Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಶುಭ ಗಳಿಗೆಯಲ್ಲಿ ರಾಷ್ಟ್ರ ಪ್ರೇಮವನ್ನು ಬಿತ್ತುವ ಸಲುವಾಗಿ ಪ್ರತಿ ವರ್ಷ ದಂತೆ ಈ ಬಾರಿಯೂ ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಂಡು ಸರ್ಕಾರ ಪ್ರತೀ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಪಣ ತೊಟ್ಟು ದುಡಿದರೆ  ಸಾಲಿಗ್ರಾಮ ಕಯಾಕಿಂಗ್ ತಂಡ ವಿಭಿನ್ನವಾಗಿ ರಾಷ್ಟ್ರ ಪ್ರೇಮವನ್ನು ಮೆರೆಯುವ ಪ್ರಯತ್ನ ಮಾಡಿದೆ. ಸೀತಾ ನದಿಯಲ್ಲಿ ಕಯಕಿಂಗ್ ಮೂಲಕ ಪ್ರಕೃತಿ ವಿಸ್ಮಯಗಳನ್ನು ತೋರಿಸಿ ಜನರಲ್ಲಿ ಪ್ರಕೃತಿ ಪ್ರೇಮವನ್ನು ಬಿತ್ತುವ ಕೆಲಸ ಮಾಡುತ್ತಿರುವ ಸಾಲಿಗ್ರಾಮ ಕಯಾಕಿಂಗ್ ತಂಡ ಈ ಬಾರಿಯೂ ವಿಭಿನ್ನ ಪ್ರಯತ್ನ ನಡೆಸಿದೆ. ಕಳೆದ ಬಾರಿ ಸೀತಾ ನದಿಯ ಮದ್ಯದಲ್ಲಿ ಕಯಾಕಿಂಗ್ ಮೂಲಕ ತೆರಳಿ ಅಲ್ಲಿ ಧ್ವಜ ಸ್ತಂಭ ನೆಟ್ಟು ಧ್ವಜಾರೋಹಣ ನಡೆಸಿದ ತಂಡ ಈ ಬಾರಿ ನದಿಯ ಮದ್ಯದಲ್ಲಿ ಕಾಂಡ್ಲಾ ಮರದ ನಡುವೆ ಕಾಂಡ್ಲಾ ನಡಿಗೆ ಸೇತುವೆ ರಚಿಸಿ ಧ್ವಜಾರೋಹಣ ಮಾಡಿ ಅನ್ನವಿತ್ತ ಪ್ರಕೃತಿಯಲ್ಲಿ ರಾಷ್ಟ್ರಪ್ರೇಮವನ್ನು ಉತ್ತೇಜಿಸುವ ಪ್ರಯತ್ನ ಮಾಡಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೇಸಾಸ್ ಪಿ. ಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.  ಮುಖ್ಯ ಅತಿಥಿಗಳಾಗಿ ಆಗಮಿಸಿದ  ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಜ್ಯೋತಿ ಕೆ. ಸಿ. ಧ್ವಜಾರೋಹಣ ನೆರವೇರಿಸಿ ಮಾತನಾಡಿ ಹುತಾತ್ಮರಾದ ವೀರ ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರನ್ನು ಕೇವಲ ಈ ದಿನ ಸ್ಮರಿಸದೇ ಅವರ ಆದರ್ಶ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಪ್ರಗತಿಗೆ ಎಲ್ಲರೂ ಕೈ ಜೋಡಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಪರಿಸರ ಸಂರಕ್ಷಣೆ ಅರಿವು ಮತ್ತು ಅಗತ್ಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್, ಎಮರಾಲ್ಡ್, ಸಪಾಯರ್, ರೂಬಿ, ಟೋಪಾಜ್ ತಂಡಗಳಿಂದ ಆಕರ್ಷಕ ಪಥಸಂಚಲನ ವೀಕ್ಷಿಸಿದರು. ಸಂಸ್ಥೆಯ ಆಡಳಿತಾಧಿಕಾರಿಗಳಾದ ರಿ. ಶಮಿತಾ ರಾವ್ ಮತ್ತು ರೆನಿಟಾ ಲೋಬೊ ಸರ್ವರಿಗೂ ಸ್ವತಂತ್ರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ವ್ಯಕ್ತಿ, ಸಮುದಾಯ, ದೇಶ ಸೇರಿದಂತೆ ಸರ್ವರಲ್ಲಿ ನಿರ್ಭೀತ ಸ್ವಾತಂತ್ರ್ಯದ ಸಂಸ್ಕೃತಿ ನಮ್ಮದಾಗಬೇಕು ಎಂದು ಮಾಜಿ ಮುಖ್ಯ ಮಂತ್ರಿ ಎಂ. ವೀರಪ್ಪ ಮೊಯ್ಲಿ ಆಶಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನವು ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ. ವಿ. ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡ 78ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶವನ್ನು ಆರ್ಥಿಕ, ಸಾಮಾಜಿಕ, ಸಾಮುದಾಯಿಕವಾಗಿ ಎಲ್ಲರೂ ಸೇರಿ ಕಟ್ಟೋಣ’ ಎಂದ ಅವರು ʼವೈಯಕ್ತಿಕ ಸ್ವಾತಂತ್ರ್ಯದ ಉಳಿವೂ ಇಂದಿನ ಅವಶ್ಯಕತೆ. ಸ್ವಾತಂತ್ರ್ಯವನ್ನು ಯಾರದೇ ಪಾದಕ್ಕೆ ಸಮರ್ಪಿಸಬೇಡಿ’ ಎಂದು ಯುವ ಸಮುದಾಯವನ್ನು ಎಚ್ಚರಿಸಿದರು. ಯಾವುದೂ ಅಸಾಧ್ಯ ಎಂಬುದು ಇಲ್ಲ. ಪ್ರಕೃತಿ ಪೂರಕ ಸಂಸ್ಕೃತಿ ಬೆಳೆಯಬೇಕು. ಸ್ವಾತಂತ್ರ್ಯದ ಸಂಸ್ಕೃತಿ ನಮ್ಮದಾಗಬೇಕು. ಅದಕ್ಕೆ ಪ್ರತಿ ವ್ಯಕ್ತಿಯೂ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು. ದೇಶದಲ್ಲಿ ಅನೇಕ ಜಾತಿ – ಧರ್ಮಗಳಿವೆ. ಆದರೆ ವೈವಿಧ್ಯತೆಯ ನಡುವೆ ಐಕ್ಯತೆ ಹಾಗೂ ಸಾಮರಸ್ಯ ಇದೆ. ದೇಶದಲ್ಲಿನ ನದಿಗಳು ಸಮುದ್ರ ಸೇರಿದಂತೆ, ಇಲ್ಲಿ ಯಾರ ಪಾಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ ಗಂಗೊಳ್ಳಿಯಲ್ಲಿ ಗುರುವಾರ ನಡೆಯಿತು. ಗಂಗೊಳ್ಳಿ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಸಾಮಾಜಿಕ ಕಾರ್ಯಕರ್ತ ಆದರ್ಶ ಕೆಲ, ನಮಗೆ ಸ್ವಾತಂತ್ರ್ಯ ಸಿಕ್ಕಿದ ಖುಷಿ ಒಂದೆಡೆಯಾದರೆ ಅಖಂಡವಾಗಿದ್ದ ದೇಶವನ್ನು ವಿಭಜಿಸಿರುವ ದು:ಖ ಇನ್ನೊಂದೆಡೆ. ನಮ್ಮ ದೇಶವನ್ನು ಬ್ರಿಟಿಷರು ಮಾತ್ರವಲ್ಲ ಬೇರೆ ಬೇರೆಯವರು ನಮ್ಮ ದೇಶವನ್ನು ಆಳಿ ಒಡೆದು ಆಳುವ ನೀತಿ, ಮತಾಂಧತೆ ಮೊದಲಾದವುಗಳ ಮೂಲಕ ನಮ್ಮ ದೇಶವನ್ನು ಕೂಪಕ್ಕೆ ತಳುವಂತೆ ಮಾಡಿ ಹೋಗಿದ್ದರು. ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಸಹಸ್ರಾರು ಮಂದಿ ಬಲಿದಾನ, ತ್ಯಾಗ, ಹೋರಾಟ ನಡೆಸಿದ್ದಾರೆ. ಆದರೆ ಸ್ವಾತಂತ್ರ್ಯ ಹೋರಾಟದಕಲ್ಲಿ ಕೆಲವೇ ಕೆಲವು ವ್ಯಕ್ತಿಗಳನ್ನು ಮಾತ್ರ ವೈಭವೀಕರಿಸಲಾಗುತ್ತಿದ್ದು, ನೈಜ ಸ್ವಾತಂತ್ರ್ಯ ಹೋರಾಟಗಾರರು ಮರೆ ಮಾಚಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಭವಿಷ್ಯದಲ್ಲಿ ಆದ ತಪ್ಪುಗಳು ಮುಂದಿನ ದಿನಗಳಲ್ಲಿ ಆಗಬಾರದು ಎಂದಾದರೆ ನಮ್ಮ ಸ್ವಾತಂತ್ರ್ಯದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.   ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನಾಧರಿತ ಬೆಳೆ ವಿಮೆ ಯೋಜನೆಯಡಿ ಬೆಳೆ ಸಾಲ ಹೊಂದಿರುವ ರೈತರನ್ನು ಸಂಪೂರ್ಣ ಬೆಳೆ ವಿಮೆ ಯೋಜನೆಗೆ ಒಳಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಹಾಗೂ ರಾಜ್ಯ ಸರಕಾರದ ಆದೇಶದಂತೆ ಜಿಲ್ಲೆಯಲ್ಲಿ ಬೆಳೆ ಸಾಲ ಹೊಂದಿದ ರೈತರನ್ನು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮಾ ಯೋಜನೆಗೆ ಒಳಪಡಿಸಲು ಆಗಸ್ಟ್ 25ರ ವರೆಗೆ  ಅವಧಿ ವಿಸ್ತರಣೆ ಮಾಡಿ ಅವಕಾಶ ಕಲ್ಪಿಸಲಾಗುತ್ತದೆ. ಬೆಳೆ ವಿಮೆಗೆ ಒಳಪಡದ ಬೆಳೆ ಸಾಲ ಹೊಂದಿರುವ ರೈತರು ಕೂಡಲೇ ತಮ್ಮ ಬೆಳೆ ಸಾಲ ಹೊಂದಿರುವ ಬ್ಯಾಂಕ್‌ನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ 18 ರಿಂದ 30 ವರ್ಷದ ವರೆಗಿನ ವಯೋಮಿತಿಯ ಎಸ್. ಎಸ್. ಎಲ್. ಸಿ ಅಥವಾ ಪಿಯುಸಿ ಉತ್ತೀರ್ಣ/ ಅನುತ್ತೀರ್ಣ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರಕಾರದ ಕೌಶಲ್ಯಾಭಿವೃದ್ಧಿ ಮಂತ್ರಾಲಯದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯತೆ ಪಡೆದ ಪಠ್ಯ ಕ್ರಮದಲ್ಲಿ ತರಬೇತಿ ನೀಡಲಾಗುವುದು. ಒಂದು ತಿಂಗಳ ತರಬೇತಿಯ ಅವಧಿಯಲ್ಲಿ ಊಟೋಪಚಾರ ಮತ್ತು ಅಗತ್ಯವಿರುವವರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್‌ಕ್ರಾಸ್ ಕಛೇರಿ, ದೂ.ಸಂಖ್ಯೆ: 0820 – 2532222 ಅಥವಾ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು ಉಡುಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆ 78ನೇ ಸ್ವಾತಂತ್ರ್ಯ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಗುರುಕುಲ ವಿದ್ಯಾಸಂಸ್ಥೆಯ ಜಂಟಿ  ಕಾರ್ಯನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ ಮತ್ತು ಅನುಪಮಾ ಶೆಟ್ಟಿ ಅವರು 78ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣ ಆಚರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ತದನಂತರ ಶಾಲಾ ವಿದ್ಯಾರ್ಥಿಗಳ ವಿವಿಧ ತಂಡಗಳ ನಡುವೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ವಿವಿಧ ತಂಡಗಳ ವಿದ್ಯಾರ್ಥಿಗಳು ಏಕ ಪಾತ್ರಾಭಿನಯ ಮತ್ತು ಹಾಡಿನ ಮೂಲಕ ತಮ್ಮಲ್ಲಿರುವ ದೇಶಭಕ್ತಿಯನ್ನು ಇನ್ನಷ್ಟು ಇಮ್ಮಡಿಗೊಳಿಸಿಕೊಂಡು, ಎಲ್ಲರ ಕಣ್ಮನಗಳನ್ನು ತಣಿಸಿದರು. ಶಿಕ್ಷಕರು ಸೈನಿಕ ವಿಷಯವನ್ನಾಧರಿಸಿ  ಕಿರುನಾಟಕವನ್ನು ಮಾಡುವ ಮೂಲಕ ಸೈನಿಕರ ಬದುಕಿನ ಮಹತ್ವವನ್ನು ಅರ್ಥಪೂರ್ಣವಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನಿಲ್. ಪ್ಯಾಟ್ರಿಕ್ , ಕಾಲೇಜು ಪ್ರಾಂಶುಪಾಲರಾದ ಅವಿನಾಶ್, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಂಜನ್ ನಿರೂಪಿಸಿದರು, ಉಮೇಶ್ ವಂದಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಲ್ಲಿನ ಅಜ್ಜರಕಾಡುವಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್. ಎನ್, ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಅವರು ಧ್ವಜಾರೋಹಣ ಗೈದು ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿದರು. ವಿದ್ಯಾರ್ಥಿಗಳಾದ, ಹರಿದಾಸ್ ಆರ್. ಮಲ್ಯ  ಹಾಗೂ ಶರ್ವಾಣಿ ಅವರು ಸ್ವಾತಂತ್ರ್ಯೋತ್ಸವದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ, ಎನ್. ಸಿ. ಸಿ, ಸ್ಕೌಟ್ಸ್ – ಗೈಡ್ಸ್ ಮತ್ತು ಶಾಲಾ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ ಅವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಸಹಶಿಕ್ಷಕಿ ಲೋನಾ ಡಿಸೋಜಾ ಸರ್ವರನ್ನು ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಸಹ ಶಿಕ್ಷಕಿ ದೀಪಾ ಆಚಾರ್ ಅವರು ಧನ್ಯವಾದ ಸಮರ್ಪಣೆಗೈದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯುವ ಬಂಟರ ಸಂಘದ 2024 – 26ನೇ ಸಾಲಿನ ಗೌರವಾಧ್ಯಕ್ಷರಾಗಿ ಅಂಕದಕಟ್ಟೆಯ ಮಂಜುಶ್ರೀ ಕನ್ಸ್ಟ್ರಕ್ಷನ್ ಆಡಳಿತ ಪಾಲುದಾರರಾದ  ವತ್ಸಲಾ ದಯಾನಂದ ಶೆಟ್ಟಿ ಆಯ್ಕೆಯಾಗಿರುತ್ತಾರೆ. ಕಳೆದ ಹತ್ತು ವರ್ಷಗಳಿಂದ ಯುವ ಬಂಟರ ಸಂಘದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡ ಅವರು ದತ್ತಿನಿಧಿ ಪೋಷಕರಾಗಿ, ದಶಮಾನೋತ್ಸವದ ಗೌರವ ಮಹಾಪೋಷಕರಾಗಿ, ಪ್ರಸ್ತುತ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More