ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪಡೆಯಲು ಇಚ್ಚಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬಹುದಾಗಿದೆ. ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ ಪೋಷಕರನ್ನು ಕಳೆದುಕೊಂಡ ಪಾಲನೆ, ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ವತಿಯಿಂದ ಗೋವಾ ಮತ್ತು ಬೆಂಗಳೂರು ಮೂಲದ ಇಬ್ಬರು ದಂಪತಿಗಳಿಗೆ ಮಕ್ಕಳನ್ನು ಕಾನೂನು ಬದ್ಧವಾಗಿ ನೀಡುವ ಮೂಲಕ ದತ್ತು ಆದೇಶವನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023 ನೇ ಕ್ಯಾಲೆಂಡರ್ ವರ್ಷದಲ್ಲಿ 2023 ರ ಜನವರಿ 01 ರಿಂದ ಡಿಸೆಂಬರ್ 31 ರ ಅವಧಿಯಲ್ಲಿ ಅಂತ ರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ತಮ್ಮ ಪ್ರಸ್ತಾವನೆಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಹಾಗೂ ಪ್ರಾಧಿಕಾರ ಸೂಚಿಸಿರುವ ವೇಗಮಿತಿಯಲ್ಲಿ ವಾಹನಗಳನ್ನು ಚಲಾಯಿಸಿದಲ್ಲಿ ಮಾತ್ರ ಸುಗಮ ಸಂಚಾರ ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಅವೈಜ್ಞಾನಿಕವಾಗಿ ಕೈಗೊಳ್ಳದೇ ವೈಜ್ಞಾನಿಕವಾಗಿ ನಿರ್ಮಾಣ , ಅವುಗಳ ನಿರ್ವಹಣೆ ಮಾಡಿ ಸುವ್ಯವಸ್ಥಿತವಾಗಿ ಇಟ್ಟಾಗ ಮಾತ್ರ ಸಾರ್ವಜನಿಕ ವಾಹನಗಳು ಸುಗಮವಾಗಿ ಸಂಚರಿಸಲು ಸಾಧ್ಯವಾಗುತ್ತದೆ. ಇದಕ್ಕೆ ಅಧಿಕಾರಿಗಳು ಒತ್ತು ನೀಡಿ, ಜಿಲ್ಲೆಯಲ್ಲಿ ಉಂಟಾಗುತ್ತಿರುವ ಅಪಘಾತ ಗಳ ಪ್ರಮಾಣವನ್ನು ಇಳಿಕೆಯಾಗುವಂತೆ ನೋಡಿಕೊಳ್ಳಬೇಕು ಎಂದರು. ಉಡುಪಿ ಜಿಲ್ಲೆಯಲ್ಲಿ ಕಳೆದ 3 ವರ್ಷಗಳಲ್ಲಿ ವರದಿಯಾದ ರಸ್ತೆ ಅಪಘಾತ ಗಳನ್ನು ಆಧರಿಸಿ ರಾಷ್ಟ್ರೀಯ ಹೆದ್ದಾರಿಗಳ ಸ್ಥಳಗಳಲ್ಲಿ ಅಪಘಾತವಾಗುವ ಕಪ್ಪುಚುಕ್ಕೆ 20 ಸ್ಥಳಗಳನ್ನು ಗುರುತಿಸಲಾಗಿದೆ. ಕಳೆದ ಸಭೆಯಲ್ಲಿ ಸಂಬಂಧಪಟ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವವು ರಾಮಕೃಷ್ಣ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ದಂತ ವೈದ್ಯೆ ಪ್ರೀತಿ ನಾವಡ ತಮ್ಮ ಮಕ್ಕಳ ಹಕ್ಕುಗಳ ಸುರಕ್ಷತೆಯ ಬಗ್ಗೆ ತಿಳಿಸುತ್ತಾ, ನಮ್ಮ ಕ್ರಮಬದ್ಧ ಜೀವನವನ್ನು ಅವರು ಪ್ರತಿಬಿಂಬಿಸುತ್ತಾರೆ ಎಂದು ಹೇಳಿದರು. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ಮುಖ್ಯೋಪಾಧ್ಯಾಯಿನಿ ರೇಶ್ಮಾ ಡಿಸೋಜ ಮತ್ತು ವೆಂಕಟರಮಣ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿ. ಸೋಜಾ ಅವರು ವಾರ್ಷಿಕ ವರದಿ ವಾಚಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ’ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.11 ರಿಂದ ಡಿ. 15ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’30ನೇ ವರ್ಷದ ’ಅಳ್ವಾಸ್ ವಿರಾಸತ್” ಅನ್ನು ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಮಂಗಳವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ಮುಸ್ಸಂಜೆಯಲ್ಲಿ ಪ್ರಕೃತಿ ರಮಣೀಯ ವಿಶಾಲ ಸಭಾಂಗಣದಲ್ಲಿ ತುಂಬಿದ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಕಾರ್ಯಕ್ರಮ. ಸಾಹಿತ್ಯ ಮತ್ತು ಸಂಸ್ಕೃತಿ ಜೊತೆಯಾಗಿ ಮೇಳೈಸಿದ ಕಾರ್ಯಕ್ರಮ. ನಮ್ಮ ಸಾಂಸ್ಕೃತಿಕ ಸಂಪತ್ತು ಹೆಚ್ಚಾದಾಗ ಮನಸ್ಸು ಅರಳುತ್ತದೆ ಎಲ್ಲರಿಗೂ ಸಂತೋಷ ನೀಡುವ ವ್ಯಕ್ತಿತ್ವವೇ ಆಳ್ವ ಎಂದು ಬಣ್ಣಿಸಿದರು. ಒಳ್ಳೆಯದನ್ನು ಒಪ್ಪಿಕೊಂಡು ಅಪ್ಪಿಕೊಳ್ಳಿ. ಆ ಹಾದಿಯಲ್ಲಿ ಸಮಾಜ, ದೇಶ ಬೆಳೆಯಬೇಕು. ನಾವೂ ಪ್ರಕೃತಿಯನ್ನು, ಹೃದಯವನ್ನು ಅರಳಿಸಬೇಕು. ಆಳ್ವಾಸ್ ಕೃಷಿ ಮೇಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಕೃಷಿ ಇಲಾಖೆಯ ವತಿಯಿಂದ ಡಿಸೆಂಬರ್ 12 ರಂದು ನಗರದ ಮಣಿಪಾಲ ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಕಾರಣಾಂತರಗಳಿಂದ ಮುಂದೂಡಿ, ಡಿಸೆಂಬರ್ 13 ರಂದು ಮರು ನಿಗಧಿಪಡಿಸಲಾಗಿದೆ. ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ, ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಡಿ. 13 ರಂದು ಬೆಳಗ್ಗೆ 11 ಗಂಟೆಗೆ ಪ್ರದರ್ಶಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ, ತಯಾರಿಸುವ ಖಾದ್ಯ, ಬೇಕಾಗುವ ಸಾಮಾಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟಗಳು 2025ರ ಜ. 16 ರಿಂದ 23ರವರೆಗೆ ನಡೆಯಲಿದ್ದು, ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಕ್ರೀಡಾಪಟುಗಳು ಆಗಮಿಸಿ ಭಾಗವಹಿಸಲಿದ್ದಾರೆ. ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯ ಒಲಂಪಿಕ್ಸ್ ಗೇಮ್ಸ್ಗಳನ್ನು ಉಡುಪಿ ಜಿಲ್ಲೆಯಲ್ಲಿ ಸಂಘಟಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ 13 ಕ್ಕೂ ಹೆಚ್ಚು ಕ್ರೀಡೆಗಳು 8 ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಮಾಹೇಯ ವಿ.ವಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, 3500 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು. ಕ್ರೀಡಾಕೂಟದಲ್ಲಿ ಸ್ಪರ್ಧಿಸಲು ಆಗಮಿಸುವ ಕ್ರೀಡಾಪಟುಗಳಿಗೆ, ಅಧಿಕಾರಿಗಳಿಗೆ ಹಾಗೂ ತೀರ್ಪುಗಾರರು ಸೇರಿದಂತೆ ಮತ್ತಿತರರಿಗೆ ತಂಗಲು ಅವಶ್ಯವಿರುವ ವಸತಿ ಸೌಕರ್ಯಗಳನ್ನು, ಊಟೋಪಚಾರದ ವ್ಯವಸ್ಥೆಗಳು ಸೇರಿದಂತೆ ಮತ್ತಿತರ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು. ಕ್ರೀಡಾಕೂಟಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ, ವಿಶ್ವ ವಿನಾಯಕ ಸಿ.ಬಿ.ಎಸ್.ಇ ಶಾಲೆಯ 19ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿ.ಎಮ್ ವಿದ್ಯಾಸಂಸ್ಥೆಗಳ ಆಡಳಿತ ಮುಖ್ಯಸ್ಥರಾದ ಪ್ರಕಾಶ್ಚಂದ್ರ ಶೆಟ್ಟಿಯವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯಲ್ಲಿ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಮೌಲ್ಯಗಳನ್ನು ಕಲಿಸಿದರೆ ಅಂತಹ ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದು ತಿಳಿಸಿದರು. ಮಕ್ಕಳು ಮನೆಯಲ್ಲಿ ತಂದೆ ತಾಯಿಯಿಂದ ಸಂಸ್ಕಾರ ಕಲಿಯುತ್ತಾರೆ ತಂದೆ ತಾಯಿಗಳು ಹಾಗೂ ಗುರು ಹಿರಿಯರು ಮಕ್ಕಳಿಗೆ ಆದರ್ಶರೂಪವಾಗಿದ್ದರೆ ನಾವು ಉತ್ತಮ ಸಮಾಜವನ್ನು ಕಟ್ಟಬಹುದು ಎಂದು ತಿಳಿಸಿದರು. ಕಾರ್ಯಕ್ರಮದ ಗೌರವ ಅತಿಥಿಗಳಾದ ಡಾ. ಶರಣ್ಯ ಶೆಟ್ಟಿಯವರು ಮಾತನಾಡಿ ಮಕ್ಕಳ ಯೌವನಾವಸ್ಥೆಯಲ್ಲಿ ಮಕ್ಕಳ ಮನಸ್ಸನ್ನು ಅರಿತು ಮಕ್ಕಳಲ್ಲಿನ ಆತಂಕ ಭಯವನ್ನು ಹೋಗಲಾಡಿಸುವುದು ಶಿಕ್ಷಕರ ಹಾಗೂ ಪೋಷಕರ ಕರ್ತವ್ಯವಾಗಿದೆ. ಹದಿಹರೆಯದ ಮಕ್ಕಳ ಮಾನಸಿಕ ತುಮುಲಗಳನ್ನು ದೂರವಾಗಿಸಲು ಆತ್ಮೀಯ ಸಂವಹನದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ಕೆಲಸ ಪೋಷಕರಿಂದ ಆಗಬೇಕಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 3ರಿಂದ 7ನೇ ತರಗತಿ ವಿದ್ಯಾರ್ಥಿಗಳು ಡಿ.8ರಂದು ಈಡಿಗರ ಸಭಾಭವನ ಹೊಸನಗರ ಶಿಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಐಕೀ ಸ್ಕೂಲ್ ಆಫ್ ಮಾರ್ಟಿಯಲ್ ಆರ್ಟ್ಸ್ ಶೊಟೋಕಾನ್ ಕರಾಟೆ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವುದರೊಂದಿಗೆ ರಾಜ್ಯ ಮಟ್ಟದ ಕರಾಟೆ ಚಾಂಪಿಯನಶಿಪ್ ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಸಂಸ್ಥೆಯ ಆಡಳಿತಾಧಿಕಾರಿಧ್ವಯರಾದ ಕುಮಾರಿ ಶಮಿತಾ ರಾವ್ ಮತ್ತು ಕುಮಾರಿ ರೆನಿಟಾ ಲೋಬೊ, ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭಕೋರಿರುತ್ತಾರೆ. ವಿಜೇತರ ಯಾದಿ : ವೈಯಕ್ತಿಕ ವಿಭಾಗಪ್ರಥಮ ಸ್ಥಾನ1.ಸಮೃದ್ I2.ಸಿಂಧು I3.ಹಿಮಾನಿ I4.ಆರಾಧ್ಯ I5.ಆಧ್ಯಾಪ್ರಭು I6.ತನುಶ್ರೀ I7.ಧಕ್ಷಯ್ Iದ್ವಿತೀಯ ಸ್ಥಾನ8.ಧನ್ವಂತ II9.ಅನ್ವಿತಾ II10.ರಶ್ವಿ II11.ನಿಹಾಲ್ II12.ಬ್ರಾಹ್ಮೀ II13.ಸಮನ್ವಿ II14.ಸಿದ್ರಾ II15.ಸುಹಾಸ್ II16.ಸೈಫ್ IIತೃತೀಯ ಸ್ಥಾನ17.ಸಾಯಿಶ್ III18.ಗ್ರೀಷ್ಮ III19.ತನ್ವಿ III20.ಸ್ಪಂದನಾ III21.ಅಮೂಲ್ಯ III22.ತನ್ಮಯ್ III23.ಅಹಾನ್ III24.ಪ್ರಗತಿ III25.ಪ್ರಣತಿ III26.ದಶಮಿ III27.ದೀಪ್ತಾ III28.ಸಾಥ್ವಿಕ್ III29.ಮೆಹರಾನ್ III30.ಸಮೃದ್ಧಿ III31.ರಾಣಿ ಮನಸ್ವಿ III32.ನಿಧಿಕಾ III33.ಅಫಹ್ವಾನ್ III34.ಅಶ್ವಿನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಟೇಶ್ವರ ರಾಷ್ಟ್ರಿಯ ಹೆದ್ದಾರಿ 66ರ ಸಹನಾ ಹಾಲ್ ಎದುರುಗಡೆ ಪ್ಲಾಸ್ಟಿಕ್ ತಯಾರಿಸುವ ಕಚ್ಚಾ ವಸ್ತು ಸಾಗಿಸುತ್ತಿದ್ದ ಲಾರಿವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಹೊಡೆದು ಪಲ್ಟಿಯಾದ ಘಟನೆ ಡಿ.10ರ ಮಂಗಳವಾರದಂದು ಮುಂಜಾನೆ ನಡೆದಿದೆ. ಮಂಗಳೂರುನಿಂದ ಸೋಲಾಪುರಕ್ಕೆ ಪ್ಲಾಸ್ಟಿಕ್ ತಯಾರಿಸುವ ಕಚ್ಚಾ ವಸ್ತು ಸಾಗಿಸುತ್ತಿದ್ದ ಲಾರಿವು ಬೆಳಗಿನ ಜಾವ ಚಾಲಕ ನಿದ್ರೆ ಮಂಪರಿನಲ್ಲಿ ಡಿವೈಡರ್ಗೆ ಡಿಕ್ಕಿಹೊಡೆದು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದು ಲಾರಿ ಜಖಂಗೊಂಡಿದೆ. ಕುಂದಾಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.
