Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕನಕ ಅಧ್ಯಯನ ಪೀಠ ಹಾಗೂ ಚೇತನಾ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಜರುಗಿದ ನುಡಿ ಸಡಗರ ಕಾರ್ಯಕ್ರಮದಲ್ಲಿ ಭರತ್ ಕುಮಾರ್ ಶೆಟ್ಟಿ ಕೊಲ್ಲೂರು ಅವರಿಗೆ ಕರುನಾಡು ಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ 32ನೇ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಭಾನುವಾರ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮೋಹನ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ ರೂ. 112.74 ಕೋಟಿ ವ್ಯವಹಾರ ನಡೆಸಿ, ರೂ. 40.54 ಲಕ್ಷ ನಿವ್ವಳ ಲಾಭ ಗಳಿಸಿದೆ. ಆಡಿಟ್ ವರ್ಗೀಕರಣದಲ್ಲಿ ಎ ದರ್ಜೆ ಹೊಂದಿದೆ. ಸಂಘವು ಪ್ರಾರಂಭದಿಂದಲೂ ಲಾಭದಲ್ಲಿಯ್ಲೇ ಮುನ್ನಡೆಯುತ್ತಿದ್ದು, ಕಳೆದ 31 ವರ್ಷಗಳಿಂದ ನಿರಂತರ ಡಿವಿಡೆಂಟ್ ನೀಡಿರುವ ಹೆಗ್ಗಳಿಕೆ ಗಳಿಸಿದೆ. ಈ ಭಾರಿ 10% ಡಿವಿಡೆಂಟ್ ಘೋಷಿಸಲಾಗಿದೆ. ಪ್ರಧಾನ ಕಚೇರಿಗೆ ಸುಸಜ್ಜಿತವಾದ ಸಹಕಾರಿ ಸಂಕೀರ್ಣ ನಿರ್ಮಾಣ ಯೋಜನೆಯಿದ್ದು, ಅದಕ್ಕಾಗಿ ಜಾಗ ಮೀಸಲಿರಿಸಲಾಗಿದೆ ಎಂದು ಹೇಳಿದರು. ರಾಷ್ಟ್ರಪತಿ ಪದಕ ಪುರಸ್ಕೃತ ಕ್ರೀಡಾ ಕ್ಷೇತ್ರದ ಸಾಧಕ, ಪೋಲಿಸ್ ಸಿಬ್ಬಂದಿ ಶಂಕರ ಪೂಜಾರಿ ಕಾಡಿನತಾರು, ಎಸ್ಎಸ್ಎಲ್‌ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಅಮೂಲ್ಯ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುಣಮಟ್ಟದ ಸೇವೆಯ ಮೂಲಕ ಹೆಸರಾಗಿರುವ ಉಡುಪಿಯ ಗಿರಿಜಾ ಗ್ರೂಪ್ಸ್ ಅವರ ಫಿಸಿಯೋ ಕೇರ್ ಸೆಂಟರ್‌ನ ನೂತನ ಶಾಖೆ ಕುಂದಾಪುರದ ಅಥರ್ವ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ಶುಭಾರಂಭಗೊಂಡಿತು. ಕುಂದಪ್ರಭ ಸಂಪಾದಕ ಯು. ಎಸ್. ಶೆಣೈ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಧುನಿಕ ಜೀವನ ಪದ್ದತಿಯ ನಡುವೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದ್ದು ಅಗತ್ಯವಾಗಿದೆ. ಫಿಸಿಯೋಥೆರಫಿ ಅಗತ್ಯ ಇಂದಿನ ದಿನದಲ್ಲಿ ಹೆಚ್ಚಿದ್ದು, ಈ ಚಿಕಿತ್ಸೆಯ ಮೂಲಕ ಚೇತರಿಸಿಕೊಂಡ ನೂರಾರು ಉದಾಹರಣೆಗಳಿವೆ. ಈ ಸೇವೆಯನ್ನು ಮನೆ ಮನೆ ವಿಸ್ತರಿಸುವಂತಾಗದೇ ಹತ್ತಾರು ಮಂದಿ ರೋಗಿಗಳು ಪೂರ್ಣ ಪ್ರಮಾಣದಲ್ಲಿ ಇದರ ಪ್ರಯೋಜನ ಪಡೆದುಕೊಂಡಂತಾಗುವುದು ಎಂದರು. ಡಾ. ಎ.ವಿ. ಬಾಳಿಗ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ.ವಿ. ಭಂಡಾರಿ ಅವರು ಮಾತನಾಡಿ, ಗಿರಿಜಾ ಗ್ರೂಪಿನ ರವಿಂದ್ರ ಶೆಟ್ಟಿ ಅವರು ಕೇವಲ ಉದ್ಯಮಿಯಾಗಿ ಅಷ್ಟೇ ಹೆಸರು ಮಾಡದೇ ಆರೋಗ್ಯ ಕ್ಷೇತ್ರದ ಮೂಲಕ ಸಾಮಾಜಿಕ ಕಳಕಳಿ ತೋರುತ್ತಾ ಬಂದಿದ್ದಾರೆ. ಅವರ ಸಾಮಾಜಿಕ ಬದ್ಧತೆ ಶ್ಲಾಘನಾರ್ಹವಾಗಿದ್ದು, ಫಿಸಿಯೋಕೇರ್ ಸೆಂಟರ್ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಡಾ. ಸರೋಜ ಎಂ. ಇವರಿಗೆ ಯುಥ್ ಎಫರ್ಟ್ಸ್ ಫಾರ್ ಸೊಸೈಟಿ ಇವರು ಕೊಡಮಾಡುವ ಅತ್ಯುತ್ತಮ ಜೀವಶಾಸ್ತ್ರ ಉಪನ್ಯಾಸಕಿ ಪ್ರಶಸ್ತಿ ಮತ್ತು ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್ ಗೌರವ ದೊರೆತಿದೆ. ಇವರಿಗೆ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಬಾಲಕ ಹಾಗೂ ಬಾಲಕಿಯರ ತ್ರೋಬಾಲ್ ಪಂದ್ಯಾಟ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಜರುಗಿತು. ಉಡುಪಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಜೀವನ್ ಕುಮಾರ್ ಶೆಟ್ಟಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿ, ತ್ರೋಬಾಲ್ ಪಂದ್ಯಾಟದ ಇಂದಿನ ಗೆಲುವು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ಶುಭ ಹಾರೈಸಿದರು. ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷ ಸ್ಥಾನ ವಹಿಸಿ ಆರೋಗ್ಯ ಸದೃಡವಾಗಲು ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.ಸರಸ್ವತಿ ವಿದ್ಯಾಲಯ ಗಂಗೊಳ್ಳಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ ಶೆಟ್ಟಿ, ಕುಂದಾಪುರ ತಾಲೂಕು ಕ್ರೀಡಾ ಸಂಘದ ಸಂಯೋಜಕರಾದ ರಾಮ ಶೆಟ್ಟಿ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟದ ಸಹಭಾಗಿತ್ವದಲ್ಲಿ ನೀಡಲಾಗುತ್ತಿರುವ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2023ರ ಸಾಲಿನಲ್ಲಿ ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ.ವಿದ್ಯಾಭೂಷಣ್ ಅವರನ್ನು ಆಯ್ಕೆ ಮಾಡಲಾಗಿದೆ. ಡಾ. ವಿದ್ಯಾಭೂಷಣ್ ಹಲವು ದಶಕಗಳಿಂದ ಸಂಗೀತ ಕ್ಷೇತ್ರದಲ್ಲಿ ಅಮೂಲ್ಯ ಸೇವೆಯನ್ನು ಹಾಗೂ ಅವರು ಏರಿದ ಸಾಧನೆಯ ಮೆಟ್ಟಿಲುಗಳನ್ನು ಪರಿಗಣಿಸಿ ಈ ವರ್ಷ ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಳೆದ ಹದಿನೆಂಟು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ. ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ| ಬಿ.ಎಂ. ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ಮಿತ ಇದರ 63ನೇ ವಾರ್ಷಿಕ ಮಹಾಸಭೆ ಕುಂದಾಪುರದ ಶೆರೋನ್ ಸಂಭಾಂಗಣದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಎಚ್. ಹರಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದ ಅಭಿವೃದ್ಧಿಯ ಹಾದಿಯನ್ನು ಮೆಲುಕು ಹಾಕಿದರು. ತಾಲೂಕಿನ ಎಲ್ಲಾ ಸಹಕಾರಿ ಸಂಘಗಳ ಸಹಕಾರವನ್ನು ಸ್ಮರಿಸಿ ಅಭಿನಂದನೆ ತಿಳಿಸಿದರು. ಟಿಎಪಿಸಿಎಂಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಎಚ್ ಸ್ವಾಗತಿಸಿ ವಾರ್ಷಿಕ ವರದಿಯನ್ನು ಮಂಡಿಸಿದರು. ಸಂಘದ ಉಪಾಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ವಂದಿಸಿದರು. ನಿರ್ದೇಶಕರಾದ ಮೋಹನ್ ದಾಸ್ ಶೆಟ್ಟಿ, ಎಸ್. ರಾಜು ಪೂಜಾರಿ, ಕೆ. ಭುಜಂಗ ಶೆಟ್ಟಿ ವಂಡ್ಸೆ, ರವಿ ಗಾಣಿಗ, ಕೆ. ಮೋಹನ್ ಪೂಜಾರಿ, ಆನಂದ ಬಿಲ್ಲವ, ಕೆ. ಸುಧಾಕರ ಶೆಟ್ಟಿ, ಪ್ರಭಾಕರ ಶೆಟ್ಟಿ ಜಡ್ಕಲ್, ಎಸ್. ಜಯರಾಮ ಶೆಟ್ಟಿ ಬೆಳ್ವೆ, ಚಂದ್ರಶೇಖರ ಶೆಟ್ಟಿ, ದಿನಪಾಲ ಶೆಟ್ಟಿ, ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುಣಮಟ್ಟದ ಸೇವೆಯ ಮೂಲಕ ಹೆಸರಾಗಿರುವ ಉಡುಪಿಯ ಫಿಸಿಯೋಕೇರ್ ಸೆಂಟರ್‌ನ ನೂತನ ಶಾಖೆ ಸೆ.09ರಂದು ಕುಂದಾಪುರದಲ್ಲಿ ಶುಭಾರಂಭಗೊಳ್ಳಲಿದೆ. ಗಿರಿಜಾ ಹೆಲ್ತ್‌ಕೇರ್‌ ಮತ್ತು ಸರ್ಜಿಕಲ್ಸ್ ಮೂಲಕ ಕುಂದಾಪುರದಲ್ಲಿ ಉತ್ತಮ ಸೇವೆ ನೀಡುತ್ತಿರುವ ಗಿರಿಜಾ ಗ್ರೂಪ್ಸ್‌ನ ಅಂಗಸಂಸ್ಥೆಯಾಗಿರುವ ಫಿಸಿಯೋಕೇರ್ ಸೆಂಟರ್ ಕುಂದಾಪುರದಲ್ಲಿಯೂ ಕಾರ್ಯಾಚರಿಲಿದೆ. ಸೆ.9ರ ಸಂಜೆ 5:30ಕ್ಕೆ ಪಾರಿಜಾತ ಹೋಟೆಲ್ ಎದುರಿನ ಅಥರ್ವ ಕಾಂಪ್ಲೆಕ್ಸ್ ನೆಲಮಹಡಿಯಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ. ಫಿಸಿಯೋಕೇರ್ – ಫಿಸಿಯೋಥೆರಪಿ ಹಾಗೂ ರಿಹ್ಯಾಬಿಲಿಟೆಷನ್ ಸೆಂಟರ್ ಆಗಿದ್ದು, ಅಲ್ಪ ಕಾಲದ ಹಾಗೂ ಧೀರ್ಘ ಕಾಲದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಇದೊಂದು ಉತ್ತಮ ಆಯ್ಕೆಯಾಗಿದೆ. ಇದು ಅತ್ಯಾಧುನಿಕ ಸೌಕರ್ಯಗಳನ್ನು ಒಳಗೊಂಡಿದ್ದು, ಕುಂದಾಪುರದ ಜನತೆ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್‌ನ ಪ್ರವರ್ತಕರು ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಭೋಸರಾಜು ಅವರು ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರ ಹುಯ್ಯಾರು ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ಸಣ್ಣ ನೀರಾವರಿ ಇಲಾಖೆ ವಿಚಾರ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ. ಕಿಶನ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಂ. ದಿನೇಶ ಹೆಗ್ಡೆ, ಮುನಿಯಾಲು ಉದಯ ಕುಮಾರ ಶೆಟ್ಟಿ, ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ ಶೆಟ್ಟಿ ಚೋರಾಡಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಹೋಲಿಕ್ರಾಸ್ ಇಗರ್ಜಿಯಲ್ಲಿ ಮೊಂತಿ ಫೆಸ್ತ್ (ತೆನೆ ಹಬ್ಬ) ಸಂಭ್ರಮದಿಂದ ಆಚರಿಸಲಾಯಿತು. ಧರ್ಮಗುರು ವಿನ್ಸೆಂಟ್ ಕುವೆಲ್ಲೋ ಹಾಗೂ ಕಟ್ಕೇರಿಯ ಜೋಸ್ವೀ ಡಿಸೋಜಾ ರವರ ನೇತೃತ್ವದಲ್ಲಿ ಬಾಲೆ ಮರಿಯಮ್ಮಳಿಗೆ ಹೂವುಗಳನ್ನು ಅರ್ಪಿಸಿ, ತೆನೆಗಳ ಆಶೀರ್ವಚನ ನಡೆಸಲಾಯಿತು. ಬಳಿಕ ಮಾತೆಯ ನಾಮಕ್ಕೆ ಸ್ತುತಿಗೀತೆಗಳನ್ನು ಹಾಡುತ್ತಾ ಆಶೀರ್ವಾದಿತ ತೆನೆಗಳೊಂದಿಗೆ ಮೆರವಣಿಗೆ ಮೂಲಕ ದೇವಾಲಯಕ್ಕೆ ತಂದು ವಿಶೇಷ ಬಲಿಪೂಜೆಯನ್ನು ನೆರೆವೆರಿಸಿ, ಎಲ್ಲರಿಗೂ ತೆನೆ ಮತ್ತು ಕಬ್ಬುಗಳನ್ನು ವಿತರಿಸಲಾಯಿತು.

Read More