ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: STAIRS YOUTH STATE GAMES 2024 -25 ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಪ್ರತಿನಿಧಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಹಿಮೇಶ್ ರಾಷ್ಟ್ರ ಮಟ್ಟದಲ್ಲಿ ನಡೆಯುವ ಪುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಯಶಸ್ಸಿನ ಪಯಣಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಹೃದಯಸ್ಪರ್ಶಿ ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿಬಿದ್ದು ಚಾಲಕ ಮೃತಪಟ್ಟ ಘಟನೆ ಒತ್ತಿನಣೆ ರಾ.ಹೆ-66ರಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಲಾರಿ ಚಾಲಕ ದಾಮೋದರ್ ಯಾದವ್ ಮೃತ ದುರ್ದೈವಿ. ಲೋಕಾಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಗಣಪತಿ ಲಾಜಿಸ್ಟಿಕ್ಸ್ ಸಂಸ್ಥೆಗೆ ಸೇರಿದ ಲಾರಿ ಒತ್ತಿನಣೆ ಹೇನಬೇರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಮೃತಪಟ್ಟಿದ್ದಾರೆ. ಲಾರಿಯಲ್ಲಿ ಲೋಡ್ ಆಗಿದ್ದ ಜೆಕೆ ಸಿಮೆಂಟ್ ಚೀಲಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಬೈಂದೂರು ಪೊಲೀಸರು ಸ್ಥಳಕ್ಕೆ ತೆರಳಿ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಅಗ್ನಿಶಾಮಕದಳದ ಸಿಬ್ಬಂದಿಗಳು ಲಾರಿ ಮೇಲಕ್ಕೆತ್ತುವಲ್ಲಿ ಶ್ರಮಿಸಿದರು. ಕ್ರೇನ್ ಮೂಲಕ ಮಗುಚಿದ ಲಾರಿಯನ್ನು ಮೇಲಕ್ಕೆತ್ತಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಮೂರು ಮತ್ತು ನಾಲ್ಕನೇ ವಿದ್ಯಾರ್ಥಿಗಳಿಗೆ ಒಂದು ದಿನದ ಅಬಾಕಸ್ ಸ್ಪರ್ಧೆ ಆಯೋಜಿಸಲಾಗಿತ್ತು. ಆಡಳಿತಮಂಡಳಿಯ ಅಧಿಕಾರಿಯಾದ ಶಮಿತಾ ರಾವ್ ಮತ್ತು ರೆನಿಟಾ ಲೋಬೊ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಚಾಲನೆ ನೀಡಿದರು. ಅತಿಕಡಿಮೆ ಸಮಯದಲ್ಲಿ ವಿವಿಧ ರೀತಿಯ ಮನೋಗಣಿತ ಲೆಕ್ಕಗಳನ್ನು ಮಾಡುವ ಮೂಲಕ ಸುಮಾರು 150 ಮಕ್ಕಳು ತಮ್ಮ ಪಾಲಕರ ಉಪಸ್ಥಿತಿಯಲ್ಲಿ ಎಲ್ಲರಿಂದ ಪ್ರಶಂಸೆಗೆ ಒಳಗಾದರೂ ಅತ್ಯಂತ ಕ್ರಿಯಾಶೀಲತೆಯಿಂದ ಆರಂಭಗೊಂಡ ಈ ಸ್ಪರ್ಧೆಯು ಎಲ್ಲರಿಂದ ಮೆಚ್ಚುಗೆಗಳಿಸಿತು. ಶಿಕ್ಷಣದಲ್ಲಿ ಸದಾ ನವೀನತೆಯನ್ನು ಪರಿಚಯಿಸುತ್ತಿರುವ ಆಡಳಿತಮಂಡಳಿಯ ಕ್ರಿಯಾಶೀಲತೆಯನ್ನು ಪೋಷಕರು ಕೊಂಡಾಡಿದರು. ತಮ್ಮ ಮಕ್ಕಳ ಮನೋಗಣಿತದ ಬುದ್ಧಿಮತ್ತೆಯನ್ನು ಕಣ್ಣಾರೆ ಕಂಡ ಎಲ್ಲಾ ಪಾಲಕರು ಅತೀವ ಸಂತಸಪಟ್ಟರು. ಅಬಾಕಸ್ ತರಬೇತುದಾರರಾದ ಗೀತಾ (ಉಪನ್ಯಾಸಕರು ಮದರ್ ತೆರೇಸಾಸ್ ಪಿ ಯು ಕಾಲೇಜು, ವೇದಗಣಿತ ಮತ್ತು ಅಬಾಕಸ್ ತರಬೇತುದಾರರು ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತರು) ಇವರು ಪೂರ್ಣದಿನ ವಿದ್ಯಾರ್ಥಿಗಳಿಗೆ ಮನೋಗಣಿತದ ವಿವಿಧ ಹಂತದ ಲೆಕ್ಕಗಳನ್ನು ಲಿಖಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡು ((Accriditation Card), ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕುಂದಾಪುರಕ್ಕೆ 2024-2029ನೇ ಸಾಲಿನ ಅರಣ್ಯ ಇಲಾಖೆಯಿಂದ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಛೇರಿಯ ದ್ವಿತೀಯ ದರ್ಜೆ ಸಹಾಯಕರಾದ ನಾಗರಾಜ ಪಟವಾಲ್ ಅವರು ಗೆಲುವು ಸಾಧಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ರಸ್ತೆ ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತವಾಗುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅಪಘಾತ ಮುಕ್ತ ವಲಯಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 2020 ರಿಂದ 22 ರ ವರೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತವಾದ ಸ್ಥಳಗಳನ್ನು 20 ಬ್ಲಾಂಯಕ್ ಸ್ಪಾಟ್ ಗಳನ್ನಾಗಿ ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಸುರಕ್ಷಿತಾ ನಿರ್ವಹಣೆ ಕಾಮಗಾರಿಗಳಾದ ಕಪ್ಪುಚುಕ್ಕೆ ಸ್ಥಳಗಳಲ್ಲಿ ಪಾದಚಾರಿಗಳ ಕ್ರಾಸಿಂಗ್ ಹಾಗೂ ಜೀಬ್ರಾ ಕ್ರಾಸಿಂಗ್, ಸೂಚನಾ ಫಲಕಗಳು, ಹೈಮಾಸ್ಟ್ ದ್ವೀಪಗಳು, ಬ್ಲಿಂರಸ್ಗ್‍್‍ಳು, ರಸ್ತೆ ಬದಿಯಲ್ಲಿ ಮೆಟಲ್ ಕ್ರಾಸ್ ಬ್ಯಾರಿರಸ್, ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆಗಳಿಗೆ ಹಂಪ್ಸ್, ಫೂಟ್‌ಓವರ್ ಬ್ರಿಡ್ಜ್, ಕೆಲವು ಸ್ಥಳಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಒಳಚರಂಡಿ, ಎಂ.ಎಸ್ ರೈಲಿಂಗ್ಸ್, ಕಾಮಗಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಅ.28ರಂದು ಮೈಸೂರಿನ ಶಾರದಾ ವಿಲಾಸ್ ಶಿಕ್ಷಣ ಸಂಸ್ಥೆಗಳ ಶತಮಾನೋತ್ಸವ ಭವನದಲ್ಲಿ ನಡೆದ ಮೈಸೂರು ವಿಭಾಗಮಟ್ಟದ ಟಿಸಿಎಸ್ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ ಸುಜನ್ ಶೆಟ್ಟಿ ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಟಿಸಿಎಸ್ ಗ್ರಾಮೀಣ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಅತ್ಯಂತ ಪೈಪೋಟಿಯಿಂದ ಕೂಡಿದ ಈ ಸ್ಪರ್ಧೆಯಲ್ಲಿ ಚಾಣಾಕ್ಷತನದಿಂದ ಉತ್ತರಿಸಿ ಆಯ್ಕೆ ಯಾಗಿರುತ್ತಾನೆ. ಮಾಹಿತಿ ತಂತ್ರಜ್ಞಾನದಲ್ಲಿ ವಿಶೇಷ ನೈಪುಣ್ಯತೆಯನ್ನು ಹೊಂದಿರುವ ಪ್ರತಿಭಾವಂತ ವಿದ್ಯಾರ್ಥಿಯ ಅಪ್ರತಿಮ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ & ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿರುತ್ತಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು, ಜೆಸಿಐ ಬೈಂದೂರು ಸಿಟಿ, ಜೆಸಿಐ ಉಪ್ಪುಂದ, ಜೆಸಿಐ ಶಿರೂರು ಮತ್ತು ಜೆಸಿಐ ಉಪ್ಪುಂದ ಸುಪ್ರಿಮ್ ನೇತೃತ್ವದಲ್ಲಿ ಕೆ.ಎಂ.ಸಿ ಮಣಿಪಾಲದ ಮೂಲಕ ಬೈಂದೂರು ಉತ್ಸವದ ಅಂಗವಾಗಿ ಮಂಗಳವಾರ ಆರೋಗ್ಯ ಮೇಳ – ದಂತ ಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು. ಹಿರಿಯ ವೈದ್ಯ ಡಾ. ಕೆ. ಪ್ರಭಾಕರ ನಂಬಿಯಾರ್ ಅವರು ಕಾರ್ಯಕ್ರಮ ಉದ್ಘಾಟನಾ ಮಾತನಾಡಿ, ಧಾವಂತದ ಬದುಕಿನ ನಡುವೆ ಪ್ರತಿಯೊಬ್ಬರು ಆರೋಗ್ಯದ ಕಾಳಜಿ ವಹಿಸುವುದು ಮುಖ್ಯ. ಸಂಘ ಸಂಸ್ಥೆಗಳ ಮುಖಾಂತರ ನಡೆಯುವ ಉಚಿತ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷ ಮೋಹನ್ ರೇವಣ್ಕರ್ ವಹಿಸಿದ್ದರು. ಉತ್ಸವ ಸಮಿತಿ ಸಹ ಸಂಚಾಲಕ ಗಣೇಶ್ ಗಾಣಿಗ ಉಪ್ಪುಂದ, ಪುಪ್ಪರಾಜ ಶೆಟ್ಟಿ, ಅನುರಾಧ ಗುರುರಾಜ, ಕೆಎಂಸಿ ಮಣಿಪಾಲದ ದಂತ ವೈದ್ಯ ಡಾ. ಜಿಷ್ಣು, ಜೆಸಿಐ ಬೈಂದೂರು ಸಿಟಿ ಅಧ್ಯಕ್ಷೆ ಅನಿತಾ ಆರ್.ಕೆ., ಜೆಸಿಐ ಉಪ್ಪುಂದ ಸುಪ್ರಿಮ್ ಅಧ್ಯಕ್ಷೆ ಸುಮಾ ಆಚಾರ್ಯ, ಜೆಸಿಐ ಉಪ್ಪುಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೇರಳಕಟ್ಟೆ – ತಲ್ಲೂರು ರಸ್ತೆಯ ತಲ್ಲೂರು ಗ್ರಾಮದ ಸಹದೇವಿ ಹಾಲ್ ಬಳಿ ಸ್ಕೂಟಿಗೆ ಬೈಕ್ ಢಿಕ್ಕಿಯಾಗಿ, ಸ್ಕೂಟಿ ಸವಾರ ರಾಮಚಂದ್ರ (67) ಗಂಭೀರ ಗಾಯಗೊಂಡಿದ್ದು, ಬೈಕ್ ಸವಾರ ಶಶಾಂಕ್ ಸಹ ಗಾಯಗೊಂಡ ಘಟನೆ ನಡೆದಿದೆ. ಶಶಾಂಕ ಎಂಬುವವನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ರಾಮಚಂದ್ರ ಅವರ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಅವರಿಗೆ ತಲೆ, ಮುಖ, ಕಾಲಿಗೆ ತೀವ್ರತರದ ಗಾಯಗೊಂಡು ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಶಶಾಂಕ್‌ರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಬಾಲ ಪ್ರತಿಭೆ ವೃಷಾಂಕ್ ವಿ. ಭೋಮ್ಕರ್ ಅವರಿಂದ ಯಕ್ಷಗಾನ ನೃತ್ಯ ಸೇವೆ ಶ್ರೀ ಶಾರದಾ ಮಂಟಪದಲ್ಲಿ ನಡೆಯಿತು. ಅವನು ವಿವೇಕ್ ಭೋಮ್ಕರ್ ಮತ್ತು ಶಿವಾನಿ ದಂಪತಿ ಪುತ್ರ.
