ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ಇವರ ನೇತೃತ್ವದಲ್ಲಿ ಕಲ್ಪತರು ಸ್ವ ಸಹಾಯ ಸಂಘಗಳಿಗೆ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ರುಡ್ಸೆಟ್ ಸಂಸ್ಥೆ ಬ್ರಹ್ಮಾವರ ಇದರ ನಿರ್ದೇಶಕ ಡಾ. ಬೊಮ್ಮಯ್ಯ ರುಡ್ಸೆಟ್ ಸಂಸ್ಥೆ ಅಲ್ಲಿ ದೊರೆಯುವ ತರಬೇತಿ ಹಾಗೂ ಉಪಯೋಗದ ಬಗ್ಗೆ ಮಾಹಿತಿ ತಿಳಿಸಿದರು. ರಾಜ್ಯ ಗುಪ್ತಚರ ಉಡುಪಿ ವಿಭಾಗದ ಮಹಿಳಾ ಪೋಲಿಸ್ ಕಾನ್ಸ್ಟೇಬಲ್ ಅಪೂರ್ವ ಅವಿನಾಶ್ ಪೂಜಾರಿ ಪೊಲೀಸ್ ಇಲಾಖೆ ಬಗ್ಗೆ ಅದರ ಕಾನೂನು ವ್ಯವಸ್ಥೆ ಬಗ್ಗೆ ಮಾಹಿತಿ ಒದಗಿಸಿದರು. ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಲೀಲಾವತಿ ಗಂಗಾಧರ್ ಪೂಜಾರಿ ಹಾಗೂ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ರವಿಕಿರಣ್ ಪೂಜಾರಿ ಉಪಸ್ಥಿತರಿದ್ದರು. ಸಂಘದ ಉಷಾ ಗಣೇಶ್ ಪೂಜಾರಿ ಸ್ವಾಗತಿಸಿ, ಸೀಮಾ ವಿಜಯ್ ಪೂಜಾರಿ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸಂಘಟಕ ಸುರೇಶ್ ಪಾಂಡೇಶ್ವರ ಕಾರ್ಯಕ್ರಮ ಸಂಯೋಜಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಶಾಸಕರ ಪರಿಕಲ್ಪನೆಯ ಬೈಂದೂರು ಉತ್ಸದ ಅಂಗವಾಗಿ ಪ್ರತಿ ಗ್ರಾಮ ಪಂಚಾಯತ್ನಲ್ಲಿಯೂ ಕೂಡ ಗ್ರಾಮೋತ್ಸವ ಆಯೋಜಿಸಿದ್ದು, ಇದರ ಮೂಲಕ ವಿವಿಧ ಇಲಾಖೆಗಳ ಯೋಜನೆಗಳ ಮಾಹಿತಿ ಮತ್ತು ಅನುಕೂಲಗಳನ್ನು ನೇರವಾಗಿ ಪಡೆಯುವ ಅವಕಾಶ ದೊರಕಿದಂತಾಗಿದೆ. ಈ ಉತ್ಸವ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳ್ಳಲಿ ಹಾಗೂ ಈ ಉತ್ಸವಗಳು ಮನೋರಂಜನೆಯ ಜೊತೆಗೆ ಬೈಂದೂರು ಅಭಿವೃದ್ಧಿಗೆ ಮುನ್ನುಡಿಯಾಗಲಿ ಎಂದ ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಜಯಾನಂದ ಹೋಬಳೀದಾರ್ ಹೇಳಿದರು. ಅವರು ತಾಲೂಕಿನ ಪಡುವರಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಆರೋಗ್ಯ, ಕೃಷಿ, ಪಶು ಸಂಗೋಪನಾ, ಅರಣ್ಯ, ಮೆಸ್ಕಾಂ, ಆಯುರ್ವೇದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ತೋಟಗಾರಿಕೆ ಇಲಾಖೆ ಹಾಗೂ ಕ್ಲೀನ್ ಕಿನಾರಾ ಸಹಭಾಗಿತ್ವದಲ್ಲಿ ಸೋಮವಾರ ಕೋಟೆಬಾಗಿಲು ಸ.ಹಿ.ಪ್ರಾ ಶಾಲಾ ಆವರಣದಲ್ಲಿ ನಡೆದ ಗ್ರಾಮೋತ್ಸವ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಪಪಂ ನಾಮ ನಿರ್ದೇಶಿತ ಸದಸ್ಯ ಸದಾಶಿವ ಡಿ. ಪಡುವರಿ ಅಧ್ಯಕ್ಷತೆ ವಹಿಸಿದ್ದರು. ಉಪ ತಹಶೀಲ್ದಾರ್ ಲತಾ ಶೆಟ್ಟಿ, ಟಿಎಚ್ಒ ಡಾ. ಪ್ರೇಮಾನಂದ, ಕೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ) ಯು ಕಾರ್ಕಳದ ಸರಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಅಡಿಯಲ್ಲಿ ಸಿ.ಎನ್.ಸಿ ಟರ್ನಿಂಗ್ ಆಪರೇಷನ್, ಸಿ.ಎನ್.ಸಿ ಮಿಲ್ಲಿಂಗ್ ಆಪರೇಷನ್ ಹಾಗೂ ಫೀಲ್ಡ್ ಟೆಕ್ನೀಷನ್ ನೆಟ್ವರ್ಕ್ ಸ್ಟೋರೇಜ್ ಒಳಗೊಂಡಂತೆ ಅಲ್ಪಾವಧಿ ಕೋರ್ಸುಗಳಲ್ಲಿ ಉಚಿತ ಕೌಶಲ್ಯ ತರಬೇತಿ ನೀಡುತ್ತಿದ್ದು, ಐ.ಟಿ.ಐ., ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅರ್ಹ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂಖ್ಯೆ: 08258-200451, 8277741731 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆ ಕ್ಷೇತ್ರದ ಜನರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ತಲುಪಿಸಿ, ಇನ್ನಷ್ಟು ಯೋಜನೆಗಳ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ವಿಶೇಷ ಅಭಿವೃದ್ಧಿಯ ಪರಿಕಲ್ಪನೆಯನ್ನು ಹೊಂದಿದ್ದು, ಪ್ರತೀ ಗ್ರಾಮಗಳಲ್ಲಿ ಉತ್ಸವದ ಮೂಲಕ ಗ್ರಾಮದ ಭೌತಿಕ ಬೆಳವಣಿಗೆ ಜತೆಗೆ ಸಂಜೀವಿನಿ ಸಂಘಗಳಿಗೆ ಸ್ವಾವಲಂಬನೆ ನೀಡಬೇಕು ಹಾಗೂ ಕ್ಷೇತ್ರದ ಪ್ರತಿಯೊಬ್ಬರೂ ಉತ್ಸವದ ಭಾಗವಾಗಬೇಕು ಎಂಬ ಉದ್ದೇಶದಿಂದ ಗ್ರಾಮೋತ್ಸವಗಳನ್ನು ಆಯೋಜಿಸಿದ್ದಾರೆ. ಈ ಅಭಿಯಾನ ದೇಶದಲ್ಲಿ ಪ್ರಥಮ ಎಂದು ಕಿರಿಮಂಜೇಶ್ವರ ಗ್ರಾಪಂ ಅಧ್ಯಕ್ಷ ಶೇಖರ ಖಾರ್ವಿ ಹೇಳಿದರು. ಅವರು ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಆರೋಗ್ಯ, ಕೃಷಿ, ಪಶು ಸಂಗೋಪನಾ, ಅರಣ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ತೋಟಗಾರಿಕೆ ಹಾಗೂ ಬ್ಯಾಂಕಿಂಗ್ ಇಲಾಖೆಯ ಸಹಭಾಗಿತ್ವದಲ್ಲಿ ಸೋಮವಾರ ನಡೆದ ಕಿರಿಮಂಜೇಶ್ವರ ಗ್ರಾಮೋತ್ಸವ ಉದ್ಘಾಟಿಸಿ ಮಾತನಾಡಿದರು. ಕ್ರೀಡಾ ಸಾಧಕರು ಮತ್ತು ಆರು ವಿಕಲಚೇತನರನ್ನು ಸನ್ಮಾನಿಸಲಾಯಿತು. ಪುರುಷ ಹಾಗೂ ಮಹಿಳೆಯರಿಗಾಗಿ ನಡೆದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನೋಡೆಲ್ ಅಧಿಕಾರಿ ರಮೇಶ ಕುಲಾಲ್, ಬೈಂದೂರು ಉತ್ಸವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ರಸ್ತೆಯ ಬಾಳಿಕೆರೆ ಸಮೀಪ ಶ್ರೀ ಸ್ವಾಮಿ ಜಾಡಿ ಹೈಗುಳಿ ದೇವಸ್ಥಾನದ ಜಾಡಿ ರಸ್ತೆಯ ಬಳಿ ಮಂಗಳವಾರ ನಡೆದ ಕಾರು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕ ಬುಧವಾರ ರಾತ್ರಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ಗುಡ್ಡಮ್ಮಾಡಿಯ ರಾಘವೇಂದ್ರ ಹಾಗೂ ನಾಗರತ್ನ ದಂಪತಿಯ ಪುತ್ರ ದರ್ಶಿತ್ (3) ಮೃತ ಬಾಲಕ. ಈತ ತಂದೆ ತಾಯಿ ಜತೆ ಬೈಕಿನಲ್ಲಿ ಕೊಲ್ಲೂರು ಕಡೆಯಿಂದ ಹೆಮ್ಮಾಡಿ ಕಡೆಗೆ ಬರುತ್ತಿದ್ದಾಗ ಹೆಮ್ಮಾಡಿ ಕಡೆಯಿಂದ ಜೋಶಿ ವಿ. ತೋಮಸ್ ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿಯಾಗಿತ್ತು. ಪರಿಣಾಮ ಬೈಕ್ ಸವಾರ ರಾಘವೇಂದ್ರ, ನಾಗರತ್ನ ಹಾಗೂ ದರ್ಶಿತ್ ಗಾಯಗೊಂಡಿದ್ದರು. ಮೂವರನ್ನೂ ಆಸ್ಪತ್ರೆಗೆ ಸೇರಿಸಿದ್ದು, ದರ್ಶಿತ್ ಮೃತಪಟ್ಟಿದ್ದಾನೆ. ರಾಘವೆಂದ್ರ ಹಾಗೂ ನಾಗರತ್ನ ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸುಮಾರು 25ಕ್ಕೂ ಹೆಚ್ಚು ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಕೆ. ಮನೋಹರ ಪೈ ( 81 ವರ್ಷ) ಅವರು ಶುಕ್ರವಾರ ದೈವಾಧೀನರಾದರು. ಕಾಲೇಜಿನ ಆಡಳಿತ ಮಂಡಳಿ ಮತ್ತು ವಿಶ್ವಸ್ಥ ಮಂಡಳಿಯವರು ಮತ್ತು ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಶೃಂದ್ಧಾಂಜಲಿ ಸಭೆ ನಡೆಸಿ ಪುಷ್ಪ ನಮನ ಸಲ್ಲಿಸಿ ಅವರ ಆತ್ಮಕ್ಕೆ ಶೃದ್ಧಾಂಜಲಿ ಕೋರಿದರು. ಕಾಲೇಜಿನಲ್ಲಿ 1973ರಲ್ಲಿ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 2003ರಲ್ಲಿ ನಿವೃತ್ತರಾದ ಡಾ. ಕೆ. ಮನೋಹರ ಪೈ ಅವರಿಗೆ ಸಸ್ಯಶಾಸ್ತ್ರ ಕೇವಲ ವೃತ್ತಿ ವಿಷಯವಾಗಿರದೆ ಅವರ ಬದುಕಿನ ಜೀವಾಳವಾಗಿತ್ತು. ಸಸ್ಯ ಪ್ರಬೇಧಗಳ ಬಗ್ಗೆ ಅವರಿಗೆ ಅಪಾರವಾದ ಜ್ಞಾನವಿತ್ತು. ಅಲ್ಲದೇ ಕ್ರೀಡೆ, ಬರವಣಿಗೆ, ಸಂಶೋಧನೆ ಮತ್ತು ಛಾಯಾಗ್ರಹಣದ ಬಗ್ಗೆ ವಿಶೇಷ ಆಸಕ್ತಿ ಇತ್ತು. ಕಾಲೇಜಿನ ಶಿಕ್ಷಕ ಮತ್ತು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಪ್ರಾಧ್ಯಾಪಕ ಎನಿಸಿಕೊಂಡಿದ್ದರು. ಸಂತಾಪ ಸಭೆಯಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ ಮಾತನಾಡಿ, ಮನೋಹರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಯಕ್ಷಗಾನ ತರಬೇತಿ ತರಗತಿ ಮುಗಿಸಿಕೊಂಡು ಆಟೋ ರಿಕ್ಷಾದಲ್ಲಿ ಧ್ರುವರಾಜ್ (11) ಮನೆಗೆ ವಾಪಾಸಾಗುತ್ತಿರುವಾಗ, ಸೌಡ ಬಳಿ ಆಟೋ ಚಾಲಕ ಅತೀ ವೇಗವಾಗಿ ಚಲಾಯಿಸಿದ್ದರ ಪರಿಣಾಮ ಆಟೋ ಮಗುಚಿ ಬಿದ್ದ ಘಟನೆ ನಡೆದಿದೆ. ಆಟೋದಲ್ಲಿದ್ದ ಧ್ರುವರಾಜ್ ಗಂಭೀರವಾಗಿ ಗಾಯಗೊಂಡ ಪರಿಣಾಮ, ಅವನನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ತು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಟೋ ಚಾಲಕ ಬಾಲಕನ ಚಿಕಿತ್ಸೆಯ ವೆಚ್ಚ ಭರಿಸುವ ಭರವಸೆ ನೀಡಿದ, ಇಲ್ಲಿಯ ತನಕ ಚಿಕಿತ್ಸೆಗೆ ಹಣ ನೀಡದೆ ಇರುವುದರಿಂದ ಧ್ರುವರಾಜ್ ತಾಯಿ ಸೌಡ ನಾಗರತ್ನ ಎನ್. ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಾವುದೇ ಧಾರ್ಮಿಕ ಕ್ಷೇತ್ರದ ವಾರ್ಷಿಕ ಬ್ರಹ್ಮ ರಥೋತ್ಸವದ ಪೂರ್ವಭಾವಿ ಸಿದ್ಧತೆಗಳಲ್ಲಿ ಪ್ರಮುಖವಾದದ್ದು ರಥವನ್ನು ಸಜ್ಜುಗೊಳಿಸುವ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಸಾಲಿಗ್ರಾಮದಲ್ಲಿ ಶ್ರೀ ನಾಗದೇವರಿಗೆ ಪವನಾಭಿಷೇಕ, ಶ್ರೀ ನರಸಿಂಹ ದೇವರಿಗೆ ಪಂಚಾಮೃತಾಭಿಷೇಕ, ಹರಿವಾಣ ನೈವೇದ್ಯ ಮುಂತಾದ ಸೇವೆಗಳ ನಂತರ ಸಾಮೂಹಿಕ ಫಲ ಪ್ರಾರ್ಥನೆಯೊಂದಿಗೆ ರಥಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ರಥಾರಂಭ ಕಾರ್ಯಕ್ಕೆ ಸಡಗರದಿಂದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಎಸ್.ಕಾರಂತ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಕೂಟ ಮಹಾ ಜಗತ್ತಿನ ಕೇಂದ್ರ ಸಂಸ್ಥೆಯ ಅಧ್ಯಕ್ಷ ಸತೀಶ ಹಂದೆ, ಗ್ರಾಮ ಮೊಕ್ತೇಸರ ವೃಂದದ ಮಹಾಬಲ ಹೇರ್ಳೆ, ಆನಂದರಾಮ ಹೇರ್ಳೆ, ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ,ವಾಸುಪಾಧ್ಯ, ಶ್ರೀನಿವಾಸ ಉಪಾಧ್ಯ, ವಿ.ಜಿ.ಮಯ್ಯ,ಅರ್ಚಕ ಜನಾರ್ದನ ಅಡಿಗ, ನಾಗಭೂಷಣ ಹೆಬ್ಬಾರ, ದೇವಕಾರಿ ರಘರಾಮ ಹೆಬ್ಬಾರ, ಕಚೇರಿ ಪ್ರಬಂಧಕ ನಾಗರಾಜ ಹಂದೆ, ಸಹಾಯಕ ಪ್ರಬಂಧಕ ಗಣೇಶ ಭಟ್ಟ, ಪ್ರಮುಖ ಬಾಣಸಿಗ ಸುಬ್ರಹ್ಮಣ್ಯ ಐತಾಳ, ಸಿಬ್ಬಂದಿ ಅಖಿಲೇಶ, ದೇವಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಶೂನ್ಯ ಸಹಿಷ್ಣುತೆ ಹೊಂದಿರುವ ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತ್ಗಳನ್ನು ಗುರುತಿಸಿ, ಉಡುಪಿ ಜಿಲ್ಲೆಯಲ್ಲಿ ಒಂದು ಗ್ರಾಮ ಪಂಚಾಯತಿಗೆ ಪ್ರಶಸ್ತಿ ರೂ. 25,000 ಗಳನ್ನು ನೀಡಲು ಆದೇಶಿಸಿದ್ದು, ಅದರಂತೆ 2024-25ನೇ ಸಾಲಿನಲ್ಲಿ ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್ಗಳಿಗೆ ಪ್ರಶಸ್ತಿ ನೀಡುವ ಸಲುವಾಗಿ ನಿಗಧಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತಾವನೆಗಳನ್ನು ಸಲ್ಲಿಸಲು ಜನವರಿ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574964 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 2026ನೇ ಸಾಲಿನ ಶ್ರೀ ಗುರು ನರಸಿಂಹ ದೇವರ ಜಾತ್ರಾ ಮಹೋತ್ಸವವು ಜನವರಿ 16ರಿಂದ ನಡೆಯಲಿದ್ದು, ಸಾಲಿಗ್ರಾಮ ರಥಬೀದಿ ಹೊರತುಪಡಿಸಿ ಉಳಿದ ಖಾಸಗಿ, ಎನ್. ಹೆಚ್ ಒಳಪೇಟೆ, ಸರ್ವೀಸ್ ರಸ್ತೆ, ರಥಬೀದಿ ಸೇರಿದಂತೆ ಇತರೇ ಸರ್ಕಾರಿ ಸ್ಥಳಗಳಲ್ಲಿ ಜಾತ್ರಾ ಪ್ರಯುಕ್ತ ತಾತ್ಕಾಲಿಕವಾಗಿ ವ್ಯಾಪಾರ ನಡೆಸುವವರು ಜಾತ್ರೆ ಪ್ರಾರಂಭವಾಗುವ ಮೂರು ದಿನದ ಮುಂಚಿತವಾಗಿ ಪಟ್ಟಣ ಪಂಚಾಯತ್ ಕಚೇರಿಗೆ ಭೇಟಿ ನೀಡಿ, ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಕಡ್ಡಾಯವಾಗಿ ಉದ್ಯಮದಾರರ ಭಾವಚಿತ್ರ, ಆಧಾರ್ ಕಾರ್ಡ್, ಪಾನ್ಕಾರ್ಡ್ ಅಥವಾ ರೇಷನ್ ಕಾರ್ಡ್ ನಕಲು ಪ್ರತಿ ನೀಡಿ, ಪಟ್ಟಣ ಪಂಚಾಯತ್ ವಿಧಿಸುವ ನಿಗಧಿತ ಶುಲ್ಕ ಪಾವತಿಸಿ, ನಂತರ ಪಟ್ಟಣ ಪಂಚಾಯತ್ ಗುರುತಿಸಿದ ಸ್ಥಳಗಳಲ್ಲಿ ವ್ಯಾಪಾರ ನಡೆಸಬಹುದಾಗಿದೆ. ರಥಬೀದಿ ಹಾಗೂ ಖಾಸಗಿ ಜಾಗದಲ್ಲಿ ವ್ಯಾಪಾರ ನಡೆಸುವವರು ಪಟ್ಟಣ ಪಂಚಾಯತ್ ನಿಗಧಿಪಡಿಸಿರುವ ಘನತ್ಯಾಜ್ಯ ಶುಲ್ಕವನ್ನು ಪಾವತಿಸಬೇಕು ಹಾಗೂ ಸರಕಾರದಿಂದ ನಿಷೇಧಿಸಿರುವ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ವ್ಯಾಪಾರಸ್ಥರು ಉದ್ಯಮದಲ್ಲಿ ಬಳಕೆ…
