ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ಮತ ಎಣಿಕೆ ಕಾರ್ಯವು ಡಿ. 11 ರಂದು ಕುಂದಾಪುರ ತಾಲೂಕು ಕಚೇರಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತ ಎಣಿಕೆ ಕಾರ್ಯವನ್ನು ನಡೆಸುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಡಿ. 11 ರಂದು ಬೆಳಗ್ಗೆ 5 ಗಂಟೆಯಿಂದ ಮತದಾನ ಎಣಿಕೆ ಕಾರ್ಯವು ಮುಕ್ತಾಯವಾಗುವವರೆಗೆ ಮೇಲ್ಕಂಡ ತಾಲೂಕು ಕಚೇರಿಯ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ರಾಮ ಮಂದಿರ ಬಳಿಯ ರಸ್ತೆ ಬದಿ ಬಸ್‌ಗಾಗಿ ಕಾಯುತ್ತಿದ್ದ ಸುಶೀಲಾ ಅವರಿಗೆ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಗುರುವಾರದಂದು ನಡೆದಿದೆ. ಗಾಯಗೊಂಡ ಸುಶೀಲಾ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಸ್ರೂರಿನಲ್ಲಿ ಬಾಡಿಗೆಗೆ ನೀಡಿದ್ದ ಮನೆಯೊಂದರಲ್ಲಿ ಕಳ್ಳತನ ನಡೆದಿದೆ. ಇಲ್ಲಿನ ನಿವಾಸಿ ರವಿ ತನ್ನ ತಾಯಿ ಮನೆಯನ್ನು ಮೂರು ತಿಂಗಳ ಹಿಂದೆ ಆವರ್ಸೆ ನಿವಾಸಿ ಸಂತೋಷ್ ಎಂಬವರಿಗೆ ವಾಸವಿರಲು ನೀಡಿದ್ದು ಆತ 2 ತಿಂಗಳ ಬಾಡಿಗೆ ಹಣ ನೀಡಲು ಬಾಕಿಯಿತ್ತು. ಡಿ.2ರಂದು ಸಂಜೆ ಬಾಡಿಗೆ ಕೇಳಲು ಬಂದ ವೇಳೆ ಮನೆಗೆ ಬೀಗ ಹಾಕಿತ್ತು. ಗುರುವಾರ ಬಾಡಿಗೆ ಕೇಳಲೆಂದು ಬಂದ ವೇಳೆಯೂ ಬಾಗಿಲು ಹಾಕಿದ್ದರಿಂದ ಅನುಮಾನಗೊಂಡು ಮನೆಯ ಹಿಂಬದಿಯ ಬಾಗಿಲು ತೆರೆದು ನೋಡುವಾಗ 1.04 ಲಕ್ಷ ರೂ. ಮೌಲ್ಯದ ಸೊತ್ತುಗಳು ಕಳವು ಆಗಿತ್ತು. ಬಾಡಿಗೆಗೆ ಇದ್ದ ಸಂತೋಷ್ ಸೊತ್ತುಗಳನ್ನು ಕಳವು ಮಾಡಿರುವ ಸಂಶಯವಿದೆ ಎಂದು ಮನೆಯ ಮಾಲೀಕ ರವಿ ನೀಡಿದ ದೂರಿನಂತೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮನುಷ್ಯನ ಅನೇಕ ದುರಾಸೆಯ ಫಲವೇ ಹವಾಮಾನ ವೈಪರೀತ್ಯಕ್ಕೆ ಮೂಲ ಕಾರಣ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿನ ಮುಂದುವರಿದ ಅಧ್ಯಯನಗಳ ರಾಷ್ಟ್ರೀಯ ಸಂಸ್ಥೆ (ಎನ್‌ಐಎಎಸ್)ಯ ಇಸ್ರೋ ಮುಖ್ಯ ಪ್ರಾಧ್ಯಾಪಕ ಡಾ. ಪಿ. ಜಿ. ದಿವಾಕರ್ ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಎನ್‌ಐಎಎಸ್ ಜಂಟಿ ಆಶ್ರಯದಲ್ಲಿ ಉಳ್ಳಾಲದ ಬಿಎಂ ಶಾಲೆಯಲ್ಲಿ ಹಮ್ಮಿಕೊಂಡ ‘ವಿದ್ಯಾರ್ಥಿ- ವಿಜ್ಞಾನಿ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯು ತೀವ್ರ ಸಮಸ್ಯೆಯಾಗಿ ಬೆಳೆಯುತ್ತಿದೆ. ಅದರಲ್ಲೂ ,ಕರಾವಳಿ ಭಾಗದ ಜನರಿಗೆ ವಾತಾವರಣದಲ್ಲಾಗುವ ತೀವ್ರ ಮಾರ್ಪಾಡುಗಳು ಬಹುಬೇಗನೇ ತಿಳಿಯುವುದರಿಂದ, ಈ ಯೋಜನೆಯು ಇಲ್ಲಿನ ಜನರಿಗೆ ಅತಿಹೆಚ್ಚು ಪೂರಕವಾಗಲಿದೆ ಎಂದರು. ವಿದ್ಯಾರ್ಥಿಗಳಿಗೆ ವಿಜ್ಞಾನದ ಕಡೆಗೆ ಆಸಕ್ತಿ ಹೆಚ್ಚಿಸಿ, ಪರಿಣಾಮಕಾರಿ ವಿಜ್ಞಾನಿಗಳನ್ನಾಗಿ ಮಾಡಲು ಎನ್‌ಐಎಎಸ್ ಆಯೋಜಿಸಿರುವ ಕರಾವಳಿ ಭಾಗದ ಹವಾಮಾನ ಬದಲಾವಣೆ ಅಧ್ಯಯನ ಯೋಜನೆಯು ಸಹಕರಿಯಾಗಲಿದೆ ಎಂದು ಹೇಳಿದರು. ವೈಜ್ಞಾನಿಕ ಶಿಕ್ಷಣದ ಮೂಲಕ ಯುವ ಜನಾಂಗದಲ್ಲಿ ವಿಜ್ಞಾನ ಮತ್ತು ಅನ್ವೇಷಣೆಯತ್ತ ಒಲವು ಮೂಡಿಸುವುದು ಬಹಳ ಅವಶ್ಯಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ತೌಹೀದ್ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾ ಕೂಟ ಶಾಲಾ ಮೈದಾನದಲ್ಲಿ ಗುರುವಾರ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಇಬ್ರಾಹಿಂ ಚೌಗುಲೆ ವಹಿಸಿದ್ದರು. ಮುಖ್ಯ ಅತಿಥಿ ಶಿರೂರು ತೌಹೀದ್ ಪಬ್ಲಿಕ್ ಸ್ಕೂಲ್‌ನ ಮುಖ್ಯೋಪಾಧ್ಯಾಯ ಶಬ್ಬೀರ್ ಅಹ್ಮದ್ ದಫೆದಾರ್ ಶುಭಾಶಂಸನೆಗೈದರು. ಅನಿವಾಸಿ ಭಾರತೀಯರಾದ ಅಬ್ದುಲ್ ಸತ್ತಾರ್ ಮಡಿಕಲ್, ಜಾವೀದ್ ಎಂ.ಎಚ್., ಅಬ್ದುಲ್ ಹಮೀದ್ ಮೌಲಾನ, ತೌಹೀದ್ ವಿಶ್ವಸ್ಥ ಮಂಡಳಿಯ ಸದಸ್ಯರಾದ ಇಕ್ಬಾಲ್ ಪಿ.ಎಂ., ವ್ಯವಸ್ಥಾಪಕ ತಾಹೀರ್ ಹಸನ್ ಹಾಗೂ ತೌಹೀದ್ ಮಹಿಳಾ ಕಾಲೇಜುಗಳ ಪ್ರಾಂಶುಪಾಲರಾದ ಆಶಾ ನಾಯ್ಕ, ಸಮೀನ ಬುಖಾರಿ, ತೌಹೀದ್ ಆಂಗ್ಲ ಮಾದ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸಭಾ ಬಾನು ಉಪಸ್ಥಿತರಿದ್ದರು. ಶಬ್ಬೀರ್ ಅಹ್ಮದ್ ಪ್ರಾಸ್ತಾವಿಕ ಮಾತನಾಡಿದರು. ಸಾರಿಯ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಮದಾ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಇಕ್ರಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಡ್ & ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಸೇವಾ-ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 24*7 ಸಹಾಯವಾಣಿ ಸಂಖ್ಯೆ 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತಿಯ ಒಟ್ಟು 33 ಸ್ಥಾನಗಳಿಗೆ ಸಂಬಂಧಿಸಿದಂತೆ ಡಿಸೆಂಬರ್ 8 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆ ಶಾಂತಿ ಮತ್ತು ಸುವ್ಯಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕರಿಗೆ ಮತ ಹಾಕಲು ಅನುಕೂಲವಾಗುವಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36 ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಚುನಾವಣೆ ನಡೆಯುವ ದಿನದಂದು ಈ ಮೇಲ್ಕಂಡ ಗ್ರಾಮ ಪಂಚಾಯತ್‌ನ ಕ್ಷೇತ್ರ ವ್ಯಾಪ್ತಿಯಲ್ಲಿ ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆರ್ಥಿಕವಾಗಿ ಹಿಂದುಳಿದಿರುವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನಕ್ಕಾಗಿ ಬೈಂದೂರು ತಾಲೂಕಿನಲ್ಲಿ ಇದುವರೆಗೆ ಸುಮಾರು 140.74 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಶುಕ್ರವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ ಗೃಹಲಕ್ಷ್ಮೀ ಯೋಜನೆಯಿಂದ 27,526 ಫಲಾನುಭವಿಗಳ ಸೆಪ್ಟೆಂಬರ್ ತಿಂಗಳ ತನಕ ಖಾತೆಗೆ ಪ್ರತಿತಿಂಗಂತೆ ಒಟ್ಟು ರೂ. 74.70 ಕೋಟಿ ಜಮಾ ಆಗಿದೆ. ತಾಂತ್ರಿಕ ಕಾರಣದಿಂದಾಗಿ 804 ಫಲಾನುಭವಿಗಳಿಗೆ ಬಾಕಿಯಿದೆ. ಗೃಹ ಜ್ಯೋತಿ ಯೋಜನೆಯಿಂದ ಬೈಂದೂರು ಮೆಸ್ಕಾಂ ಉಪಕೇಂದ್ರ ವ್ಯಾಪ್ತಿಯ 27,748 ಕುಟುಂಬಗಳಿಗೆ ನವೆಂಬರ್ ತಿಂಗಳ ತನಕ 26 ಕೋಟಿ ರೂ., ತಲ್ಲೂರು ಮೆಸ್ಕಾಂ ಉಪ ಕೇಂದ್ರ ವ್ಯಾಪ್ತಿಯ 1899 ಕುಟುಂಬಗಳಿಗೆ 1.71 ಕೋಟಿ ರೂ. ಸೇರಿದಂತೆ ಒಟ್ಟು 27.71ಕೋಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಲಾರಿ ಮತ್ತು ಕೋರೆ ಮಾಲಕರ ಸಂಘದ ನೇತೃತ್ವದಲ್ಲಿ ಮರಳು & ಕೆಂಪುಕಲ್ಲು ಸಮಸ್ಯೆಗೆ ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ ಡಿಸೆಂಬರ್ 7ರ ಶನಿವಾರ ಬೆಳಿಗ್ಗೆ 9-30ಕ್ಕೆ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೈಂದೂರು ಬೈಪಾಸ್‌ನಿಂದ ಪ್ರತಿಭಟನೆ ಹೊರಟು ತಾಲೂಕು ಆಡಳಿತ ಸೌಧದ ಎದುರು ಸೇರಿ ಪ್ರತಿಭಟನೆ ನಡೆಸಿ ಬಳಿಕ ಬೈಂದೂರು ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಗುವುದು. ಈ ವೇಳೆ ಲಾರಿ ಮತ್ತು ಕೋರೆ ಮಾಲಕರ ಸಂಘದ ಸದಸ್ಯರು, ಕಟ್ಟಡ ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದು 5 ವರ್ಷದ ಹಿಂದೆ 3A ಅಡಿಯಲ್ಲಿ ಕೃಷಿ ಅಭಿವೃದ್ಧಿ ಮತ್ತು ಮನೆ ನಿರ್ಮಾಣಕ್ಕೆ ಕೆಂಪು ಕಲ್ಲು ಶಿಲೆ ಕಲ್ಲು ತೆಗೆದು ಸಾಗಾಟ ಮಾಡಲು ಪರವಾನಿಗೆ ನೀಡಲಾಗಿದೆ. ಪ್ರಸ್ತುತ ಕಳೆದ ಒಂದುವರೆ ವರ್ಷದಿಂದ ಯಾವುದೋ ಕಾರಣ ನೀಡಿ ಪರವಾನಿಗೆಗಳನ್ನು ರದ್ದು ಮಾಡಲಾಗಿದೆ. ಈ ಒಂದು ವರ್ಷದ ಹಿಂದೆ ಇದರ ಸಲುವಾಗಿ ಉಡುಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
