Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಮ್‌ಜೆ ಇನ್ಸ್ಟಿಟ್ಯೂಶನ್ಸ್ ಮೂಡ್ಲಕಟ್ಟೆ ಇಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು‌ ಸ್ಪರ್ಧೆ ನವೋನ್ಮೇಶ 2025 ಇದರ ಸಮಾರೋಪ‌ ಸಮಾರಂಭ ತಾರಾ ಮೆರುಗಿನೊಂದಿಗೆ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸು ಫ್ರಮ್ ಸೋ ಖ್ಯಾತಿಯ ನಟ ಶನೀಲ್‌ ಗೌತಮ್ ಅವರು ಮಾತನಾಡಿ, ತಮ್ಮ ವಿಧ್ಯಾರ್ಥಿ ಜೀವನವನ್ನು ಮೆಲುಕು‌ಹಾಕುತ್ತ, ಶಿಕ್ಷಕರ ಮಾರ್ಗದರ್ಶನವನ್ನು ನಿರ್ಲಕ್ಷಿಸದೆ ಎಲ್ಲ ಕ್ಷೇತ್ರದಲ್ಲು ತಮ್ಮನ್ನು ತಾವು ತೊಡಗಿಸಿಕೊಳ್ಳಿ ಯಶಸ್ಸು ನಿಮ್ಮದಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಈ ಟಿವಿ ಎದೆ ತುಂಬಿ ಹಾಡಿದೆನು ಹಾಗೂ ಸರಿಗಮಪ ಖ್ಯಾತಿಯ ದೀಕ್ಷಾ ರಾಮಕೃಷ್ಣ ಅವರು ಮಾತನಾಡಿ, ಪಾಠದ ಜೊತೆಗೆ ಹವ್ಯಾಸಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಶಿಸಿದರು. ಸಭಾ ಕಾರ್ಯಕ್ರಮದ ಮೊದಲು ಇವರು ತಮ್ಮ ಸುಮಧುರ ಗಾಯನದ ಮೂಲಕ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿದ ಕುಂದಾಪುರ ಡಿವೈಎಸ್ಪಿ ಎಚ್ ಡಿ ಕುಲಕರ್ಣಿ ಅವರು ಮಾತನಾಡಿ, ಈ‌‌ ಸಂಸ್ಥೆಯಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ರೀಡೆ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರೊಂದಿಗೆ ಉತ್ತಮ ಸಾಧನೆ ಮಾಡಿದರೆ ಬದುಕನ್ನು ಕಟ್ಟಿಕೊಳ್ಳಬಹುದೆಂದು. ಪ್ರತಿ ಕ್ರೀಡೆಗಳನ್ನು ವೈಜ್ಞಾನಿಕ ಸೂತ್ರಗಳೊಂದಿಗೆ ಅಭ್ಯಾಸ ಮಾಡಿದರೆ ಗೆಲುವು ನಿಶ್ಚಿತ ಎಂದು ತೆಕ್ಕಟ್ಟೆ ಅಲ್ ಜಾಮಿಯಾ ಮಸ್ಜಿದ್ ಇದರ ಅಧ್ಯಕ್ಷರಾದ ಮಹ್ಮದ್ ಸಲಾಂ ಹೇಳಿದರು. ಅವರು ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಷನಲ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್‌ನ 20ನೇ ವಾರ್ಷಿಕ ಕ್ರೀಡೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾರದಾ ಕಾಲೇಜಿನ ದೈಹಿಕ ಶಿಕ್ಷಕರಾದ ಸೂರಜ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಇದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು. ಶರೀರವನ್ನು ಸಧೃಢಗೊಳಿಸಲು ಶಾರೀರಿಕ ವ್ಯಾಯಾಮ ಬಹು ಮುಖ್ಯ ಎಂದು ತಿಳಿಸಿದರು. ಕ್ರೀಡೆಯಲ್ಲಿ ಕಲೆ ಮತ್ತು ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಅಂಶಗಳು ಒಳಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಶ್ರೀ ಶಿರೂರು ಮಠದ ಪರ್ಯಾಯ ಸ್ವಾಗತ ಸಮಿತಿಯ ಕುಂದಾಪುರ ವಲಯದ ಪೂರ್ವಭಾವಿ ಸಭೆಯು ಇಲ್ಲಿನ ಕುಂಭಾಶಿ ಆನೆಗುಡ್ಡೆ ದೇವಸ್ಥಾನದ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ಸಭೆ ನೆರವೇರಿತು. ಸದ್ರಿ ಸಭೆಯಲ್ಲಿ ಶಾಸಕರು ಮಾತನಾಡಿ, ಕುಂದಾಪುರ ವಲಯದಿಂದ ಪರ್ಯಾಯ ಮಹೋತ್ಸವದ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಿ ಶಾಸಕರು ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನ ಸ್ವಾಗತ ಸಮಿತಿಯ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಪರ್ಯಾಯ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಹಾಗೂ ಹೊರೆಕಾಣಿಕೆ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಯಾಗುವಂತೆ ಸಹಕಾರ ನೀಡಲು ವಿನಂತಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಆನೆಗುಡ್ಡೆ ಕ್ಷೇತ್ರದ ಧರ್ಮದರ್ಶಿಗಳಾದ ರಮಣ ಉಪಾಧ್ಯ, ವಿಶ್ರಾಂತ ಅಧ್ಯಕ್ಷ ಸೂರ್ಯನಾರಾಯಣ ಉಪಾಧ್ಯ ಪ್ರಚಾರ ಸಮತಿಯ ಸಹಸಂಚಾಲಕ ಮಧುಕರ್ ಮುದ್ರಾಡಿ, ಕಾರ್ಯದರ್ಶಿ ಮೋಹನ್ ಭಟ್, ಜೊತೆ ಕಾರ್ಯದರ್ಶಿಗಳಾದ ಶ್ರೀಕಾಂತ ನಾಯಕ್ ಕಾಪು ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿದ್ದಿವಿನಾಯಕ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕೋಣಿ ಎಂಬಲ್ಲಿ ನಡೆದಿದೆ. ಸತೀಶ್ ಪೂಜಾರಿ ಎಂಬವರ ಪುತ್ರ, ಮನೀಷ (14) ಮೃತಪಟ್ಟ ಬಾಲಕ. ನ.6ರಂದು ಸಂಜೆ ಶಾಲೆಯಿಂದ ಮನೆಗೆ ಬಂದ ಮನೀಷ ಬಳಿಕ ನಾಪತ್ತೆಯಾಗಿದ್ದ. ಮನೆ ಸಮೀಪದ ಬಾವಿಯಲ್ಲಿ ಶಬ್ದ ಕೇಳಿಸಿದ್ದು, ನೋಡಿದಾಗ ಮನೀಷ ಕೆರೆಗೆ ಬಿದ್ದಿರುವುದು ತಿಳಿದು ಬಂದಿದೆ. ತಕ್ಷಣ ಅಗ್ನಿಶಾಮಕದಳದವರು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಬಾಲಕ ಮೃತಪಟ್ಟಿದ್ದ. ಬಾವಿ ದಂಡೆ ಮೇಲೆ ಕುಳಿತಿದ್ದ ಮನೀಷ ಆಕಸ್ಮಿಕವಾಗಿ ಬಿದ್ದನೇ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘದಿಂದ ಆರಂಭಗೊಂಡ ಕ್ಷೀರ ಸಂಜೀವಿನಿಯಿಂದ ಹೈನುಗಾರಿಕೆ ಹೆಚ್ಚಿನ ಬಲ ಸಿಗಲಿದೆ ಎಂದು ಕೆ.ಎಂ.ಎಫ್ ಅಧ್ಯಕ್ಷ ಕೊಡವೂರು ರವಿರಾಜ್ ಹೆಗ್ಡೆ ಹೇಳಿದರು. ಅವರು ಶುಕ್ರವಾರ ಕೋಟ ಸಹಕಾರಿ ವ್ಯವಸಾಯಕ ಸಂಘದ ಪ್ರಾಂಗಣದಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ವಿನೂತನ ಕ್ಷೀರ ಸಂಜೀವಿನಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಹೈನುಗಾರಿಕೆ ಕರಾವಳಿ ಭಾಗದಲ್ಲಿ ಕ್ಷೀಣಿಸುತ್ತಿರುವ ಕಾಲಘಟ್ಟದಲ್ಲಿ ಈ ಯೋಜನೆ ತುಂಬಾ ಸಹಕಾರಿಯಾಗಲಿದೆ. ಇದೊಂದು ಸಹಕಾರಿ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆಯಲಿದೆ ಎಂದರು. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದ ನಿರ್ದೇಶಕ ಐಕಳದ ಬಾವ ದೇವಿ ಪ್ರಸಾದ ಶೆಟ್ಟಿ ಮಾತನಾಡಿ, ಸಹಕಾರಿ ಚರಿತ್ರೆಯಲ್ಲಿ ಕೋಟ ಸಹಕಾರಿ ಸಂಘ ಹೊಸ ಹೊಸ ಯೋಜನೆಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿದೆ,ಹೈನುಗಾರಿಕೆ ಇಂದು ಉದ್ಯಮ ರೀತಿಯಲ್ಲಿ ಪರಿವರ್ತನೆಗೊಳ್ಳುತ್ತಿದೆ, ಹಾಲಿಗೆ ಕನಿಷ್ಟಪಕ್ಷ ಲೀ.50ರೂ ಸಿಕ್ಕರೆ ಹೈನುಗಾರಿಕೆಗೆ ಮತ್ತಷ್ಟು ಬಲ ಸಿಗಲಿದೆ ಎಂದು ಕೋಟ ಸಂಘದ ಈ ಯೋಜನೆಯನ್ನು ಕೊಂಡಾಡಿದರು. ಪ್ರಾರಂಭದಲ್ಲಿ ತಮಿಳುನಾಡಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮರವಂತೆಯ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಬೈಂದೂರು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆಯ ಹತ್ತು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕೆ ಆಯ್ಕೆಯಾಗಿದ್ದಾರೆ. ಶೀವತ್ಸ ಡಿಸ್ಕಸ್ ತ್ರೊನಲ್ಲಿ ಪ್ರಥಮ, ಗುಂಡು ಎಸೆತ ದ್ವಿತೀಯ, ಸಾತ್ವಿಕ ಎಂಬತ್ತು ಮೀಟರ್ ಹರ್ಡಲ್ಸ್ ನಲ್ಲಿ ಪ್ರಥಮ, ಶಿವರಾಜ ಮೂರು ಸಾವಿರ ಮೀಟರ್ ಓಟದಲ್ಲಿ ಪ್ರಥಮ, ಶಾಹಿದ್ ನೂರು ಮೀಟರ್ ಓಟದಲ್ಲಿ ದ್ವಿತೀಯ, ಬಿಲಾಲ್ ಹ್ಯಾಮರ್ ಎಸೆತದಲ್ಲಿ ಪ್ರಥಮ, ಸಾಕೇತ ಐದು ಕಿಲೋಮೀಟರ್ ನಡಿಗೆ ಪ್ರಥಮ, ಆರ್ಚನಾ ಮೂರು ಸಾವಿರ ಮೀಟರ್ ಓಟ ಪ್ರಥಮ, ಮೇಘನಾ ನಾಲ್ಕು ನೂರು ಮೀಟರ್ ರಿಲೇ ಪ್ರಥಮ, ರಿತ್ವಿ ನಾಲ್ಕು ನೂರು ಮೀಟರ್ ರಿಲೇ ಪ್ರಥಮ, ದೀಪಿಕಾ ನಾಲ್ಕು ನೂರು ಮೀಟರ್ ರಿಲೇ ಪ್ರಥಮ, ಅನ್ವಿತಾ ನಾಲ್ಕು ನೂರು ಮೀಟರ್ ರಿಲೇ ತ್ರತೀಯ, ಶಿವರಾಜ ನಾಲ್ಕು ನೂರು ಮೀಟರ್ ರಿಲೇ ತೃತೀಯ, ಸುಜನ ನಾಲ್ಕು ನೂರು ಮೀಟರ್ ರಿಲೇ ತೃತೀಯ, ಆರಾನ್ ನಾಲ್ಕು ನೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ಸುಮಂತ್ ಕುಮಾರ್ ಬಿ. ಶೆಟ್ಟಿ, ರವಿಶಂಕರ್, ರಜತ್ ಭಟ್, ಚಂದನ್, ಸತ್ಯರಾಜ್, ಯಶಸ್ವಿನಿ ಹೆಚ್., ರಿಯಾನ ಕ್ರಿಸ್ಟಲ್ ಪಿಂಟೋ, ಕೃತಿ, ರಾಘವ, ಸುಮೇದಾ, ರಚನಾ ಡಿ ಭಟ್, ಸರ್ವೇಶ್, ನಿಖಿತಾ ಗೌಡ ಅವರು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿರುತ್ತಾರೆ.   ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಚಲವಾದ ಛಲ, ಆತ್ಮ ವಿಶ್ವಾಸವಿದ್ದರೆ ಒಬ್ಬ ಕ್ರೀಡಾಪಟು ಅತ್ಯುತ್ತಮ ಸಾಧನೆ ಮಾಡಿ ಕ್ರೀಡೆಗಳಿಂದ ಬದುಕು ಕಟ್ಟಿಕೊಳ್ಳುಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಘ್ರನ್ಮೇಶ್ ಅಭಿಪ್ರಾಯಿಸಿದರು. ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ಹೆಮ್ಮಾಡಿಯ ಜನತಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಬಾಕ್ಸಿoಗ್ ಪಂದ್ಯಾಟದ ಮುಖ್ಯ ಅಭ್ಯಾಗತರಾಗಿ ಆಗಮಿಸಿ, ವಿದ್ಯಾರ್ಥಿಗಳು ಕ್ರೀಡೆಯಿಂದ ಆರೋಗ್ಯವಂತರಾಗಿ ಎಂದು ಶುಭ ಹಾರೈಸಿದರು. ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೈಹಿಕ ಬಲವರ್ಧನೆ ಗಾಗಿ ಕ್ರೀಡೆಗಳ ಪಾತ್ರ ಅತ್ಯಮೂಲ್ಯವಾದುದು. ಏಕತೆ ಮತ್ತು ಐಕ್ಯತೆ ಸಾರಿ ನಾವೆಲ್ಲಾ ಒಂದೆ ಎಂಬ ಭಾವನೆ ಮೂಡಿಸುತ್ತದೆ.ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ, ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ 17ರ ವಯೋಮಿತಿಯ ಬಾಲಕ ಬಾಲಕಿಯರ ಕರ್ನಾಟಕ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯು ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. 17ರ ವಯೋಮಿತಿಯ ಹುಡುಗಿಯರ ವಿಭಾಗದಲ್ಲಿ ಪಾವನಿ ಆರ್. ದ್ವಿತೀಯ ಸ್ಥಾನ, ಪ್ರಕೃತಿ ಪಿ. ಶೆಟ್ಟಿ ತೃತೀಯ ಸ್ಥಾನ, ಹುಡುಗರ ವಿಭಾಗದಲ್ಲಿ ವೈಭವ್ ಸಂಗನಭ ಶೆಟ್ಟರ್ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ತಿಂಗಳು ನವೆಂಬರ್ 25, 26 ರಂದು ತ್ರಿಪುರದಲ್ಲಿ ನಡೆಯುವ ರಾಷ್ಟ್ರ ಮಟ್ಟದಲ್ಲಿ ತ್ರಿವಳಿ ಪ್ರಶಸ್ತಿ ವಿಜೇತರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಅವರು ಕಶ್ಚಿ ಚೆಸ್ ಸ್ಕೂಲ್ ಕುಂದಾಪುರದಲ್ಲಿ ಚೆಸ್ ತರಬೇತಿ ಪಡೆದಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗ್ರಾಮೀಣ ಒಳಭಾಗದಲ್ಲಿ ಆರೋಗ್ಯ ಕೇಂದ್ರಗಳ ಅಗತ್ಯತೆ ಇದ್ದು ಈ ನಿಟ್ಟಿನಲ್ಲಿ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿವೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೋಟತಟ್ಟು ಪಡುಕರೆಯಲ್ಲಿ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಆಯುಷ್ಮಾನ್ ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸಗೈದು ಮಾತನಾಡಿದರು. ಜನಸಾಮಾನ್ಯರ ಆರೋಗ್ಯದ ಬಗ್ಗೆ ಸರಕಾರ ಸದಾ ಕಾಳಜಿ ವಹಿಸುತ್ತಿದ್ದು, ಸ್ಥಳೀಯಾಡಳಿತ ಮುತುವರ್ಜಿಯಲ್ಲಿ ಉಪಕೇಂದ್ರ ನಿರ್ವಹಣೆ ನಮ್ಮ ಕ್ಲಿನಿಕ್ ಆಗಿ ಪರಿವರ್ತನೆಗೊಳ್ಳಲಿ ಎಂದು ಹಾರೈಸಿದರು. ಕೋಟತಟ್ಟು ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ್ ಸಿ. ಕುಂದರ್, ಮನೋವೈದ್ಯ ಡಾ. ಪ್ರಕಾಶ್ ಸಿ. ತೋಳಾರ್, ಕೋಟ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ, ಕೋಟತಟ್ಟು ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ ಪೂಜಾರಿ, ಸ್ಥಳೀಯರಾದ ಅಬ್ದುಲ್ ಖಾದರ್, ಪಂಚಾಯತ್ ಸದಸ್ಯರು,…

Read More