ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಇವರು ನಡೆಸುವ ಸಿಎಸ್‌ಇಇಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿರುತ್ತಾರೆ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಪರವಾಗಿ ಅಭಿನಂದಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ, ‘ವಿಜ್ಞಾನ ವಿಭಾಗದಂತೆ ವಾಣಿಜ್ಯ ವಿಭಾಗವು ಬಹಳಷ್ಟು ಪ್ರಮುಖವಾದದ್ದು,ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ/ಸಿಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಭವಿಶಾಲಿ ಉಪನ್ಯಾಸಕರಿಂದ ತರಬೇತಿ ನೀಡಲಾಗುತ್ತಿದ್ದು ಅವೆಲ್ಲದರ ಫಲಶ್ರುತಿಯೇ ಈ ಫಲಿತಾಂಶ ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಶುಭ ಹಾರೈಸಿದರು’. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಉತ್ತಮ ವಾಗ್ಮಿಗಳಾಗಿರುವ ದಾಮೋದರ ಶರ್ಮಾ ಅವರು ಮಾತನಾಡಿ,’ಕಲಿತ ಸಂಸ್ಥೆಯ ಮೇಲೆ ನಿಮಗಿರುವ ಅಭಿಮಾನ, ಗುರುಗಳ ಆಶೀರ್ವಾದ ಸದಾ ನಿಮ್ಮೊಂದಿಗಿದ್ದಾಗ ನೀವು ಅಂದುಕೊಂಡಿದ್ದು ಈಡೇರಲು ಸಾಧ್ಯವಿದೆ.ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಿ,ಉತ್ತಮ ವ್ಯಕ್ತಿತ್ವ ನಿಮ್ಮದಾಗಲಿ,ಜೀವನದಲ್ಲಿ ಕಷ್ಟ ಪಟ್ಟಷ್ಟು ಸುಖ ನಿಮ್ಮದಾಗುತ್ತದೆ ಎಂದು ಶುಭ ಹಾರೈಸಿದರು’.ಕಾರ್ಯಕ್ರಮದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ವಿಕಲಚೇತನರ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ ಎಂಬ ಘೋಷವಾಕ್ಯದೊಂದಿಗೆ ಪ್ರಸಕ್ತ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ವಿಶೇಷ ಮಕ್ಕಳನ್ನು ಹಾಗೂ ವ್ಯಕ್ತಿಗಳನ್ನು ಗೌರವಿಸಿ, ಸನ್ಮಾನಿಸಲಾಗುವುದು ಹಾಗೂ ವಿಕಲಚೇತನರಿಗಾಗಿ ಆಯೋಜಿಸಲಾದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ 2 ದಿನಗಳ ಯೋಗ ಶಿಬಿರವು ಇತ್ತೀಚಿಗೆ ನಡೆಯಿತು. ಇಶಾ ಫೌಂಡೇಶನ್ ಸದ್ಗುರು ಗುರುಕುಲಂನ ಶಾಸ್ತ್ರೀಯ ಹಟ ಯೋಗದ ಶಿಕ್ಷಕರಾದ ಪ್ರವೀಣ್ ಕುಮಾರ್ ಯೋಗ ನಮಸ್ಕಾರ, ನಾದಯೋಗ, ವೃತ್ತಾಕಾರ ಕೈ ಚಲನೆ, ಸ್ಕ್ವಾಟಿಂಗ್, ಓಂಕಾರ ಪಠಣ ಇತ್ಯಾದಿಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಗಳ ಮೂಲಕ ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ, ಅವರು ನಿತ್ಯದ ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸುಗಳು ಪ್ರಶಾಂತಗೊಳ್ಳುತ್ತವೆ. ಶಸ್ತ್ರಚಿಕಿತ್ಸೆಗಳಿಗೆ ಒಳಗಾಗುವ ಬದಲು ಸರಳ ಆಸನಗಳನ್ನು ಅಭ್ಯಸಿಸುವ ಮೂಲಕ ಆರೋಗ್ಯಪೂರ್ಣ ಜೀವನವನ್ನು ಹೊಂದಬಹುದು. ಮೂಳೆ, ಕೀಲು, ಗಂಟು, ಬಾಹುಗಳಲ್ಲಿನ ನೋವುಗಳು ಯೋಗಭ್ಯಾಸದಿಂದಾಗಿ ನಿವಾರಣೆಗೊಳ್ಳುತ್ತವೆ. ದೇಹದ ರಕ್ತಸಂಚಾರ ಸುಗಮಗೊಂಡು ದೇಹವು ಚೈತನ್ಯವನ್ನು ಪಡೆದುಕೊಳ್ಳುತ್ತದೆ. ಹಾಗಾಗಿ ಯೋಗಾಭ್ಯಾಸವನ್ನು ನಮ್ಮ ನಿತ್ಯಜೀವನದ ಮಂತ್ರವನ್ನಾಗಿಸಿಕೊಳ್ಳಬೇಕು ಎಂದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕೆಟ್ಟೆಯ ವಿಶ್ವವಿನಾಯಕ ನ್ಯಾಷನಲ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್‌ನ 18 ನೇ ವಾರ್ಷಿಕ ಕ್ರೀಡಾಕೂಟ ಇತ್ತೀಚಿಗೆ ಜರುಗಿತು. ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಇದರ ದೈಹಿಕ ಶಿಕ್ಷಕರಾದ ಜೀವನ್ ಕುಮಾರ್ ಶೆಟ್ಟಿ ಕ್ರೀಡೋತ್ಸವವನ್ನು ಉದ್ಗಾಟಿಸಿ ಮಾತನಾಡಿ ಕ್ರೀಡೆ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರೊಂದಿಗೆ ಉತ್ತಮ ಸಾಧನೆ ಮಾಡಿದರೆ ಬದುಕನ್ನು ಕಟ್ಟಿಕೊಳ್ಳಬಹುದು. ಪ್ರತಿ ಕ್ರೀಡೆಗಳನ್ನು ವೈಜ್ಞಾನಿಕ ಸೂತ್ರಗಳೊಂದಿಗೆ ಅಭ್ಯಾಸ ಮಾಡಿದರೆ ಗೆಲುವು ನಿಶ್ಚಿತ ಎಂದು ಹೇಳಿದರು. ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಂದೂರು ವಲಯದ ರೇಂಜ್ ಪೋರೆಸ್ಟ್ ಆಫಿಸರ್ ಸಂದೇಶ್ ಕುಮಾರ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಇದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು. ಶರೀರವನ್ನು ಸಧೃಢಗೊಳಿಸಲು ಶಾರೀರಿಕ ವ್ಯಾಯಾಮ ಬಹು ಮುಖ್ಯ ಎಂದು ತಿಳಿಸಿದರು. ಕ್ರೀಡೆಯಲ್ಲಿ ಕಲೆ ಮತ್ತು ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಅಂಶಗಳು ಒಳಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು. ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು ಸಾಮಾನ್ಯವಾಗಿ ನವೆಂಬರ್‌ನಿಂದ ಜೂನ್‌ವರೆಗೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆ, ಇವುಗಳ ನಿಯಂತ್ರಣಕ್ಕೆ ಇಲಾಖೆಗಳ ಸಮಾನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆ.ಎಫ್.ಡಿ ಹಾಗೂ ಇತರ ಪ್ರಾಣಿ ಜನ್ಯ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಲಾದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಪಶ್ಚಿಮ ಘಟ್ಟ ಪ್ರದೇಶಗಳು ಹಾಗೂ ಮಲೆನಾಡು ಭಾಗದಲ್ಲಿ ಕ್ಯಾಸನೂರು ಅರಣ್ಯ ರೋಗವು ಹಲವು ವರ್ಷಗಳಿಂದ ಕಂಡು ಬರುತ್ತಿದೆ. ನಮ್ಮ ಜಿಲ್ಲೆಯಲ್ಲಿಯೂ ಸಹ ಕಾಡಂಚಿನ ಪ್ರದೇಶಗಳಲ್ಲಿ ಈ ಹಿಂದೆ ಆಗಿರುವುದು ಕಂಡು ಬಂದಿದೆ. ಆದರೆ ಪ್ರಸ್ತುತ ಯಾವುದೇ ಪ್ರಕರಣಗಳು ಇರುವುದಿಲ್ಲ ಎಂದರು. ಉಷ್ಣಾಂಶ ಹೆಚ್ಚಿರುವ ನವೆಂಬರ್‌ನಿಂದ ಜೂನ್‌ವರೆಗೆ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮೂಕಾಂಬಿಕಾ ಕ್ರೀಡಾಂಗಣದಲ್ಲಿ ಕಾಲೇಜು ಬಾಲಕ – ಬಾಲಕಿಯರ ರಾಜ್ಯಮಟ್ಟದ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಸಮಾರಂಭ ಶನಿವಾರ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯ ಮಾಹಾಲಿಂಗ ನಾಯ್ಕ್ ವಹಿಸಿದರು. ದೇವಳದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಬಹುಮಾನ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಅಧ್ಯಕ್ಷ ದಿನೇಶ್ ಎಂ. ಕೊಡವೂರು, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಂದ್ರಶೇಖರ್ ಶೆಟ್ಟಿ, ಉಡುಪಿ ಜಿಲ್ಲಾ ಉಪ ನಿರ್ದೇಶಕರಾದ ಮಾರುತಿ, ಉಡುಪಿ ಜಿಲ್ಲಾ ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್ ಎ., ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷೆ ಜೀವನ್ ಕುಮಾರ್…
ಕುಂದಾಪ್ರ ಡಾಟ್ ಕಾಂ.ಆಲ್ಬಂ ಹಾಡುಗಳ ಜಗತ್ತಿನಲ್ಲಿ ತಮ್ಮನ್ನು ತಾವು ನಿರೂಪಿಸಿಕೊಂಡು ನಿರಂತರವಾಗಿ ಮನ್ನಣೆ & ಅವಕಾಶಗಳನ್ನು ಗಿಟ್ಟಿಸುತ್ತಾ ಗೆಲುವು ಕಾಣುವವರು ಕೆಲವರು ಮಾತ್ರ. ಅಂತಹ ಪ್ರತಿಭೆಗಳಲ್ಲೊಬ್ಬರು ದಾವಣಗೆರೆ ಮೂಲದ ಅಭಿಷೇಕ್ ಮಠದ್! ಇಂತಹ ಸೃಜನಶೀಲ ಮನಸ್ಸಿನ ಅಭಿಷೇಕ್ ಕಣ್ಣಿಗೆ ಬಿದ್ದದ್ದು ದಾರವಾಡದ ದೈತ್ಯ ಡ್ಯಾನ್ಸ್ ಪ್ರತಿಭೆ “ಸುನಿಧಿ ನೀಲೋಪಂತ್”! ಅಭಿಷೇಕ್ ಹಾಗೂ ಸುನಿಧಿ ಪ್ರತಿಭೆಗಳು ಸಮ್ಮೇಳನಗೊಂಡಾಗ ಹುಟ್ಟಿದ್ದೇ ” ನಿಲ್ಲಬೇಡ” ಎಂಬ ಅದ್ಭುತ ಕನಸು! ಅಭಿಷೇಕ್ ಮೂಲತಃ ಒಬ್ಬ ಡ್ಯಾನ್ಸರ್ “ದಾವಣಗೆರೆ ಡ್ಯಾನ್ಸ್ ಕಿಂಗ್” ಎಂದೇ ಖ್ಯಾತರಾಗಿದ್ದ ಇವರು ರ್ಯಾಪರ್ ಚಂದನ್ ಶೆಟ್ಟಿ ಜೊತೆ ಸೇರಿ ಸೃಷ್ಟಿಸಿದ “ಟಕಿಲ” ಆಲ್ಬಂ ಹಾಡು ಯುವ ಜನತೆಯನ್ನು ಹುಚ್ಚೆಬ್ಬಿಸಿ ಕುಣಿಯುವಂತೆ ಮಾಡಿದ್ದು ಇತಿಹಾಸ! ಅಭಿಷೇಕ್ ಮತ್ತೆಂದೂ ಹಿಂದಿರುಗಿ ನೋಡಿಲ್ಲ. ಪರ್ಫೆಕ್ಟ್ ಗರ್ಲ್, ಬಡಪಾಯಿ ಕುಡುಕ, ಆರಾಮ್ಸೆ ಇನ್ನೂ ಹಲವಾರು ಆಲ್ಬಂ ವೀಡಿಯೋ ಹಾಡುಗಳನ್ನು ನಿರಂತರವಾಗಿ ಕೋರಿಯಾಗ್ರಫ್ & ಡೈರೆಕ್ಟರ್ ಮಾಡುತ್ತಾ ಕನ್ನಡಿಗರನ್ನು ಮನಸಾರೆ ರಂಜಿಸುತ್ತಾ ಬಂದಿದ್ದಾರೆ. ಇನ್ನು ಧಾರವಾಡದ ದೈತ್ಯ ಡ್ಯಾನ್ಸ್ ಪ್ರತಿಭೆ “ಸುನಿಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕೊಲ್ಲೂರು ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ನೇತೃತ್ವದಲ್ಲಿ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟ 2024 ಶುಕ್ರವಾರ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ರಾಷ್ಟಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ಬಿ. ಕರುಣಾಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಧ್ವಜಾರೋಹಣಗೈದರು. ರಾಜ್ಯದ ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಕೊಲ್ಲೂರು ದೇವಳ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಕಾಮನ್‌ವೆಲ್ತ್ ವಿಜೇತ ಕ್ರೀಡಾಪಟು ಗುರುರಾಜ ಪೂಜಾರಿ ಜಡ್ಡು, ನೆಟ್‌ಬಾಲ್ ಕ್ರೀಡಾಪಟು ನಿತಿನ್ ಅವರನ್ನು ಸನ್ಮಾನಿಸಲಾಯಿತು. ಕೊಲ್ಲೂರು ದೇವಳದ ಕಾರ್ಯನಿರ್ವಣಾಧಿಕಾರಿ ಪ್ರಶಾಂತ್ ಶೆಟ್ಟಿ, ಉಡುಪಿ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕ ಮಾರುತಿ, ಶಿವರಾಮ ಕೃಷ್ಣ ಭಟ್, ವ್ಯವಸ್ಥಾಪನಾ ಸಮಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಉತ್ಸವವನ್ನು ಸರಕಾರಿ ಪ್ರೌಢಶಾಲೆ ಬೇಳೂರು ಇಲ್ಲಿನ ವಿಜ್ಞಾನ ಶಿಕ್ಷಕರಾದ ಉದಯ ಗಾಂವಕಾರ ಶುಕ್ರವಾರದಂದು ಉದ್ಘಾಟಿಸಿ, ವಿಜ್ಞಾನ ಯೋಚಿಸುವ ವಿಧಾನವನ್ನು ಬದಲಾಯಿಸುತ್ತದೆ. ವಿಜ್ಞಾನ ಅಂದರೆ ಪ್ರಶ್ನೆ ಮಾಡುವುದು, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪ್ರಶ್ನೆ ಮಾಡುವುದರ ಮೂಲಕ ಹೊಸತನವನ್ನು ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್‌ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ವಿಜ್ಞಾನ ಉತ್ಸವದ ಸದುಪಯೋಗವನ್ನು ಪಡೆದುಕೊಳ್ಳಿ ಎಂದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಹೆಮ್ಮಾಡಿಯ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕ ರಮಾಕಾಂತ್ ರೇವಣಕರ್ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಸ್ವಾಗತಿಸಿದರು, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ವಂದಿಸಿದರು. ವಿದ್ಯಾರ್ಥಿನಿಯರಾದ ಶುಕ್ತಿಜಾ, ವೈಷ್ಣವಿ ಆರ್.ಕೆ ಅತಿಥಿಗಳನ್ನು ಪರಿಚಯಿಸಿದರು. ಅದಿತಿ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹಳೆ ವಿದ್ಯಾರ್ಥಿ ಸಂಘ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಇದರ ರಜತ ಮಹೋತ್ಸವದ ಪ್ರಯುಕ್ತ ನಿರ್ಮಿಸಲಾಗುವ ನೂತನ ತರಗತಿ ಕೊಠಡಿಗಳ ಶಂಕು ಸ್ಥಾಪನೆ ಕಾರ್ಯಕ್ರಮ ಗುರುವಾರ ನಡೆಯಿತು. ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಎರಡು ತರಗತಿ ಕೊಠಡಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಸಂಘದ ರಜತ ಮಹೋತ್ಸವದ ಪ್ರಯುಕ್ತ ಶಾಲೆಗೆ ಅಗತ್ಯವಿರುವ ತರಗತಿ ಕೊಠಡಿ, ಆವರಣ ಗೋಡೆ, ಕಂಪ್ಯೂಟರ್ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಾವಶ್ಯಕ ಈ ಕಾರ್ಯಗಳಿಗೆ ದಾನಿಗಳು, ಹಳೆ ವಿದ್ಯಾರ್ಥಿಗಳು ಸಹಕಾರ ನೀಡಿ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು. ಪುರೋಹಿತರಾದ ಜಿ. ವಿಠಲದಾಸ ಭಟ್ ಮತ್ತು ಜಿ. ವಸಂತ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಎಲ್.ಮೇಸ್ತ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಗುಜ್ಜಾಡಿ, ಉಪಾಧ್ಯಕ್ಷೆ ಗಾಯತ್ರಿ…
