Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿಮೂಡುಬಿದಿರೆ: ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರವು ಸೇವಾ ರೂಪದಲ್ಲಿ ಸಮಾಜಕ್ಕೆ ಒಳಿತನ್ನು ಮಾಡುವ ಸದುದ್ದೇಶದಿಂದ ಸಾಗುತಿತ್ತು ಆದರೆ ಇಂದಿನ ಕಾಲಘಟ್ಟದಲ್ಲಿ ಶಿಕ್ಷಣದ ವ್ಯಾಪರೀಕರಣವಾಗುತ್ತಿದೆ. ಈ ನಡುವೆಯೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ವ್ಯಾಪಾರಿಕರಣ ಮಾಡದೇ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠತನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಮೊದಲ ಸ್ವಾಯತ್ತ ತರಗತಿಗಳ ಪ್ರಾರಂಭೋತ್ಸವದ ಸಲುವಾಗಿ ನಡೆದ “ಅಂಕುರ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ಸದಾ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಒತ್ತು ನೀಡಿದೆ. ಸಾಂಸ್ಕೃತಿಕ, ಕ್ರೀಡಾ, ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ದತ್ತು ಸ್ವೀಕಾರದ ಅಡಿಯಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತಿದೆ. ಸಂಸ್ಥೆಯು ಈ ಹಿಂದೆ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಸಾಗಬೇಕಾದ ಅನಿವಾರ್ಯತೆ ಇತ್ತು. ಆಗ ಕೆಲವು ಸಮಸ್ಯೆಗಳು ಎದುರಾಗುತ್ತಿದ್ದವು. ಆದರೆ ಇದೀಗ ಸ್ವಾಯತ್ತ ಸ್ಥಾನಮಾನದೊಂದಿಗೆ ಗುಣಮಟ್ಟದ ಶೈಕ್ಷಣಿಕ ಚಟುವಟಿಕೆಗಳು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರದ ಬೈಂದೂರು ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸತೀಶ್‌ ಕುಮಾರ್‌ ಶೆಟ್ಟಿ ಹೇರೂರು, ಶೇಖರ್‌ ಪೂಜಾರಿ ಉಪ್ಪುಂದ, ನರಸಿಂಹ ಹಳಗೇರಿ, ಜಗದೀಶ್‌ ದೇವಾಡಿಗ ಬಿಜೂರು, ಮೌಲಾನ ದಸ್ತಗೀರಿ ಸಾಹೇಬ್‌ ಶಿರೂರು ಹಾಗೂ ಗ್ರೀಷ್ಮಾ ಭಿಡೆ ಕೊಲ್ಲೂರು ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸೌತ್ ಕೆನರಾ ಫೊಟೋಗ್ರಾರ್ಸ್‌ ಅಸೋಸಿಯೇಶನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಕುಂದಾಪುರ-ಬೈಂದೂರು  ವಲಯ ಹಾಗೂ ಕಾರ್ಮಿಕ ಇಲಾಖೆ ಉಡುಪಿ ಉಪವಿಭಾಗ ಇವರ ವತಿಯಿಂದ ಮಾಹಿತಿ ಕಾರ್ಯಗಾರ ಮತ್ತು ಇ-ಶ್ರಮ್ ನೋಂದಣಿ ಕಾರ್ಯಕ್ರಮ ಮಂಗಳವಾರ ಕುಂದಾಪುರದ ಖಾಸಗಿ ಹೋಟೆಲ್‌ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾರ್ಮಿಕ ಇಲಾಖೆ ಉಡುಪಿ ಉಪವಿಭಾಗ ಉಡುಪಿ ಕಾರ್ಮಿಕ ಅಧಿಕಾರಿ ಕುಮಾರ್ ಬಿ. ಆರ್. ಉದ್ಘಾಟಿಸಿ ಮಾತನಾಡಿ ಪೋಟೋಗ್ರಾಫರ್ ಅಸೋಸಿಯೇಷನ್ ಸದಸ್ಯರುಗಳಿಗಾಗಿ ಹಮ್ಮಿಕೊಂಡ ಕಾರ್ಯಕ್ರಮ ಉತ್ತಮ ಕಾರ್ಯಕ್ರಮ, ಅಸಂಗಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಫೋಟೋಗ್ರಾರ‍್ಸ್ ನೋಂದಾವಣೆ ಮಾಡಿಕೊಳ್ಳುವ ಮೂಲಕ ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು. ಕುಂದಾಪುರ ಪುರಸಭೆ ಮುಖ್ಯ ಅಧಿಕಾರಿ ಎಂ. ಮಂಜುನಾಥ , ಕುಂದಾಪುರ ವೃತ್ತ ಕಾರ್ಮಿಕ ನಿರೀಕ್ಷಕ ವಿಜಯೇಂದ್ರ ಕೆ., ಸೌತ್ ಕೆನರಾ ಫೊಟೋಗ್ರಾರ‍್ಸ್ ಅಸೋಸಿಯೇಶನ್ ಕುಂದಾಪುರ – ಬೈಂದೂರು ವಲಯ ಅಧ್ಯಕ್ಷ ದಿವಾಕರ ಶೆಟ್ಟಿ, ಕುಂದಾಪುರ ಛಾಯಾಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಗಿರೀಶ್ ಜಿ.ಕೆ., ಜಿಲ್ಲಾ ಕಟ್ಟಡ ಸಮಿತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದ ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಚಾಲನೆ ಮತ್ತು ಸಂಕಲ್ಪ ನಿಧಿ ಹುಂಡಿ ವಿತರಣೆ ಕಾರ್ಯಕ್ರಮವು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಾಗಪಾತ್ರಿಗಳಾದ ರವಿರಾಜ್ ಭಟ್ ಅಂಪಾರು, ಕಲಿಯುಗದಲ್ಲಿ ನಾಗ ದೇವರ ಆರಾಧನೆ ಶ್ರೇಷ್ಠವಾದುದು. ಕಳೆದ ೨೪ ವರ್ಷಗಳಿಂದ ನಿರಂತರವಾಗಿ ನಾಗಮಂಡಲೋತ್ಸವ ಪೂಜೆಯನ್ನು ನಡೆಸಿ ದೇವರ ಅನುಗ್ರಹಕ್ಕೆ ಪಾತ್ರರಾಗಿರುವ ಚಾರೋಡಿ ಮೇಸ್ತ ಸಮಾಜ ಬಾಂಧವರು, ಬೆಣ್ಗೆರೆಯಲ್ಲಿ ಸುಂದರ ನಾಗ ದೇವಸ್ಥಾನವನ್ನು ನಿರ್ಮಿಸಿ ನಾಗನ ಆರಾಧನೆಯನ್ನು ಮಾಡಿಕೊಂಡು ಬಂದಿರುವುದು ವಿಶಿಷ್ಟವಾದುದು. ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ ಕಾರ್ಯಕ್ರಮಗಳು ದೇವರ ಅನುಗ್ರಹದಿಂದ ಉತ್ತಮವಾಗಿ ನೆರವೇರಲಿ ಎಂದು ಹೇಳಿದರು. ಶ್ರೀ ನಾಗ ದೇವಸ್ಥಾನದ ಅಧ್ಯಕ್ಷತೆಯನ್ನು ಉಮೇಶ ಎಲ್. ಮೇಸ್ತ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಪುರೋಹಿತರಾದ ರಾಘವೇಂದ್ರ ಅಡಿಗ ನಾಯಕವಾಡಿ ಶುಭಾಶಂಸನೆಗೈದರು. ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಸಮಾಜ ಅಧ್ಯಕ್ಷ ರಾಮಚಂದ್ರ ಬಿ. ಶಿರೂರ್‌ಕರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆಯ ಫಲಿತಾಂಶವನ್ನು 6 ಜುಲೈ 2024ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಹಾಕಿದ್ದು, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆಗೈದಿದ್ದಾರೆ. ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕ್ರಮ ಪ್ರಕಾರವಾಗಿ ಪೂರ್ಣಚಂದ್ರ ಪಿ. ಎಚ್ 55, ಆದಿತ್ಯ ಪಾಟೀಲ್ 74, ನೇಹ. ಎನ್ 76, ಶ್ರೀಹರಿ 109, ಸಾನ್ವಿ ಕುಮಾರ್ 120, ಕಿಶನ್ ಬಿ. ಗೌಡ 133, ಅಂಕುಶ್. ವಿ 148, ಆತ್ಮಿಕ ನಾಯಕ್ 157, ಹರಿದ್ವರ್ಣ ಸಿ. ಅಸ್ವೆಪಟ್ಟೆ 162, ಸಚೇತ್ ದಯಾನಂದ್ ಬಿ. ಎಸ್ 258, ಹವನ ಎನ್ 333, ಮನ್ವಿತ ಆರ್ 346, ಸಿಂಚನ ಎಸ್. ಆಚಾರ್ಯ 374, ಹರ್ಷಲ್ ಎಸ್. ನರೋತಿ 383, ಡಿ. ಎಂ. ಪ್ರಜ್ವಲ್ 465, ಆರ್. ಬಿಂದು ಸೂರ್ಯ 468ನೇ ಸ್ಥಾನವನ್ನು ಗಳಿಸಿದ್ದಾರೆ. ಒಟ್ಟು ಫಲಿತಾಂಶದಲ್ಲಿ 100ರ ಸ್ಥಾನದೊಳಗೆ 7,200 ಒಳಗೆ 19,300 ಒಳಗೆ 26,400ರ ಒಳಗೆ 36,500ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್,ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ರಾಜ್ಯಕ್ಕೆ 16ನೇ ಯಾಂಕ್‌ ಪಡೆದು,ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿರುತ್ತಾಳೆ.ಹಾಗೆಯೇ ಕಾಲೇಜಿನ ಇನ್ನೋರ್ವ ವಿದ್ಯಾರ್ಥಿನಿ ವರ್ಣಾ ಆಚಾರ್ ರಾಜ್ಯ ಮಟ್ಟದ 197ನೇ ಯಾಂಕ್‌ ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾಳೆ.ಈ ಮೂಲಕ ರಾಜ್ಯದ ಪ್ರತಿಷ್ಠಿತ ಇಂಜಿನಿಯರ್ ಕಾಲೇಜಿನಲ್ಲಿ ಪ್ರವೇಶಾತಿ ಪಡೆಯಲು ಅರ್ಹರಾಗಿರುತ್ತಾರೆ.ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂಚೂಣಿಯಲ್ಲಿರುವ ಈ ವಿದ್ಯಾರ್ಥಿನಿಯರು ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯರಾಗಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ನೇತೃತ್ವದಲ್ಲಿ ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಗೆಳೆಯರ ಬಳಗ ನಂದಿಬೆಟ್ಟು ಇವರ ಸಹಯೋಗದೊಂದಿಗೆ ಕುಂದಾಪುರದಲ್ಲಿ ಪ್ರಪ್ರಥಮ ಬಾರಿಗೆ ಹಲಸು ಹಾಗೂ ಕೃಷಿ ಮೇಳ 2024 ಜುಲೈ 12 ಶುಕ್ರವಾರದಿಂದ ಜುಲೈ 14 ಆದಿತ್ಯವಾರದ ತನಕ ಕುಂದಾಪುರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಅಧ್ಯಕ್ಷರಾದ ಜನನಿ ದಿನಕರ ಶೆಟ್ಟಿ ತಿಳಿಸಿದರು. ಅವರು ಕುಂದಾಪುರದ ಪ್ರೆಸ್ ಕ್ಲಬ್‍ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಕುಂದಾಪುರ ಪರಿಸರದ ಜನರಿಗೆ ಹಾಗೂ ಕೃಷಿಕರಿಗೆ ಉಪಯೋಗವಾಗುವ ದೃಷ್ಟಿಯಿಂದ ಹಾಗೂ ಸಣ್ಣ ಕೃಷಿ ಮತ್ತು ಗೃಹ ಕೈಗಾರಿಕೆ ಉತ್ಪನ್ನ ತಯಾರಿಸುವ ಮತ್ತು ಮಾರಾಟ ಮಾಡುವವರಿಗೆ ಅನುಕೂಲ ಕಲ್ಪಿಸುವುದರೊಂದಿಗೆ ಕೃಷಿಗೆ ಉತ್ತೇಜನ ನೀಡುವ ಸಲುವಾಗಿ ಈ ಮೇಳವನ್ನು ಆಯೋಜಿಸಲಾಗಿದೆ ಎಂದರು. ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಸ್ಥಾಪಕಧ್ಯಕ್ಷರಾದ ಕಿರಣ್ ಕುಂದಾಪುರ ಮಾತನಾಡಿ, ಹಲಸು ಮೇಳದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆ, ಆಂಧ್ರದ ಮೊದಲಾದ ಭಾಗಗಳಿಂದ ಹಲಸು ಬೆಳೆಗಾರರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯ ಉದ್ಘಾಟನಾ ಸಮಾರಂಭ ಸೋಮವಾರದಂದು ನಡೆಯಿತು. ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲ ಸ್ಥಾನದ  ಸಿದ್ದಮ್ಮ ಮಾದಯ್ಯ ಶೆಟ್ರ ಸ್ಮರಣಾರ್ಥ ಮಕ್ಕಳು ಸುಮಾರು 9.5 ಲಕ್ಷದ ವೆಚ್ಚದಲ್ಲಿ ಸುಸಜ್ಜಿತವಾದ ಶಾಲಾ ಕೊಠಡಿಯನ್ನು ಸಿದ್ದಮ್ಮ ಮಾದಯ್ಯ ಶೆಟ್ರ ಪುತ್ರರಾದ ಯು. ಸೀತಾರಾಮ ಶೆಟ್ಟಿ ಅವರು ದೀಪ ಬೆಳಗಿಸುವುದರ ಮೂಲಕ  ಹಸ್ತಾಂತರಿಸಿ ಶುಭಾ ಹಾರೈಸಿದರು. ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹನಚಂದ್ರ, ಮಾಜಿ ಪಂಚಾಯತ್ ಉಪಾಧ್ಯಕ್ಷರಾದ ದಿವಾಕರ ಶೆಟ್ಟಿ, ಗುತ್ತಿಗೆದಾರರಾದ ಪ್ರಭಾಕರ ಶೆಟ್ಟಿ, ರವಿರಾಜ್ ಶೆಟ್ಟಿ ಹಾಗೂ ಎಸ್.ಡಿ.ಎಮ್.ಸಿ. ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಇನ್ನಿತರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಭಾ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ರಾಧಾಕೃಷ್ಣ ಮಲ್ಯ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ವೆಂಕಪ್ಪ ಉಪ್ಪಾರ ಇವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು, ಶಿಕ್ಷಕರಾದ ಸುಧಾಕರ ದೇವಾಡಿಗ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕರಾದ ನಾಗರಾಜ ಇವರು ವಂದಿಸಿದರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಅವರ ಕೊಲೆ ಮಾಡಲು ಇಬ್ಬರು‌ ದುಷ್ಕರ್ಮಿಗಳು ವಿಫಲಯತ್ನ ನಡೆಸಿದ ಘಟನೆ ಜು.7 ರಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಎಸ್ಎಸ್ ಟ್ರಾವೆಲ್ಸ್ ಎಂಬ ಸಂಸ್ಥೆಯ ಮಾಲೀಕ ಸತೀಶ್ ಶೆಟ್ಟಿ (53) ಬಂಧಿತ ಆರೋಪಿಯಾಗಿದ್ದು, ಪುತ್ರ ಸನ್ನಿಧಿ ಶೆಟ್ಟಿ ತಲೆಮರೆಸಿಕೊಂಡಿದ್ದಾನೆ. ಸಹನಾ ಸುರೇಂದ್ರ ಶೆಟ್ಟಿ ಅವರ ಪತ್ನಿ ಕುಂದಾಪುರ ನಗರದ ಎ.ಎಸ್‌ ಟ್ರೇಡರ್‌ ಎಂಬ ಪ್ಲ್ಯಾಟ್ ನಲ್ಲಿ ಮಳೆ ನೀರಿಗೆ ಸಂಬಂಧಿಸಿದ ಕೆಲಸ ಮಾಡುತ್ತಿದ್ದರು. ಇದಕ್ಕೆ 1ನೇ ಮಹಡಿಯಲ್ಲಿರುವ ಸತೀಶ ಶೆಟ್ಟಿ ಎಂಬಾತ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ಈ ವಿಚಾರವಾಗಿ ಸುರೇಂದ್ರ ಶೆಟ್ಟಿಯವರಿಗೆ ಕರೆ ಮಾಡಿ ಅವಾಚ್ಯವಾಗಿ ಬೈದಿದ್ದು ಜು.7 ರಂದು ಬೆಳಿಗ್ಗೆ ಕುಂದಾಪುರದ ಕೆ.ಎಸ್.ಆರ್.ಟಿ.ಸಿ ಡಿಪ್ಪೋ ಎದುರಿನ ಸರ್ವೀಸ್‌ ರಸ್ತೆಯಲ್ಲಿ ಸುರೇಂದ್ರ ಶೆಟ್ಟಿಯವರ ಕಾರಿಗೆ ತಮ್ಮ ಇನ್ನೋವಾ ಕಾರನ್ನು ಅಡ್ಡ ನಿಲ್ಲಿಸಿ ಕಬ್ಬಿಣದ ರಾಡ್ ಮೂಲಕ ಹಲ್ಲೆ ನಡೆಸಲು ಯತ್ನಿಸಿದ್ದರು. ಬಳಿಕ ಕಾರಿನ ಗ್ಲಾಸ್‌ ಹಾಗೂ ಕಾರಿನ ಡೋರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಎಂ. ಭಾಸ್ಕರ್ ಪೈ ಸರ್ಕಾರಿ ಪ್ರೌಢಶಾಲೆ ಗುಜ್ಜಾಡಿ ಅಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಂಬದ ಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಪ್ರಕಾಶ್ ಚಂದ್ರ ಶೆಟ್ಟಿ ಇವರನ್ನು ಗೌರವಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಜಾದ್ ಅಹಮದ್ ಹಾಗೂ ಮಂಜುನಾಥ್ ಶೆಟ್ಟಿ ಕಾರ್ಯನಿರ್ವಹಿಸಿದರು. ಮುಖ್ಯ ಅತಿಥಿಯಾಗಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾದಿಕಾರಿ ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಸಂಘದ ಉಪಾಧ್ಯಕ್ಷರಾಗಿರುವ ರವಿಶಂಕರ್ ಹೆಗ್ಡೆ, ಯುವಜನ ಕ್ರೀಡಾಧಿಕಾರಿ ಪ್ರಭಾಕರ್ ಎಸ್, ರಾಜು ಎಸ್ ಮಯ್ಯಾಡಿ ಇನ್ನಿತರರು ಉಪಸ್ಥಿತರಿದ್ದರು. ರಾಜೀವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಸಂಘದ ಅಧ್ಯಕ್ಷರಾಗಿರುವ ಅರುಣ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಗುರುರಾಜ್ ಪೂಜಾರಿ ವಂದಿಸಿದರು.

Read More