Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯಾದ್ಯಂತ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ (ಜೆಲ್ಲಿ , ಮರಳು, ಕಲ್ಲು) ಸರಿಯಾಗಿ ದೊರೆಯದ ಕಾರಣ ಕಟ್ಟಡ ನಿರ್ಮಾಣದ ಕಾರ್ಮಿಕರ ಕುಟುಂಬ ಬೀದಿಗೆ ಬರಬೇಕಾದ ಸ್ಥಿತಿ ಉಂಟಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ಅಧ್ಯಕ್ಷ ಗಿರೀಶ್ ಕುಂದಾಪುರ ಆಗ್ರಹಿಸಿದ್ದಾರೆ. ಅವರು ಈ ಬಗ್ಗೆ ಮಂಗಳವಾರ ಕುಂದಾಪುರದ ಸಹಾಯಕ ಕಮಿಷನರ್ ಮಹೇಶ್ ಚಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಪ್ರತಿ ವರ್ಷವೂ ಇದೆ ಸಮಸ್ಯೆ ಎದುರಾಗುತ್ತಿದೆ. ಅವೈಜ್ಞಾನಿಕವಾದ ಕಾನೂನು ತೊಡಕುಗಳನ್ನು ಸರಿಪಡಿಸಿ ಪರಿಹಾರ ಒದಗಿಸಬೇಕು. ಇಲ್ಲದಿದ್ದರೆ ಜಿಲ್ಲೆಯಾದ್ಯಂತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಸಂಘಟನೆ ವತಿಯಿಂದ ಉಗ್ರವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ತಿರ್ಮಾನಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ, ಜಿಲ್ಲಾ ಕಟ್ಟಡ ಕಾರ್ಮಿಕ ಸಂಘಟನಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಎಲೆಕ್ಟ್ರಾನಿಕ್ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಈಗಾಗಲೇ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಡಿಪ್ಲೊಮಾ ವ್ಯಾಸಂಗ ಪೂರ್ಣಗೊಳಿಸಿರುವ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ವಸತಿ ಸಹಿತ 60 ದಿನಗಳ ಕಾಲ ಪತ್ರಿಕೋದ್ಯಮ ಎಲೆಕ್ಟ್ರಾನಿಕ್ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಅನುಭವ ನೀಡಲು ಅರ್ಜಿ ಆಸಕ್ತರಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಎರಡನೇ ಮಹಡಿ, ಬಿ. ಬ್ಲಾಕ್, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಸಂಪರ್ಕಿಸಬಹುದಾಗಿದೆ ಎಂದು ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವೆಲಾಸಿಟಿ ಅಕಾಡೆಮಿ ಇಂಡಿಯಾ ಇದರ ಮುಖ್ಯಸ್ಥರಾದ ಅಕ್ಷಯ್ ಹೆಮ್ಮಾಡಿ ಇವರಲ್ಲಿ ತರಬೇತಿ ಪಡೆದು ಕರಾಟೆ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರಧಾನ ಕಾರ್ಯಕ್ರಮವು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ಗುಡ್ರಿ ವಹಿಸಿಕೊಂಡರು. ಕಾರ್ಯಕ್ರಮದ ಪ್ರಾರಂಭದಲ್ಲಿ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡು ಹಲವಾರು ಪ್ರಶಸ್ತಿ ಪುರಸ್ಕಾರವನ್ನು ಮುಡಿಗೇರಿಸಿಕೊಂಡಂತಹ ಕೊಳಲುವಾದಕರಾದ ಶ್ಯಾಮ್ ಅವರಿಂದ ಕೊಳಲುವಾದನ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಇದರ ಪ್ರಾಂಶುಪಾಲರಾದ (ವಿಯೆಟ್ನಾಂ ಅಂತರಾಷ್ಟ್ರೀಯ ಬೆಸ್ಟ್ ಐಕಾನ್ ಅವಾರ್ಡ್ ಪ್ರಶಸ್ತಿ ಪುರಸ್ಕೃತರು) ಗಣೇಶ ಮೊಗವೀರ ಅವರು ಹಾಗೂ ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ (ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಹಕಾರ ರತ್ನ ಪ್ರಶಸ್ತಿ ಪುರಸ್ಕ್ರತರು) ಹಟ್ಟಿಯಂಗಡಿ ಉದಯ್ ಕುಮಾರ್, ಯೋಗೀಶ್ ಗುಡ್ರಿ, ನಾಗರಾಜ್ ಪುತ್ರನ್, ರಾಘವೇಂದ್ರ ಕುಲಾಲ್ ಹೆಮ್ಮಾಡಿ,‌ ಸುರೇಂದ್ರ ಶೆಟ್ಟಿ ಇನ್ನಿತರರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದೇಶ ಬಿಟ್ಟು ಗಾಂಧಿಯಿಲ್ಲ,  ಗಾಂಧಿ ಬಿಟ್ಟು ಭಾರತವಿಲ್ಲ ಎಂಬುದನ್ನು ಎಲ್ಲರು ಅರಿತುಕೊಳ್ಳುವ ಅಗತ್ಯವಿದೆ ಎಂದು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ ಕೃಷ್ಣ ಹೇಳಿದರು . ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಕನ್ನಡ ವಿಭಾಗ ಮತ್ತು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಂಯುಕ್ತಾಶ್ರಯದಲ್ಲಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ನಡೆದ ’ ಮಹಾತ್ಮರನ್ನು ಅರ್ಥ ಮಾಡಿಕೊಳ್ಳಲು ಕೆಲವು ಪ್ರಶ್ನೆಗಳು ’ ಎರಡು ದಿನಗಳ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಂತಿಯುತವಾಗಿ ಸ್ವಾತಂತ್ರ್ಯವನ್ನು ತಂದುಕೊಟ್ಟು, ನೈತಿಕತೆಯ ಉತ್ತುಂಗದಲ್ಲಿ ಬದುಕಿ ಬಾಳಿದ ಕೀರ್ತಿ ಗಾಂಧಿಯವರಿಗೆ ಸಲ್ಲುತ್ತದೆ ಎಂದರು. ಗಾಂಧೀಜಿ ಅವರ ಬಗ್ಗೆ ಅಧಿಕೃತ ಸಾಹಿತ್ಯ ಓದಿ ಅರ್ಥೈಸಿಕೊಳ್ಳಿ. ನಂತರ ಪ್ರಶ್ನಿಸಿ. ಆದರೆ ಗೊತ್ತಿಲ್ಲದೇ ಟೀಕಿಸಬೇಡಿ ಎಂದರು. ಅಹಿಂಸಾತ್ಮಕ ಮತ್ತು ಸಾಮುದಾಯಿಕ ಸಮಾಜದ ಪರಿಕಲ್ಪನೆಯ ಆಲೋಚನೆಯನ್ನು ಮೈಗೂಡಿಸಿ ಬದುಕಿದರೆ ಗಾಂಧಿಗೆ ಸಲ್ಲಿಸುವ ಗೌರವವಾಗುತ್ತದೆ ಎಂದು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಳ್ಳುವ ಪಂದ್ಯಾಟಗಳು ವಿದ್ಯಾರ್ಥಿಗಳನ್ನು ಉನ್ನತ ಸಾಧನೆಗಳನ್ನು ಮಾಡುವಲ್ಲಿ ಬಹಳ ದೊಡ್ಡ ಪ್ರೇರಣೆಯನ್ನು ನೀಡುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಖ್ಯಾತ ಉದ್ಯಮಿ ವಿಠಲ ಶೆಣೈ  ಅವರು ಅಭಿಪ್ರಾಯಪಟ್ಟರು.  ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಎಸ್. ವಿ. ಪಿ. ಎಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಜಿ. ಎಸ್‌. ವಿ. ಎಸ್ ಅಸೋಸಿಯೇಷನ್‌ನ ಅಧ್ಯಕ್ಷ ಡಾಕ್ಟರ್ ಕಾಶಿನಾಥ್ ಪೈ, ಸರಸ್ವತಿ ವಿದ್ಯಾಲಯ  ಸಂಸ್ಥೆಗಳ ಸಂಚಾಲಕರಾದ ಸದಾಶಿವ ನಾಯಕ್ ಎನ್,, ಜಿ.ಎಸ್. ವಿ.ಎಸ್ ಅಸೋಸಿಯೇಷನ್ ಖಜಾಂಜಿ   ಅಶ್ವಿನ್ ನಾಯಕ್, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್, ಉಪನ್ಯಾಸಕಿ ಸುಗುಣ ಆರ್. ಕೆ.  ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.   ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯ ಹಮ್ಮಿಕೊಂಡ ವಿವಿಧ ಕ್ರೀಡಾಕೂಟಗಳ ಯಶಸ್ವಿಗೆ ಶ್ರಮಿಸಿದ ವಿವಿಧ ಕ್ರೀಡಾಳುಗಳನ್ನು ಅಭಿನಂದಿಸಿ ಗೌರವಿಸಲಾಯಿತು. …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಕೊಡಮಾಡುವ ನಾಲ್ಕನೇ ವರುಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅವನಿ ಎಂ. ಎಸ್. ಮತ್ತು ಸೋನಾ ಎ., ತೆಕ್ಕಟ್ಟೆಯ ಕೊಯ್ಕುರ್ ಶ್ರೀ ಕುವೆಂಪು ಶತಮಾನೋತ್ಸವ ಮಾದರಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿನಿ ದಶಮಿ ಶೆಟ್ಟಿ, ಬೇಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಶ್ರೀಜನ್ಯಾ, ಕೊಕ್ಕರ್ಣೆ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿನಿ ಮಾನ್ವಿ ಕೆ. ಪಿ. ಎಸ್., ತೆಕ್ಕಟ್ಟೆ ವಿಶ್ವ ವಿನಾಯಕ ನ್ಯಾಶನಲ್ ಇಂಗ್ಲಿಷ್‌ ಮೀಡಿಯಂ ಸ್ಕೂಲ್ಕ್‌ನ ವಿದ್ಯಾರ್ಥಿ ದಿವಿನ್ ಪಿ. ಶೆಟ್ಟಿ, ಕುಂದಾಪುರ ಎಚ್. ಎಂ. ಎಂ. ಇಂಗ್ಲಿಷ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಾಣಿಜ್ಯೀಕರಣದತ್ತ ಸಾಗುತ್ತಿರುವ ಶಿಕ್ಷಣ ಸಂಸ್ಥೆಗಳ ನಡುವೆ ಖಂಬದಕೋಣೆಯ ಆರ್. ಕೆ. ಸಂಜೀವ್‌ ರಾವ್ ಸ್ಮಾರಕ ದತ್ತಿನಿಧಿ ನಾಗೂರಿನಲ್ಲಿ ನಡೆಸುತ್ತಿರುವ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯು ಶೈಕ್ಷಣಿಕ ಮೌಲ್ಯಗಳಿಗೆ ಬದ್ಧವಾಗಿ ಭಿನ್ನತೆ ಮೆರೆಯುತ್ತಿದೆ. ಜನರ ಕೈಗೆಟಕುವ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದು ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ರಿ. ಆಗಿರುವ ಡಾ. ನಾರಾಯಣ ಶೆಟ್ಟಿ ಹೇಳಿದರು. ಅವರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಮೂರನೆಯ ದಿನ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳ ಪಠ್ಯಾಧರಿತ ಪರೀಕ್ಷೆಗಳ ಅಂಕಗಳೇ ಅವರ ಸಾಧನೆಯ ಮಾನದಂಡವಲ್ಲ. ಸಹಪಠ್ಯ ವಿಷಯಗಳಲ್ಲಿನ ಸಾಧನೆಯೂ ಪರಿಗಣನೆಗೆ ಬರಬೇಕು. ವಿದ್ಯಾರ್ಥಿಗಳ ನಾಗರಿಕ ವರ್ತನೆಗೆ ಆದ್ಯತೆ ದೊರೆಯಬೇಕು ಎಂದು ಅವರು ಹೇಳಿದರು. ಮುಖ್ಯ ಅತಿಥಿಗಳಾಗಿದ್ದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯಕ್ ಶಾಲೆಯ ಶೈಕ್ಷಣಿಕ ಗುಣಮಟ್ಟಕ್ಕೆ ಇಲ್ಲಿ ಕಲಿತ ತಮ್ಮ ಪುತ್ರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 625…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಪ್ರೆಸ್ಟೀಜ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.14 ರಂದು ಎ ಐ ಸಿ ಎಸ್ ಒಕ್ಕೂಟದವರು ಆಯೋಜಿಸಿದ ಉಡುಪಿ- ದಕ್ಷಿಣ ಕನ್ನಡ ಜಿಲ್ಲಾ ಅಂತರ್ ಶಾಲಾ ಕಬಡ್ಡಿ ಪಂದ್ಯಾಟದಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 14 ಮತ್ತು 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಪಾರಮ್ಯ ಮೆರೆಯಿತು. ಫೈನಲ್ ಕಾದಾಟದಲ್ಲಿ 14 ವರ್ಷದೊಳಗಿನ ಬಾಲಕರ ತಂಡ 21-14 ಅಂಕಗಳ ಅಂತರದಲ್ಲಿ ಹಾಗೂ 17 ವರ್ಷದೊಳಗಿನ ಬಾಲಕರ ತಂಡ 28-13 ಅಂಕಗಳ ಅಂತರದಲ್ಲಿ ಎದುರಾಳಿ ತಂಡಗಳನ್ನು ಮಣಿಸಿತು. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಹಟ್ಟಿಅಂಗಡಿ ವಸತಿಶಾಲೆಯ ವಿಕಾಸ್ ಸಿ. ಬೆಸ್ಟ್  ಆಲ್ರೌಂಡರ್, 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ  ಹಟ್ಟಿಅಂಗಡಿ ವಸತಿಶಾಲೆಯ ಶಶಾಂಕ್ ಡಿ. ಎನ್. ಬೆಸ್ಟ್ ರೈಡರ್ ಹಾಗೂ  ಪ್ರಜ್ವಲ್ ಹೆಗಡೆ  ಬೆಸ್ಟ್  ಡಿಫೆಂಡರ್  ಗೌರವಕ್ಕೆ ಪಾತ್ರರಾದರು. ವಿದ್ಯಾರ್ಥಿಗಳ ಪ್ರಚಂಡ ಪ್ರದರ್ಶನದ ಕುರಿತಾಗಿ ಪ್ರತಿಕ್ರಿಯಿಸಿದ  ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾವು ಯಾವುದನ್ನು ಯಾಕಾಗಿ ಮಾಡುತ್ತೇವೆ ಎಂಬ ಸ್ಪಷ್ಟತೆ ಇಲ್ಲದೇ ಅನುಕರಣೆಯ ದಾರಿ ಹಿಡಿದಿರುವುದರಿಂದ ಚಿಂತನಶೀಲತೆ ಕಡಿಮೆಯಾಗುತ್ತಿದೆ. ಮನುಷ್ಯ ತನ್ನ ಶಕ್ತಿಯನ್ನು ಯಂತ್ರಗಳಿಗೆ ವರ್ಗಾಯಿಸುತ್ತಿರುವುದರಿಂದ ಆತ ತನ್ನ ಸಾಮರ್ಥ್ಯವನ್ನು ಕಡಿಮೆ ಮಾಡಿಕೊಳ್ಳುತ್ತಿದ್ದಾನೆ ಎಂದು ಶಿಕ್ಷಕ, ಚಿಂತಕ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಶನಿವಾರ ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಿಂದ ಕಾಲೇಜಿನ ಮೊಗೇರಿ ಗೋಪಾಲಕೃಷ್ಣ ಅಡಿಗ ರಂಗಮಂಟಪದಲ್ಲಿ ಆಯೋಜಿಸಲಾದ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸ್ಫೂರ್ತಿ ಹಸ್ತ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಭಾಷೆಯ ಬಳಕೆಯಲ್ಲಿ ಎಚ್ಚರದಿಂದ ಇರುವ ಜೊತೆಗೆ ಅದನ್ನು ಸ್ವಭಾವ ಸಹಿತ ಅರ್ಥಮಾಡಿಕೊಳ್ಳಬೇಕು. ಭಾಷೆ ನಮ್ಮ ನಡವಳಿಕೆ, ಯೋಚನೆಯನ್ನು ನಿಯಂತ್ರಿಸುತ್ತದೆ. ಭಾಷಾ ಹಿನ್ನೆಲೆಯಲ್ಲಿ ಪಠ್ಯವನ್ನು ಅರ್ಥಮಾಡಿಕೊಂಡರೆ ಕಲಿಕೆಯ ವರ್ತನೆ ಬದಲಾಗುತ್ತದೆ. ನಿಗದಿತ ಚೌಕಟ್ಟಿನೊಳಗೆ ಪಠ್ಯಕ್ರಮ ಇರುವುದರಿಂದ ಕಲಿಯಬೇಕಾದ ಕಲಿಕೆ ಕಡಿಮೆಯಾಗಿ ವಿದ್ಯಾರ್ಥಿಗಳ ನಿಜವಾದ ಸಾಮರ್ಥ್ಯವೂ ಕಡಿಮೆಯಾಗಿದೆ ಎಂದರು. ಬಾಯಿಪಾಠ ಮಾಡಿಯೂ ಒಳ್ಳೆಯ ಅಂಕ ಬರಬಹುದು. ಆದರೆ ಕಲಿಕೆಯ ಕಾರಣದಿಂದ ಉತ್ತಮ ಅಂಕ ಬಂದರೆ ಅದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯುಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ವರ್ಷವೈಭವ  – 3 ದಿನಗಳ ರಂಗ ಯಕ್ಷೋತ್ಸವ 2024 ಕಾರ್ಯಕ್ರಮ ಇಲ್ಲಿನ ಶಾರದಾ ವೇದಿಕೆಯಲ್ಲಿ ಡಿ.19ರಿಂದ 21ರ ತನಕ ಪ್ರತಿದಿನ ಸಂಜೆ 6.30ಕ್ಕೆ ನಡೆಯಲಿದೆ. ಡಿ. 19ರಂದು ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಬೈಂದೂರು ಯುಸ್ಕೋರ್ಡ್ ಟ್ರಸ್ಟ್ ರಿ. ಕಾರ್ಯದರ್ಶಿ ಕೃಷ್ಣಮೂರ್ತಿ ಉಡುಪ ಕಬ್ಸೆ ಅವರು ವಹಿಸಲಿದ್ದಾರೆ. ಉಡುಪಿಯ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ ಕುಂದಾಪುರ ಅವರು ಸೇರಿದಂತೆ ವಿವಿಧ ಅತಿಥಿ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಅಂದು ಬಳ್ಳಾರಿ ಧಾತ್ರಿ ರಂಗಸಂಸ್ಥೆ ಕಲಾವಿದೆ ಸುಮಂಗಲಾ ಅವರಿಗೆ ಸನ್ಮಾನಿಸಲಾಗುತ್ತದೆ. ಬಳಿಕ ಡಾ.ಎಂ, ಬೈರೇಗೌಡ ರಚಿಸಿ ನವೀನ್ ಭೂಮಿ ನಿರ್ದೆಶಿಸಿದ ಧಾತ್ರಿ ರಂಗಸಂಸ್ಥೆ ಸಿರಿಗೇರಿ ಬಳ್ಳಾರಿ ಪ್ರಸ್ತುತಿಯಲ್ಲಿ ʼಸರಸತಿಯಾಗಲೊಲ್ಲೆʼ ನಾಟಕ ಪ್ರದರ್ಶನಗೊಳ್ಳಲಿದೆ. ಡಿ.20 ರಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಅಡಿಟರ್ ಜತೀಂದ್ರ ಮರವಂತೆ ಅವರು…

Read More