Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಒನ್ ಟ್ಯಾಕ್, ಮಣಿಪಾಲ್ ಸ್ಕೂಲ್ ಆಫ್ ಕಮ್ಯುನಿಕೇಷನ್ ಮತ್ತು ಉಡುಪಿ ಟೂರಿಸಂ ಸಹಭಾಗಿತ್ವದಲ್ಲಿ ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತವು ಹಮ್ಮಿಕೊಂಡಿದೆ. ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಎಲ್ಲ ಸಕ್ರಿಯ ಪಾಲುದಾರರ ಜೊತೆಯಲ್ಲಿ ವಿಶೇಷ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಉಡುಪಿಯ ಸಂಸ್ಕೃತಿ, ಪರಂಪರೆ, ಆಹಾರ ಶೈಲಿ ಮತ್ತು ಧಾರ್ಮಿಕತೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಪ್ರಚಾರ ನೀಡಲು ಉದ್ದೇಶಿಸಲಾಗಿದ್ದು ಇದಕ್ಕೆ ಡಿಜಿಟಲ್ ಸ್ಪರ್ಶ ನೀಡಲಾಗುವುದು ಎಂದರು. ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಸಂಸ್ಥೆಯು ರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಕಂಟೆಂಟ್‌ಗಳನ್ನು ತಯಾರಿಸುತ್ತಿದೆ. ಇದರಲ್ಲಿ ವಿದ್ಯಾರ್ಥಿಗಳು, ಕಂಟೆಂಟ್ ಕ್ರಿಯೇಟರ್ಸ್ ಭಾಗವಹಿಸಿ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಮಾಹಿತಿ ನೀಡುವ ಫೋಟೋ ಮತ್ತು ವೀಡಿಯೋಗಳನ್ನು ಹಂಚಿಕೊಳ್ಳುವ ಅವಕಾಶ ಇದೆ. ವಿಶೇಷವಾಗಿ ಕಾಲೇಜು ಮಟ್ಟದಲ್ಲಿ ಲ್ಯಾಬ್‌ಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2025-2026ನೇ ಸಾಲಿನ ಪದವಿಪೂರ್ವ ಕಾಲೇಜಿನ ಫಲಿತಾಂಶ ಏಪ್ರಿಲ್‌ 09,2026ರಂದು ಪ್ರಕಟವಾಗಿದ್ದು, ಈ ಫಲಿತಾಂಶದಲ್ಲಿ ಕುಂದಾಪುರ ಸುಜ್ಞಾನ ಪಿಯು ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳು ಅಮೋಘ ಸಾಧನೆ ಗೈದಿದ್ದಾರೆ. ಕೇವಲ 11 ವಿದ್ಯಾರ್ಥಿಗಳಿಂದ 2024-2025ರಲ್ಲಿ ಆರಂಭವಾದ ಸುಜ್ಞಾನ ಪಿಯು ಕಾಲೇಜು ದ್ವಿತೀಯ ಪಿಯುಸಿಗೆ ಬೇರೆ ಕಾಲೇಜುಗಳಿಂದ ಸುಮಾರು 100 ವಿದ್ಯಾರ್ಥಿಗಳು ದಾಖಲಾತಿ ಪಡೆದು ಒಟ್ಟು 125 ವಿದ್ಯಾರ್ಥಿಗಳು ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತಮ ಅಂಕ ಗಳಿಸಿ ಕಾಲೇಜಿನ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಸಂಸ್ಥೆಯ ಸ್ಪಂದನಾ ಆರ್‌. ಶೆಟ್ಟಿ 600 ಅಂಕಕ್ಕೆ 592 ಅಂಕಗಳನ್ನು ಪಡೆದು ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದಿದ್ದಾರೆ. ವಿಶೇಷವೆಂದರೆ ಸ್ಪಂದನಾ ಎಸ್‌.ಎಸ್‌.ಎಲ್‌.ಸಿಯಲ್ಲಿ 84% ಅಂಕ ಪಡೆದರೂ ಕೂಡ ದ್ವಿತೀಯ ಪಿಯುಸಿಯಲ್ಲಿ 98.7% ಅಂಕ ಗಳಿಸುವುದರ ಮೂಲಕ ಶ್ರೇಷ್ಠ ಸಾಧನೆಯನ್ನು ಮೆರೆದಿದ್ದಾರೆ. SSLCಯಲ್ಲಿ 95ಕ್ಕಿಂತ ಅಧಿಕ ಅಂಕ ಗಳಿಸಿದ ಕೇವಲ 9 ವಿದ್ಯಾರ್ಥಿಗಳನ್ನು ಒಳಗೊಂಡು ಒಟ್ಟು 125 ವಿದ್ಯಾರ್ಥಿಗಳು ಸುಜ್ಞಾನ ಪಿಯು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಕಡೆ ಇಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಬೀಜಾಡಿ ಡಿವೈಡರ್ ಬಳಿ ನಡೆದಿದೆ. ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಅವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ. ಶಾರದಾ ಅವರು ಮಗನ ಜೊತೆ ಕೋಟೇಶ್ವರ ಅಂಕದಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದು ಬಂದಿದೆ. ಈ ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಕುಂದಾಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಕುಂದಾಪ್ರ ಡಾಂ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಕುಂದಾಪುರ ತಾಲೂಕಿನ ಇಡೂರು ಕುಂಜ್ಞಾಡಿ ಗ್ರಾಮದ ಹೊಸಿಮನೆ ನಿವಾಸಿ ಕಾರ್ತಿಕ್ ಆಚಾರ್ ಎಂಬುವನ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿರುತ್ತಾರೆ. ಈತನ ವಿರುದ್ಧ 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ. ಈತನನ್ನು ಬೆಂಗಳೂರು ಕಮೀಷನರೇಟ್‌ ವ್ಯಾಪ್ತಿಯ ಪೀಣ್ಯ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್‌ಕಾರ್ಸ್‌ ಪದವಿ ಪೂರ್ವ ಕಾಲೇಜಿಗೆ 2025-2026ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವು ಶೇಕಡಾ 92% ದೊರೆತಿದೆ ಎಂದು ಭಂಡಾರ್ಕಾರ್ಸ್‌ ಪದವಿ ಪೂರ್ವ ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪ್ರಥಮ – ಅನಿಲ್‌ ಜೀವನ್‌ ಲೋಬೋ (578/600), ದ್ವಿತೀಯ- ಅಶ್ವಿನಿ ಪ್ರಭು (575/600), ತೃತೀಯ-ಭೂಮಿಕಾ ಎಂ.ಡಿ (574/600), ನಾಲ್ಕನೇ ಸ್ಥಾನವನ್ನು ರವೀಂದ್ರ ಮಾಸ್ತಿ ಗೊಂಡ 573/600 ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪ್ರಥಮ – ಸಬಾ (586/600), ದ್ವಿತೀಯ- ನವ್ಯ  (581/600), ತೃತೀಯ- ಪ್ರಿಯಾ (574/600), ನಾಲ್ಕನೇ- ರೇಣುಕಾ (573/600), ಪಂಚಮ ಸ್ಥಾನವನ್ನು ಭೂಮಿಕಾ (571/600) ಪಡೆದುಕೊಂಡಿದ್ದಾರೆ.  ಕಾಲೇಜಿನ 63 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಹಾಗೂ 102 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಅವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ ಮತ್ತು  ಆಡಳಿತ ಮಂಡಳಿ, ಅಧ್ಯಾಪಕರು ಮತ್ತು ಅಧ್ಯಾಪಕೇತರರು, ವಿದ್ಯಾರ್ಥಿಗಳು ಅಭಿನಂದನೆ ತಿಳಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಪ್ರತಿಷ್ಠಿತ ಐ.ಎಂ.ಜೆ (IMJ) ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶುಕ್ರವಾರದಂದು ಸಂಸ್ಥೆಯ ಸಂಸ್ಥಾಪನಾ ದಿನಾಚರಣೆಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಸಂಸ್ಥಾಪಕರು ಹಾಗೂ ಮಾಜಿ ಸಂಸದರಾದ ದಿವಂಗತ ಐ. ಎಂ. ಜಯರಾಮ ಶೆಟ್ಟಿ ಅವರ ದೂರದೃಷ್ಟಿಯ ಫಲವಾಗಿ 2004ರಲ್ಲಿ ‘ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ (MITK) ಉದಯಿಸಿತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣ ಸಿಗಬೇಕೆಂಬ ಅವರ ಕನಸು ಇಂದು ಐ.ಎಂ.ಜೆ ಸಂಸ್ಥೆಯಾಗಿ ಹೆಮ್ಮರವಾಗಿ ಬೆಳೆದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ, “ಒಂದು ಸಂಸ್ಥೆಯನ್ನು ಕಟ್ಟುವುದು ಸುಲಭದ ಮಾತಲ್ಲ. ಜಯರಾಮ ಶೆಟ್ಟಿ ಅವರು ಈ ಗ್ರಾಮೀಣ ಪ್ರದೇಶದಲ್ಲಿ ಇಂತಹ ಒಂದು ಅತ್ಯುನ್ನತ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಈ ಭಾಗದ ಶೈಕ್ಷಣಿಕ ಚಿತ್ರಣವನ್ನೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಶೇ.98.64 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 147 ವಿದ್ಯಾರ್ಥಿಗಳಲ್ಲಿ 145 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 63 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 69 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ಸಂಸ್ಕೃತ ವಿಷಯದಲ್ಲಿ 16 ವಿದ್ಯಾರ್ಥಿಗಳು 100 ಅಂಕಗಳನ್ನು ಪಡೆದಿದ್ದರೆ, ವ್ಯವಹಾರ ಅಧ್ಯಯನದಲ್ಲಿ 9, ಲೆಕ್ಕಶಾಸ್ತ್ರದಲ್ಲಿ 3, ಗಣಿತ, ಭೌತಶಾಸ್ತ್ರ ಮತ್ತು ಕಂಪ್ಯೂಟರ್ ಸಾಯನ್ಸ್ನಲ್ಲಿ ತಲಾ ಇಬ್ಬರು ವಿದ್ಯಾರ್ಥಿಗಳು, ಸಂಖ್ಯಾಶಾಸ್ತ್ರ, ಅರ್ಥಶಾಸ್ತç ಮತ್ತು ಕನ್ನಡದಲ್ಲಿ ತಲಾ ಒಬ್ಬ ವಿದ್ಯಾರ್ಥಿ 100 ಅಂಕಗಳನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 594 ಅಂಕಗಳನ್ನು ಪಡೆದಿರುವ ಗೌತಮಿ ಜಿ. ನಾಯಕ್ ಕಾಲೇಜಿನ ಅಗ್ರ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ವಿಜ್ಞಾನ ವಿಭಾಗದಲ್ಲಿ ಪ್ರತೀಕ್ ಕೊಠಾರಿ 590 ಅಂಕಗಳನ್ನು ಪಡೆದು ಪ್ರಥಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಕಲ್ಯಾಣಪುರದಲ್ಲಿ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಾಚರಿಸುತ್ತಿರುವ ತ್ರಿಶಾ ಪ.ಪೂ ಕಾಲೇಜು ಮೂರನೇ ವರ್ಷದಲ್ಲೂ ಶೇ.100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದ ವೀಕ್ಷಿತ್ ಎಸ್. ಶೆಟ್ಟಿ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ಸ್ಥಾನ, ನವನೀತ್ ಪೈ 590 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ ಪಡೆದು ಸಂಸ್ಥೆಗೆ ಮತ್ತು ಹೆತ್ತವರಿಗೆ ಕೀರ್ತಿ ತಂದಿದ್ದಾರೆ ಹಾಗೂ ನಿನಾದ್. ಆರ್. ನಾಯ್ಕ್ 588‌, ಪೂಜಿತ ಶೆಣೈ 587, ಪಾವನಿ 580, ಮೇಘನಾ ಎಸ್. ಕೆ. 578 ಅಂಕಗಳನ್ನು ಗಳಿಸಿರುತ್ತಾರೆ. 24 ವಿದ್ಯಾರ್ಥಿಗಳು 95% ಕ್ಕಿಂತ ಅಧಿಕ, 77 ವಿದ್ಯಾರ್ಥಿಗಳು 90 ಶೇಕಡಾ ಕ್ಕಿಂತ ಅಧಿಕ, 108 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿದ್ದಾರೆ. 45 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಭೌತಶಾಸ್ತ್ರದಲ್ಲಿ 2 ವಿದ್ಯಾರ್ಥಿಗಳು, ಗಣಿತಶಾಸ್ತ್ರದಲ್ಲಿ9, ಗಣಕ ವಿಜ್ಞಾನದಲ್ಲಿ15, ಕನ್ನಡದಲ್ಲಿ 01, ಹಿಂದಿಯಲ್ಲಿ 01, ಸಂಸ್ಕೃತದಲ್ಲಿ 19 ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕ್ರಿಯೇಟಿವ್ ಶಿಕ್ಷಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಪಾಧ್ಯಕ್ಷ ಕಾರ್ಮಿಕ ಸಂಘಟನೆಗಳ ಮುಖಂಡ ಕೋಣಿ ವೆಂಕಟೇಶ ನಾಯಕ್ (74) ಗುರುವಾರ ನಿಧನರಾದರು. ತಾಲ್ಲೂಕಿನ ಕೋಣಿ ಗ್ರಾಮದವರಾದ ವೆಂಕಟೇಶ ನಾಯಕ್, ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದೇಹದಾನದ ಘೋಷಣೆ ಮಾಡಿದ್ದರಿಂದ ಅವರ ಮೃತದೇಹವನ್ನು ಕೆಎಂಸಿ ಆಸ್ಪತ್ರೆಗೆ ನೀಡಲಾಗುತ್ತಿದೆ. ವೆಂಕಟೇಶ ನಾಯಕ್ ಕಮ್ಯುನಿಸ್ಟ್ ಚಳವಳಿಗಾಗಿ ತಮ್ಮ ಜೀವನವನ್ನು ಮುಡುಪಾಗಿರಿಸಿದ್ದರು. ಉಡುಪಿ ಜಿಲ್ಲಾ ಸಿಪಿಐ (ಎಂ) ಕಾರ್ಯದರ್ಶಿ ಮಂಡಳಿಯ ಸದಸ್ಯರಾಗಿಯೂ ಕೆಲಸ ನಿರ್ವಹಿಸಿದ್ದರು. ವಿದ್ಯಾರ್ಥಿ ದಿಶೆಯಲ್ಲಿ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದರು. ಭೂ ಮಾಲೀಕರ ದೌರ್ಜನ್ಯಗಳ ವಿರುದ್ಧ ನಡೆದ ಹೋರಾಟದ ಸಂದರ್ಭದಲ್ಲಿ ಅವರ ಮೇಲೆ ಆ್ಯಸಿಡ್ ದಾಳಿ ನಡೆದಿತ್ತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಲಾರಾಧನೆ ಮೂಲಕ ಸಮಾಜಸೇವೆಗೆ ಮುನ್ನುಡಿ ಇಡುವ ಕಾರ್ಯ ನಿಜಕ್ಕೂ ಶ್ಲಾಘನಾರ್ಹ ಕಾರ್ಯ ಎಂದು ಕೋಟದ ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು ಅವರು ಬುಧವಾರ ಸಾಲಿಗ್ರಾಮದ ಪಾರಂಪಳ್ಳಿ ಪ್ರಗತಿಪರ ಕೃಷಿಕ ರವೀಂದ್ರ ಐತಾಳ್ ಮನೆಯಲ್ಲಿ ಹಮ್ಮಿಕೊಂಡ ಪಾವಂಜೆ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ದೇಗುಲದ ಯಕ್ಷಗಾನ ಮಂಡಳಿಯ ಯಕ್ಷಗಾನ ಬಯಲಾಟದ ಅಂಗವಾಗಿ ಸಮಾಜದ ವಿವಿಧ ಸ್ತರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಶೈಕ್ಷಣಿಕ ಸಂಸ್ಥೆಗಳಿಗೆ ನೆರವು ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ರವೀಂದ್ರ ಐತಾಳ್‌ರವರ ವಿನೂತನ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದರಲ್ಲದೆ ಯಕ್ಷಕಲಾವಿದರಿಗೆ ಸಹಾಯಮಾಡುವ ಮನಸ್ಥಿತಿ ಶ್ರೇಷ್ಠವಾದದ್ದು ಈ ನಿಟ್ಟಿನಲ್ಲಿ ಪಟ್ಲ ಫೌಂಡೇಶನ್ ಇಡೀ ಕಲಾವಿದರಿಗೆ ಶ್ರೀರಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಇದೇ ವೇಳೆ ಬಡಗಿನ ಶ್ರೇಷ್ಠ ಸ್ತ್ರೀವೇಷಧಾರಿ ಶಶಿಕಾಂತ್ ಶೆಟ್ಟಿ ಕಾರ್ಕಳ ದಂಪತಿಗಳನ್ನು ಸನ್ಮಾನಿಸಲಾಯಿತು. ಪತ್ರಕರ್ತ ರವೀಂದ್ರ ಕೋಟ, ಪವರ್ ಲಿಫ್ಟರ್ ಆದಿತ್ಯ ಸದಾನಂದ್, ಸ್ಥಳೀಯ ಕೃಷಿ ಕಾಯಕಜೀವಿಗಳನ್ನು ಅಭಿನಂದಿಸಲಾಯಿತು.…

Read More