ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರ್ಕಾರ ಆಯೋಜಿಸಿದ ರಾಷ್ಟ್ರೀಯ ಕಲೋತ್ಸವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಏಕಪಾತ್ರಾಭಿನಯ ವಿಭಾಗದಲ್ಲಿ ಸ್ವಾತಂತ್ರ ಸೇನಾನಿ, ಕ್ರಾಂತಿವೀರ ಶ್ರೀ ಭಗತ್ ಸಿಂಗ್ ಅವರ ಪಾತ್ರವನ್ನು ಅಭಿನಯಿಸಿ ಉಡುಪಿ ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಏಕಾಹ ಅಖಂಡ ಭಜನೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ಆರಂಭವಾಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆ ಬಳಿಕ ಏಕಾಹ ಭಜನೆ ದೀಪ ಸ್ಥಾಪನೆಯ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಜಿ. ಮೋಹನದಾಸ ಭಟ್, ಜಿ. ಪ್ರದೀಪ ಭಟ್ ಮತ್ತು ತಾಂತ್ರಿಕ ಜಿ. ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ಅನುಷ್ಠಾನಗಳು ಜರಗಿತು. ದೇವಸ್ಥಾನದ ಆಡಳಿತ ಮಂಡಳಿ ಉಪಾಧ್ಯಕ್ಷ ಜಿ. ರಾಧಾಕೃಷ್ಣ ನಾಯಕ್ ದೀಪ ಪ್ರಜ್ವಲನೆ ಮಾಡಿ ಏಕಾಹ ಭಜನೆಗೆ ಚಾಲನೆ ನೀಡಿದರು. ಮಧ್ಯಾಹ್ನ ಶ್ರೀ ದೇವರಿಗೆ ವಿಶೇಷ ಪೂಜೆ, ವಿರಾಟರೂಪ ದರ್ಶನ, ಸಂಜೆ ಮಕ್ಕಳ ಉತ್ಸವ ಮತ್ತಿತರ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಡಾ. ಕಾಶೀನಾಥ ಪೈ, ಜಿ. ಗೋವಿಂದ್ರಾಯ ಆಚಾರ್ಯ, ಯು. ಸುರೇಶ ಪೈ, ಬಿ. ವಾಸುದೇವ ಪಡಿಯಾರ್, ಜಿ. ರಾಮಚಂದ್ರ ಪೈ, ಬಿ. ರಾಘವೇಂದ್ರ ಪೈ, ದೇವಸ್ಥಾನದ ವ್ಯವಸ್ಥಾಪಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವಾಲಯ ಇಲಾಖೆ ಭಾರತ ಸರ್ಕಾರ ಇವರ ವತಿಯಿಂದ ನಡೆದ ಕಲಾ ಉತ್ಸವ 2024-25ನೇ ಸಾಲಿನ ಜಿಲ್ಲಾ ಮಟ್ಟದ ವಾದ್ಯ ಸಂಗೀತದಲ್ಲಿ (ಕೊಳಲು) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ಯಾಮ್ ಜಿ.ಎನ್. ಪೂಜಾರಿ ಅವರು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈತ ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಗಣೇಶ ಅವರ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಿ. 09 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆಯವರು 2024- 25ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ಹಂತದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಮೈಸೂರು ವಿಭಾಗೀಯ ಮಟ್ಟದ ಆಶುಭಾಷಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ವಿಭಾ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಿ. ಸಭೆಯು ರಾಜ್ಯ ಸಮಿತಿಯ ಸದಸ್ಯರು ಜಯನ್ ಮಲ್ಪೆ, ಹಾಗೂ ಜಿಲ್ಲಾ ಸಮಿತಿಯ ಸಂಚಾಲಕರಾದ ವಾಸುದೇವ ಮುದೂರು ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಎಲ್ಲಾ ದಲಿತ ಮುಖಂಡರು ಹಾಗೂ ದಲಿತ ಸಮುದಾಯದ ಒಪ್ಪಿಗೆ ಮೇರೆಗೆ ಲಕ್ಷ್ಮಣ್ ಬೈಂದೂರು ಅವರನ್ನು ಅವಿರೋಧವಾಗಿ ಕರ್ನಾಟಕ ದಲಿತ ಸಂಘರ್ಷ ರಿ. ಸಮಿತಿ ತಾಲ್ಲೂಕು ಸಂಚಾಲಕರಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ದಲಿತ ಮುಖಂಡರಾದ ಜಯನ್ ಮಲ್ಪೆ, ವಾಸುದೇವ ಮುದೂರು, ಅಂಬೇಡ್ಕರ್ ಯುವ ಸೇನಾ ಜಿಲ್ಲಾಧ್ಯಕ್ಷರು ಹರೀಶ್ ಸಾಲ್ಯಾನ್ ಮಲ್ಪೆ, ಶಿವರಾಮ್ ಹಳಗೇರಿ, ಚಂದ್ರ ಹಳಗೇರಿ, ಹಿರಿಯ ಹೋರಾಟಗಾರ ಮುಡೂರು ಮಾಸ್ಟರ್ ಅಂಬಾಗಿಲು, ಸುಂದರ ಬಾಬು ನೈಕನಕಟ್ಟೆ, ಅಣ್ಣಪ್ಪ ಯೋಜನಾನಗರ, ಭಾಸ್ಕರ್ ನಾಯ್ಕ್ ಮೂಡುಬಗೆ, ರವೀಂದ್ರ ಬೆಳ್ಳಾರೆ, ಯುವಸೇನೆ ಅಧ್ಯಕ್ಷರಾದ ರಾಮ ಮಯ್ಯಾಡಿ, ಮಂಜುನಾಥ್ ಡಿಸಿಬಿ ಅಧಿದ್ರಾವಿಡ ಸಂಘಟನೆಯ ಮುಖಂಡರು ಮತ್ತಿತರು ಯುವ ನಾಯಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಥೈಲ್ಯಾಂಡ್ ಯೂತ್ ಯೋಗ ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ಫೆಡರೇಶನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ರಿ. ಶಿವಮೊಗ್ಗ ಕರ್ನಾಟಕ ಇವರ ಸಹಭಾಗಿತ್ವದಲ್ಲಿ ಸೋಮವಾರ ಥೈಲ್ಯಾಂಡ್ ದೇಶದ ಪಟ್ಟಾಯದಲ್ಲಿ 6ನೇ ವರ್ಷದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯು ನಡೆಯಿತು. ಈ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಏಳು ದೇಶಗಳ ಸ್ಪರ್ಧಿಗಳಲ್ಲಿ ಸುಮಾರು 80 ಜನ ಸ್ಪರ್ಧಿಗಳು ಭಾಗವಹಿಸಿದ್ದರು. ಇವರ ಜೊತೆ ಭಾರತ ದೇಶದಿಂದ 11 ರಿಂದ 15 ವರ್ಷದ ವಯಸ್ಸಿನ ವಿಭಾಗದಲ್ಲಿ ಪ್ರತಿನಿಧಿಸಿದ ಧನ್ವಿ ಪೂಜಾರಿ ಮರವಂತೆ ಅವರು ಭಾರತ ದೇಶಕ್ಕೆ ಚಿನ್ನದ ಪದಕ ಪಡೆದು ಪ್ರಥಮ ಸ್ಥಾನ ಪಡೆದಿರುತ್ತಾಳೆ. ಧನ್ವಿ ಹೆಮ್ಮಾಡಿಯ ಜನತಾ ಇಂಡಿಪೆಂಡೆಂಟ್ ಪಿ ಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಪ್ರಥಮ ಪಿ ಯು ಸಿ ಯಲ್ಲಿ ಕಲಿಯುತ್ತಿದ್ದಾಳೆ. ಈಕೆ ಮರವಂತೆಯ ಶಿವಾ ಮಾಸ್ತಿ ಮನೆ ಹಾಗೂ ಜ್ಯೋತಿ ಚಂದ್ರ ಶೇಖರ್ ಅವರ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇರಳದ ಮುಹಮ್ಮದ್ ಮುನ್ಸೀರ್ (24) ಅವರ ಬೆಲೆ ಬಾಳುವ ಐಫೋನ್ ರೈಲಿನಲ್ಲಿ ಕಳವಾಗಿದೆ. ಅವರು ಗಂಗಾನಗರ-ಕೊಚುವೇಲಿ ಎಕ್ಸ್ಪ್ರೆಸ್ ರೈಲಿನಲ್ಲಿ ಮಡಗಾಂವ್ನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದು ರೈಲು ಕುಂದಾಪುರಕ್ಕೆ ತಲುಪಿದಾಗ 1.50 ಲಕ್ಷ ರೂ.ಗಳ ಐಫೋನ್ 16 ಪ್ರೊ ಮೊಬೈಲ್ ಕಳವಾಗಿರುವುದು ಗಮನಕ್ಕೆ ಬಂತು. ಮುನ್ಸಿರ್ ಕಾಸರಗೋಡು ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅದನ್ನು ಕುಂದಾಪುರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪಡೆಯಲು ಇಚ್ಚಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬಹುದಾಗಿದೆ. ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ ಪೋಷಕರನ್ನು ಕಳೆದುಕೊಂಡ ಪಾಲನೆ, ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ವತಿಯಿಂದ ಗೋವಾ ಮತ್ತು ಬೆಂಗಳೂರು ಮೂಲದ ಇಬ್ಬರು ದಂಪತಿಗಳಿಗೆ ಮಕ್ಕಳನ್ನು ಕಾನೂನು ಬದ್ಧವಾಗಿ ನೀಡುವ ಮೂಲಕ ದತ್ತು ಆದೇಶವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023 ನೇ ಕ್ಯಾಲೆಂಡರ್ ವರ್ಷದಲ್ಲಿ 2023 ರ ಜನವರಿ 01 ರಿಂದ ಡಿಸೆಂಬರ್ 31 ರ ಅವಧಿಯಲ್ಲಿ ಅಂತ ರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ತಮ್ಮ ಪ್ರಸ್ತಾವನೆಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಹಾಗೂ ಪ್ರಾಧಿಕಾರ ಸೂಚಿಸಿರುವ ವೇಗಮಿತಿಯಲ್ಲಿ ವಾಹನಗಳನ್ನು ಚಲಾಯಿಸಿದಲ್ಲಿ ಮಾತ್ರ ಸುಗಮ ಸಂಚಾರ ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಅವೈಜ್ಞಾನಿಕವಾಗಿ ಕೈಗೊಳ್ಳದೇ ವೈಜ್ಞಾನಿಕವಾಗಿ ನಿರ್ಮಾಣ , ಅವುಗಳ ನಿರ್ವಹಣೆ ಮಾಡಿ ಸುವ್ಯವಸ್ಥಿತವಾಗಿ ಇಟ್ಟಾಗ ಮಾತ್ರ ಸಾರ್ವಜನಿಕ ವಾಹನಗಳು ಸುಗಮವಾಗಿ ಸಂಚರಿಸಲು ಸಾಧ್ಯವಾಗುತ್ತದೆ. ಇದಕ್ಕೆ ಅಧಿಕಾರಿಗಳು ಒತ್ತು ನೀಡಿ, ಜಿಲ್ಲೆಯಲ್ಲಿ ಉಂಟಾಗುತ್ತಿರುವ ಅಪಘಾತ ಗಳ ಪ್ರಮಾಣವನ್ನು ಇಳಿಕೆಯಾಗುವಂತೆ ನೋಡಿಕೊಳ್ಳಬೇಕು ಎಂದರು. ಉಡುಪಿ ಜಿಲ್ಲೆಯಲ್ಲಿ ಕಳೆದ 3 ವರ್ಷಗಳಲ್ಲಿ ವರದಿಯಾದ ರಸ್ತೆ ಅಪಘಾತ ಗಳನ್ನು ಆಧರಿಸಿ ರಾಷ್ಟ್ರೀಯ ಹೆದ್ದಾರಿಗಳ ಸ್ಥಳಗಳಲ್ಲಿ ಅಪಘಾತವಾಗುವ ಕಪ್ಪುಚುಕ್ಕೆ 20 ಸ್ಥಳಗಳನ್ನು ಗುರುತಿಸಲಾಗಿದೆ. ಕಳೆದ ಸಭೆಯಲ್ಲಿ ಸಂಬಂಧಪಟ್ಟ…
