ್ತಿಗೆ ಮಂಗಳೂರು ತಲುಪಿತ್ತು. ಅಲ್ಲಿ ಗೌರವ ಸಲ್ಲಿಸಿ ಅಂಬ್ಯುಲೆನ್ಸ್ನಲ್ಲಿ ಉಡುಪಿ ಮೂಲಕ ಬೀಜಾಡಿಯ ನಿವಾಸಕ್ಕೆ ಕರೆತಂದು ಸಕಲ ಸರಕಾರಿ ಗೌರವಗಳನ್ನು ಸಲ್ಲಿಸಿ ಅಂತಿಮ ಸಂಸ್ಕಾರ ನಡೆಸಲಾಯಿತು. ಬೆಳಿಗ್ಗೆ 10 ಗಂಟೆಗೆ ತೆಕ್ಕಟ್ಟೆ ತಲುಪಿದ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ಕೋಟೇಶ್ವರ ಮೂಲಕವಾಗಿ ಬೀಜಾಡಿಯ ಅನೂಪ್ ಪೂಜಾರಿ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ದಾರಿಯುದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರು ಮೃತ ಯೋಧನಿಗೆ, ಪುಪ್ಪನಮನಗೈದು, ಅಂತಿಮ ನಮನ ಸಲ್ಲಿಸಿ ಕಂಬನಿ ಮಿಡಿದರು. ಮೆರವಣಿಗೆಯ ಮೂಲಕ ಪಾರ್ಥಿವ ಶರೀರವನ್ನು ಬೀಜಾಡಿಯ ಅನೂಪ್ ಅವರ ನಿವಾಸಕ್ಕೆ ಕರೆತಂದು ಅಲ್ಲಿ ಅಂತಿಮ ವಿಧಿವಿಧಾನಗಳನ್ನು ಪೂರೈಸಿ ಬಳಿಕ ಸರಕಾರಿ ಗೌರವ ಸಲ್ಲಿಸಲಾಯಿತು. ಈ ವೇಳೆ ಎಡಿಸಿ ಹಾಗೂ ಎಎಸ್ಪಿ ಅವರು ಉಪಸ್ಥಿತರಿದ್ದರು. ಬಳಿಕ ಬಿಜಾಡಿ ಪಡು ಶಾಲೆಯ ಆವರಣದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಸಮೀಪ ಉಳ್ಳೂರು ಅಬ್ಬಿಬೇರು ಬಳಿ ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನಪ್ಪಿದ ಘಟನೆ ನಡೆದಿದೆ. ಅಬ್ಬಿಬೇರು ಎಂಬಲ್ಲಿ ಬಿಜು ಅಗಸ್ಟಿನ್ ಅವರ ತೋಟದಲ್ಲಿ ಅಡಿಕೆ ಕೊಯ್ಯುತ್ತಿರುವಾಗ ಅಲ್ಯುಮೀನಿಯಂ ಕೊಕ್ಕೆ (ದೋಟಿ) ಯು ವಿದ್ಯುತ್ ತಂತಿಗೆ ಸ್ಪರ್ಶಿಸಿ ಝಾರ್ಖಂಡ್ ರಾಜ್ಯದ ಕಾರ್ಮಿಕ ರಾಮ್ ಕಿಶುನ್ ಓರಾನ್ (34) ಮೃತಪಟ್ಟವರು. ವಿದ್ಯುತ್ ಆಘಾತಕ್ಕೊಳಗಾಗಿ ನೆಲಕ್ಕೆ ಬಿದ್ದ ಅವರನ್ನು ಕೂಡಲೇ ಸ್ಥಳೀಯರು ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದ್ದಾಗಿ ತಿಳಿಸಿದರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಗೆ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.25: ಸೇನಾ ಟ್ರಕ್ ಅಪಘಾತದಲ್ಲಿ ಮೃತಪಟ್ಟ ಯೋಧ ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಗುರುವಾರ ಜಮ್ಮುವಿನಿಂದ ಸೇನಾ ವಿಮಾನದಲ್ಲಿ ರಾತ್ರಿ ಹೊತ್ತಿಗೆ ಉಡುಪಿ ತಲುಪಿದೆ, ರಾತ್ರಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬ್ರಿಜೇಶ್ ಚೌಟ ಅವರು ಸ್ವತಃ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಿ ಗೌರವ ಸಲ್ಲಿಸಿದರು. ಬೆಳಿಗ್ಗೆ 10 ಗಂಟೆಗೆ ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಅನೂಪ್ ಪೂಜಾರಿ ಅವರ ಬೀಜಾಡಿ ನಿವಾಸಕ್ಕೆ ಕೊಂಡೊಯ್ಯಲಾಯಿತು. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ತೆ ಕಲ್ಪಿಸಲಾಗಿದೆ. ದಾರಿಯುದ್ದಕ್ಕೂ ಸಾರ್ವಜನಿಕರು ಮೃತ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ಮಂಗಳವಾರ ಸಂಜೆ ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಗ್ರಾಮದ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರು ಪ್ರಯಾಣಿಸುತ್ತಿದ್ದ ಟ್ರಕ್ ರಸ್ತೆಯಿಂದ 350 ಅಡಿ ಆಳದ ಕಣಿವೆಗೆ ಉರುಳಿದ ಪರಿಣಾಮ ಸೇನಾ ಟ್ರಕ್ ಅಪಘಾತದಲ್ಲಿ ಐವರು ಯೋಧರು ಮೃತಪಟ್ಟಿದ್ದು, ಈ ಪೈಕಿ ತಾಲೂಕಿನ ಬೀಜಾಡಿಯ ಅನೂಪ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸುವ ರಾಷ್ಟ್ರ ಮಟ್ಟದ ವಾಲಿಬಾಲ್ ಸ್ಪರ್ಧೆಗೆ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ಸೂರಜ್ ಪೂಜಾರಿ ಆಯ್ಕೆಯಾಗಿರುತ್ತಾನೆ. ತೆಲಂಗಾಣ ರಾಜ್ಯದಲ್ಲಿಈ ಸ್ಪರ್ಧೆ ನಡೆಯಲಿದ್ದು, ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾನೆ. ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆಗಳೂಂದಿಗೆ ಶುಭ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 57 ಅಂಗನವಾಡಿ ಕಾರ್ಯಕರ್ತೆ ಹಾಗೂ 136 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್ಸೈಟ್ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ “Application Successfully Uploaded’’ಎಂಬ ಮೇಸೆಜ್ ಅವರುಗಳ ಮೊಬೈಲ್ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 400 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 156 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ. ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ 2025 ರ ಜನವರಿ 5 ರ ವರೆಗೆ ಅರ್ಜಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ತಂಬಾಕು ಉತ್ಪನ್ನಗಳ ಮಾರಾಟಗಾರರು, ಕಡ್ಡಾಯವಾಗಿ ಪ್ರತ್ಯೇಕ ಪರವಾನಿಗೆ ಪಡೆದು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬೇಕು ಮತ್ತು ಶಾಲಾ ಆವರಣದಿಂದ ಕನಿಷ್ಟ 100 ಮೀಟರ್ ಅಂತರದಲ್ಲಿ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕೋಟ್ಪಾ 2003 ರ ಕಾಯಿದೆಯಂತೆ ನಿಷೇಧಿಸಲಾಗಿದೆ. ತಂಬಾಕು ಉತ್ಪನ್ನಗಳ ಮಾರಾಟ ಕಂಡುಬಂದಲ್ಲಿ ಉದ್ದಿಮೆ ಪರವಾನಿಗೆ ರದ್ದುಪಡಿಸಿ, ದಂಡ ವಿಧಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬೈಂದೂರು ಪಟ್ಟಣ ಪಂಚಾಯತ್ನ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ರಿ.ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ, ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕೊಡಮಾಡುವ ನಾಲ್ಕನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ತನ್ವಿತಾ ವಿಶೇಷ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ. ತನ್ವಿತಾ ಪ್ರೌಢ ಶಿಕ್ಷಣದ ಸಮಯದಲ್ಲಿ ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದಿರುತ್ತಾಳೆ. ಈ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಿ.28 ರಂದು ಮಧ್ಯಾಹ್ನ 2.30 ಗಂಟೆಗೆ ಪ್ರದಾನ ಮಾಡಲಾಗುವುದೆಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ ಆನಂದ್ ಸಿ. ಕುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವ್ಯಾಪ್ತಿಯಲ್ಲಿ ಬರುವ 45- ಗಂಗೊಳ್ಳಿ ಗ್ರಾಮ ಪಂಚಾಯತ್ಗೆ ಸಂಬಂಧಿಸಿದಂತೆ, ಕರ್ನಾಟಕ ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ) ನಿಯಮ 1995 ರ ನಿಯಮ (3) ಹಾಗೂ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45(1) ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಗಂಗೊಳ್ಳಿ ಗ್ರಾಮ ಪಂಚಾಯತ್ನ ಮೊದಲ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡುವ ಸಲುವಾಗಿ ಕುಂದಾಪುರ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮೊ.ನಂ: 9449143880 ಅವರನ್ನು ಗೊತ್ತುಪಡಿಸಿದ ಅಧಿಕಾರಿಯಾಗಿ ನೇಮಕ ಮಾಡಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಆದೇಶಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗ್ರಾಹಕರ ರಕ್ಷಣೆಗಾಗಿಯೇ ಅನೇಕ ಹಕ್ಕು ಮತ್ತು ಕಾನೂನುಗಳಿವೆ. ಇವುಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಾಗ ಮಾತ್ರ ದೈನಂದಿನ ಸರಕು ಮತ್ತು ಸೇವೆಗಳನ್ನು ಪಡೆಯುವಲ್ಲಿ ಕೆಲವೊಮ್ಮೆ ಎದುರಿಸುವ ವಂಚನೆ ಮತ್ತು ಮೋಸದಿಂದ ಪಾರಾಗಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಅಂದು ನಗರದ ಎಸ್.ಎಮ್.ಎಸ್.ಪಿ ಸಂಸ್ಕೃತ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಹಕರ ಸುರಕ್ಷತೆಯ ಕಾಯ್ದೆಯ ಪ್ರಕಾರ ಗ್ರಾಹಕರಾಗಿ ಮಾರುಕಟ್ಟೆಯಲ್ಲಿ ಯಾವುದೇ ವಸ್ತು ಖರೀದಿಸುವಾಗ ಅದರ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು…
